Saturday, July 15, 2023

ಗಮನ ಸೆಳೆದ ಜನಪದ, ಸಾಂಸ್ಕೃತಿಕ ಹಬ್ಬ

ಭದ್ರಾವತಿ ನ್ಯೂಟೌನ್‌ ಸರ್‌.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ವಿಶೇಷವಾಗಿ ಆಯೋಜಿಸಲಾಗಿದ್ದ ಜನಪದ ಮತ್ತು ಸಾಂಸ್ಕೃತಿಕ ಹಬ್ಬ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎಂ ನಾಸಿರ್‌ಖಾನ್‌ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ,  ಜು. ೧೫ : ನಗರದ ನ್ಯೂಟೌನ್‌ ಸರ್‌.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ವಿಶೇಷವಾಗಿ ಜನಪದ ಮತ್ತು ಸಾಂಸ್ಕೃತಿಕ ಹಬ್ಬ ಆಯೋಜಿಸಲಾಗಿತ್ತು.
    ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು  ಸಾಂಪ್ರಾದಾಯಿಕ ಮತ್ತು ಜನಪದ ಉಡುಗೆ ತೊಡುಗೆಗಳೊಂದಿಗೆ ಕಂಗೊಳಿಸಿದರು.
    ವಿದ್ಯಾರ್ಥಿಗಳು ತಾವೇ ತಯಾರಿಸಿದ ರುಚಿಶುಚಿಯಾದ ಮನೆ ಅಡುಗೆ ಪದಾರ್ಥಗಳನ್ನು ಮಳಿಗೆಗಳನ್ನು ನಿರ್ಮಿಸಿ ಮಾರಾಟದಲ್ಲಿ ತೊಡಗಿರುವುದು ಹಾಗು ತಾವೇ ರೂಪಿಸಿದ  ಜನಪದ ನೃತ್ಯಗಳು ಮತ್ತು ಹಾಡುಗಳನ್ನು ಹಾಡಿ ಸಂಭ್ರಮಾಚರಣೆಯಲ್ಲಿ ತೊಡಗಿರುವುದು ವಿಶೇಷವಾಗಿ ಕಂಡು ಬಂದಿತು.
    ಪ್ರಾಂಶುಪಾಲ ಡಾ. ಬಿ.ಎಂ ನಾಸಿರ್‌ಖಾನ್, ಕಾಲೇಜಿನ ಸಾಂಸ್ಕೃತಿಕ ವೇದಿಕೆ ಸಂಚಾಲಕ ಎನ್.‌ ರವಿ ಸೇರಿದಂತೆ  ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.  ಹಲವು ವರ್ಷಗಳ ನಂತರ ಜನಪದ ಮತ್ತು ಸಾಂಸ್ಕೃತಿಕ ಹಬ್ಬ ಆಚರಿಸುವ ಮೂಲಕ ಕಾಲೇಜು ಎಲ್ಲರ ಗಮನ ಸೆಳೆದಿರುವುದು ವಿಶೇಷವಾಗಿದೆ.


ಭದ್ರಾವತಿ ನ್ಯೂಟೌನ್‌ ಸರ್‌.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ವಿಶೇಷವಾಗಿ ಆಯೋಜಿಸಲಾಗಿದ್ದ ಜನಪದ ಮತ್ತು ಸಾಂಸ್ಕೃತಿಕ ಹಬ್ಬದಲ್ಲಿ ವಿದ್ಯಾರ್ಥಿಗಳು ತಾವೇ ತಯಾರಿಸಿದ ರುಚಿಶುಚಿಯಾದ ಮನೆ ಅಡುಗೆ ಪದಾರ್ಥಗಳನ್ನು ಮಳಿಗೆಗಳನ್ನು ನಿರ್ಮಿಸಿ ಮಾರಾಟದಲ್ಲಿ ತೊಡಗಿರುವುದು ಕಂಡು ಬಂದಿತು.

Friday, July 14, 2023

ಎ.ಸಿ ಸದಾನಂದ ನಿಧನ

ಎ.ಸಿ ಸದಾನಂದ
    ಭದ್ರಾವತಿ:  ತಾಲೂಕಿನ ಅಂತರಗಂಗೆ ಗ್ರಾಮದ ನಿವಾಸಿ ಎ.ಸಿ ಸದಾನಂದ(೫೫) ಶುಕ್ರವಾರ ನಿಧನ ಹೊಂದಿದರು.
    ಪತ್ನಿ, ಇಬ್ಬರು ಪುತ್ರರು ಇದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಅಂತ್ಯಕ್ರಿಯೆ ಶನಿವಾರ ಗ್ರಾಮದಲ್ಲಿರುವ ಇವರ ತೋಟದಲ್ಲಿ ನೆರವೇರಲಿದೆ. ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.

ಸಾಧು ವೀರಶೈವ ಸಮಾಜದ ಅಧ್ಯಕ್ಷರಾಗಿ ಕೆ.ಜಿ ರವಿಕುಮಾರ್‌

ಸಿರೆಗೆರೆ ಶ್ರೀ ತರಳಬಾಳು ನ್ಯಾಯಪೀಠದಲ್ಲಿ ನಡೆದ ಆಯ್ಕೆ ಸಭೆಯಲ್ಲಿ ರೈತ ಮುಖಂಡ ಎಚ್.ಆರ್‌ ಬಸವರಾಜಪ್ಪ ಭದ್ರಾವತಿ ತಾಲೂಕಿನ ಸಾಧು ವೀರಶೈವ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಆದೇಶ ಪತ್ರ ನೂತನ ಅಧ್ಯಕ್ಷ ಕೆ.ಜಿ ರವಿಕುಮಾರ್‌ಗೆ ವಿತರಿಸಿದರು.
    ಭದ್ರಾವತಿ, ಜು. ೧೪ : ತಾಲೂಕಿನ ಸಾಧು ವೀರಶೈವ ಸಮಾಜದ ಅಧ್ಯಕ್ಷರಾಗಿ ಕಡದಕಟ್ಟೆ ಕೆ.ಜಿ ರವಿಕುಮಾರ್‌ ಆಯ್ಕೆಯಾಗಿದ್ದಾರೆ.
    ಉಪಾಧ್ಯಕ್ಷರಾಗಿ ಪರಮೇಶ್ವರಪ್ಪ, ಕಾರ್ಯದರ್ಶಿಯಾಗಿ ಸಿ.ಎಸ್‌ ಭರಣೇಶ್‌, ಸಹ ಕಾರ್ಯದರ್ಶಿಯಾಗಿ ಬಿ.ಎಸ್‌ ಪರಮೇಶ್ವರಪ್ಪ, ಖಜಾಂಚಿಯಾಗಿ ನವೀನ್‌, ಸದಸ್ಯರಾಗಿ ಎಚ್.ಇ ಮಲ್ಲಿಕಾರ್ಜುನ್‌, ವಸಂತಕುಮಾರ್‌, ನಾಗರಾಜ, ಮಮತ ನರೇಂದ್ರ, ಕೆ.ಜಿ ಮಹೇಶ್ವರಪ್ಪ, ಡಿ.ಬಿ ದಿನೇಶ್‌, ಆಶಾರಾಣಿ ನಟರಾಜ್‌, ಸಿ.ವಿ ಮಹದೇವಪ್ಪ, ಎ.ಎಸ್‌ ರವಿಕುಮಾರ್‌, ತೇಜಸ್ವಿನಿ ರವಿಕುಮಾರ್‌, ಕೆ.ಎಚ್‌ ರಾಜ್‌ಕುಮಾರ್‌, ಸತೀಶ್‌ಗೌಡ, ಮಂಜುಳ ರಂಗಪ್ಪ, ಎಚ್. ರುದ್ರಪ್ಪ, ಶಿವಕುಮಾರ್‌ ಗಂಗಮ್ಮ ಮಲ್ಲೇಶಪ್ಪ ಅವರನ್ನು ಆಯ್ಕೆ ಮಾಡಿ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಆದೇಶ ಹೊರಡಿಸಿದ್ದಾರೆ.
    ಸಿರೆಗೆರೆ ಶ್ರೀ ತರಳಬಾಳು ನ್ಯಾಯಪೀಠದಲ್ಲಿ ನಡೆದ ಆಯ್ಕೆ ಸಭೆಯಲ್ಲಿ ರೈತ ಮುಖಂಡ ಎಚ್.ಆರ್‌ ಬಸವರಾಜಪ್ಪ ನೂತನ ಪದಾಧಿಕಾರಿಗಳ ಆಯ್ಕೆ ಆದೇಶ ಪತ್ರ ನೂತನ ಅಧ್ಯಕ್ಷ ಕೆ.ಜಿ ರವಿಕುಮಾರ್‌ಗೆ ವಿತರಿಸಿದರು.


ನಗರಸಭೆಯಿಂದ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಚಾಲನೆ

ಭದ್ರಾವತಿ  ನಗರಸಭೆ ವ್ಯಾಪ್ತಿಯಲ್ಲಿ ಪುನಃ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಶುಕ್ರವಾರ ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆಗೆ ಚಾಲನೆ ನೀಡಲಾಯಿತು.
    ಭದ್ರಾವತಿ, ಜು. ೧೪ : ನಗರಸಭೆ ವ್ಯಾಪ್ತಿಯಲ್ಲಿ ಪುನಃ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಶುಕ್ರವಾರ ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆಗೆ ಚಾಲನೆ ನೀಡಲಾಯಿತು.
    ೩೫ ವಾರ್ಡ್‌ಗಳನ್ನು  ಹೊಂದಿರುವ ನಗರಸಭೆಯ ಬಹುತೇಕ ವಾರ್ಡ್‌ಗಳಲ್ಲಿ  ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೀದಿ ನಾಯಿಗಳನ್ನು ನಿಯಂತ್ರಿಸಲು ನಗರಸಭೆ ಸಾಕಷ್ಟು ಶ್ರಮಿಸುತ್ತಿದೆ. ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಮೊರೆ ಹೋಗಿದ್ದು, ಪ್ರತಿ ವರ್ಷ ಸಂತಾನಹರಣ ಚಿಕಿತ್ಸೆ ನಡೆಸಲಾಗುತ್ತಿದೆ. ಆದರೂ ಸಹ ಬೀದಿ ನಾಯಿಗಳ ನಿಯಂತ್ರಣ ಸಾಧ್ಯವಾಗುತ್ತಿಲ್ಲ.
    ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೫ ಸಾವಿರ ಬೀದಿಗಳಿದ್ದು, ಈ ಪೈಕಿ ಕಳೆದ ವರ್ಷ ಸುಮಾರು ೧ ಸಾವಿರ ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನಡೆಸಲಾಗಿತ್ತು. ಈ ಬಾರಿ ಸುಮಾರು ೧,೫೦೦ ಬೀದಿನಾಯಿಗಳಿಗೆ  ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲು ಗುರಿ ಹೊಂದಲಾಗಿದೆ.
    ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲು ಗುತ್ತಿಗೆ ನೀಡಲಾಗಿದ್ದು, ಓರ್ವ ವೈದ್ಯರು ಪ್ರತಿ ದಿನ ಸುಮಾರು ೨೦ ರಿಂದ ೨೫ ಬೀದಿ ನಾಯಿಗಳಿಗೆ ಶಸ್ತ್ರಚಿಕಿತ್ಸೆ ಕೈಗೊಳ್ಳುತ್ತಿದ್ದಾರೆ. ಸುಮಾರು ೩ ತಿಂಗಳವರೆಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಯಲಿದೆ.
    ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್‌, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಪರಿಸರ ಅಭಿಯಂತರ ಪ್ರಭಾಕರ್‌, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್‌ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Thursday, July 13, 2023

ಆ.೧೨, ೧೩ ರಂದು ಮೈಸೂರಿನಲ್ಲಿ ರಾಜ್ಯ ವಕೀಲರ ಸಮ್ಮೇಳನ

ಕರ್ನಾಟಕ ರಾಜ್ಯ ವಕೀಲರ ಪರಿಷತ್ ರಾಜ್ಯಾಧ್ಯಕ್ಷ ಎಚ್.ಎಲ್‌ ವಿಶಾಲ್‌ ರಘು ಗುರುವಾರ ಭದ್ರಾವತಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.
    ಭದ್ರಾವತಿ, ಜು. ೧೩: ಕರ್ನಾಟಕ ರಾಜ್ಯ ವಕೀಲರ ಪರಿಷತ್ ವತಿಯಿಂದ ಆ. 12 ಮತ್ತು 13 ಎರಡು ದಿನಗಳ 10 ನೇ ರಾಜ್ಯ ವಕೀಲರ ಸಮ್ಮೇಳ ಆಯೋಜಿಸಲಾಗಿದೆ ಎಂದು ಪರಿಷತ್ ರಾಜ್ಯಾಧ್ಯಕ್ಷ ಎಚ್.ಎಲ್. ವಿಶಾಲ್ ರಘು ಹೇಳಿದರು.
    ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಸುಮಾರು 14 ವರ್ಷಗಳ ನಂತರ ಸಾಂಸ್ಕೃತಿಕ ನಗರ ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಸಮ್ಮೇಳನ ನಡೆಸಲಾಗುತ್ತಿದೆ.  ಸಮ್ಮೇಳನದಲ್ಲಿ ರಾಜ್ಯದ ವಿವಿಧೆಡೆಗಳಿಂದ ಸುಮಾರು 10 ರಿಂದ 12
ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
    ಸಮ್ಮೇಳನದ ಪ್ರತಿನಿಧಿ ಶುಲ್ಕ ರು. 1000 ನಿಗದಿಪಡಿಸಲಾಗಿದೆ. ಭಾಗವಹಿಸಿದವರಿಗೆ ನೆನೆಪಿನ ಕಾಣಿಕೆ ನೀಡಲಾಗುವುದು. ಸಮ್ಮೇಳನದ ಯಶಸ್ವಿಗೆ ವಿವಿಧ ಸಮಿತಿಗಳನ್ನು ರಚಿಸಿದ್ದು,  ಭಾಗವಹಿಸುವವರು ಜು. 25 ರೊಳಗೆ ನೊಂದಾಯಿಸಿಕೊಳ್ಳಬೇಕು. ನಂತರ ಬರುವವರು ಅಧ್ಯಕ್ಷರು, ಕಾರ್ಯದರ್ಶಿಗಳ ಗುರುತು ಪತ್ರದೊಂದಿಗೆ ಭಾಗವಹಿಸಬಹುದಾಗಿದೆ. ಸಮ್ಮೇಳನದಲ್ಲಿ ವಕೀಲರು ಎದುರಿಸುತ್ತಿರುವ ಸಂಕಷ್ಟ ಸವಾಲುಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.
    ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾದ ಬೋಪಣ್ಣ, ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಲೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ,  ಹಾಗು ಕಾನೂನು ಸಚಿವರು  ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭ
ದಲ್ಲಿ ಮುಖ್ಯ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಭಾಗವಹಿಸಿ ಮಹಿಳೆಯರ ಹಕ್ಕುಗಳು ಮತ್ತು ಸವಾಲುಗಳ ಬಗ್ಗೆ ಮಾತನಾಡಲಿದ್ದಾರೆ ಎಂದರು.
    ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಎಲ್. ಶ್ರೀನಿವಾಸ್ ಬಾಬು, ಜಿಲ್ಲಾಧ್ಯಕ್ಷ ಬಿ.ಜಿ ಶಿವಮೂರ್ತಿ, ತಾಲ್ಲೂಕು ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಕಾರ್ಯದರ್ಶಿ ವಿ. ಉದಯ ಕುಮಾರ್,  ಕಾರ್ಯಕಾರಿ ಸಮಿತಿ ಸದಸ್ಯರಾದ  ಮಗೇಶ್ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಾಲಬಾಧೆಯಿಂದ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ

ಭದ್ರಾವತಿಯಲ್ಲಿ ಸಾಲಬಾಧೆಯಿಂದ ಮಧು-ಮೋನಿಕಾ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
    ಭದ್ರಾವತಿ, ಜು. ೧೩ : ಸಾಲಬಾಧೆಯಿಂದ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.
    ಮಧು(೨೭) ಮತ್ತು ಮೋನಿಕಾ(೨೧) ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಗಾರೆ ಕೆಲಸ ಮಾಡಿಕೊಂಡಿಕೊಂಡು ಜೀವನ ನಿರ್ವಹಿಸುತ್ತಿದ್ದರು. ಬೈತುಂಬ ಸಾಲ ಮಾಡಿಕೊಂಡಿದ್ದು, ಸಾಲಬಾಧೆ ಹೆಚ್ಚಾದ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
    ಇಬ್ಬರು ಮನೆಯಿಂದ ಹೊರಬಾರದ ಹಿನ್ನಲೆಯಲ್ಲಿ ಅಕ್ಕಪಕ್ಕದ ನಿವಾಸಿಗಳಿಗೆ ಅನುಮಾನ ಬಂದಿದ್ದು, ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ನ್ಯೂಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜು.೧೪ರಂದು ಪದಗ್ರಹಣ ಸಮಾರಂಭ

    ಭದ್ರಾವತಿ, ಜು. ೧೩ : ಲಯನ್ಸ್ಅಂತರಾಷ್ಟ್ರೀಯ ಸಂಸ್ಥೆ, ಲಯನ್ಸ್ಕ್ಲಬ್ಸುಗರ್ಟೌನ್ನೂತನ ಪದಾಧಿಕಾರಿಗಳ ಪದಗ್ರಹಣ ಜು.೧೪ರಂದು ಸಂಜೆ ಗಂಟೆಗೆ ನ್ಯೂಟೌನ್ಜೆಟಿಎಸ್ಶಾಲೆ ಸಮೀಪದಲ್ಲಿರುವ ಲಯನ್ಸ್ಕಣ್ಣಿನ ಆಸ್ಪತ್ರೆ ಸಭಾಂಗಣದಲ್ಲಿ ನಡೆಯಲಿದೆ.

          ಲಯನ್ಸ್ಎಂಜೆಎಫ್ರಾಜೀವ್ಕೋಟ್ಯಾನ್ಪದಗ್ರಹಣ ಬೋಧಿಸಲಿದ್ದು, ಆರ್.‌ ಮದಿಯಲಗನ್ಅಧ್ಯಕ್ಷತೆ ವಹಿಸಲಿದ್ದಾರೆ. ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ಟಿ. ಶ್ರೀನಿವಾಸ್, ಕಾರ್ಯದರ್ಶಿಯಾಗಿ ಮಂಜುನಾಥ್ಹಾಗು ಖಜಾಂಚಿಯಾಗಿ ಎಚ್.ಡಿ ಕೃಷ್ಣ ಪದಗ್ರಹಣ ಸ್ವೀಕರಿಸಲಿದ್ದಾರೆ.