ಭದ್ರಾವತಿ: ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜ್ ಆಸ್ಪತ್ರೆ, ಬಿ ಆರ್ ಪಿ ಲಯನ್ಸ್ ಕ್ಲಬ್, ಜಿಲ್ಲಾ ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಅಧಿಕಾರಿಗಳ ಕಚೇರಿ ಹಾಗು ಸಿಂಗನ ಮನೆ ಗ್ರಾಮ ಪಂಚಾಯಿತಿ ವತಿಯಿಂದ ಸೆ.20ರಂದು ಉಚಿತ ನೇತ್ರ ತಪಾಸಣೆ, ನೇತ್ರ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಮಸೂರ ಅಳವಡಿಕೆ ಶಿಬಿರ ಆಯೋಜಿಸಲಾಗಿದೆ.
ಬಿ ಆರ್ ಪಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಶಿಬಿರ ನಡೆಯಲಿದೆ.
ಅಲ್ಲದೆ ಬಿ ಆರ್ ಪಿ ಒಕ್ಕಲಿಗರ ಸಂಘದಲ್ಲಿ ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ರಕ್ತದಾನ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಶ್ರೀನಿವಾಸ್, ಅಧ್ಯಕ್ಷರು, ಲಯನ್ಸ್ ಕ್ಲಬ್, ಮೊ: 9008742213, ಡಾ. ನವೀನ್ ನಾಗರಾಜ್ ಕೆ, ಕಾರ್ಯದರ್ಶಿ, ಮೊ: 6361316722, ಮಂಟಲಿಂಗಯ್ಯ, ಖಜಾಂಚಿ, ಮೊ: 8088381801 ಸಂಖ್ಯೆಗೆ ಕರೆ ಮಾಡಬಹುದಾಗಿದೆ.