ಭದ್ರಾವತಿಯಲ್ಲಿ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ಸಂಜೆ ನಡೆಯಲಿದ್ದು, ಈ ಸಂಬಂಧ ಹಮ್ಮಿಕೊಳ್ಳಲಾಗಿರುವ ರಾಜಬೀದಿ ಉತ್ಸವ ಮೆರವಣಿಗೆಗೆ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಶಾಸಕ ಸಂಗಮೇಶ್ವರ್ ಬೆಳಿಗ್ಗೆ ಚಾಲನೆ ನೀಡಿದರು.
ಭದ್ರಾವತಿ, ಸೆ. ೨೬ : ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ಸಂಜೆ ನಡೆಯಲಿದ್ದು, ಈ ಸಂಬಂಧ ಹಮ್ಮಿಕೊಳ್ಳಲಾಗಿರುವ ರಾಜಬೀದಿ ಉತ್ಸವ ಮೆರವಣಿಗೆಗೆ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಶಾಸಕ ಸಂಗಮೇಶ್ವರ್ ಬೆಳಿಗ್ಗೆ ಚಾಲನೆ ನೀಡಿದರು.
ವಿನಾಯಕ ಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಸುಮಾರು ೧೧.೩೦ರ ಸಮಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್ ಹಾಗು ಪದಾಧಿಕಾರಿಗಳು, ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್ ಹಾಗು ಸದಸ್ಯರು, ಪೌರಾಯುಕ್ತ ಮನುಕುಮಾರ್, ತಹಸೀಲ್ದಾರ್ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿಯಲ್ಲಿ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ಸಂಜೆ ನಡೆಯಲಿದ್ದು, ಈ ಸಂಬಂಧ ಹಮ್ಮಿಕೊಳ್ಳಲಾಗಿರುವ ರಾಜಬೀದಿ ಉತ್ಸವ ಮೆರವಣಿಗೆಯಲ್ಲಿ ಸೇವಾಕರ್ತರಿಂದ ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು.
ರಾಜಬೀದಿ ಉತ್ಸವ ಮೆರವಣಿಗೆ ನಿರೀಕ್ಷೆಗೂ ಮೀರಿ ವೈಭವಯುತವಾಗಿ ನಡೆಯುತ್ತಿದ್ದು, ಉತ್ಸವ ಮೆರವಣಿಗೆ ಹಬ್ಬದಂತೆ ಕಂಡು ಬರುತ್ತಿದೆ. ಜಾತಿ, ಧರ್ಮ ಬೇಧಭಾವವಿಲ್ಲದೆ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ರಸ್ತೆಯುದ್ದಕ್ಕೂ ಕೇಸರಿ ತೋರಣಗಳು, ಧ್ವಜಗಳು ಕಂಗೊಳಿಸುವ ಜೊತೆಗೆ ಸೇವಾಕರ್ತರಿಂದ ಅನ್ನಸಂತರ್ಪಣೆ, ಹೋಳಿಗೆ, ಲಾಡು, ಮಜ್ಜಿಗೆ, ಕೋಸಂಬರಿ ಸೇರಿದಂತೆ ಬಗೆ ಬಗೆಯ ಪ್ರಸಾದ ವಿತರಣೆ ನಡೆಯುತ್ತಿದ್ದು, ಬಗೆ ಬಗೆಯ ಬೃಹತ್ ಹಾರಗಳ ಸಮರ್ಪಣೆ, ಬೃಹತ್ ಓಂಕಾರದ ಚಿತ್ತಾರದೊಂದಿಗೆ ಭಕ್ತಿ ಸಮರ್ಪಣೆ ಕಂಡು ಬರುತ್ತಿದೆ. ಅಲ್ಲದೆ ವೀರಗಾಸೆ, ಡೊಳ್ಳು ಕುಣಿತ, ಗೊಂಬೆ ನೃತ್ಯ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆ ಮತ್ತಷ್ಟು ಮೆರಗು ನೀಡಿವೆ.
ಮೆರವಣಿಗೆ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಮುಖ್ಯ ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಉತ್ಸವ ಮೆರವಣಿಗೆ ಹೊಸಮನೆ ಮುಖ್ಯ ರಸ್ತೆ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ, ಅಂಬೇಡ್ಕರ್ ವೃತ್ತ, ಲೋಯರ್ ಹುತ್ತಾ ಬಸ್ ನಿಲ್ದಾಣದವರೆಗೂ ಸಾಗಿ ಪುನಃ ಹಿಂದಿರುಗಿ ತರೀಕೆರೆ ರಸ್ತೆ ಮಹಾತ್ಮಗಾಂಧಿ ವೃತ್ತದವರೆಗೆ ಸಾಗಿ ಪುನಃ ಹಿಂದಿರುಗಿ ಅಂತ್ಯಗೊಳ್ಳಲಿದೆ. ನಗರಸಭೆ ಮುಂಭಾಗ ಭದ್ರಾ ನದಿಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದೆ.