ಭದ್ರಾವತಿ, ಡಿ. ೨೬ : ನಗರದ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಶಿವಮೊಗ್ಗ ಸ್ಪರ್ಧಾ ಕರ್ನಾಟಕ ಅಕಾಡೆಮಿ ಸಹಯೋಗದೊಂದಿಗೆ ಕಾಲೇಜಿನ ಚಂದನ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಡಿ. ನಂಜನಾಯ್ಕರವರು, ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ, ಪಿಯುಸಿ ಹಾಗೂ ಪದವಿ ಶಿಕ್ಷಣದ ನಂತರ ಉದ್ಯೋಗವಕಾಶಗಳು ಮತ್ತು ಸಂದರ್ಶನದಲ್ಲಿ ಭಾಗವಹಿಸುವ ಬಗೆಯನ್ನು ಕುರಿತು ಸಮಗ್ರ ಮಾಹಿತಿ ನೀಡಿದರು.
ಇದೆ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿ ಮತ್ತು ಸ್ಪರ್ಧಾ ಕರ್ನಾಟಕ ಅಕಾಡೆಮಿ ನಡುವೆ ಪರಸ್ಪರ ಐದು ವರ್ಷಗಳ ತಿಳುವಳಿಕೆ ಒಪ್ಪಂದಕ್ಕೆ ಸಹಿ
ಹಾಕಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಸಕಲೇಶ್ ವಹಿಸಿದ್ದರು. ಐಕ್ಯೂಎಸಿ ಸಂಚಾಲಕ ಡಾ. ಟಿ. ಪ್ರಸನ್ನ ಮತ್ತು ಪ್ಲೇಸ್‌ಮೆಂಟ್ ಸಂಚಾಲಕ ಪರಶುರಾಮ ಮತ್ತು ಕಾಲೇಜಿನ ಬೋಧಕ ಮತ್ತು ಬೋಧಕೇತರರು, ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.