Friday, July 14, 2023

ನಗರಸಭೆಯಿಂದ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಚಾಲನೆ

ಭದ್ರಾವತಿ  ನಗರಸಭೆ ವ್ಯಾಪ್ತಿಯಲ್ಲಿ ಪುನಃ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಶುಕ್ರವಾರ ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆಗೆ ಚಾಲನೆ ನೀಡಲಾಯಿತು.
    ಭದ್ರಾವತಿ, ಜು. ೧೪ : ನಗರಸಭೆ ವ್ಯಾಪ್ತಿಯಲ್ಲಿ ಪುನಃ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಶುಕ್ರವಾರ ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆಗೆ ಚಾಲನೆ ನೀಡಲಾಯಿತು.
    ೩೫ ವಾರ್ಡ್‌ಗಳನ್ನು  ಹೊಂದಿರುವ ನಗರಸಭೆಯ ಬಹುತೇಕ ವಾರ್ಡ್‌ಗಳಲ್ಲಿ  ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೀದಿ ನಾಯಿಗಳನ್ನು ನಿಯಂತ್ರಿಸಲು ನಗರಸಭೆ ಸಾಕಷ್ಟು ಶ್ರಮಿಸುತ್ತಿದೆ. ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಮೊರೆ ಹೋಗಿದ್ದು, ಪ್ರತಿ ವರ್ಷ ಸಂತಾನಹರಣ ಚಿಕಿತ್ಸೆ ನಡೆಸಲಾಗುತ್ತಿದೆ. ಆದರೂ ಸಹ ಬೀದಿ ನಾಯಿಗಳ ನಿಯಂತ್ರಣ ಸಾಧ್ಯವಾಗುತ್ತಿಲ್ಲ.
    ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೫ ಸಾವಿರ ಬೀದಿಗಳಿದ್ದು, ಈ ಪೈಕಿ ಕಳೆದ ವರ್ಷ ಸುಮಾರು ೧ ಸಾವಿರ ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನಡೆಸಲಾಗಿತ್ತು. ಈ ಬಾರಿ ಸುಮಾರು ೧,೫೦೦ ಬೀದಿನಾಯಿಗಳಿಗೆ  ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲು ಗುರಿ ಹೊಂದಲಾಗಿದೆ.
    ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲು ಗುತ್ತಿಗೆ ನೀಡಲಾಗಿದ್ದು, ಓರ್ವ ವೈದ್ಯರು ಪ್ರತಿ ದಿನ ಸುಮಾರು ೨೦ ರಿಂದ ೨೫ ಬೀದಿ ನಾಯಿಗಳಿಗೆ ಶಸ್ತ್ರಚಿಕಿತ್ಸೆ ಕೈಗೊಳ್ಳುತ್ತಿದ್ದಾರೆ. ಸುಮಾರು ೩ ತಿಂಗಳವರೆಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಯಲಿದೆ.
    ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್‌, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಪರಿಸರ ಅಭಿಯಂತರ ಪ್ರಭಾಕರ್‌, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್‌ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Thursday, July 13, 2023

ಆ.೧೨, ೧೩ ರಂದು ಮೈಸೂರಿನಲ್ಲಿ ರಾಜ್ಯ ವಕೀಲರ ಸಮ್ಮೇಳನ

ಕರ್ನಾಟಕ ರಾಜ್ಯ ವಕೀಲರ ಪರಿಷತ್ ರಾಜ್ಯಾಧ್ಯಕ್ಷ ಎಚ್.ಎಲ್‌ ವಿಶಾಲ್‌ ರಘು ಗುರುವಾರ ಭದ್ರಾವತಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.
    ಭದ್ರಾವತಿ, ಜು. ೧೩: ಕರ್ನಾಟಕ ರಾಜ್ಯ ವಕೀಲರ ಪರಿಷತ್ ವತಿಯಿಂದ ಆ. 12 ಮತ್ತು 13 ಎರಡು ದಿನಗಳ 10 ನೇ ರಾಜ್ಯ ವಕೀಲರ ಸಮ್ಮೇಳ ಆಯೋಜಿಸಲಾಗಿದೆ ಎಂದು ಪರಿಷತ್ ರಾಜ್ಯಾಧ್ಯಕ್ಷ ಎಚ್.ಎಲ್. ವಿಶಾಲ್ ರಘು ಹೇಳಿದರು.
    ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಸುಮಾರು 14 ವರ್ಷಗಳ ನಂತರ ಸಾಂಸ್ಕೃತಿಕ ನಗರ ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಸಮ್ಮೇಳನ ನಡೆಸಲಾಗುತ್ತಿದೆ.  ಸಮ್ಮೇಳನದಲ್ಲಿ ರಾಜ್ಯದ ವಿವಿಧೆಡೆಗಳಿಂದ ಸುಮಾರು 10 ರಿಂದ 12
ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
    ಸಮ್ಮೇಳನದ ಪ್ರತಿನಿಧಿ ಶುಲ್ಕ ರು. 1000 ನಿಗದಿಪಡಿಸಲಾಗಿದೆ. ಭಾಗವಹಿಸಿದವರಿಗೆ ನೆನೆಪಿನ ಕಾಣಿಕೆ ನೀಡಲಾಗುವುದು. ಸಮ್ಮೇಳನದ ಯಶಸ್ವಿಗೆ ವಿವಿಧ ಸಮಿತಿಗಳನ್ನು ರಚಿಸಿದ್ದು,  ಭಾಗವಹಿಸುವವರು ಜು. 25 ರೊಳಗೆ ನೊಂದಾಯಿಸಿಕೊಳ್ಳಬೇಕು. ನಂತರ ಬರುವವರು ಅಧ್ಯಕ್ಷರು, ಕಾರ್ಯದರ್ಶಿಗಳ ಗುರುತು ಪತ್ರದೊಂದಿಗೆ ಭಾಗವಹಿಸಬಹುದಾಗಿದೆ. ಸಮ್ಮೇಳನದಲ್ಲಿ ವಕೀಲರು ಎದುರಿಸುತ್ತಿರುವ ಸಂಕಷ್ಟ ಸವಾಲುಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.
    ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾದ ಬೋಪಣ್ಣ, ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಲೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ,  ಹಾಗು ಕಾನೂನು ಸಚಿವರು  ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭ
ದಲ್ಲಿ ಮುಖ್ಯ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಭಾಗವಹಿಸಿ ಮಹಿಳೆಯರ ಹಕ್ಕುಗಳು ಮತ್ತು ಸವಾಲುಗಳ ಬಗ್ಗೆ ಮಾತನಾಡಲಿದ್ದಾರೆ ಎಂದರು.
    ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಎಲ್. ಶ್ರೀನಿವಾಸ್ ಬಾಬು, ಜಿಲ್ಲಾಧ್ಯಕ್ಷ ಬಿ.ಜಿ ಶಿವಮೂರ್ತಿ, ತಾಲ್ಲೂಕು ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಕಾರ್ಯದರ್ಶಿ ವಿ. ಉದಯ ಕುಮಾರ್,  ಕಾರ್ಯಕಾರಿ ಸಮಿತಿ ಸದಸ್ಯರಾದ  ಮಗೇಶ್ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಾಲಬಾಧೆಯಿಂದ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ

ಭದ್ರಾವತಿಯಲ್ಲಿ ಸಾಲಬಾಧೆಯಿಂದ ಮಧು-ಮೋನಿಕಾ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
    ಭದ್ರಾವತಿ, ಜು. ೧೩ : ಸಾಲಬಾಧೆಯಿಂದ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.
    ಮಧು(೨೭) ಮತ್ತು ಮೋನಿಕಾ(೨೧) ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಗಾರೆ ಕೆಲಸ ಮಾಡಿಕೊಂಡಿಕೊಂಡು ಜೀವನ ನಿರ್ವಹಿಸುತ್ತಿದ್ದರು. ಬೈತುಂಬ ಸಾಲ ಮಾಡಿಕೊಂಡಿದ್ದು, ಸಾಲಬಾಧೆ ಹೆಚ್ಚಾದ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
    ಇಬ್ಬರು ಮನೆಯಿಂದ ಹೊರಬಾರದ ಹಿನ್ನಲೆಯಲ್ಲಿ ಅಕ್ಕಪಕ್ಕದ ನಿವಾಸಿಗಳಿಗೆ ಅನುಮಾನ ಬಂದಿದ್ದು, ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ನ್ಯೂಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜು.೧೪ರಂದು ಪದಗ್ರಹಣ ಸಮಾರಂಭ

    ಭದ್ರಾವತಿ, ಜು. ೧೩ : ಲಯನ್ಸ್ಅಂತರಾಷ್ಟ್ರೀಯ ಸಂಸ್ಥೆ, ಲಯನ್ಸ್ಕ್ಲಬ್ಸುಗರ್ಟೌನ್ನೂತನ ಪದಾಧಿಕಾರಿಗಳ ಪದಗ್ರಹಣ ಜು.೧೪ರಂದು ಸಂಜೆ ಗಂಟೆಗೆ ನ್ಯೂಟೌನ್ಜೆಟಿಎಸ್ಶಾಲೆ ಸಮೀಪದಲ್ಲಿರುವ ಲಯನ್ಸ್ಕಣ್ಣಿನ ಆಸ್ಪತ್ರೆ ಸಭಾಂಗಣದಲ್ಲಿ ನಡೆಯಲಿದೆ.

          ಲಯನ್ಸ್ಎಂಜೆಎಫ್ರಾಜೀವ್ಕೋಟ್ಯಾನ್ಪದಗ್ರಹಣ ಬೋಧಿಸಲಿದ್ದು, ಆರ್.‌ ಮದಿಯಲಗನ್ಅಧ್ಯಕ್ಷತೆ ವಹಿಸಲಿದ್ದಾರೆ. ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ಟಿ. ಶ್ರೀನಿವಾಸ್, ಕಾರ್ಯದರ್ಶಿಯಾಗಿ ಮಂಜುನಾಥ್ಹಾಗು ಖಜಾಂಚಿಯಾಗಿ ಎಚ್.ಡಿ ಕೃಷ್ಣ ಪದಗ್ರಹಣ ಸ್ವೀಕರಿಸಲಿದ್ದಾರೆ.

Tuesday, July 11, 2023

ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಮಣಿಪುರದಲ್ಲಿ ಆಶಾಂತಿ ನಿಯಂತ್ರಿಸಲಿ

ತಹಸೀಲ್ದಾರ್‌ ಮೂಲಕ ರಾಷ್ಟ್ರಪತಿಗಳಿಗೆ ಮನವಿ

ಮಣಿಪುರ ರಾಜ್ಯದಲ್ಲಿ ಉಂಟಾಗಿರುವ ಆಶಾಂತಿ ವಾತಾವರಣ ನಿಯಂತ್ರಿಸಲು ಕೇಂದ್ರ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ಅಖಿಲ ಕರ್ನಾಟಕ ಯುನೈಟೆಡ್‌ ಕ್ರಿಶ್ಚಿಯನ್‌ ಫೋರಂ ಫಾರ್‌ ಹ್ಯೂಮನ್‌ ರೈಟ್ಸ್‌ ವತಿಯಿಂದ ತಹಸೀಲ್ದಾರ್‌ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಜು. ೧೨: ಮಣಿಪುರ ರಾಜ್ಯದಲ್ಲಿ ಉಂಟಾಗಿರುವ ಆಶಾಂತಿ ವಾತಾವರಣ ನಿಯಂತ್ರಿಸಲು ಕೇಂದ್ರ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ ಅಖಿಲ ಕರ್ನಾಟಕ ಯುನೈಟೆಡ್‌ ಕ್ರಿಶ್ಚಿಯನ್‌ ಫೋರಂ ಫಾರ್‌ ಹ್ಯೂಮನ್‌ ರೈಟ್ಸ್‌ ವತಿಯಿಂದ ತಹಸೀಲ್ದಾರ್‌ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
    ಮಣಿಪುರ ರಾಜ್ಯದಲ್ಲಿ ಅಮಾಯಕ ಜನರ ಮೇಲೆ ನಿರಂತರ ದಾಳಿ, ದೌರ್ಜನ್ಯ, ಮನೆಗಳಿಗೆ ಬೆಂಕಿ ಹಚ್ಚುವಿಕೆ, ಚರ್ಚ್‌ಗಳ  ನಾಶ ಹಾಗೂ ಸಾವಿರಾರು ಜನರು  ಮನೆ, ಮಠ, ಆಸ್ತಿ ಕಳೆದುಕೊಂಡು ನಿರಾಶ್ರಿತರಾಗಿ ವಲಸೆ ಹೋಗುವಂತಹ ಘಟನೆ  ಸುಮಾರು ಎರಡು ತಿಂಗಳಿನಿಂದ ನಿರಂತರವಾಗಿ ನಡೆಯುತ್ತಿರುವುದು ದೇಶದಾದ್ಯಂತ ಕಳವಳಕ್ಕೆ  ಕಾರಣವಾಗಿದೆ. ಇಡೀ ಮಣಿಪುರ ರಾಜ್ಯ ಅಶಾಂತಿಯ ಬೀಡಾಗಿದೆ ಎಂದು ಪ್ರತಿಭಟನಾ ನಿರಂತರು ಆತಂಕ ವ್ಯಕ್ತಪಡಿಸಿದರು.
    ಮಾನವ ಹಕ್ಕುಗಳು ನಿರಂತರ ಉಲ್ಲಂಘನೆಯಾಗುತ್ತಿದ್ದು, ಇದನ್ನು ಗಮನಿಸಿ ತಕ್ಷಣ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವುದರ ಮೂಲಕ ನಿಯಂತ್ರಿಸಬೇಕು.   ಮನೆ, ಮಠ, ಆಸ್ತಿ ಕಳೆದುಕೊಂಡು ನಷ್ಟಕ್ಕೆ ಒಳಗಾದ ಅಮಾಯಕರಿಗೆ ಅಗತ್ಯವಾದ ಆರ್ಥಿಕ ಹಾಗೂ ಇತರೆ ಪರಿಹಾರ ನೀಡಿ ಅವರ ಬದುಕನ್ನು ರೂಪಿಸಿಕೊಡಲು ಮುಂದಾಗಬೇಕು.  ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸುವ ಮೂಲಕ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದರು.
    ಪ್ರಮುಖರಾದ ಪಾದರ್‌ ಲಾನ್ಸಿ ಡಿಸೋಜ, ಅಂತೋಣಿ ವಿಲ್ಸನ್‌, ಟಿ.ಎಸ್‌ ಪ್ರಭುದಾಸ್‌, ಸ್ಟೀವನ್‌ ಡೇಸಾ, ಡಾ. ದೇವನೇಸನ್‌ ಸ್ಯಾಮ್ಯುಯೆಲ್‌, ಜೋಸ್‌ ಜಾರ್ಜ್‌, ಸೆಲ್ವರಾಜ್‌, ಜಾರ್ಜ್‌, ವೆಸ್ಲಿ ವಿಲ್‌ಹೆಲ್ಮ್‌ ಕರ್ಕಡ, ನಂದಕುಮಾರ್‌, ಎನ್.ಪಿ ಡೇವಿಸ್‌, ಎಂ.ಎಸ್‌ ಸಾಮುವೇಲ್‌ , ಪ್ರಾನ್ಸಿಸ್‌  ಸೇರಿದಂತೆ ಕ್ರೈಸ್ತ ಸಮುದಾಯ ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಇನ್ನಿತರರು ಉಪಸ್ಥಿತರಿದ್ದರು.

ನಗರಸಭೆ ವ್ಯಾಪ್ತಿಯಲ್ಲಿ ಪುನಃ ಕೆರೆ ಒತ್ತುವರಿ ಕಾರ್ಯಾಚರಣೆ

ಭದ್ರಾವತಿಯಲ್ಲಿ ತಾಲೂಕು ಕಛೇರಿ ಹಾಗು ಕಂದಾಯ ಇಲಾಖೆ ಸಹಕಾರದೊಂದಿಗೆ ಪೌರಾಯುಕ್ತ ಮನುಕುಮಾರ್‌ ನೇತೃತ್ವದಲ್ಲಿ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸುಮಾರು ೮ ಎಕರೆ ೩೨ ಗುಂಟೆ ವಿಸ್ತೀಣವುಳ್ಳ ಸರ್ವೆ ನಂ. ೧೩೩ರ ಕೆರೆ ಸರ್ವೆ ಕಾರ್ಯ ಈ ಹಿಂದೆ ನಡೆದಿದ್ದು, ಸುಮಾರು ೧ ಎಕರೆ ಒತ್ತುವರಿಯಾಗಿರುವ ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಇದೀಗ ತೆರವು ಕಾರ್ಯಾಚರಣೆ ನಡೆಸಲಾಯಿತು.
ಭದ್ರಾವತಿ, ಜು. ೧೨ :  ಪುನಃ ಕೆರೆ ಒತ್ತುವರಿ ಕಾರ್ಯಾಚರಣೆ ಆರಂಭಗೊಂಡಿದ್ದು, ಸಿದ್ದಾಪುರ ಕಸಬಾ ಹೋಬಳಿ ಸಂಕ್ಲಿಪುರ ಸರ್ವೆ ನಂ. ೧೩೩ ಕೆರೆ ಒತ್ತುವರಿ ಕಾರ್ಯಾಚರಣೆ ಯಶಸಿಯಾಗಿ ಕೈಗೊಳ್ಳಲಾಯಿತು.
ತಾಲೂಕು ಕಛೇರಿ ಹಾಗು ಕಂದಾಯ ಇಲಾಖೆ ಸಹಕಾರದೊಂದಿಗೆ ಪೌರಾಯುಕ್ತ ಮನುಕುಮಾರ್‌ ನೇತೃತ್ವದಲ್ಲಿ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸುಮಾರು ೮ ಎಕರೆ ೩೨ ಗುಂಟೆ ವಿಸ್ತೀಣವುಳ್ಳ ಸರ್ವೆ ನಂ. ೧೩೩ರ ಕೆರೆ ಸರ್ವೆ ಕಾರ್ಯ ಈ ಹಿಂದೆ ನಡೆದಿದ್ದು, ಸುಮಾರು ೧ ಎಕರೆ ಒತ್ತುವರಿಯಾಗಿರುವ ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಇದೀಗ ತೆರವು ಕಾರ್ಯಾಚರಣೆ ನಡೆಸಲಾಯಿತು.


    ಕೆರೆ ಗಡಿ ಗುರುತು ಮಾಡಿರುವ ಸ್ಥಳದಲ್ಲಿ ಜೆಸಿಬಿ ಬಳಸಿ ಟ್ರಂಚ್‌ ಒಡೆಯಲಾಗಿದೆ. ನಗರಸಭೆ ವ್ಯಾಪ್ತಿ ಬಹಳಷ್ಟು ಕೆರೆಗಳು ಒತ್ತುವರಿಯಾಗಿದ್ದು, ಈಗಾಗಲೇ ಗಡಿ ಗುರುತು ಮಾಡಲಾಗಿದೆ. ಒತ್ತುವರಿ ಮಾಡಿರುವವರು ಈಗಾಗಲೇ ತೆರವುಗೊಳಿಸಿದ್ದು, ಕೆಲವು ಕೆರೆಗಳ ಬಳಿ ತೆರವು ಮಾಡಿಲ್ಲ. ಈ ಹಿನ್ನಲೆಯಲ್ಲಿ ತೆರವು ಕಾರ್ಯಾಚರಣೆ ನಡೆಸುವುದು ಅನಿವಾರ್ಯವಾಗಿದೆ.
ಈ ಹಿಂದಿನ ನಗರಸಭೆ ಪೌರಾಯುಕ್ತರಾಗಿದ್ದ ಮನೋಹರ್‌ ಸಹ ಕೆರೆ ತೆರವು ಕಾರ್ಯಾಚರಣೆಯಲ್ಲಿ ಹೆಚ್ಚಿನ ಆಸಕ್ತಿವಹಿಸಿದ್ದರು. ಇದೀಗ ಇಂದಿನ ಪೌರಾಯುಕ್ತ ಮನುಕುಮಾರ್‌ ಸಹ ಕೆರೆ ತೆರವು ಕಾರ್ಯಾಚರಣೆಗೆ ಮುಂದಾಗಿದ್ದಾರೆ.  

-------------------------------------------------------------------------------------------
ನಗರಸಭೆ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಕೆರೆಗಳ ಸರ್ವೆ ಕಾರ್ಯ ನಡೆಸಿ ಗಡಿ ಗುರಿತಿಸಲಾಗಿದೆ. ಇದೀಗ ತಾಲೂಕು ಕಛೇರಿ ಹಾಗು ಕಂದಾಯ ಇಲಾಖೆ ಸಹಕಾರದೊಂದಿಗೆ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದ್ದು, ತೆರವು ಕಾರ್ಯಾಚರಣೆಗೆ ವೇಳಾಪಟ್ಟಿ ನಿಗದಿಪಡಿಸಲಾಗಿದೆ. ಹಂತ ಹಂತವಾಗಿ ತೆರವು ಕಾರ್ಯಾಚರಣೆ ನಡೆಯಲಿದೆ.
                                                               - ಮನುಕುಮಾರ್‌, ಪೌರಾಯುಕ್ತ, ನಗರಸಭೆ, ಭದ್ರಾವತಿ.

ಅರವಿಂದ ಪಟೇಲ್‌ ನಿಧನ


ಅರವಿಂದ ಪಟೇಲ್‌ 

    ಭದ್ರಾವತಿ, ಜು. ೧೧ : ನಗರದ ಜನ್ನಾಪುರ ನಿವಾಸಿ ಅರವಿಂದ ಪಟೇಲ್(೪೩) ಮಂಗಳವಾರ ನಿಧನ ಹೊಂದಿದರು.

   ಪತ್ನಿ, ಓರ್ವ ಪುತ್ರ ಇದ್ದರು. ಏಕಾಏಕಿ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅರವಿಂದ ಪಟೇಲ್ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಜಿಲ್ಲಾ ಉಪಾಧ್ಯಕ್ಷೆ ಮಂಜುಳಾ ನಂಜುಂಡಪ್ಪನವರ ಪುತ್ರರಾಗಿದ್ದಾರೆ. ಇವರ ಅಂತ್ಯಕ್ರಿಯೆ ಮಧ್ಯಾಹ್ನ ಅವರ ತೋಟದಲ್ಲಿ ನೆರವೇರಿತು.

     ಇವರ ನಿಧನಕ್ಕೆ ಜೇಡಿಕಟ್ಟೆ ಶ್ರೀ ಮರುಳ ಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಜಿ. ಸುರೇಶಯ್ಯ, ಬಿಜೆಪಿ ಪಕ್ಷದ ಯುವ ಮುಖಂಡ ಮಂಗೋಟೆ ರುದ್ರೇಶ್, ಉದ್ಯಮಿ  ಬಿ. ಕೆ ಜಗನ್ನಾಥ್ ಹಾಗು ನಗರಸಭಾ ಸದಸ್ಯರುಗಳು ಸಂತಾಪ ಸೂಚಿಸಿದ್ದಾರೆ.