ವಿಐಎಸ್ಎಲ್ ಗುತ್ತಿಗೆ ಕಾರ್ಮಿಕರಿಂದ ಮುಂದುವರೆದ ಹೋರಾಟ
![](https://blogger.googleusercontent.com/img/a/AVvXsEiG_nviiYYkKdO5ZhvO66IckMYPjM9kJ8lLd82u10Bl3bjNjMhCHKBmBm_VmhOBqLTEmw-3yOZx5Fvpcy0aodu_uUklZiRFFS4pHD5P9VrNqAsrbLJiLIUVmGQb24HcHTpIkB9_rS9aeJ0PY1utvsPtK_krID7KJfXR5GXPVv4wJ1JDYHaxSzLcNYOtew=w400-h205-rw)
ಭದ್ರಾವತಿಯಲ್ಲಿ ವಿಐಎಸ್ಎಲ್ ಗುತ್ತಿಗೆ ಕಾರ್ಮಿಕರು ಸೋಮವಾರ ಕಾರ್ಮಿಕರ ದಿನಾಚರಣೆ ಮೂಲಕ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಭದ್ರಾವತಿ, ಮೇ. ೧ : ಕೇಂದ್ರ ಸರ್ಕಾರಿ ಸ್ವಾಮ್ಯದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಗುತ್ತಿಗೆ ಕಾರ್ಮಿಕರು ಕಳೆದ ಸುಮಾರು ೩ ತಿಂಗಳಿನಿಂದ ನಿರಂತರವಾಗಿ ಕಾರ್ಖಾನೆ ಮುಂಭಾಗ ಹೋರಾಟ ನಡೆಸುತ್ತಿದ್ದು, ಈ ನಡುವೆ ಸೋಮವಾರ ಕಾರ್ಮಿಕರ ದಿನಾಚರಣೆ ಮೂಲಕ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯಬೇಕು, ಅಗತ್ಯವಿರುವ ಬಂಡವಾಳ ತೊಡಗಿಸಬೇಕು ಹಾಗು ದುಡಿಯುವ ಕೈಗಳಿಗೆ ಉದ್ಯೋಗ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಹೋರಾಟ ನಡೆಸಲಾಗುತ್ತಿದೆ. ಹಲವು ವಿಭಿನ್ನ ರೀತಿಯ ಹೋರಾಟಗಳನ್ನು ನಡೆಸಲಾಗಿದ್ದು, ರಾಜ್ಯ ಹಾಗು ಕೇಂದ್ರ ಸರ್ಕಾರಗಳಿಗೆ ಹಲವು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ.
ಚುನಾವಣೆ ಘೋಷಣೆಯಿಂದಾಗಿ ಹೋರಾಟಕ್ಕೆ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಿದ್ದು, ಆದರೆ ಕಾರ್ಮಿಕರು ಎದೆಗುಂದದೆ ತಮ್ಮ ಹೋರಾಟ ಮುಂದುವರೆಸಿದ್ದಾರೆ.
ಕಾರ್ಮಿಕ ದಿನಾಚರಣೆ ಮೂಲಕ ಪುನಃ ತಮ್ಮ ಅಳಲು ತೋರ್ಪಡಿಸಿಕೊಂಡಿದ್ದಾರೆ. ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು, ನಿವೃತ್ತ ಕಾರ್ಮಿಕರು ಮಾಜಿ ಸೈನಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.