Friday, June 16, 2023

ಜೂ.೧೭ರಂದು ಸರ್ಕಾರಿ ಶಾಲೆಗಳಿಗೆ ಉಚಿತ ನೋಟ್ ಬುಕ್ ವಿತರಣೆ

    ಭದ್ರಾವತಿ, ಜೂ. ೧೬ : ಕಲ್ಪವೃಕ್ಷ ಸೇವಾ ಟ್ರಸ್ಟ್ ವತಿಯಿಂದ ಜೂ.೧೭ರಂದು ಬೆಳಿಗ್ಗೆ ೧೧ ಗಂಟೆಗೆ ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ಸರ್ಕಾರಿ ಶಾಲೆಗಳಿಗೆ ಉಚಿತ ನೋಟ್ ಬುಕ್ ವಿತರಣೆ ನಡೆಯಲಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಟ್ರಸ್ಟ್ ಅಧ್ಯಕ್ಷ ಲಾಜರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಸಮಾಜ ಸೇವಕ ಅಣ್ಣದೊರೈ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್ ಮತ್ತು ಸಮಾಜ ಸೇವಕ ಎಂ.ಜಿ ರಾಮಚಂದ್ರನ್, ಟ್ರಸ್ಟ್ ಪದಾಧಿಕಾರಿಗಳಾದ ಎನ್.ಆರ್ ಜಯರಾಜ್, ಉಪಾಧ್ಯಕ್ಷ ರಾಮಪ್ಪ ವಿ. ಮುನೇನಕೊಪ್ಪ, ಪ್ರಧಾನ ಕಾರ್ಯದರ್ಶಿ ಕಾಂತರಾಜ್, ಸಹಕಾರ್ಯದರ್ಶಿ ಎಚ್.ಪಿ ಶ್ರೀನಿವಾಸ್ ಮತ್ತು ಖಜಾಂಚಿ ಮಹೇಶ್ವರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

ಸಂಪರ್ಕ್ ಸೇ ಸಮರ್ಥನ್ ಅಭಿಯಾನ : ಸಂಸದ ರಾಘವೇಂದ್ರ ನೇತೃತ್ವದಲ್ಲಿ ಪ್ರಮುಖರ ಮನೆಗಳಿಗೆ ಭೇಟಿ

 

ಭದ್ರಾವತಿ, ಜೂ. 16: ಪ್ರಧಾನಮಂತ್ರಿ  ನರೇಂದ್ರ ಮೋದಿಯವರ ಸರ್ಕಾರ 9ನೇ ವರ್ಷ ಯಶಸ್ವಿಯಾಗಿ ಪೂರೈಸಿದ ಸಂದರ್ಭದಲ್ಲಿ  ಸಂಪರ್ಕ್ ಸೇ ಸಮರ್ಥನ್ ಅಭಿಯಾನ ಬಿಜೆಪಿ ತಾಲೂಕು ಮಂಡಲ ವತಿಯಿಂದ  ಶುಕ್ರವಾರ ಹಮ್ಮಿಕೊಳ್ಳಲಾಯಿತು.
    ಸಂಸದ ಬಿ.ವೈ ರಾಘವೇಂದ್ರ, ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ನೇತೃತ್ವದಲ್ಲಿ ಜಿಲ್ಲಾ ಸಂಪರ್ಕ ಸೆ ಸಮರ್ಥನ್ ಅಭಿಯಾನ ತಂಡ ನಗರದ ವಿವಿಧೆಡೆ ಪ್ರಮುಖರ ಮನೆಗಳಿಗೆ ತೆರಳಿ ಚರ್ಚೆ ನಡೆಸಿತು.
   ಉಂಬ್ಳೆಬೈಲು ರಸ್ತೆ ಸಂಜಯ್ ನಗರದ ಮೀನು ಉದ್ಯಮಿ ಎ. ಮಾಧು, ವೀರಾಪುರ ಗ್ರಾಮದ ಸುಧಾಕರ್ ಶೆಟ್ಟಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಹುಡ್ಕೋ ಕಾಲೋನಿಯ ಸತ್ಯ ಭದ್ರಾವತಿ, ಕುರುಬ ಸಮಾಜದ ಮುಖಂಡ ಕರಿಯಪ್ಪ ಸೇರಿದಂತೆ ಇನ್ನಿತರರ ಮನೆಗಳಿಗೆ ತಂಡ ತೆರಳಿತು.
    ತಂಡದ ಪ್ರಮುಖರಾದ ಅಶೋಕ್ ಮೂರ್ತಿ, ಡಾ. ಧನಂಜಯ್ ಸರ್ಜಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಜಿಲ್ಲಾ ಕಾರ್ಯದರ್ಶಿ ಎಂ. ಪ್ರಭಾಕರ್,  ಮಂಡಲ ಕಾರ್ಯದರ್ಶಿ ರಂಗಸ್ವಾಮಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹರಿಕೃಷ್ಣ, ಅಭಿಯಾನ ತಂಡದ ಜಿಲ್ಲಾ ಸದಸ್ಯರಾದ ಪ್ರಶಾಂತ್ ಪಂಡಿತ್, ದಿನೇಶ್ ಆಚಾರ್ಯ,  ಮುಖಂಡರಾದ ಮಂಗೋಟೆ ರುದ್ರೇಶ್, ತೀರ್ಥಯ್ಯ, ಕೂಡ್ಲಿಗೆರೆ ಹಾಲೇಶ್, ಕೆ.ಎನ್ ಶ್ರೀ ಹರ್ಷ, , ರಾಮಲಿಂಗಯ್ಯ, ಜಿ. ಆನಂದ ಕುಮಾರ್, ಮಲ್ಲೇಶ್, ವೇಲು, ಧರ್ಮಣ್ಣ. ಟೈಲರ್ ಸತೀಶ್, ಕರೀಗೌಡ, ಉಮಾವತಿ ಹಾಗೂ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಕಾಸ ತೀರ್ಥಯಾತ್ರೆ ; ಆರ್‌ಎಎಫ್ ಘಟಕ, ರೈಲ್ವೆ ಮೇಲ್ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಬಿ.ವೈ ರಾಘವೇಂದ್ರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ೯ ವರ್ಷ ಆಡಳಿತ ಯಶಸ್ವಿಯಾಗಿ ಪೂರೈಸಿರುವ ಹಿನ್ನಲೆಯಲ್ಲಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಶುಕ್ರವಾರ ವಿಕಾಸ ತೀರ್ಥಯಾತ್ರೆ ಆಯೋಜಿಸಲಾಗಿತ್ತು. ಸಂಸದ ಬಿ.ವೈ ರಾಘವೇಂದ್ರ ನಗರದ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್ ೯೭ ಬಿ.ಎನ್ ಆರ್‌ಎಎಫ್ ಘಟಕ ಕಾಮಗಾರಿ ವೀಕ್ಷಿಸಿದರು.
    ಭದ್ರಾವತಿ, ಜೂ. ೧೬: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ೯ ವರ್ಷ ಆಡಳಿತ ಯಶಸ್ವಿಯಾಗಿ ಪೂರೈಸಿರುವ ಹಿನ್ನಲೆಯಲ್ಲಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಶುಕ್ರವಾರ ವಿಕಾಸ ತೀರ್ಥಯಾತ್ರೆ ಆಯೋಜಿಸಲಾಗಿತ್ತು.
    ಸಂಸದ ಬಿ.ವೈ ರಾಘವೇಂದ್ರ ನಗರದ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್ ೯೭ ಬಿ.ಎನ್ ಆರ್‌ಎಎಫ್ ಘಟಕ ಹಾಗು ಕಡದಕಟ್ಟೆ ಬಳಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ ನಡೆಸಿದರು.
    ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಕೇಂದ್ರ ಸರ್ಕಾರ ಕಳೆದ ೯ ವರ್ಷಗಳ ಆಡಳಿತಾವಧಿಯಲ್ಲಿ ದೇಶಾದ್ಯಂತ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ ಸಾಕಷ್ಟು ಯೋಜನೆಗಳು ಪ್ರಗತಿಯಲ್ಲಿದ್ದು, ಭವಿಷ್ಯದಲ್ಲಿ ಇನ್ನಷ್ಟು ಉತ್ತಮ ಆಡಳಿತ ನೀಡುವ ಉದ್ದೇಶದಿಂದ ವಿಕಾಸ ತೀರ್ಥ ಯಾತ್ತೆ ಕೈಗೊಳ್ಳಲಾಗುತ್ತಿದೆ. ಭದ್ರಾವತಿ ತಾಲೂಕಿನಲ್ಲಿ ೯೭ ಬಿ.ಎನ್ ಆರ್‌ಎಎಫ್ ಘಟಕ ಹಾಗು ಕಡದಕಟ್ಟೆ ಬಳಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿವೆ. ಅಲ್ಲದೆ ಈಗಾಗಲೇ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.
    ಬಿಜೆಪಿ ಮಂಡಲ ತಾಲೂಕು ಅಧ್ಯಕ್ಷ ಜಿ. ಧರ್ಮಪ್ರಸಾದ್, ಜಿಲ್ಲಾ ಸಂಪರ್ಕ ಸೆ ಸಮರ್ಥನ್ ಅಭಿಯಾನದ ಪ್ರಮುಖರಾದ ಅಶೋಕ್ ಮೂರ್ತಿ, ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಕಾರ್ಯದರ್ಶಿ ಎಂ. ಪ್ರಭಾಕರ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹರಿಕೃಷ್ಣ, ಮುಖಂಡರಾದ ಮಂಗೋಟೆ ರುದ್ರೇಶ್, ರಂಗಸ್ವಾಮಿ, ಪ್ರಶಾಂತ್ ಪಂಡಿತ್, ದಿನೇಶ್ ಆಚಾರ್ಯ, ತೀರ್ಥಯ್ಯ, ಕೂಡ್ಲಿಗೆರೆ ಹಾಲೇಶ್, ಕೆ.ಎನ್ ಶ್ರೀಹರ್ಷ, ರಾಮಲಿಂಗಯ್ಯ, ಜಿ. ಆನಂದಕುಮಾರ್, ಮಲ್ಲೇಶ್, ವೇಲು, ಧರ್ಮಣ್ಣ, ಸತೀಶ್, ಕರೀಗೌಡ, ಉಮಾಪತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಐಎಸ್‌ಎಲ್ ಉಳಿಸುವ ಪ್ರಯತ್ನ ಮುಂದುವರಿಕೆ : ಬಿ.ವೈ ರಾಘವೇಂದ್ರ

ಭದ್ರಾವತಿಯಲ್ಲಿ ಶುಕ್ರವಾರ ವಿಕಾಸ ತೀರ್ಥಯಾತ್ರೆ ಹಿನ್ನಲೆಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿದರು.
    ಭದ್ರಾವತಿ, ಜೂ. ೧೬ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರೆದಿದ್ದು, ಪ್ರಸ್ತುತ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
    ಅವರು ಶುಕ್ರವಾರ ನಗರದಲ್ಲಿ ವಿಕಾಸ ತೀರ್ಥಯಾತ್ರೆ ಹಿನ್ನಲೆಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೇಂದ್ರ ಸರ್ಕಾರ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ನಿರ್ಧಾರ ಕೈಗೊಂಡು ಆದೇಶ ಹೊರಡಿಸಿದ್ದು, ಇದರ ವಿರುದ್ಧ ನಿರಂತರ ಪ್ರಯತ್ನದ ಫಲವಾಗಿ ಮುಚ್ಚುವ ಆದೇಶದ ಪ್ರಕ್ರಿಯೆ ಮುಂದೂಡಲ್ಪಟ್ಟಿದೆ. ಪ್ರಸ್ತುತ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲಾಗಿದೆ. ಈ ನಡುವೆ ಗುತ್ತಿಗೆ ಕಾರ್ಮಿಕರ ಹಿತಕಾಪಾಡುವಲ್ಲಿ ಯಶಸ್ವಿಯಾಗಿದ್ದು, ಕಾರ್ಖಾನೆಯನ್ನು ಉಳಿಸಿಕೊಳ್ಳುವ ಪ್ರಯತ್ನ ಈಗಲೂ ಮುಂದುವರೆಯುತ್ತಿದೆ ಎಂದರು.
    ಇದೀಗ ಉಕ್ಕು ಪ್ರಾಧಿಕಾರದ ನೂತನ ಅಧ್ಯಕ್ಷರನ್ನು, ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಹಾಗು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕಾರ್ಖಾನೆ ಪುನಶ್ಚೇತನಕ್ಕೆ ಮನವಿ ಮಾಡಲಾಗಿದೆ ಎಂದರು.
    ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಮುಖಂಡರಾದ ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ಕೂಡ್ಲಿಗೆರೆ ಹಾಲೇಶ್, ಅಶೋಕ್‌ಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Thursday, June 15, 2023

ಜೂ.೨೦ರಂದು ಜಾಗೃತಿ ಸಭೆ, ಜನ್ಮದಿನಾಚರಣೆ

    ಭದ್ರಾವತಿ, ಜೂ. ೧೬ : ಡಾ. ಬಿ.ಆರ್ ಅಂಬೇಡ್ಕರ್ ಭವನ ಸಂರಕ್ಷಣಾ ಸಮಿತಿ ವತಿಯಿಂದ ಜೂ.೨೦ರ ಸಂಜೆ ೪ ಗಂಟೆಗೆ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಜಾಗೃತಿ ಸಭೆ ಮತ್ತು ಕಾಂಮ್ರೇಡ್ ಡಿ.ಸಿ ಮಾಯಣ್ಣನವರ ೮೯ನೇ ಜನ್ಮದಿನಾಚರಣೆ ಹಮ್ಮಿಕೊಳ್ಳಲಾಗಿದೆ.
    ರೈತ ಸಂಘದ ವರಿಷ್ಠ ಕೆ.ಟಿ ಗಂಗಾಧರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಡಿಎಸ್‌ಎಸ್ ಮುಖಂಡರಾದ ವಿಜಯಮ್ಮ ಎನ್ ಗಿರಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಎಂ. ಚಂದ್ರಶೇಖರಯ್ಯ ನಿವೃತ್ತ ತಹಸೀಲ್ದಾರ್ ಇಂದಿರಾ ಬಿ. ಕೃಷ್ಣಪ್ಪ, ಸಾಹಿತಿ ಹರೋನಹಳ್ಳಿ ಸ್ವಾಮಿ, ಚಿತ್ರನಟ ಆಂಜನೇಯ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಡಾ. ಬಿ.ಆರ್ ಅಂಬೇಡ್ಕರ್ ಭವನ ಸಂರಕ್ಷಣಾ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಕೋರಿದ್ದಾರೆ.

ಜೂ. ೧೬ರಂದು ಆರ್‌ಎಎಫ್ ಘಟಕ, ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆಗೆ ಸಂಸದ ಬಿ.ವೈ ರಾಘವೇಂದ್ರ ಆಗಮನ

ಸಂಸದ ಬಿ.ವೈ ರಾಘವೇಂದ್ರರವರು ಕಾಮಗಾರಿಗಳ ಪರಿಶೀಲನೆಗೆ ಶುಕ್ರವಾರ ಭದ್ರಾವತಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ಗುರುವಾರ ಪೂರ್ವ ಪರಿಶೀಲನೆ ನಡೆಸಿದರು. ಕಾಮಗಾರಿಗಳ ಸಂಪೂರ್ಣ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಪೂರಕ ಸಿದ್ದತೆಗಳನ್ನು ಕೈಗೊಂಡರು.
    ಭದ್ರಾವತಿ, ಜೂ. ೧೫ : ಸಂಸದ ಬಿ.ವೈ ರಾಘವೇಂದ್ರ ನಗರದಲ್ಲಿ ಹಲವು ಕಾಮಗಾರಿಗಳ ಪ್ರಗತಿ ಪರಿಶೀಲನೆಗಾಗಿ ಜೂ.೧೬ರ ಶುಕ್ರವಾರ ಆಗಮಿಸುತ್ತಿದ್ದು, ಕಾಮಗಾರಿಗಳು ಮತ್ತಷ್ಟು ವೇಗ ಪಡೆದುಕೊಳ್ಳುವ ಲಕ್ಷಣಗಳು ಕಂಡು ಬರುತ್ತಿವೆ.
    ಮುಂದಿನ ವರ್ಷ ಲೋಕಸಭಾ ಚುನಾವಣೆ ಎದುರಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಸಂಸದ ಬಿ.ವೈ ರಾಘವೇಂದ್ರ ವಿವಿಧ ಕಾಮಗಾರಿಗಳ ವೀಕ್ಷಣೆ-ವಿಕಾಸ ತೀರ್ಥಯಾತ್ರೆ ಕೈಗೊಂಡಿದ್ದು, ಈ ಅಂಗವಾಗಿ ಕಳೆದ ಸುಮಾರು ೨ ವರ್ಷಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಉದ್ಘಾಟನೆಗೊಂಡ ೯೭ ಬಿ.ಎನ್ ಆರ್‌ಎಎಫ್ ಘಟಕ ಹಾಗು ಕಡದಕಟ್ಟೆ ಬಳಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ ನಡೆಸಲಿದ್ದಾರೆ.
    ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಕಾಮಗಾರಿಗಳು ಮತ್ತಷ್ಟು ವೇಗ ಪಡೆದುಕೊಳ್ಳುವ ಲಕ್ಷಣಗಳು ಕಂಡು ಬರುತ್ತಿವೆ. ಈ ಹಿಂದೆ ಸಹ ಬಿ.ವೈ ರಾಘವೇಂದ್ರ ಅವರು ಕಾಮಗಾರಿಗಳ ವೀಕ್ಷಣೆ ನಡೆಸಿದ್ದರು.
    ಬಿಜೆಪಿ ಮುಖಂಡರಿಂದ ಪೂರ್ವ ಪರಿಶೀಲನೆ:
    ಸಂಸದ ಬಿ.ವೈ ರಾಘವೇಂದ್ರರವರು ಕಾಮಗಾರಿಗಳ ಪರಿಶೀಲನೆಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ಗುರುವಾರ ಪೂರ್ವ ಪರಿಶೀಲನೆ ನಡೆಸಿದರು. ಕಾಮಗಾರಿಗಳ ಸಂಪೂರ್ಣ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಪೂರಕ ಸಿದ್ದತೆಗಳನ್ನು ಕೈಗೊಂಡರು.

ಅಂತರರಾಷ್ಟ್ರೀಯ ಯೋಗ ದಿನಾಚರಣೆ : ಜೂ.೧೮ ಮುಕ್ತ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ


    ಭದ್ರಾವತಿ, ಜೂ. ೧೫: ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನ ಸಮೀಪದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ವಿವೇಕಾನಂದ ಯೋಗ ಅಸೋಸಿಯೇಷನ್ ವತಿಯಿಂದ ಜೂ.೨೧ರಂದು ೯ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
    ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಪೂರಕವಾಗಿ ಜೂ.೧೮ರಂದು ಮುಕ್ತ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ ಆಯೋಜಿಸಲಾಗಿದೆ. ಜೂ.೨೧ರಂದು ಯೋಗ ದಿನಾಚರಣೆ ಪ್ರಯುಕ್ತ ಬೆಳಿಗ್ಗೆ ೬ ಗಂಟೆಯಿಂದ ೭.೧೫ರ ವರೆಗೆ ಸಾಮೂಹಿಕ ಯೋಗ ಪ್ರದರ್ಶನ ನಡೆಯಲಿದೆ.
    ಯೋಗಪಟುಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಅಸೋಸಿಯೇಷನ್ ಅಧ್ಯಕ್ಷ ಕೆ.ಎಚ್ ಪಾಲಾಕ್ಷಪ್ಪ, ಕಾರ್ಯದರ್ಶಿ ತಮ್ಮಣ್ಣ ಗೌಡ ಮತ್ತು ಖಜಾಂಚಿ ವಾದಿರಾಜ ಆಚಾರ್ ಕೋರಿದ್ದಾರೆ.