ಶಾಸಕರು ಸಚಿವರಾಗಲಿದ್ದಾರೆ : ಎಚ್.ಎಲ್ ಷಡಾಕ್ಷರಿ
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ಶಾಸಕ ಬಿ.ಕೆ ಸಂಗಮೇಶ್ವರ್ ೪ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಕುಟುಂಬ ವರ್ಗದವರು ಭದ್ರಾವತಿ ನಗರದಲ್ಲಿ ಶನಿವಾರ ವಿಜಯೋತ್ಸವ ನಡೆಸಿದರು.
ಭದ್ರಾವತಿ, ಮೇ. ೧೩ : ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ಶಾಸಕ ಬಿ.ಕೆ ಸಂಗಮೇಶ್ವರ್ ೪ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಕುಟುಂಬ ವರ್ಗದವರು ನಗರದಲ್ಲಿ ಶನಿವಾರ ವಿಜಯೋತ್ಸವ ನಡೆಸಿದರು.
ಶಿವಮೊಗ್ಗ ಮತಗಟ್ಟೆ ಕೇಂದ್ರ ಮೆರವಣಿಗೆ ಆರಂಭಗೊಂಡು ನಗರದ ಬಿ.ಎಚ್ ರಸ್ತೆ ಹುತ್ತಾ ಕಾಲೋನಿ ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಹಾಗು ರಂಗಪ್ಪವೃತ್ತ ಮೂಲಕ ಶಾಸಕ ಬಿ.ಕೆ ಸಂಗಮೇಶ್ವರ್ ನಿವಾಸದವರೆಗೂ ವಿಜಯೋತ್ಸವ ನಡೆಯಿತು.
ರಸ್ತೆಯುದ್ದಕ್ಕೂ ಪಟಾಕಿ ಸಿಡಿಸಿ, ಕಾಂಗ್ರೆಸ್ ಪಕ್ಷಕ್ಕೆ ಹಾಗು ಸಂಗಮೇಶ್ವರ್‌ಗೆ ಜೈಕಾರ ಹಾಕುವ ಮೂಲಕ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಈ ಬಾರಿ ಶಾಸಕರು ಸಚಿವರಾಗಲಿದ್ದಾರೆ. ಈ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲಿದ್ದಾರೆ. ಕ್ಷೇತ್ರದ ಜನರ ಬೆಂಬಲ ಇದೆ ರೀತಿ ಮುಂದುವರೆಯಬೇಕು. ಕ್ಷೇತ್ರದ ಮತದಾರರಿಗೆ ಶಾಸಕರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಶಾಸಕರ ಸಹೋದರ ಬಿ.ಕೆ ಶಿವಕುಮಾರ್, ಪುತ್ರ ಬಿ.ಎಸ್ ಗಣೇಶ್, ನಗರಸಭಾ ಸದಸ್ಯ ಬಿ.ಎಂ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.ವಿಜಯೋತ್ಸವ ಹಿನ್ನಲೆಯಲ್ಲಿ ಕೆಲ ಸಮಯ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ಶಾಸಕ ಬಿ.ಕೆ ಸಂಗಮೇಶ್ವರ್ ೪ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಕುಟುಂಬ ವರ್ಗದವರು ಭದ್ರಾವತಿ ನಗರದಲ್ಲಿ ಶನಿವಾರ ವಿಜಯೋತ್ಸವ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷದ ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ಮಾತನಾಡಿದರು.