Wednesday, October 18, 2023

ಮೀನಾಕ್ಷಮ್ಮ ನಿಧನ

ಮೀನಾಕ್ಷಮ್ಮ
    ಭದ್ರಾವತಿ: ನಗರದ ಜನ್ನಾಪುರ ಕಾರುಣ್ಯ ಚಾರಿಟಬಲ್ ಟ್ರಸ್ಟ್ ಗೌರವಾಧ್ಯಕ್ಷ ಡಾ.ಜಿ. ವಿಜಯ್‌ರವರ ತಾಯಿ ಮೀನಾಕ್ಷಮ್ಮ(೭೬) ದುಬೈನಲ್ಲಿ ನಿಧನ ಹೊಂದಿ
    ಡಾ.ಜಿ. ವಿಜಯ್ ಸೇರಿದಂತೆ ಓರ್ವ ಪುತ್ರಿ ಇದ್ದರು. ಮೀನಾಕ್ಷಮ್ಮ ಮೂಲತಃ ಗಾಂಧಿನಗರದ ನಿವಾಸಿಯಾಗಿದ್ದು, ಕಳೆದ ಸುಮಾರು ೨೦ ವರ್ಷಗಳಿಂದ ದುಬೈನಲ್ಲಿ ನೆಲೆಸಿದ್ದರು. ಹಲವಾರು ಧಾರ್ಮಿಕ ಹಾಗು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ಕಾರುಣ್ಯ ಚಾರಿಟಬಲ್ ಟ್ರಸ್ಟ್ ಸಂತಾಪ ಸೂಚಿಸಿದೆ.

ಅ.೧೯ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ


    ಭದ್ರಾವತಿ: ಭಾರತೀಯ ಉಕ್ಕು ಪ್ರಾಧಿಕಾರದ ನಗರದ ಸೈಲ್-ವಿಐಎಸ್‌ಎಲ್ ಆಸ್ಪತ್ರೆ ವತಿಯಿಂದ ಶಿವಮೊಗ್ಗ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಹಾಗು ಮೈದೊಳಲು ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಅ.೧೯ರಂದು ತಾಲೂಕಿನ ಮೈದೊಳಲು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ `ಆರೋಗ್ಯವೇ ಭಾಗ್ಯ' ಯೋಜನೆಯಡಿ ಉಚಿತ ಆರೋಗ್ಯ ತಪಾಸಣೆ ಮತ್ತು ಔಷಧಿ ವಿತರಣೆ ಹಮ್ಮಿಕೊಳ್ಳಲಾಗಿದೆ.
    ತಜ್ಞ ವೈದ್ಯರಿಂದ ಮೂಳೆ, ನರ, ಹೃದಯ, ೩ಡಿ ಎಕೋ, ಇಸಿಜಿ, ಕಣ್ಣು, ಹಲ್ಲು, ಬಿ.ಪಿ, ಮಧುಮೇಹ(ಸಕ್ಕರೆ ಕಾಯಿಲೆ) ಕಾಯಿಲೆಗಳ ಉಚಿತ ತಪಾಸಣೆ ಹಾಗು ಔಷಧಿ ವಿತರಣೆ ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೨ ಗಂಟೆವರೆಗೆ ನಡೆಯಲಿದೆ. ಮೈದೊಳಲು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಶಿಬಿರ ಸದುಪಯೋಗ ಪಡೆದುಕೊಳ್ಳುವಂತೆ ವಿಐಎಸ್‌ಎಲ್ ಆಡಳಿತ ಮಂಡಳಿ ಕೋರಿದೆ.

ನವದುರ್ಗೆಯರು ಭದ್ರಾವತಿ ಕ್ಷೇತ್ರಕ್ಕೆ ಒಳಿತು ಮಾಡಲಿ : ಶ್ರೀ ವಿನಯ್ ಗುರೂಜಿ

ಭದ್ರಾವತಿ ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಬುಧವಾರ ಭಕ್ತ ವೃಂದದಿಂದ ಏರ್ಪಡಿಸಲಾಗಿದ್ದ ಕ್ಷೇತ್ರದ ಅಭಿವೃದ್ಧಿಗಾಗಿ ದುರ್ಗ ಸಪ್ತಶತಿ ಪಾರಾಯಣ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಗೌರಿಗದ್ದೆ ಆಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ  ದೀಪಬೆಳಗಿಸಿ ಶ್ರೀಚಾಮುಂಡೇಶ್ವರಿ ದೇವಿಗೆ ಪುಷ್ಪಾ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ: ಕ್ಷೇತ್ರದ ಜನರಿಗೆ ಯಾವುದೇ ರೀತಿ ಸಮಸ್ಯೆಗಳು ಎದುರಾಗದಿರಲಿ. ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಲಿ ಎಂದು ದುರ್ಗ ಸಪ್ತಶತಿ ಪಾರಾಯಣದ ಮೂಲಕ ಅಮ್ಮನವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಚಿಕ್ಕಮಗಳೂರು ಗೌರಿಗದ್ದೆ ಆಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ ಹೇಳಿದರು.  
     ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಬುಧವಾರ ಭಕ್ತ ವೃಂದದಿಂದ ಏರ್ಪಡಿಸಲಾಗಿದ್ದ ಕ್ಷೇತ್ರದ ಅಭಿವೃದ್ಧಿಗಾಗಿ ದುರ್ಗ ಸಪ್ತಶತಿ ಪಾರಾಯಣದಲ್ಲಿ ಪಾಲ್ಗೊಂಡು ಮಾತನಾಡಿದರು.
    ನವದುರ್ಗೆಯರ ಆರಾಧನೆಯಲ್ಲಿ ವಿಶಿಷ್ಟವಾದ ಶಕ್ತಿ ಇದೆ. ನಮ್ಮಲ್ಲಿರುವ ದುರ್ಗುಣಗಳು ನಾಶವಾಗಿ ಒಳ್ಳೆಯ ಗುಣಗಳು ವೃದ್ಧಿಸಲಿ. ಎಲ್ಲರ ಬದುಕು ಒಳ್ಳೆಯದಾಗಲಿ ಎಂಬುದು ನವರಾತ್ರಿ ಆಚರಣೆಯ ಉದ್ದೇಶವಾಗಿದೆ.  ದುರ್ಗ ಸಪ್ತಶತಿ ಪಾರಾಯಣದ ಮೂಲಕ ಅಮ್ಮನವರಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಪಾರ್ಥಿಸುವ ಕಾರ್ಯಕ್ರಮ ಪ್ರತಿ ವರ್ಷ ಆಯೋಜಿಸಿಕೊಂಡು ಬರುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಎಲ್ಲರಿಗೂ ಒಳಿತನ್ನು ಬಯಸುತ್ತೇನೆ ಎಂದರು.  
     ಆರಂಭದಲ್ಲಿ ದೀಪ ಬೆಳಗಿಸುವ ಮೂಲಕ ಶ್ರೀ ಚಾಮುಂಡೇಶ್ವರಿಗೆ ದೇವಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ವಿನಯ್ ಗುರೂಜಿಯವರು ಸಭಾಭವನದ ಮಾಲೀಕರಾದ ಶಿವಕುಮಾರ್ ದಂಪತಿ ಸನ್ಮಾನಿಸಿ ಅಭಿನಂದಿಸಿದರು.
     ಭಕ್ತ ವೃಂದದ ಪ್ರಮುಖರಾದ ಬಿ. ಮೂರ್ತಿ, ಎಂ.ಎಸ್ ರವಿ, ವೈ. ನಟರಾಜ್, ಬಿ.ಎಸ್ ಬಸವೇಶ್, ರವಿಕುಮಾರ್ ಸೇರಿದಂತೆ ಇನ್ನಿತರರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.  ಅಪೇಕ್ಷ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ವೆಂಕಟ್ ಗಿರಿ ವಂದಿಸಿದರು.  


ಭದ್ರಾವತಿ ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಬುಧವಾರ ಭಕ್ತ ವೃಂದದಿಂದ ಏರ್ಪಡಿಸಲಾಗಿದ್ದ ಕ್ಷೇತ್ರದ ಅಭಿವೃದ್ಧಿಗಾಗಿ ದುರ್ಗ ಸಪ್ತಶತಿ ಪಾರಾಯಣ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಗೌರಿಗದ್ದೆ ಆಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ ಸಭಾಭವನದ ಮಾಲೀಕರಾದ ಶಿವಕುಮಾರ್ ದಂಪತಿ ಸನ್ಮಾನಿಸಿ ಅಭಿನಂದಿಸಿದರು.

Tuesday, October 17, 2023

ಅ.೧೮ರಂದು ಕ್ಷೇತ್ರದ ಅಭಿವೃದ್ಧಿಗಾಗಿ ದುರ್ಗ ಸಪ್ತಶತಿ ಪಾರಾಯಣ


ಶ್ರೀ ವಿನಯ್ ಗುರೂಜಿ
    ಭದ್ರಾವತಿ: ಚಿಕ್ಕಮಗಳೂರು ಗೌರಿಗದ್ದೆ ಆಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ ನೇತೃತ್ವದಲ್ಲಿ ಅ.೧೮ರಂದು ಕ್ಷೇತ್ರದ ಅಭಿವೃದ್ಧಿಗಾಗಿ ದುರ್ಗ ಸಪ್ತಶತಿ ಪಾರಾಯಣ ಹಮ್ಮಿಕೊಳ್ಳಲಾಗಿದೆ.
    ನವರಾತ್ರಿ ಮಹೋತ್ಸವದ ಅಂಗವಾಗಿ ವಿನಯ್ ಗುರೂಜಿಯವರ ಭಕ್ತ ವೃಂದದಿಂದ ಹಮ್ಮಿಕೊಳ್ಳಲಾಗಿರುವ ೨ನೇ ವರ್ಷದ ಕಾರ್ಯಕ್ರಮ ಇದಾಗಿದ್ದು, ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಛತ್ರಪತಿ ಶಿವಾಜಿ ಸೇವಾ ಸಂಘಕ್ಕೆ ನೂತನ ೧೫ ನಿರ್ದೇಶಕರು ಆಯ್ಕೆ


ಭದ್ರಾವತಿ : ನಗರದ ಚನ್ನಗಿರಿ ರಸ್ತೆ ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘಕ್ಕೆ ನೂತನವಾಗಿ ೧೫ ಜನ ನಿರ್ದೇಶಕರು ಆಯ್ಕೆಯಾಗಿದ್ದಾರೆ.
ಒಟ್ಟು ೧೫ ನಿರ್ದೇಶಕ ಸ್ಥಾನಕ್ಕೆ ಅ.೧೫ರಂದು ನಡೆದ ಚುನಾವಣೆಯಲ್ಲಿ ಒಟ್ಟು ೩೦ ಮಂದಿ ಸ್ಪರ್ಧಿಸಿದ್ದು, ಈ ಪೈಕಿ ಕೃಷ್ಣೋಜಿರಾವ್, ಎಂ.ಆರ್ ರಾಜಾರಾವ್, ಜಗನ್ನಾಥ್‌ರಾವ್ ಗಾಯ್ಕ್‌ವಾಡ್, ವಿ. ರಾಮನಾಥ್ ಬರ್ಗೆ, ಬಿ. ನಾಗಪ್ಪ, ಎಚ್.ಆರ್ ಲೋಕೇಶ್ವರ್‌ರಾವ್ ದೊಂಬಾಳೆ, ಆರ್. ನಾಗರಾಜ್‌ರಾವ್, ಬಿ.ಎಲ್ ಶಂಕರ್‌ರಾವ್ ಜಾದವ್, ಮಂಜುನಾಥ್‌ರಾವ್ ಪವಾರ್, ಎಸ್. ಶಾಂತಕುಮಾರ್ ಗಾಯ್ಕ್‌ವಾಡ್, ಮಹೇಶ್‌ರಾವ್ ಹಜಾರೆ, ಇ. ಸುನಿಲ್‌ಗಾರ್ಗೆ, ಎಚ್. ರಂಗನಾಥ್‌ರಾವ್, ಎಸ್. ಸುರೇಶ್‌ರಾವ್ ಮತ್ತು ಎಚ್.ಎಲ್ ರಂಗನಾಥ್‌ರಾವ್ ಚವ್ಹಾಣ್ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ಭ್ರಷ್ಟಾಚಾರ : ಆರೋಪ

ಬಿಜೆಪಿ ಮಂಡಲ ಪ್ರತಿಭಟನೆ ನಡೆಸಿ ಧಿಕ್ಕಾರ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹೆಚ್ಚಾಗಿದ್ದು, ಸಾರ್ವಜನಿಕರ ಹಣ ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಂಗಳವಾರ ಭದ್ರಾವತಿಯಲ್ಲಿ ಬಿಜೆಪಿ ಮಂಡಲ ವತಿಯಿಂದ ನಗರದ ಮಾಧವಚಾರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹೆಚ್ಚಾಗಿದ್ದು, ಸಾರ್ವಜನಿಕರ ಹಣ ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಂಗಳವಾರ ಬಿಜೆಪಿ ಮಂಡಲ ವತಿಯಿಂದ ನಗರದ ಮಾಧವಚಾರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ಎಟಿಎಂ ಆಗಿದ್ದು, ಎಲ್ಲೆಡೆ ಭ್ರಷ್ಟಾಚಾರ ಹೆಚ್ಚಾಗಿದೆ. ಪಂಚ ರಾಜ್ಯಗಳ ಚುನಾವಣೆಗಾಗಿ ಸಾರ್ವಜನಿಕರ ಹಣ ಲೂಟಿ ಮಾಡಲಾಗುತ್ತಿದೆ. ಮೈಸೂರು ದಸರಾ ಕಲಾವಿದರ ಗೌರವಧನ ನೀಡಲು ಲಂಚ ಪಡೆಯುತ್ತಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸುವ ಜೊತೆಗೆ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಹಾಕಲಾಯಿತು.
    ಪಕ್ಷದ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ನೇತೃತ್ವ ವಹಿಸಿದ್ದರು. ಪ್ರಮುಖರಾದ ವಿ. ಕದಿರೇಶ್, ಎನ್. ವಿಶ್ವನಾಥರಾವ್, ಎಂ. ಮಂಜುನಾಥ್, ಸುರೇಶಪ್ಪ, ಚನ್ನೇಶ್, ಬಿ.ಎಸ್ ಶ್ರೀನಾಥ್, ಚಂದ್ರು, ಪ್ರಸನ್ನ ಬಾರಂದೂರು, ಛಲವಾದಿ ಕೃಷ್ಣ, ಗೋಕುಲ್ ಕೃಷ್ಣ, ಧನುಷ್ ಬೋಸ್ಲೆ, ರಾಜಶೇಖರ್ ಉಪ್ಪಾರ, ಹೇಮಾವತಿ ವಿಶ್ವನಾಥ್, ಅನ್ನಪೂರ್ಣ ಸಾವಂತ್, ಶೋಭಪಾಟೀಲ್, ಮಂಜುಳ, ಲತಾ ಪ್ರಭಾಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ದಸರಾ ಕ್ರೀಡಾಕೂಟ : ಬ್ಯಾಟ್ ಹಿಡಿದ ಅಧ್ಯಕ್ಷೆ, ಬೌಲಿಂಗ್ ಮಾಡಿದ ಪೌರಾಯುಕ್ತ

ಭದ್ರಾವತಿ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕ್ರೀಡಾಕೂಟದ ಆರಂಭದಲ್ಲಿ ನಗರಸಭೆ ಅಧ್ಯಕ್ಷೆ ಬ್ಯಾಟ್ ಹಿಡಿದು ಆಡುವ, ಪೌರಾಯುಕ್ತ ಬೌಲಿಂಗ್ ಮಾಡುವ ಮೂಲಕ ಸಂಭ್ರಮಿಸಿ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು.
    ಭದ್ರಾವತಿ: ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕ್ರೀಡಾಕೂಟದ ಆರಂಭದಲ್ಲಿ ನಗರಸಭೆ ಅಧ್ಯಕ್ಷೆ ಬ್ಯಾಟ್ ಹಿಡಿದು ಆಡುವ, ಪೌರಾಯುಕ್ತ ಬೌಲಿಂಗ್ ಮಾಡುವ ಮೂಲಕ ಸಂಭ್ರಮಿಸಿ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು.
    ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಜಿ, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ ಸೇರಿದಂತೆ ಮಹಿಳಾ ಸದಸ್ಯರು ಒಂದೆಡೆ ಬ್ಯಾಟ್ ಹಿಡಿದು ಆಡುವ ಮೂಲಕ ಹಾಗು ಪೌರಾಯುಕ್ತ ಎಚ್.ಎಂ ಮನುಕುಮಾರ್, ಸದಸ್ಯರಾದ ಜಾರ್ಜ್, ಬಷೀರ್ ಅಹಮದ್, ಆರ್. ಮೋಹನ್‌ಕುಮಾರ್ ಸೇರಿದಂತೆ ಇನ್ನಿತರ ಸದಸ್ಯರು ಬೌಲಿಂಗ್ ಮಾಡುವ ಮೂಲಕ ಸಂಭ್ರಮಿಸಿದರು.
    ದಸರಾ ಕ್ರೀಡಾಕೂಟದಲ್ಲಿ ಕ್ರಿಕೆಟ್ ಆರಂಭಿಕ ಕ್ರೀಡೆಯಾಗಿದ್ದು,  ಪುರುಷರಿಗೆ ಕ್ರಿಕೆಟ್, ಕಬ್ಬಡಿ, ಕುಸ್ತಿ, ಹಗ್ಗ-ಜಗ್ಗಾಟ ಮತ್ತು ಮಹಿಳೆಯರಿಗೆ ಹಗ್ಗ-ಜಗ್ಗಾಟ, ಗುಂಡು ಎಸೆತ, ಟೈರ್ & ಸ್ಟಿಕ್ ಮತ್ತು ಲೆಮೆನ್ ಇನ್ ಸ್ಪೂನ್ ಸ್ಪರ್ಧೆಗಳು ನಡೆಯಲಿವೆ.