ಭದ್ರಾವತಿಯಲ್ಲಿ ಅನೌಪಚಾರಿಕ ಪಡಿತರ ತಾಲೂಕು ಕಛೇರಿ, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ತಾಲೂಕು ಶಾಖೆ ಹಾಗು ಡಿ ಗ್ರೂಪ್ ನೌಕರರ ಸಂಘದ ವತಿಯಿಂದ ಬುಧವಾರ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಮೇ. ೩೧ : ಅನೌಪಚಾರಿಕ ಪಡಿತರ ತಾಲೂಕು ಕಛೇರಿ, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ತಾಲೂಕು ಶಾಖೆ ಹಾಗು ಡಿ ಗ್ರೂಪ್ ನೌಕರರ ಸಂಘದ ವತಿಯಿಂದ ಬುಧವಾರ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಹಲವು ವರ್ಷಗಳಿಂದ ಆಹಾರ ನಿರೀಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಿ. ಗಾಯತ್ರಿ ದೇವಿಯವರು ಆಹಾರ ಇಲಾಖೆ ಶಿರಸ್ತೆದಾರ್ ಹುದ್ದೆಗೆ ಮುಂಬಡ್ತಿ ಹೊಂದಿ ಸಾಗರಕ್ಕೆ ವರ್ಗಾವಣೆಗೊಂಡಿದ್ದಾರೆ. ಕೆಎಫ್‌ಸಿಎಸ್‌ಸಿ ಮಳಿಗೆ ವ್ಯವಸ್ಥಾಪಕ ಜೆ.ಎಸ್ ಈಶ್ವರಪ್ಪ ಮತ್ತು ಆಹಾರ ಇಲಾಖೆ ಬಿ.ಆರ್ ಓಂಕಾರಯ್ಯ ವಯೋ ನಿವೃತ್ತಿಗೊಂಡಿದ್ದಾರೆ. ಇವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಶಾಖೆ ನಗರ ಅಧ್ಯಕ್ಷ ಎಸ್.ಆರ್ ನಾಗರಾಜ್ ಮತ್ತು ಪದಾಧಿಕಾರಿಗಳು, ಅನೌಪಚಾರಿಕ ಪಡಿತರ ಕಛೇರಿ ಸಹಾಯಕ ನಿರ್ದೇಶಕ ವಿ.ಎಸ್ ಅಂಕಯ್ಯ, ಎ.ಟಿ ಬಸವರಾಜ್ ಹಾಗು ಕಛೇರಿ ಸಿಬ್ಬಂದಿ ವರ್ಗದವರು, ಡಿ ಗ್ರೂಪ್ ನೌಕರರ ಸಂಘದ ಅಧ್ಯಕ್ಷ ಸ್ವಾಮಿ, ಆರ್‌ಎಸ್‌ಎಸ್‌ಎನ್ ಸೊಸೈಟಿ ಅಧ್ಯಕ್ಷ ಹನುಮಂತಪ್ಪ, ಲಕ್ಷ್ಮೀಕಾಂತ್, ಕೃಷ್ಣಾನಾಯ್ಕ ಹಾಗು ಪಡಿತರ ವಿತರಕರು ಉಪಸ್ಥಿತರಿದ್ದರು.