Wednesday, June 14, 2023

ಜೂ.೨೭ರೊಳಗಾಗಿ ಪಡಿತರ ವಿತರಿಸಲು ಸೂಚನೆ

    ಭದ್ರಾವತಿ, ಜೂ. ೧೪ : ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಜೂನ್-೨೦೨೩ರ ತಿಂಗಳಿನ ಪಡಿತರ ಹಂಚಿಕೆ ಕಾರ್ಯ ೨೭ರೊಳಗಾಗಿ ಮುಕ್ತಾಯಗೊಳಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಅನೌಪಚಾರಿಕ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕರು ಸೂಚಿಸಿದ್ದಾರೆ.
    ಬೆಂಗಳೂರು ಕಛೇರಿಯ ಸುತ್ತೋಲೆ ಪತ್ರದಂತೆ ಜೂ.೨೮ರಿಂದ ಸರ್ವರ್ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಪಡಿತರ ಚೀಟಿದಾರರಿಗೆ ಜೂ.೨೭ರೊಳಗಾಗಿ ಈ ತಿಂಗಳ ಆಹಾರ ಧಾನ್ಯ ವಿತರಣೆ/ಹಂಚಿಕೆ ಕಾರ್ಯ ಮುಕ್ತಾಯಗೊಳಿಸುವಂತೆ ಸೂಚಿಸಲಾಗಿದೆ.
    ಪಡಿತರ ಚೀಟಿದಾರರು ಸಹಕರಿಸುವ ಮೂಲಕ ತಮಗೆ ಹಂಚಿಕೆಯಾದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳಿಂದ ಪಡೆಯಲು ಸಹಾಯಕ ನಿರ್ದೇಶಕರು ಕೋರಿದ್ದಾರೆ. ಅಲ್ಲದೆ ಪಡಿತರ ಚೀಟಿದಾರರು ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ನೋಂದಾಯಿಸಿಕೊಳ್ಳುವಂತೆ ತಿಳಿಸಿದ್ದಾರೆ.

ಚಾಲಕನ ನಿಯಂತ್ರ ಕಳೆದುಕೊಂಡು ಹಳ್ಳಕ್ಕೆ ಉರುಳಿದ ಕಾರು

    ಭದ್ರಾವತಿ, ಜೂ. ೧೪ : ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹಳ್ಳಕ್ಕೆ ಕಾರೊಂದು ಉರುಳಿ ಬಿದ್ದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಸಿ.ಎನ್ ರಸ್ತೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮೀಪ ಚೌಡೇಶ್ವರಿ ದೇವಸ್ಥಾನದ ಹತ್ತಿರ ಜೂ.೮ರ ರಾತ್ರಿ ಸುಮಾರು ೧೧.೪೫ರ ಸಮಯದಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಯಾವುದೇ ಪ್ರಾಣ ಉಂಟಾಗಿಲ್ಲ. ಸ್ವಲ್ಪ ಪ್ರಮಾಣದಲ್ಲಿ ಗಾಯಗಳಾಗಿದ್ದು, ಸಮೀಪದ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
    ಮಹಮದ್ ಗೌಸ್, ಮುಸ್ತಾಫಾ ಮತ್ತು ವಾಸಿಂರವರು ಜೈನುದ್ದೀನ್ ಎಂಬಾತನ ಇನ್ನೋವಾ ಕಾರಿನಲ್ಲಿ ಅನ್ವರ್ ಕಾಲೋನಿಯಿಂದ ಸೀಗೆಬಾಗಿಗೆ ಹೊರಟಿದ್ದು, ಈ ಸಂದರ್ಭದಲ್ಲಿ ಚಾಲಕ ಜೈನುದ್ದೀನ್ ನಿಯಂತ್ರಣ ಕಳೆದುಕೊಂಡು ಕಾರು ಉರುಳಿ ಬಿದ್ದಿದೆ ಎನ್ನಲಾಗಿದೆ. ಈ ಸಂಬಂಧ ಸೈಯದ್ ಆಲ್ವಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಚಾಲಕನ ನಿರ್ಲಕ್ಷ್ಯತನದ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕೇಸರಿಪಡೆ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿ ವಿತರಣೆ

ಹಲವಾರು ವರ್ಷಗಳಿಂದ ಭದ್ರಾವತಿ ನಗರದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕೇಸರಿ ಪಡೆ ವತಿಯಿಂದ ಬುಧವಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.
    ಭದ್ರಾವತಿ, ಜೂ. ೧೪ : ಹಲವಾರು ವರ್ಷಗಳಿಂದ ನಗರದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕೇಸರಿ ಪಡೆ ವತಿಯಿಂದ ಬುಧವಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.
    ತಾಲೂಕಿನ ರಂಗನಾಥಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಪುಸ್ತಕ, ಪೆನ್ನು, ಪೆನ್ಸಿಲ್, ಶಾಲಾ ಬ್ಯಾಗ್ ಸೇರಿದಂತೆ ಲೇಖನ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ಮಕ್ಕಳನ್ನು ಪ್ರೋತ್ಸಾಹಿಸಲಾಯಿತು.
    ಹಿಂದೂಪರ ಸಂಘಟನೆಗಳಲ್ಲಿ ಒಂದಾಗಿರುವ ಕೇಸರಿ ಪಡೆ ರಕ್ತದಾನ ಶಿಬಿರ, ಸಂಕಷ್ಟದಲ್ಲಿರುವ ಬಡವರಿಗೆ ನೆರವು, ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ಸೇರಿದಂತೆ ಹಲವು ರೀತಿಯ ಸೇವಾ ಕಾರ್ಯಗಳೊಂದಿಗೆ ವಿಭಿನ್ನತೆ ಕಾಯ್ದುಕೊಂಡಿದೆ.
    ಶಾಲೆಯ ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗದವರು, ಸ್ಥಳೀಯ ಮುಖಂಡರು, ಶಾಲೆಯ ಮಕ್ಕಳ ಪೋಷಕರು, ಕೇಸರಿ ಪಡೆ ಪ್ರಮುಖರು ಉಪಸ್ಥಿತರಿದ್ದರು.

ಜೂ.೧೮ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಭದ್ರಾವತಿ, ಜೂ. ೧೪ : ನಗರದ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು ಹಾಗು ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ವತಿಯಿಂದ ಜೂ.೧೮ರ ಭಾನುವಾರ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
    ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಶಿಬಿರ ನಡೆಯಲಿದ್ದು, ಇ.ಸಿ.ಜಿ ಯೊಂದಿಗೆ ಹೃದಯ, ಕಿಡ್ನಿ, ದಂತ, ಕಣ್ಣು, ಕಿವಿ, ಮೂಗು, ಗಂಟಲು, ಮೂಳೆ, ನರ, ಚರ್ಮ ರೋಗಗಳು, ಸಕ್ಕರೆ ಖಾಯಿಲೆ, ಮಕ್ಕಳು ಮತ್ತು ಸ್ತ್ರೀಯರ ಖಾಯಿಲೆಗಳು ಹಾಗು ಇತರೆ ರೋಗಗಳಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸೆ ನಡೆಯಲಿದೆ.
    ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಎಲ್ಲಾ ವಿಭಾಗದ ನುರಿತ ತಜ್ಞ ವೈದ್ಯರುಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿ ಶುಶ್ರೂಷೆ ನೀಡಲಿದ್ದಾರೆ. ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರ ಯಶಸ್ವಿಗೊಳಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಕಾಂತರಾಜ್, ಮೊ: ೯೯೦೦೧೩೧೧೫೫ ಅಥವಾ ಮೊಹಮದ್, ಮೊ:೮೯೫೧೭೮೩೮ ಸಂಪರ್ಕಿಸಬಹುದಾಗಿದೆ.  

Tuesday, June 13, 2023

ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ, ಉಕ್ಕು ಕಾರ್ಖಾನೆ ಪುನಶ್ಚೇತನಗೊಳಿಸಿ ಬಂಡವಾಳ ತೊಡಗಿಸಿ

ಬಿ.ವೈ ರಾಘವೇಂದ್ರ ನೇತೃತ್ವದ ಕಾರ್ಮಿಕರ ನಿಯೋಗದಿಂದ ಸೈಲ್ ಅಧ್ಯಕ್ಷರಿಗೆ ಮನವಿ

ಸಂಸದ ಬಿ.ವೈ ರಾಘವೇಂದ್ರ ನೇತೃತ್ವದ ಕಾರ್ಮಿಕರ ನಿಯೋಗ ದೆಹಲಿಯಲ್ಲಿ ಮಂಗಳವಾರ ಭಾರತೀಯ ಉಕ್ಕು ಪ್ರಾಧಿಕಾರದ ನೂತನ ಅಧ್ಯಕ್ಷ ಅಮರೆಂದು ಪ್ರಕಾಶ್‌ರವರನ್ನು ಭೇಟಿ ಮಾಡಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಗೊಳಿಸುವಂತೆ ಮನವಿ ಸಲ್ಲಿಸಿತು.  
    ಭದ್ರಾವತಿ, ಜೂ. ೧೩ : ಸಂಸದ ಬಿ.ವೈ ರಾಘವೇಂದ್ರ ನೇತೃತ್ವದ ಕಾರ್ಮಿಕರ ನಿಯೋಗ ದೆಹಲಿಯಲ್ಲಿ ಮಂಗಳವಾರ ಭಾರತೀಯ ಉಕ್ಕು ಪ್ರಾಧಿಕಾರದ ನೂತನ ಅಧ್ಯಕ್ಷ ಅಮರೆಂದು ಪ್ರಕಾಶ್‌ರವರನ್ನು ಭೇಟಿ ಮಾಡಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಗೊಳಿಸುವಂತೆ ಮನವಿ ಸಲ್ಲಿಸಿತು.  
    ದೇಶದ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿರುವ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಈ ಹಿನ್ನಲೆಯಲ್ಲಿ ತಕ್ಷಣ ಮುಚ್ಚುವ ಆದೇಶದ ಪ್ರಕ್ರಿಯೆ ಸ್ಥಗಿತಗೊಳಿಸಿ ಪುನಶ್ಚೇತನಕ್ಕೆ ಮುಂದಾಗಬೇಕು. ಅಗತ್ಯವಿರುವ ಬಂಡವಾಳ ತೊಡಗಿಸುವಂತೆ ಮನವಿ ಮಾಡಿದೆ
    ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತಗೊಳ್ಳುತ್ತಿದ್ದು, ಒಂದರ ನಂತರ ಒಂದು ಘಟಕ ಮುಚ್ಚುತ್ತಿವೆ. ಇದರಿಂದ ಗುತ್ತಿಗೆ ಕಾರ್ಮಿಕರು ಉದ್ಯೋಗವಿಲ್ಲದೆ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ  ಸ್ಥಗಿತಗೊಂಡಿರುವ ಎಲ್ಲಾ ಉತ್ಪಾದನಾ ಘಟಕಗಳನ್ನು ಪುನರ್ ಆರಂಭಿಸಬೇಕೆಂದು ಕೋರಿದೆ.
    ಕಳೆದ ೩ ದಿನದ ಹಿಂದೆ ಕಾರ್ಮಿಕರ ನಿಯೋಗ ಶಿವಮೊಗ್ಗದಲ್ಲಿ ಸಂಸದರನ್ನು ಭೇಟಿ ಮಾಡಿ ಅಳಲನ್ನು ತೋರ್ಪಡಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಸಂಸದರು ಕಾರ್ಮಿಕರ ನಿಯೋಗ ದೆಹಲಿಗೆ ಬರುವಂತೆ ಸೂಚಿಸಿದ್ದರು.
    ಯುವ ಮುಖಂಡ ಮಂಗೋಟೆ ರುದ್ರೇಶ್, ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ರಾಕೇಶ್, ನೌಕರರ ಅಸೋಸಿಯೇಷನ್ ಅಧ್ಯಕ್ಷ ಕುಮಾರಸ್ವಾಮಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Monday, June 12, 2023

ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ಮೆಸ್ಕಾಂ ಕಛೇರಿ ಮುಂಭಾಗ ಪ್ರತಿಭಟನೆ

ವಿದ್ಯುತ್ ದರ ಏರಿಕೆ ಖಂಡಿಸಿ ಮಂಗಳವಾರ ಭದ್ರಾವತಿ ಉಂಬ್ಳೆಬೈಲು ರಸ್ತೆಯಲ್ಲಿರುವ ಮೆಸ್ಕಾಂ ಕಛೇರಿ ಮುಂಭಾಗ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಪ್ರತಿಭಟನೆ ನಡೆಸಲಾಯಿತು.  
    ಭದ್ರಾವತಿ, ಜೂ. ೧೩ : ವಿದ್ಯುತ್ ದರ ಏರಿಕೆ ಖಂಡಿಸಿ ಮಂಗಳವಾರ ನಗರದ ಉಂಬ್ಳೆಬೈಲು ರಸ್ತೆಯಲ್ಲಿರುವ ಮೆಸ್ಕಾಂ ಕಛೇರಿ ಮುಂಭಾಗ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
    ಪಕ್ಷದ ಪ್ರಮುಖರು ಮಾತನಾಡಿ, ಗ್ಯಾರಂಟಿ ಯೋಜನೆ ಘೋಷಣೆಗಳೊಂದಿಗೆ ಪ್ರಸ್ತುತ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ  ಒಂದೆಡೆ ಪ್ರತಿಯೊಬ್ಬರಿಗೂ ೨೦೦ ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಘೋಷಿಸಿದೆ. ಮತ್ತೊಂದೆಡೆ ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನರನ್ನು ಸಂಕಷ್ಟಕ್ಕೆ ತಳ್ಳಿದೆ. ತಕ್ಷಣ ವಿದ್ಯುತ್ ದರ ಇಳಿಕೆ ಮಾಡುವಂತೆ ಆಗ್ರಹಿಸಿದರು.
    ಪಕ್ಷದ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ನೇತೃತ್ವ ವಹಿಸಿದ್ದರು. ಪ್ರಮುಖರಾದ ಎಂ. ಮಂಜುನಾಥ್, ಚನ್ನೇಶ್, ಕರೀಗೌಡ, ರಾಜಶೇಖರ್ ಉಪ್ಪಾರ, ರವಿಕುಮಾರ್, ಎಂ.ಎಸ್ ಸುರೇಶಪ್ಪ, ಬಿ.ಜಿ ಈಶ್ವರ್, ರಂಗಸ್ವಾಮಿ, ಮೂರ್ತಿ(ಆಟೋ), ಅನ್ನಪೂರ್ಣ, ಮಂಜುಳ, ನಾಗಮಣಿ, ರೇಖಾ ಪದ್ಮಾವತಿ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.