Saturday, November 4, 2023

ಮೈಸೂರು ಮಹಾರಾಜರಿಂದ ಭದ್ರಾವತಿಯಲ್ಲಿ ವಿಐಎಸ್‌ಎಲ್ ಶತಮಾನೋತ್ಸವ ಉದ್ಘಾಟನೆ

ಪೂರ್ವಿಕರ ಕೊಡುಗೆಯಾಗಿರುವ ಕಾರ್ಖಾನೆ ಉಳಿಸಿಕೊಳ್ಳುವ ಹೋರಾಟದ ಜೊತೆಯಲ್ಲಿರುವೆ

ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೦ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಹಿರಿಯ ಚಲನ ಚಿತ್ರ ನಟ, ನಿವೃತ್ತ ಉದ್ಯೋಗಿ ಎಸ್. ದೊಡ್ಡಣ್ಣ ನೇತೃತ್ವದಲ್ಲಿ ನಗರದ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಶತಮಾನೋತ್ಸವ ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರವರು ಶನಿವಾರ ಉದ್ಘಾಟಿಸಿದರು.
    ಭದ್ರಾವತಿ: ಅಂದು ಮೈಸೂರು ಮಹಾರಾಜರು ತಮ್ಮ ಆಡಳಿತ ಅವಧಿಯಲ್ಲಿ ವಿನಾಕಾರಣ ರಾಜ್ಯ ಬಿಟ್ಟು ಎಲ್ಲಿಗೂ ಹೋಗುತ್ತಿರಲಿಲ್ಲ  ಸದಾ ಕಾಲ ಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದರು. ಅವರು ಕೈಗೊಂಡಿರುವ ಕಾರ್ಯಗಳು ಇಂದಿಗೂ ಉಳಿದು ಕೊಂಡಿವೆ ಎಂದು ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರವರು ಸ್ಮರಿಸಿದರು.
ಅವರು ಶನಿವಾರ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೦ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಹಿರಿಯ ಚಲನ ಚಿತ್ರ ನಟ, ನಿವೃತ್ತ ಉದ್ಯೋಗಿ ಎಸ್. ದೊಡ್ಡಣ್ಣ ನೇತೃತ್ವದಲ್ಲಿ ನಗರದ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಶತಮಾನೋತ್ಸವ ಉದ್ಘಾಟಿಸಿ ಮಾತನಾಡಿದರು.
     ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗು ಸರ್.ಎಂ ವಿಶ್ವೇಶ್ವರಾಯರವರ ಕೊಡುಗೆ ಅಪಾರವಾಗಿದ್ದು, ಅಂದು ಮಹಾರಾಜರು ಕೆಲಸದ ನಿಮಿತ್ತ ವಿದೇಶ ಪ್ರಯಾಣ ಮಾಡಿದ್ದು ಬಿಟ್ಟರೇ ಎಂದಿಗೂ ರಾಜ್ಯ ಬಿಟ್ಟು ಹೊರಗೆ ಹೋದವರಲ್ಲ. ಅವರು ಕೆಲವು ಬಾರಿ ವಿಶ್ರಾಂತಿಗಾಗಿ ಕೆಮ್ಮಣ್ಣುಗುಂಡಿ ಮತ್ತು ಜೋಗ ಜಲಪಾತ ಸೇರಿದಂತೆ ಸುತ್ತಮುತ್ತಲ ಪ್ರಾಕೃತಿಕ ಸ್ಥಳಗಳಿಗೆ ಭೇಟಿ ನೀಡುತ್ತಿದ್ದರು. ಅವರು ಅವಧಿಯಲ್ಲಿ ನಿರ್ಮಿಸಿರುವ ಅತಿಥಿ ಗೃಹಗಳೇ ಇವುಗಳಿಗೆ ಸಾಕ್ಷಿಯಾಗಿದೆ ಎಂದರು.
ನಮ್ಮ ಪೂರ್ವಕರ ಕೊಡುಗೆಯಾಗಿರುವ ವಿಐಎಸ್‌ಎಲ್ ಕಾರ್ಖಾನೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಕಾರ್ಖಾನೆ ಉಳಿಸಿಕೊಳ್ಳುವ ನಿಮ್ಮಲ್ಲರ ಹೋರಾಟದ ಪ್ರಯತ್ನದಲ್ಲಿ ನಾನು ಸಹ ಜೊತೆಯಲ್ಲಿರುವೆ ಎಂದು ಭರವಸೆ ನೀಡಿದರು.


ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೦ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಹಿರಿಯ ಚಲನ ಚಿತ್ರ ನಟ, ನಿವೃತ್ತ ಉದ್ಯೋಗಿ ಎಸ್. ದೊಡ್ಡಣ್ಣ ನೇತೃತ್ವದಲ್ಲಿ ನಗರದ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಶತಮಾನೋತ್ಸವದಲ್ಲಿ ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿ, ವಿಐಎಸ್‌ಎಲ್ ಕಾರ್ಖಾನೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಜಿಲ್ಲೆಯಲ್ಲಿರುವ ಎಲ್ಲಾ ನಾಯಕರನ್ನು ಒಗ್ಗೂಡಿಸಿಕೊಂಡು ಕಾರ್ಖಾನೆ ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.
ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ. ವಿಐಎಸ್‌ಎಲ್ ಕೇವಲ ಕಾರ್ಖಾನೆಯಾಗಿ ಉಳಿದಿಲ್ಲ. ನಮ್ಮೆಲ್ಲರ ಬಾಂಧವ್ಯದ ಕೊಂಡಿಯಾಗಿದೆ. ಈ ಕಾರ್ಖಾನೆ ರಾಜ್ಯಕ್ಕೆ, ದೇಶಕ್ಕೆ ಮಾತ್ರವಲ್ಲ, ಇಡೀ ಜಗತ್ತಿಗೆ ಬೇಕಾದ ಕಾರ್ಖಾನೆಯಾಗಿದೆ. ಇದನ್ನು ಉಳಿಸಿಕೊಳ್ಳಲು ಎಲ್ಲರೂ ಸಹ ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಜಿಲ್ಲೆಯಲ್ಲಿ ನಮ್ಮೆಲ್ಲರ ನಾಯಕರಾದ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಈಗಲೂ ಪ್ರಯತ್ನ ಮುಂದುವರೆದಿದೆ. ಭವಿಷ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾರ್ಖಾನೆಯನ್ನು ಅಭಿವೃದ್ಧಿಗೊಳಿಸುವ ವಿಶ್ವಾಸವಿದೆ ಎಂದರು.
ಮೈಸೂರು ಸುತ್ತೂರು ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಮತ್ತು ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದರು.


ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೦ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಹಿರಿಯ ಚಲನ ಚಿತ್ರ ನಟ, ನಿವೃತ್ತ ಉದ್ಯೋಗಿ ಎಸ್. ದೊಡ್ಡಣ್ಣ ನೇತೃತ್ವದಲ್ಲಿ ನಗರದ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಶತಮಾನೋತ್ಸವದಲ್ಲಿ ಗು ಸರ್.ಎಂ ವಿಶ್ವೇಶ್ವರಾಯರವರ ಮೊಮ್ಮಗ ಮೋಕ್ಷಗೊಂಡಂ ಶೇಷಾದ್ರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
     ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಬಿಜೆಪಿ ಮಂಡಲ ಅಧ್ಯಕ್ಷ ಧರ್ಮಪ್ರಸಾದ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಯುವ ಮುಖಂಡ ಮಂಗೋಟೆ ರುದ್ರೇಶ್, ನಗರಸಭೆ ಸದಸ್ಯರಾದ ಚನ್ನಪ್ಪ, ಮಣಿ ಎಎನ್‌ಎಸ್, ಲತಾ ಚಂದ್ರಶೇಖರ್ ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.
    ಉದ್ಯಮಿ ಡಾ. ವಿಜಯಸಂಕೇಶ್ವರ ಹಾಗು ಸರ್.ಎಂ ವಿಶ್ವೇಶ್ವರಾಯರವರ ಮೊಮ್ಮಗ ಮೋಕ್ಷಗೊಂಡಂ ಶೇಷಾದ್ರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಸಕ ಬಿ.ಕೆ ಸಂಗಮೇಶ್ವರ ಅಧ್ಯಕ್ಷತೆವಹಿಸಿದ್ದರು. ಶತಮಾನೋತ್ಸವ ಆಚರಣಾ ಸಮಿತಿ ಅಧ್ಯಕ್ಷ, ಹಿರಿಯ ಚಲನಚಿತ್ರ ನಟ ಎಸ್. ದೊಡ್ಡಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಎಂ.ವಿ ರೇವಣ್ಣ ಸಿದ್ದಯ್ಯ ಸ್ವಾಗತಿಸಿದರು.
    ವಿಐಎಸ್‌ಎಲ್ ಕಾರ್ಖಾನೆ ಗುತ್ತಿಗೆ, ಕಾಯಂ ಹಾಗು ನಿವೃತ್ತ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಕಾರ್ಮಿಕ ಸಂಘಟನೆಗಳ, ಸಂಘ-ಸಂಸ್ಥೆಗಳ ಪ್ರಮುಖರು, ಮಹಿಳಾ ಸಂಘಟನೆಗಳ ಪ್ರಮುಖರು ಹಾಗು ಹೊರ ದೇಶ ಹಾಗು ಹೊರ ರಾಜ್ಯಗಳಲ್ಲಿ ನಿವೃತ್ತ ಕಾರ್ಮಿಕರು, ಕುಟುಂಬ ವರ್ಗದವರು ಸೇರಿದಂತೆ ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.

Friday, November 3, 2023

ಓ.ಸಿ, ಮಟ್ಕಾ ಜೂಜಾಟ : ಪ್ರಕರಣ ದಾಖಲು




    ಭದ್ರಾವತಿ : ತಾಲೂಕಿನ ವೀರಾಪುರ ಗ್ರಾಮ ಆಟೋ ನಿಲ್ದಾಣದ ಹತ್ತಿರ ಓ.ಸಿ, ಮಟ್ಕಾ ಜೂಜಾಟದಲ್ಲಿ ನಿರತರಾಗಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
    ಈ ಭಾಗದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ಚಂದ್ರಶೇಖರ್, ಓ.ಸಿ, ಮಟ್ಕಾ ಜೂಜಾಟದಲ್ಲಿ ನಿರತನಾಗಿದ್ದ ರಾಜೇಶ ಅಲಿಯಾಸ್ ರಾಜು ಎಂಬಾತನನ್ನು ವಶಕ್ಕೆ ಪಡೆದು ನ್ಯಾಯಾಲಯದ ಅನುಮತಿ ಮೇರೆಗೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

೨ ಪಂಪ್ ಸೆಟ್ ಮೋಟಾರ್ ಕಳವು : ದೂರು ದಾಖಲು

    ಭದ್ರಾವತಿ: ತೋಟದ ಹಳ್ಳದಲ್ಲಿ ಅಳವಡಿಸಲಾಗಿದ್ದ ಎರಡು ಪಂಪ್‌ಸೆಟ್ ಮೋಟಾರ್‌ಗಳನ್ನು ಕಳವು ಮಾಡಿರುವ ಘಟನೆ ತಾಲೂಕಿನ ಮಲ್ಲಿಗೇನಹಳ್ಳಿಯಲ್ಲಿ ನಡೆದಿದೆ.
    ಗ್ರಾಮದ ನಿವಾಸಿ ಮಂಜುನಾಥ್ ಎಂಬುವರು ತಮ್ಮ ತೋಟದಲ್ಲಿ ನೀರಿನ ವ್ಯವಸ್ಥೆಗಾಗಿ ೨ ಪಂಪ್ ಸೆಟ್ ಮೋಟಾರ್‌ಗಳನ್ನು ಹಳ್ಳಕ್ಕೆ ಅಳವಡಿಸಿದ್ದು, ಅ.೨೬ರಂದು ಈ ಮೋಟಾರ್‌ಗಳನ್ನು ಕಳವು ಮಾಡಲಾಗಿದೆ. ಇವುಗಳ ಒಟ್ಟು ಅಂದಾಜು ಮೌಲ್ಯ ಸುಮಾರು ೩೦ ಸಾವಿರ ರು.ಗಳಾಗಿದ್ದು, ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ವಿಐಎಸ್‌ಎಲ್ ಶತಮಾನೋತ್ಸವ ಯಶಸ್ವಿಗಾಗಿ ಭದ್ರಾ ಮಾತೆ ಆರಾಧನೆ

ವಿಶೇಷವಾಗಿ ಭದ್ರಾರತಿ ಮೂಲಕ ಪ್ರಾರ್ಥನೆ


ಭದ್ರಾವತಿ ನಗರದಲ್ಲಿ ೨ ದಿನಗಳ ಕಾಲ ಆಯೋಜಿಸಲಾಗಿರುವ ವಿಐಎಸ್‌ಎಲ್ ಶತಮಾನೋತ್ಸವ ಅಂಗವಾಗಿ ಶುಕ್ರವಾರ ಸಂಜೆ ಹಳೇಸೇತುವೆ ಬಳಿ ಭದ್ರಾ ನದಿಯಲ್ಲಿರುವ ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಭದ್ರಾರತಿ ನಡೆಯಿತು. ಇದಕ್ಕೂ ಮೊದಲು ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಹಿರಿಯ ಚಲನಚಿತ್ರ ನಟ ಎಸ್. ದೊಡ್ಡಣ್ಣ ಜ್ಯೋತಿಯನ್ನು ಕಾರ್ಮಿಕರಿಗೆ ಹಸ್ತಾಂತರಿಸಿದರು.
    ಭದ್ರಾವತಿ: ನಗರದಲ್ಲಿ ೨ ದಿನಗಳ ಕಾಲ ಆಯೋಜಿಸಲಾಗಿರುವ ವಿಐಎಸ್‌ಎಲ್ ಶತಮಾನೋತ್ಸವ ಅಂಗವಾಗಿ ಶುಕ್ರವಾರ ಸಂಜೆ ಹಳೇಸೇತುವೆ ಬಳಿ ಭದ್ರಾ ನದಿಯಲ್ಲಿರುವ ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಭದ್ರಾರತಿ ನಡೆಯಿತು.
    ಶತಮಾನೋತ್ಸವ ವಿಜೃಂಭಣೆಯಿಂದ ಯಶಸ್ವಿಯಾಗಿ ನಡೆಯಬೇಕೆಂಬ ಆಶಯದೊಂದಿಗೆ ವಿಶೇಷವಾಗಿ ಭದ್ರಾ ಮಾತೆಗೆ ಭದ್ರಾರತಿ ಮೂಲಕ ಪ್ರಾರ್ಥಿಸಲಾಯಿತು. ಇದಕ್ಕೂ ಮೊದಲು ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ ವಿಶೇಷ ಪೂಜೆ ಸಲ್ಲಿಸಿ ಶತಮಾನೋತ್ಸವ ಆಚರಣಾ ಸಮಿತಿ ಮಾರ್ಗದರ್ಶರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಸಮಿತಿ ಅಧ್ಯಕ್ಷ, ಹಿರಿಯ ಚಲನಚಿತ್ರ ನಟ ದೊಡ್ಡಣ್ಣ ಜ್ಯೋತಿಯನ್ನು ತರುವ ಮೂಲಕ ದೇವಸ್ಥಾನದ ಮುಂಭಾಗದಲ್ಲಿ ಕಾರ್ಮಿಕರಿಗೆ ಹಸ್ತಾಂತರಿಸಿದರು.
    ನಂತರ ಜ್ಯೋತಿ ಪ್ರಮುಖ ರಸ್ತೆಗಳಲ್ಲಿ ಭದ್ರಾನದಿಯಲ್ಲಿರುವ ಸಂಗಮೇಶ್ವರ ದೇವಸ್ಥಾನ ತಲುಪಿತು. ಬುಟ್ಟಿ ದೀಪ ಹಾರಿ ಬಿಡುವ ಜೊತೆಗೆ ಆಕರ್ಷಕ ಸಿಡಿಮದ್ದುಗಳ ಪ್ರದರ್ಶನ ನಡೆಯಿತು.
    ನಗರಸಭೆ ಪೌರಾಯುಕ್ತ ಮನುಕುಮಾರ್, ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಹಾಗು ಪದಾಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು, ನಿವೃತ್ತ ಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಗಣ್ಯರು, ಶತಮಾನೋತ್ಸವ ಆಚರಣಾ ಸಮಿತಿ ಸದಸ್ಯರುಗಳು ಹಾಗು ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.

ವಿಐಎಸ್‌ಎಲ್ ಅಭಿವೃದ್ಧಿಗೊಳಿಸಲು ಕೇಂದ್ರ, ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿ

ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘ ಮನವಿ

ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಪಡಿಸುವಂತೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ಶಿಫಾರಸ್ಸು ಮಾಡಬೇಕೆಂದು ಒತ್ತಾಯಿಸಿ ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಹದ್ದೂರ್‌ರವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
    ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಪಡಿಸುವಂತೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ಶಿಫಾರಸ್ಸು ಮಾಡಬೇಕೆಂದು ಒತ್ತಾಯಿಸಿ ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಹದ್ದೂರ್‌ರವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
    ನಗರದಲ್ಲಿ ನ.೪ ಮತ್ತು ೫ರಂದು ನಡೆಯಲಿರುವ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನೋತ್ಸವದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿರುವ ಬಹದ್ದೂರ್‌ರವರನ್ನು ನಗರದ ಹೊರವಲಯ ಭದ್ರಾ ಅಭಯಾರಣ್ಯ ವ್ಯಾಪ್ತಿಯ ಭದ್ರಾ ಜಲಾಶಯ ಸಮೀಪದ ಜಂಗಲ್ ರೆಸಾರ್ಟ್‌ನಲ್ಲಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಭೇಟಿ ಮಾಡಿ ಮನವಿ ಸಲ್ಲಿಸಿದರು.
    ಅಂದಿನ ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಬಹದ್ದೂರ್‌ರವರ ದೂರದೃಷ್ಟಿ ಹಾಗು ಪರಿಶ್ರಮದ ಫಲವಾಗಿ ನಿರ್ಮಾಣಗೊಂಡಿರುವ ವಿಐಎಸ್‌ಎಲ್ ಕಾರ್ಖಾನೆ ಅಭಿವೃದ್ಧಿಗೊಳಿಸಬೇಕೆಂಬುದು ಕ್ಷೇತ್ರದ ನಾಗರೀಕರ ಆಶಯವಾಗಿದೆ. ಕಾರ್ಖಾನೆಯ ಶತಮಾನೋತ್ಸವ ಉದ್ಘಾಟಿಸುತ್ತಿರುವುದು ಸಂತಸ ತಂದಿದ್ದು, ಈ ಸಂದರ್ಭದಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಶಿಫಾರಸ್ಸು ಮಾಡಬೇಕೆಂದು ಕೋರಿದರು.
    ಸಂಘದ ಗೌರವಾಧ್ಯಕ್ಷ, ನಗರಸಭೆ ಮಾಜಿ ಸದಸ್ಯ ಬಾಲಕೃಷ್ಣ, ಅಧ್ಯಕ್ಷ ಆರ್. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಬಿ. ಜಗದೀಶ್, ಖಜಾಂಚಿ ಬಿ. ಶಂಕರನಾಯ್ಕ, ಸಹಕಾರ್ಯದರ್ಶಿ ಮಂಜು, ಸಲಹೆಗಾರ ಸತ್ಯ ಭದ್ರಾವತಿ, ವಿಲ್ಸನ್ ಬಾಬು, ಭಾಸ್ಕರ್ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಐಎಸ್‌ಎಲ್ ಶತಮಾನೋತ್ಸವ ಉದ್ಘಾಟನೆಗಾಗಿ ನಗರಕ್ಕೆ ಆಗಮಿಸಿದ ಮೈಸೂರು ಸಂಸ್ಥಾನದ ದೊರೆ

ಭದ್ರಾವತಿ: ನಗರದಲ್ಲಿ ನ.೪ ಮತ್ತು ೫ರಂದು ನಡೆಯಲಿರುವ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನೋತ್ಸವದಲ್ಲಿ ಪಾಲ್ಗೊಳ್ಳಲು ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಹದ್ದೂರ್‌ರವರು ಶುಕ್ರವಾರ ನಗರಕ್ಕೆ ಆಗಮಿಸಿದ್ದಾರೆ.  
    ಭದ್ರಾವತಿ: ನಗರದಲ್ಲಿ ನ.೪ ಮತ್ತು ೫ರಂದು ನಡೆಯಲಿರುವ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನೋತ್ಸವದಲ್ಲಿ ಪಾಲ್ಗೊಳ್ಳಲು ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಹದ್ದೂರ್‌ರವರು ಶುಕ್ರವಾರ ನಗರಕ್ಕೆ ಆಗಮಿಸಿದ್ದಾರೆ.
    ನಗರದ ಹೊರವಲಯ ಭದ್ರಾ ಅಭಯಾರಣ್ಯ ವ್ಯಾಪ್ತಿಯ ಭದ್ರಾ ಜಲಾಶಯ ಸಮೀಪದ ಜಂಗಲ್ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದು, ಬೆಳಿಗ್ಗೆ ಶಾಸಕ ಬಿ.ಕೆ ಸಂಗಮೇಶ್ವರ್ ಕುಟುಂಬಸ್ಥರು ಹಾಗು ಅಭಿಮಾನಿಗಳು ಬಹದ್ದೂರ್‌ರವರನ್ನು ಸ್ವಾಗತಿಸಿದರು.
    ನ.೪ರ ಬೆಳಿಗ್ಗೆ ೧೦ ಗಂಟೆಗೆ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಆಯೋಜಿಸಲಾಗಿರುವ ಶತಮಾನೋತ್ಸವ ಬಹದ್ದೂರ್‌ರವರು ಉದ್ಘಾಟಿಸಲಿದ್ದು, ಕೇಂದ್ರ ಹಾಗು ರಾಜ್ಯ ಸಚಿವರು, ಸಂಸದರು, ಜಿಲ್ಲೆಯ ಎಲ್ಲಾ ಶಾಸಕರು, ವಿವಿಧ ಕ್ಷೇತ್ರಗಳ ಸಾಧಕರು ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.

Thursday, November 2, 2023

ಜಾತ್ರೆ ರೂಪ ಪಡೆದುಕೊಳ್ಳುತ್ತಿದೆ ವಿಐಎಸ್‌ಎಲ್ ಶತಮಾನೋತ್ಸವ : ಇಂದು ಸಂಜೆ ಭದ್ರಾರತಿಗೆ ಚಾಲನೆ

ಬೃಹತ್ ವೇದಿಕೆ, ಮಹಾದ್ವಾರ, ಆಕರ್ಷಕ ವಿದ್ಯುತ್ ದೀಪಗಳ ಅಲಂಕಾರ, ಪ್ರಮುಖ ರಸ್ತೆಗಳ ಮೆರಗು

ಭದ್ರಾವತಿ ಪ್ರಮುಖ ವೃತ್ತಗಳಲ್ಲಿ ವಿಐಎಸ್‌ಎಲ್ ಶತಮಾನೋತ್ಸವ ಅಂಗವಾಗಿ ನಿರ್ಮಿಸಲಾಗಿರುವ ಮಹಾದ್ವಾರ.
    ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸ್ಥಾಪನೆಗೊಂಡು ೧೦೦ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಹಿರಿಯ ಚಲನಚಿತ್ರ ನಟ ಎಸ್. ದೊಡ್ಡಣ್ಣ ನೇತೃತ್ವದಲ್ಲಿ ನ.೩ ರಿಂದ ೫ರವರೆಗೆ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಶತಮಾನೋತ್ಸವ ಜಾತ್ರೆಯ ರೂಪ ಪಡೆದುಕೊಳ್ಳುತ್ತಿದ್ದು, ಕಳೆದ ೫ ದಿನಗಳಿಂದ ಬೃಹತ್ ವೇದಿಕೆ ನಿರ್ಮಾಣ ಸೇರಿದಂತೆ ಭರದ ಸಿದ್ದತೆಗಳು ನಡೆದಿವೆ.  
    ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಬೃಹತ್ ವಾಟರ್ ಪ್ರೂಪ್ ವೇದಿಕೆ ನಿರ್ಮಾಣಗೊಂಡಿದ್ದು, ಸಾವಿರಾರು ಮಂದಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ ಎರಡು ದಿನ ಊಟದ ವ್ಯವಸ್ಥೆ ಸಹ ಕೈಗೊಳ್ಳಲಾಗಿದೆ. ಕಾರ್ಯಕ್ರಮ ವೀಕ್ಷಣೆಗೆ ಅನುಕೂಲವಂತೆ ಬೃಹತ್ ಡಿಜಿಟಲ್ ಪ್ರದರ್ಶಕಗಳನ್ನು(ಡಿಸ್ ಪ್ಲೇ) ಹಾಗು ಧ್ವನಿವರ್ಧಕಗಳನ್ನು ಅಳವಡಿಸಲಾಗಿದೆ.


ಭದ್ರಾವತಿ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ವಿಐಎಸ್‌ಎಲ್ ಶತಮಾನೋತ್ಸವ ಅಂಗವಾಗಿ ನಿರ್ಮಿಸಿರುವ ವಾಟರ್ ಪ್ರೂಪ್ ಬೃಹತ್ ವೇದಿಕೆ.
    ನಗರದ ಪ್ರಮುಖ ವೃತ್ತಗಳಲ್ಲಿ ಶತಮಾನೋತ್ಸವ ಮಹಾದ್ವಾರಗಳನ್ನು ನಿರ್ಮಿಸಲಾಗಿದ್ದು, ಪ್ರಮುಖ ರಸ್ತೆಗಳು ಅಲಂಕೃತಗೊಂಡು ಮೆರಗು ನೀಡುತ್ತಿವೆ. ರಾತ್ರಿ ವೇಳೆ ಆಕರ್ಷಕವಾಗಿ ಕಂಗೊಳಿಸುವ ವಿದ್ಯುತ್ ದೀಪಗಳ ಅಲಂಕಾರ ಕೈಗೊಳ್ಳಲಾಗಿದೆ. ಕಾಯಂ, ಗುತ್ತಿಗೆ ಹಾಗು ನಿವೃತ್ತ ಕಾರ್ಮಿಕರು, ಅಧಿಕಾರಿಗಳು, ವಿವಿಧ ಸಂಘಟನೆಗಳು ಶತಮಾನೋತ್ಸವ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಶ್ರಮವಹಿಸಿವೆ.
    ನ.೩ರಂದು ಶುಕ್ರವಾರ ಸಂಜೆ ೪.೩೦ಕ್ಕೆ ಹಳೆನಗರದ ಶ್ರೀಲಕ್ಷ್ಮೀನರಸಿಂಹ ದೇವಾಲಯದಲ್ಲಿ ವಿಐಎಸ್‌ಎಲ್ ಮಾಜಿ ಉದ್ಯೋಗಿ ಹಾಗು ಚಲನಚಿತ್ರನಟ ಭದ್ರಾರತಿಗೆ ಚಾಲನೆ ನೀಡಲಿದ್ದಾರೆ.
    ಈ ಸಂಬಂಧ ಜ್ಯೋತಿಯನ್ನು ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಿಂದ ಹಳದಮ್ಮ ಕೇರಿ, ರಂಗಪ್ಪ ವೃತ್ತ, ಬಿ.ಹೆಚ್.ರಸ್ತೆ, ಮಾಧವಚಾರ್ ವೃತ್ತದ ಮಾರ್ಗದ ಮೂಲಕ ಭದ್ರಾ ಹಳೇ ಸೇತುವೆ ಬಳಿಯ ಶ್ರೀ ಸಂಗಮೇಶ್ವರ ದೇವಾಲಯಕ್ಕೆ ಮೆರವಣಿಗೆ ಮೂಲಕ ತಂದು ಭದ್ರಾರತಿ ಪೂಜೆ ನೆರವೇರಿಸಲಾಗುವುದು.
    ನ.೪ ಮತ್ತು ೫ ಎರಡು ದಿನ ಕೇಂದ್ರ ಹಾಗು ರಾಜ್ಯ ಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಸದರು, ಜಿಲ್ಲೆಯ ಎಲ್ಲಾ ಶಾಸಕರು, ಗಣ್ಯರು, ಕಲಾವಿದರು, ಸಾಧಕರು ಪಾಲ್ಗೊಳ್ಳಲಿದ್ದಾರೆ. ನಿರೀಕ್ಷೆಗೂ ಮೀರಿ ಹೆಚ್ಚಿನ ಜನರು ಪಾಲ್ಗೊಳ್ಳುವ ವಿಶ್ವಾಸವಿದ್ದು, ೩ ದಿನಗಳ ಕಾಲ ನಗರದಲ್ಲಿ ಜಾತ್ರೆಯ ಸಂಭ್ರಮ ಕಂಡು ಬರಲಿದೆ.


ಭದ್ರಾವತಿ ವಿಐಎಸ್‌ಎಲ್ ಕ್ರೀಡಾಂಗಣದ ಶತಮಾನೋತ್ಸವ ಹಿನ್ನಲೆಯಲ್ಲಿ ಅಲಂಕೃತಗೊಂಡು ಕಂಗೊಳಿಸುತ್ತಿರುವುದು.