ಭದ್ರಾವತಿ ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್.
ಭದ್ರಾವತಿ, ಮೇ. ೨೬ : ನಗರದ ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್ ವತಿಯಿಂದ ೨೦೨೩-೨೪ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಿಗೆ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸಿವಿಲ್ ಇಂಜಿನಿಯರಿಂಗ್, ಎಲೆಕ್ಟಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಮತ್ತು (೪)ಮೆಟಲರ್ಜಿ ಇಂಜಿನಿಯರಿಂಗ್ ವಿಭಾಗಗಳು ಲಭ್ಯವಿರುತ್ತವೆ.
ಮೇ. ೯ರಿಂದ ಪ್ರವೇಶ ಪ್ರಕ್ರಿಯೆಗಳು ಆರಂಭಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ಜೆಟಿಎಸ್ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು ಪ್ರಥಮ ಸೆಮಿಸ್ಟರ್/ ೧ನೇ ವರ್ಷಕ್ಕೆ, ಡಿಪ್ಲೋಮಾಗೆ ಪ್ರವೇಶವನ್ನು ಪಡೆಯಲು ಅರ್ಹರಾಗಿದ್ದು, ಸೀಟು ಹಂಚಿಕೆಯಾದ ನಂತರ ಭರ್ತಿಯಾಗದ ಉಳಿಕೆ ಸೀಟುಗಳನ್ನು ಮೇ.೨೯ ರಿಂದ ಜೂ. ೩ರವರೆಗೆ ಆಫ್‌ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುವುದು, ಇಚ್ಛೆಯುಳ್ಳ ವಿದ್ಯಾರ್ಥಿಗಳು ನೇರವಾಗಿ ಹಾಜರಾಗಿ ಪ್ರವೇಶ ಅರ್ಜಿಯನ್ನು ಸಲ್ಲಿಸಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಮೊ. ೮೮೬೯೩೧೫೩೯, ೯೪೮೦೩೯೪೯೦೯ ಮತ್ತು ೯೯೮೬೪೦೬೯೪೧ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.