Sunday, September 10, 2023

ಸೆ.11ರಿಂದ ಯೋಗ ತರಬೇತಿ


ಭದ್ರಾವತಿ : ಹಳೇನಗರ ಕನಕ ನಗರದ ವಿವೇಕಾನಂದ ಯೋಗ ಕೇಂದ್ರದ ವತಿಯಿಂದ ಅಂತರಾಷ್ಟ್ರೀಯ ಯೋಗ ಗುರು ಡಿ.ನಾಗರಾಜ್ ಅವರಿಂದ ಸೆ.11 ರಿಂದ ನಿರಂತರವಾಗಿ ಯೋಗ, ದ್ಯಾನ , ಪ್ರಾಣಾಯಾಮ ತರಬೇತಿ ನಡೆಯಲಿದೆ.
     8 ರಿಂದ 80 ವರ್ಷದೊಳಗಿನವರು ತರಗತಿಗೆ ಸೇರಲು ಅವಕಾಶವಿರುತ್ತದೆ. 
    ಯೋಗದಿಂದ ಹಲವು ಖಾಯಿಲೆಗಳನ್ನು ಗುಣಪಡಿಸಬಹುದಾಗಿದೆ. ಬೆನ್ನು ನೋವು, ಸೊಂಡ ನೋವು, ತಲೆ ನೋವು, ರಕ್ತದ ಒತ್ತಡ, ಸಕ್ಕರೆ ಖಾಯಿಲೆ, ಹೃದಯದ ತೊಂದರೆ, ಗ್ಯಾಸ್ಟ್ರಿಕ್ ಸೇರಿದಂತೆ ಇನ್ನು ಅನೇಕ ಖಾಯಿಲೆಗಳಿಗೆ ವಿಶೇಷ ಯೋಗ ತರಬೇತಿಯಿಂದ ಮುಕ್ತಿ ಹೊಂದಬಹುದಾಗಿದೆ. 
   ಉದ್ವೇಗ, ಭಯ, ಕೋಪ, ಚಂಚಲತೆ, ಮರವು, ಸದಾ ಚಟುವಟಿಕೆಯಿಂದ ಕೆಲಸ ಮಾಡಲು
ದಿನವಿಡಿ ಸಂತೋಷದಿಂದ, ನೆಮ್ಮದಿಯಿಂದ ಇರಲು ಯೋಗ ಸಹಕಾರಿಯಾಗಿದೆ.
    ಪುರುಷರಿಗೆ, ಮಹಿಳೆಯರಿಗೆ ಮತ್ತು ಮಕ್ಕಳಿಗೆ ಬೆಳಗ್ಗೆ 6 ರಿಂದ 7.15ರವರೆಗೆ ತರಬೇತಿ ನೀಡಲಾಗುವುದು.
   ಹೆಚ್ಚಿನ ವಿವರಗಳಿಗೆ ಯೋಗ ಗುರು ಡಿ ನಾಗರಾಜ್ ಹಾಗೂ ಶ್ರೀಮತಿ ಚಂದ್ರಕಲಾ ಮೊ  9449986209, 9916608787 ಸಂಪರ್ಕಿಸಬಹುದಾಗಿದೆ.

ಚುಂಚಾದ್ರಿ ಮಹಿಳಾ ವೇದಿಕೆ ಸರ್ವಸದಸ್ಯರ ಸಭೆ


ಭದ್ರಾವತಿ ಚುಂಚಾದ್ರಿ ಮಹಿಳಾ ವೇದಿಕೆ ಸರ್ವಸದಸ್ಯರ ಸಭೆ ಶನಿವಾರ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆಯಲ್ಲಿ ನಡೆಯಿತು. ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.

    ಭದ್ರಾವತಿ: ನಗರದ ಚುಂಚಾದ್ರಿ ಮಹಿಳಾ ವೇದಿಕೆ ಸರ್ವಸದಸ್ಯರ ಸಭೆ ಶನಿವಾರ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆಯಲ್ಲಿ ನಡೆಯಿತು.
    ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್.ಕುಮಾರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ವಾರ್ಷಿಕ ವರದಿ ಹಾಗು ಲೆಕ್ಕಪತ್ರ ಮಂಡನೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು.ವೇದಿಕೆ ಪ್ರಧಾನ ಕಾರ್ಯದರ್ಶಿ ಲತಾ ಪ್ರಭಾಕರ್ ಸ್ವಾಗತಿಸಿ, ಸಹ ಕಾರ್ಯದರ್ಶಿ ಶೀಲಾರವಿ ವಂದಿಸಿದರು.ವೇದಿಕೆ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.


Saturday, September 9, 2023

ಸೆ.15ರಂದು ಭಾರತ ರತ್ನ ಸರ್.ಎಂ ವಿಶ್ವೇಶ್ವರಾಯರವರ 163ನೇ ಜಯಂತಿ

    
ಭಾರತರತ್ನ ಸರ್.ಎಂ ವಿಶ್ವೇಶ್ವರಾಯ
     ಭದ್ರಾವತಿ: ನಗರದ ವಿ.ಐ.ಎಸ್.ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರ ವತಿಯಿಂದ ಭಾರತರತ್ನ ಸರ್.ಎಂ ವಿಶ್ವೇಶ್ವರಾಯರವರ 163ನೇ ಜಯಂತಿ ಹಾಗೂ ಸರ್ವ ಸದಸ್ಯರ ಸಭೆ ಸೆ.15ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಜನ್ನಾಪುರ ಶ್ರೀ ಮಲ್ಲೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
  ಸಭೆಯ ಅಧ್ಯಕ್ಷತೆ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜಿ ರಾಮಲಿಂಗಯ್ಯ ವಹಿಸಲಿದ್ದಾರೆ. ಸಭೆಯಲ್ಲಿ ನಿಧನ ಹೊಂದಿದ ಸದಸ್ಯರಿಗೆ ಸಂತಾಪ, ವಾರ್ಷಿಕ ವರದಿ ಹಾಗು ಲೆಕ್ಕಪತ್ರ ಮಂಡನೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಲಿವೆ. ಸದಸ್ಯರು ತಪ್ಪದೇ ಭಾಗವಹಿಸುವ ಮೂಲಕ ಯಶಸ್ವಿಗೊಳಿಸುವಂತೆ ಪ್ರಧಾನ ಕಾರ್ಯದರ್ಶಿ ಬಿ. ಮಂಜುನಾಥ ಕೋರಿದ್ದಾರೆ.



ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿವಸ್, ಕೃಷ್ಣ ಜನ್ಮಾಷ್ಟಮಿ

ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಭದ್ರಾವತಿ ಹೊಸಮನೆ ಹಿಂದೂ ಮಹಾಸಭಾ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿವಸ್, ಕೃಷ್ಣ ಜನ್ಮಾಷ್ಠಮಿ ಆಚರಿಸಲಾಯಿತು.
ಭದ್ರಾವತಿ: ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ನಗರದ ಹೊಸಮನೆ ಹಿಂದೂ ಮಹಾಸಭಾ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿವಸ್, ಕೃಷ್ಣ ಜನ್ಮಾಷ್ಠಮಿ ಆಚರಿಸಲಾಯಿತು.
   ಈ ಸಂಬಂಧ ಏರ್ಪಡಿಸಲಾಗಿದ್ದ ಶ್ರೀ ಕೃಷ್ಣ ರಾಧೆಯರ ಪ್ರದರ್ಶನದಲ್ಲಿ ಸುಮಾರು ನೂರಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಪ್ರದರ್ಶನದಲ್ಲಿ ಭಾಗವಹಿಸಿದ್ದ ಎಲ್ಲಾ ಮಕ್ಕಳಿಗೂ ಬಹುಮಾನಗಳನ್ನು ನೀಡಲಾಯಿತು.
       ಕ್ಷತ್ರಿಯ ಸತ್ಸಂಗ ಪ್ರಮುಖ ಮಹಾಬಲೇಶ್, ನಗರಸಭಾ ಸದಸ್ಯ ಮಣಿ ಎಎನ್ಎಸ್, ಜಿಲ್ಲಾ ಕಾರ್ಯದರ್ಶಿ ನಾರಾಯಣ ವರ್ಣೇಕರ್, ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ್ಯ ಉಪಾಧ್ಯಕ್ಷ ಹಾ. ರಾಮಪ್ಪ, ಜಿಲ್ಲಾ ಸಹ ಕಾರ್ಯದರ್ಶಿ ಧರಣೇಶ್, ಜಿಲ್ಲಾ ಸೇವಾ ಪ್ರಮುಖ್ ದತ್ತಾತ್ರಿ, ಜಿಲ್ಲಾ ಸಂಯೋಜಕ ರಾಘವನ್ ವಡಿವೇಲು, ಆಕಾಶ್, ಸಂಜು, ಕಿರಣ್, ಸಾವಾಯಿ ಸಿಂಗ್ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
 


Thursday, September 7, 2023

ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಾಳಾದ ಶುದ್ಧ ಕುಡಿಯುವ ನೀರಿನ ಘಟಕಗಳು

ಸೂಕ್ತ ಕ್ರಮಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಆಗ್ರಹಿಸಿ ಮನವಿ




ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತ ಸೇರಿದಂತೆ ಈ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಒಟ್ಟು 3 ಶುದ್ಧ ಕುಡಿಯುವ ನೀರಿನ ಘಟಕಗಳು ಸೂಕ್ತ ನಿರ್ವಹಣೆ ಇಲ್ಲದೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಾಳಾಗಿವೆ. ಈ ಹಿನ್ನೆಲೆಯಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಪೌರಾಯುಕ್ತ ಎಚ್.ಎಂ ಮನುಕುಮಾರ್ ಮನವಿ ಸಲ್ಲಿಸಲಾಯಿತು.

ಭದ್ರಾವತಿ: ಹಳೇನಗರದ ಬಸವೇಶ್ವರ ವೃತ್ತ ಸೇರಿದಂತೆ ಈ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಒಟ್ಟು 3 ಶುದ್ಧ ಕುಡಿಯುವ ನೀರಿನ ಘಟಕಗಳು ಸೂಕ್ತ ನಿರ್ವಹಣೆ ಇಲ್ಲದೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಾಳಾಗಿವೆ. ಈ ಹಿನ್ನೆಲೆಯಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಪೌರಾಯುಕ್ತ ಎಚ್.ಎಂ ಮನುಕುಮಾರ್ ಮನವಿ ಸಲ್ಲಿಸಲಾಯಿತು.
    2019-20ರ ಸಾಲಿನಲ್ಲಿ ಸುಮಾರು ಹತ್ತು ಲಕ್ಷ ರೂ ವೆಚ್ಚದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸಾರ್ವಜನಿಕರಿಗೆ ಉಪಯೋಗವಾಗದೆ ಹಾಳಾಗಿವೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಆಗ್ರಹಿಸಲಾಗಿದೆ.
ಈ ವ್ಯಾಪ್ತಿಯ 3 ಘಟಕಗಳು ನಿರ್ಮಾಣಗೊಂಡಾಗಿನಿಂದಲೂ ಕಾರ್ಯನಿರ್ವಹಿಸುತ್ತಿಲ್ಲ. ತಕ್ಷಣ ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿ ಕೊಡುವಂತೆ ಕೋರಲಾಗಿದೆ.
     ಕೆ ಆರ್ ಎಸ್ ಪಕ್ಷದ ತಾಲೂಕು ಅಧ್ಯಕ್ಷ ನಾಗರಾಜ್ ಸಿಂದೆ, ಪ್ರಧಾನ ಕಾರ್ಯದರ್ಶಿ ತೀರ್ಥ ಕುಮಾರ್, ಮುಖಂಡರಾದ ದಯಾನಂದ್ ಬಿ.ಎಸ್ ಉಪಸ್ಥಿತರಿದ್ದರು.


Wednesday, September 6, 2023

ಪ್ರತಿಭಾವಂತರಿಂಗೆ ಕಸಾಪದಿಂದ ಸನ್ಮಾನ



ಭದ್ರಾವತಿ: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬುಧವಾರ ತಾಲೂಕು ಕಚೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಉದ್ಘಾಟಿಸಿದರು. ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ದಾನಿಗಳನ್ನು ಅಭಿನಂದಿಸಲಾಯಿತು. 2023ನೇ ಸಾಲಿನ ಎಸ್.ಎಸ್. ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಪ್ರಥಮ ಭಾಷೆಯಲ್ಲಿ 125ಕ್ಕೆ 125 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪರಿಷತ್ ತಾಲೂಕು ಅಧ್ಯಕ್ಷ ಕೋಡ್ಲುಯಜ್ಞಯ್ಯ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಎಮೆರಿಟಸ್ ಪ್ರೊಫೆಸರ್ ಡಾ. ವಿಜಯದೇವಿ, ಉದ್ಯಮಿ ಬಿ.ಕೆ ಜಗನ್ನಾಥ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಎಂ.ಆರ್ ರೇವಣಪ್ಪ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಜಿ. ಸುರೇಶಯ್ಯ, ಪರಿಷತ್ ಕಾರ್ಯದರ್ಶಿಗಳಾದ ಎಚ್. ತಿಮ್ಮಪ್ಪ,ಎಂ.ಈ ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

 

Tuesday, September 5, 2023

ಸೆ.6ರಂದು ಕರ್ನಾಟಕ ಸ್ಟಾರ್ ಸಿಂಗರ್ ಘೋಷಣೆ : ಬಿ.ಎ ಮಂಜುನಾಥ್

ಭದ್ರಾವತಿಯಲ್ಲಿ ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ದಿವಂಗತ ಶಂಕರ್ ನಾಗ್ ಸಂಸ್ಮರಣೆ ಕಾರ್ಯಕ್ರಮದಡಿ ಆಯೋಜಿಸಲಾಗಿರುವ ಕರ್ನಾಟಕ ಸ್ಟಾರ್ ಸಿಂಗರ್-2023 ಸೀಸನ್-1 ರಾಜ್ಯಮಟ್ಟದ ಚಲನಚಿತ್ರ ಗೀತೆ ಗಾಯನ ಸ್ಪರ್ಧೆಯ ಅಂತಿಮ ಸುತ್ತಿನ ಕಾರ್ಯಕ್ರಮ ಕುರಿತು ಮಂಗಳವಾರ ಪತ್ರಿಕಾ ಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ಮಾಹಿತಿ ನೀಡಿದರು.
    ಭದ್ರಾವತಿ: ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ದಿವಂಗತ ಶಂಕರ್ ನಾಗ್ ಸಂಸ್ಮರಣೆ ಕಾರ್ಯಕ್ರಮದಡಿ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಸೆ.6ರಂದು ಸಂಜೆ 4.30ಕ್ಕೆ ಆಯೋಜಿಸಲಾಗಿರುವ ಕರ್ನಾಟಕ ಸ್ಟಾರ್ ಸಿಂಗರ್-2023 ಸೀಸನ್-1 ರಾಜ್ಯಮಟ್ಟದ ಚಲನಚಿತ್ರ ಗೀತೆ ಗಾಯನ ಸ್ಪರ್ಧೆಯಲ್ಲಿ ಅಂತಿಮವಾಗಿ ಕರ್ನಾಟಕ ಸ್ಟಾರ್ ಸಿಂಗರ್ ಘೋಷಣೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಮಂಜುನಾಥ್ ತಿಳಿಸಿದರು.
    ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆ.24ರಂದು ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯದ ವಿವಿಧೆಡೆಗಳಿಂದ ಸುಮಾರು 80 ಸ್ಫರ್ಧಿಗಳು ಭಾಗವಹಿಸಿದ್ದರು. ಈ ಪೈಕಿ 40 ಸ್ಪರ್ಧಿಗಳು ಆಯ್ಕೆಯಾಗಿದ್ದರು. 30ರಂದು ನಡೆದ ಮೊದಲ ಸುತ್ತಿನ ಸ್ಪರ್ಧೆಯಲ್ಲಿ 16ಸ್ಪರ್ಧಿಗಳು ಅಂತಿಮ ಸುತ್ತಿನ ಪ್ರವೇಶ ಪಡೆದಿದ್ದಾರೆ ಎಂದರು.
    ಸೆ.6ರಂದು ನಡೆಯಲಿರುವ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಕರ್ನಾಟಕ ಸ್ಟಾರ್ ಸಿಂಗರ್ ಘೋಷಣೆ ನಡೆಯಲಿದೆ. ಪ್ರಥಮ 25 ಸಾವಿರ ರು. ನಗದು ಮತ್ತು ಪಾರಿತೋಷಕ, ದ್ವಿತೀಯ 15 ಸಾವಿರ ರು. ನಗದು ಮತ್ತು ಪಾರಿತೋಷಕ, ತೃತೀಯ 10 ಸಾವಿರ ರು. ನಗದು ಮತ್ತು ಪಾರಿತೋಷಕ ಹಾಗು ಸಮಾಧಾನಕರ 2 ಸಾವಿರ ರು. ನಗದು ಬಹುಮಾನ ನೀಡಲಾಗುವುದು, ಈ ಸ್ಪರ್ಧೆಯಲ್ಲಿ ನಾಡಿನ ಪ್ರಸಿದ್ದ ಕಲಾವಿದರು ತೀರ್ಪುಗಾರರಾಗಿ ಭಾಗವಹಿಸಲಿದ್ದಾರೆ ಎಂದರು.
    ಇದೆ ಸಂದರ್ಭದಲ್ಲಿ ನಿರ್ದೇಶಕ ಹರ್ಷಪ್ರಿಯ ನಿರ್ದೇಶನದ ಹೆಜ್ಜಾರು ಚಲನಚಿತ್ರದ ಟ್ರೈಲರ್ ಹಾಗು ಒಂದು ಗೀತೆಯನ್ನು ಬಿಡುಗಡೆಗೊಳಿಸಲಾಗುವುದು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಕಲಾವಿದರ ಪ್ರತಿಭಾವಂತೆ ಮಕ್ಕಳನ್ನು ಸನ್ಮಾನಿಸಲಾಗುವುದು. ಅಲ್ಲದೆ ಹಿರಿಯ ಕಲಾವಿದರಿಗೆ ಜಯಶೀಲನ್ ಪ್ರಶಸ್ತಿ ಹಾಗು ಗೀತಾಂಜಲಿ ಶ್ರೀನಿವಾಸ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಮುಖರಾದ ಗೌರವ ಸಲಹೆಗಾರ ಬಿ.ಆರ್.ವಿಕ್ರಂ, ಉಪಾಧ್ಯಕ್ಷ ಅಂತೋಣಿ ಮಾರ್ಟಿನ್, ಪ್ರಧಾನ ಕಾರ್ಯದರ್ಶಿ ಬಿ.ಚಿದಾನಂದ, ಸಹಕಾರ್ಯದರ್ಶಿಗಳಾದ ಚರಣ್ ಕವಾಡ್, ಬಿ.ಎ ವಸಂತಕುಮಾರ್, ಖಜಾಂಚಿ ಪ್ರಶಾಂತ್, ವೈ.ಕೆ.ಹನುಮಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.