ಹಲವಾರು ವರ್ಷಗಳಿಂದ ಭದ್ರಾವತಿ ನಗರದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕೇಸರಿ ಪಡೆ ವತಿಯಿಂದ ಬುಧವಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಭದ್ರಾವತಿ, ಜೂ. ೧೪ : ಹಲವಾರು ವರ್ಷಗಳಿಂದ ನಗರದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕೇಸರಿ ಪಡೆ ವತಿಯಿಂದ ಬುಧವಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.
ತಾಲೂಕಿನ ರಂಗನಾಥಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಪುಸ್ತಕ, ಪೆನ್ನು, ಪೆನ್ಸಿಲ್, ಶಾಲಾ ಬ್ಯಾಗ್ ಸೇರಿದಂತೆ ಲೇಖನ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ಮಕ್ಕಳನ್ನು ಪ್ರೋತ್ಸಾಹಿಸಲಾಯಿತು.
ಹಿಂದೂಪರ ಸಂಘಟನೆಗಳಲ್ಲಿ ಒಂದಾಗಿರುವ ಕೇಸರಿ ಪಡೆ ರಕ್ತದಾನ ಶಿಬಿರ, ಸಂಕಷ್ಟದಲ್ಲಿರುವ ಬಡವರಿಗೆ ನೆರವು, ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ಸೇರಿದಂತೆ ಹಲವು ರೀತಿಯ ಸೇವಾ ಕಾರ್ಯಗಳೊಂದಿಗೆ ವಿಭಿನ್ನತೆ ಕಾಯ್ದುಕೊಂಡಿದೆ.
ಶಾಲೆಯ ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗದವರು, ಸ್ಥಳೀಯ ಮುಖಂಡರು, ಶಾಲೆಯ ಮಕ್ಕಳ ಪೋಷಕರು, ಕೇಸರಿ ಪಡೆ ಪ್ರಮುಖರು ಉಪಸ್ಥಿತರಿದ್ದರು.