ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಸಂಬಂಧವಿಲ್ಲದ ವ್ಯಕ್ತಿಗೆ ಅಕ್ರಮವಾಗಿ ಖಾತೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಜು. 10: ಸಂಬಂಧವಿಲ್ಲದ ವ್ಯಕ್ತಿಗೆ ಅಕ್ರಮವಾಗಿ ಖಾತೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ತಾಲೂಕಿನ ಹೊಳೆಹೊನ್ನೂರು ಹೋಬಳಿ, ಮಲ್ಲಿಗೇನಹಳ್ಳಿ ಗ್ರಾಮದ ಸ.ನಂ.31 ರಲ್ಲಿ ರೈತ ಲೋಕೇಶಪ್ಪ ಅವರ ಕುಟುಂಬಕ್ಕೆ ಸೇರಿದ ಸುಮಾರು 1-09 ಎಕರೆ ಅಡಕೆ ತೋಟವನ್ನು ಅಕ್ರಮವಾಗಿ ಸಂಬಂಧವಿಲ್ಲದ ವ್ಯಕ್ತಿಗೆ ಖಾತೆ ಮಾಡಿರುವ ಗ್ರಾಮ ಲೆಕ್ಕಿಗರು, ರಾಜಸ್ವ ನಿರೀಕ್ಷಕರು ಸೇರಿದಂತೆ ಸಂಬಂಧಪಟ್ಟವರ ಮೇಲೆ ಸೂಕ್ತ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು.
ಸಂಘದ ಅಧ್ಯಕ್ಷ ಎಚ್.ಪಿ.ಹಿರಿಯಣ್ಣಯ್ಯ, ಪ್ರಧಾನ ಕಾರ್ಯದರ್ಶಿ ರಾಮಚಂದ್ರರಾವ್ ಘೋರ್ಪಡೆ, ಪ್ರಮುಖರಾದ ಡಿ.ವಿ ವೀರೇಶ್, ಶರತ್ಚಂದ್ರ, ಚಂದ್ರಶೇಖರ್, ಮಂಜುನಾಥ್, ಕರಿಬಸಪ್ಪ, ಶಿವಣ್ಣ ಸೇರಿದಂತೆ ಉಪಸ್ಥಿತರಿದ್ದರು.