Monday, November 6, 2023

ಮೈಸೂರು ಮಹಾರಾಜ ಯದುವೀರ್‌ರವರಿಗೆ ಗೌರವ ಸಮರ್ಪಣೆ


ಭದ್ರಾವತಿ ನಗರಕ್ಕೆ ಆಗಮಿಸಿರುವ ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರವರನ್ನು ಸೋಮವಾರ ಅನುದಾನ ರಹಿತ ವಿದ್ಯಾಸಂಸ್ಥೆಗಳ ಸಂಘದ ಪ್ರಮುಖರು ಬಿಆರ್‌ಪಿ ಜಂಗಲ್ ರೆಸಾರ್ಟ್ ಅತಿಥಿಗೃಹದಲ್ಲಿ ಭೇಟಿ ಮಾಡಿ ಸನ್ಮಾನಿಸುವ ಮೂಲಕ ಗೌರವಿಸಿದರು.
    ಭದ್ರಾವತಿ : ನಗರಕ್ಕೆ ಆಗಮಿಸಿರುವ ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರವರನ್ನು ಸೋಮವಾರ ಅನುದಾನ ರಹಿತ ವಿದ್ಯಾಸಂಸ್ಥೆಗಳ ಸಂಘದ ಪ್ರಮುಖರು ಬಿಆರ್‌ಪಿ ಜಂಗಲ್ ರೆಸಾರ್ಟ್ ಅತಿಥಿಗೃಹದಲ್ಲಿ ಭೇಟಿ ಮಾಡಿ ಸನ್ಮಾನಿಸುವ ಮೂಲಕ ಗೌರವಿಸಿದರು. 
     ಅನುದಾನ ರಹಿತ ವಿದ್ಯಾ ಸಂಸ್ಥೆಗಳ ಸಂಘದ ಕಾರ್ಯದರ್ಶಿ ಹಾಗೂ ನಗರದ ವಿಇಎಸ್ ವಿದ್ಯಾಸಂಸ್ಥೆ ದೈಹಿಕ ಶಿಕ್ಷಣ ಶಿಕ್ಷಕ ಶಿವಲಿಂಗೇಗೌಡ ಮತ್ತು ಹಾಗೂ  ತಾಲೂಕು ಅನುದಾನಿತ ಶಾಲೆಗಳ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ನಾಗರಾಜ್‌ರವರು ಮೊದಲ ಬಾರಿಗೆ ಆಗಮಿಸಿರುವ ಒಡೆಯರ್‌ರವರನ್ನು ಸನ್ಮಾನಿಸಿ ಗೌರವಿಸಿದರು. ಅಲ್ಲದೆ ಮೈಸೂರು ಮಹಾರಾಜರ ಕೊಡುಗೆಗಳನ್ನು ಸ್ಮರಿಸಿ ಪ್ರಸ್ತುತ ಕ್ಷೇತ್ರದ ಸ್ಥಿತಿಗತಿಗಳನ್ನು ವಿವರಿಸಿದರು.

ಶ್ರೀ ರಾಘವೇಂದ್ರ ಸ್ವಾಮಿಯವರ ಮಠದಲ್ಲಿ ವಿಜೃಂಭಣೆಯಿಂದ ಜರುಗಿದ ಆಶ್ಲೇಷ ಬಲಿ

ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಯವರ ಮಠದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಆಶ್ಲೇಷ ಬಲಿ ಸೋಮವಾರ ವಿಜೃಂಭಣೆಯಿಂದ ನಡೆಯಿತು.
    ಭದ್ರಾವತಿ: ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಯವರ ಮಠದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಆಶ್ಲೇಷ ಬಲಿ ಸೋಮವಾರ ವಿಜೃಂಭಣೆಯಿಂದ ನಡೆಯಿತು.
    ಮಠದಲ್ಲಿರುವ ಬೃಂದಾವನಗಳಿಗೆ ಬೆಳಿಗ್ಗೆ ಅಭಿಷೇಕ. ನಂತರ ಹೋಮ ಮತ್ತು ನಾಗದೇವತೆ ಪ್ರಾರ್ಥನೆ ಜರಗಿತು. ಮಧ್ಯಾಹ್ನ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು.
    ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರಳೀಧರ ತಂತ್ರಿ ಉಪಾಧ್ಯಕ್ಷೆ ಸುಮಾ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಜಿ. ರಮಾಕಾಂತ್, ಖಜಾಂಚಿ ನಿರಂಜನಾ ಆಚಾರ್ ಮತ್ತು ಪ್ರಮೋದ್ ನೇತೃತ್ವದ ತಂಡದಿಂದ ನಾಗರಾಧನೆ ಧಾರ್ಮಿಕ ಆಚರಣೆಗಳು ನೆರವೇರಿದವು.
    ಪ್ರಮುಖರಾದ ಪವನ್ ಕುಮಾರ್ ಉಡುಪ, ಸುಪ್ರಿತ ತಂತ್ರಿ, ಶುಭಾ ಗುರುರಾಜ, ವಿದ್ಯಾನಂದನಾಯಕ್, ಪ್ರಧಾನ ಅರ್ಚಕ ಮಾಧು ರಾವ್, ಪ್ರಶಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ವಿಐಎಸ್‌ಎಲ್ ಕಾರ್ಖಾನೆಗೆ ಮೊದಲ ಬಾರಿಗೆ ಮೈಸೂರು ಮಹಾರಾಜ ಯದುವೀರ್ ಭೇಟಿ

ಅಧಿಕಾರಿಗಳು, ಕಾಯಂ, ಗುತ್ತಿಗೆ ಕಾರ್ಮಿಕರೊಂದಿಗೆ ಸಭೆ

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಸೋಮವಾರ ಮೈಸೂರು ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರವರು ಖುದ್ದಾಗಿ ಭೇಟಿ ನೀಡಿ ಅಧಿಕಾರಿಗಳು, ಕಾಯಂ, ಗುತ್ತಿಗೆ ಕಾರ್ಮಿಕರ ಸಂಘದ ಪ್ರಮುಖರೊಂದಿಗೆ ಸಭೆ ನಡೆಸಿದರು.
    ಭದ್ರಾವತಿ: ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೦ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಹಿರಿಯ ಚಲನ ಚಿತ್ರ ನಟ, ಮಾಜಿ ಉದ್ಯೋಗಿ ಎಸ್. ದೊಡ್ಡಣ್ಣ ನೇತೃತ್ವದಲ್ಲಿ ಕಳೆದ ೨ ದಿನಗಳ ಹಿಂದೆ ನಗರದ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಶತಮಾನೋತ್ಸವ ಉದ್ಘಾಟಿಸುವ ಮೂಲಕ ಪ್ರಸ್ತುತ ಕಾರ್ಖಾನೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಡೆಸುತ್ತಿರುವ ಹೋರಾಟದ ಜೊತೆಗಿರುವುದಾಗಿ ಭರವಸೆ ನೀಡಿದ್ದ ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರವರು ಸೋಮವಾರ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಶತಮಾನೋತ್ಸವದಲ್ಲಿ ಗುತ್ತಿಗೆ, ಕಾಯಂ ಹಾಗು ನಿವೃತ್ತ ನೌಕರರು ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರವರಿಗೆ ಮನವಿ ಸಲ್ಲಿಸಿ ಮೈಸೂರು ಮಹಾರಾಜರ ಕೊಡುಗೆಯಾಗಿರುವ ವಿಐಎಸ್‌ಎಲ್ ಕಾರ್ಖಾನೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯ ಹಾಗು ಕೇಂದ್ರ ಸರ್ಕಾರಗಳಿಗೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿದ್ದರು.
    ಈ ಹಿನ್ನಲೆಯಲ್ಲಿ ಒಡೆಯರ್‌ರವರು ಖುದ್ದಾಗಿ ಕಾರ್ಖಾನೆ ಪರಿಶೀಲನೆ ನಡೆಸುವ ಮೂಲಕ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರ ಸಂಘದ ಪ್ರಮುಖರೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಕಾರ್ಖಾನೆ ಸಂಸ್ಥಾಪಕರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ನಂತರ ಮೊದಲ ಬಾರಿಗೆ ಮೈಸೂರು ಮಹಾರಾಜರು ಕಾರ್ಖಾನೆ ಪ್ರವೇಶಿಸಿರುವುದು ಕ್ಷೇತ್ರದ ಕಾರ್ಮಿಕ ವಲಯದಲ್ಲಿ ಸಂತಸವನ್ನುಂಟು ಮಾಡಿದೆ.  ಕಾರ್ಖಾನೆ ಆಡಳಿತ ಕಛೇರಿಯಲ್ಲಿ ಒಡೆಯರ್‌ರವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಸೋಮವಾರ ಮೈಸೂರು ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರವರು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಖಾನೆ ಆಡಳಿತ ಕಛೇರಿಯಲ್ಲಿ ಇವರನ್ನು ಸನ್ಮಾನಿಸಿ, ಗೌರವಿಸಲಾಯಿತು.

Sunday, November 5, 2023

ಯಶಸ್ವಿಯಾಗಿ ಜರುಗಿದ ವಿಐಎಸ್‌ಎಲ್ ಶತಮಾನೋತ್ಸವ ಸಮಾರಂಭ

ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನೋತ್ಸವ ಸಮಾರೋಪ ಸಮಾರಂಭ ಭಾನುವಾರ ಯಶಸ್ವಿಯಾಗಿ ನಡೆದಿದ್ದು, ಸಂಜೆ ನಡೆದ ಕಾರ್ಯಕ್ರಮದಲ್ಲಿ ಶತಮಾನೋತ್ಸವದ ಕೇಂದ್ರ ಬಿಂದು ದೊಡ್ಡಣ್ಣ ಅವರನ್ನು ಗುತ್ತಿಗೆ ಕಾರ್ಮಿಕರ ಸಂಘ ಹಾಗು ಸಂತೋಷ್ ಶಾಮಿಯಾನ ವತಿಯಿಂದ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನೋತ್ಸವ ಸಮಾರೋಪ ಸಮಾರಂಭ ಭಾನುವಾರ ಯಶಸ್ವಿಯಾಗಿ ನಡೆದಿದ್ದು, ಸಂಜೆ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಕಾರ್ಮಿಕರು, ಸಮಾರಂಭದ ಯಶಸ್ವಿಗೆ ಶ್ರಮಿದವರನ್ನು, ಗಣ್ಯರು ಹಾಗು ಸಾಧಕರನ್ನು ಮತ್ತು ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
    ಶತಮಾನೋತ್ಸವ ಆಚರಣಾ ಸಮಿತಿ ಅಧ್ಯಕ್ಷ, ಹಿರಿಯ ಚಲನಚಿತ್ರ ನಟ ಎಸ್. ದೊಡ್ಡಣ್ಣ ನೇತೃತ್ವದಲ್ಲಿ ಕಳೆದ ೨ ದಿನಗಳ ಕಾಲ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ  ಹಲವು ವೈಶಿಷ್ಟಗಳೊಂದಿಗೆ ಶತಮಾನೋತ್ಸವ ಅದ್ದೂರಿಯಾಗಿ ನಡೆಯಿತು.
    ಹೊರ ದೇಶ, ಹೊರ ರಾಜ್ಯಗಳಿಂದ ಮತ್ತು ರಾಜ್ಯದ ವಿವಿಧ ಮೂಲೆಗಳಿಂದ ಹಾಗು ನಗರದ ವಿವಿಧೆಡೆಗಳಿಂದ ಆಗಮಿಸಿದ್ದ ನಿವೃತ್ತ ಅಧಿಕಾರಿಗಳು, ಕಾರ್ಮಿಕರು ಹಾಗು ಕುಟುಂಬ ವರ್ಗದವರು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಂಡು ಸಂಭ್ರಮಿಸಿದರು.
    ಶತಮಾನೋತ್ಸವದ ಕೇಂದ್ರ ಬಿಂದು ದೊಡ್ಡಣ್ಣ ಅವರನ್ನು ಗುತ್ತಿಗೆ ಕಾರ್ಮಿಕರ ಸಂಘ ಹಾಗು ಸಂತೋಷ್ ಶಾಮಿಯಾನ ವತಿಯಿಂದ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು. ವಿವಿಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.


ವಿಐಎಸ್‌ಎಲ್ ಶತಮಾನೋತ್ಸವ ಸಮಾರಂಭ : ಚಿಂತನ ಮಂಥನ

ಭದ್ರಾವತಿ: ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೦ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಹಿರಿಯ ಚಲನ ಚಿತ್ರ ನಟ, ನಿವೃತ್ತ ಉದ್ಯೋಗಿ ಎಸ್. ದೊಡ್ಡಣ್ಣ ನೇತೃತ್ವದಲ್ಲಿ ನಗರದ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಶತಮಾನೋತ್ಸವದ ಸಮಾರೋಪ ಸಮಾರಂಭದ ಅಂಗವಾಗಿ ಭಾನುವಾರ ಬೆಳಿಗ್ಗೆ ಚಿಂತನ ಮಂಥನ ಕಾರ್ಯಕ್ರಮ ನಡೆಯಿತು. ಹಿರಿಯ ಕಾರ್ಮಿಕ ಮುಖಂಡ ಎಸ್.ಎನ್ ಬಾಲಕೃಷ್ಣ ಮಾತನಾಡಿದರು.
    ಭದ್ರಾವತಿ: ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೦ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಹಿರಿಯ ಚಲನ ಚಿತ್ರ ನಟ, ನಿವೃತ್ತ ಉದ್ಯೋಗಿ ಎಸ್. ದೊಡ್ಡಣ್ಣ ನೇತೃತ್ವದಲ್ಲಿ ನಗರದ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಶತಮಾನೋತ್ಸವದ ಸಮಾರೋಪ ಸಮಾರಂಭದ ಅಂಗವಾಗಿ ಭಾನುವಾರ ಬೆಳಿಗ್ಗೆ ಚಿಂತನ ಮಂಥನ ಕಾರ್ಯಕ್ರಮ ನಡೆಯಿತು.
    ಶತಮಾನೋತ್ಸವ ಆಚರಣಾ ಸಮಿತಿ ಪ್ರಮುಖರು, ನಿವೃತ್ತ ಅಧಿಕಾರಿಗಳು, ಕಾರ್ಮಿಕರು ತಮ್ಮ ವೃತ್ತಿ ಸೇವೆಯನ್ನು ಸ್ಮರಿಸಿ ಪ್ರಸ್ತುತ ಕಾರ್ಖಾನೆ ಎದುರಿಸುತ್ತಿರುವ ಸಮಸ್ಯೆಗಳಿಂದ ಹೊರಬರುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಲಹೆ, ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.  
     ಆರಂಭದಲ್ಲಿ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದ ಕಲಾವಿದರಿಂದ ಗಾಯನ ನಡೆಯಿತು. ವೇದಿಕೆಯಲ್ಲಿ ಶತಮಾನೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಎಸ್. ದೊಡ್ಡಣ್ಣ, ಉಪಾಧ್ಯಕ್ಷರಾದ ಚಿಕ್ಕರಿಯಪ್ಪ, ಯು. ಅಮರನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಎಂ.ವಿ ರೇವಣ್ಣ ಸಿದ್ದಯ್ಯ, ಕಾರ್ಯದರ್ಶಿಗಳಾದ ಎಸ್.ಎಸ್ ಶ್ರೀನಾಥ್, ಗುರುಬಸಪ್ಪ ಬೂಸನೂರು, ಬಿ.ಟಿ ಶ್ರೀನಿವಾಸಗೌಡ, ಕೋಶಾಧ್ಯಕ್ಷ ಜೆ.ಎಸ್ ನಾಗಭೂಷಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಪ್ರಮುಖರಾದ ಹಿರಿಯ ಕಾರ್ಮಿಕ ಮುಖಂಡ ಎಸ್.ಎನ್ ಬಾಲಕೃಷ್ಣ, ನಿವೃತ್ತ ಉಪನ್ಯಾಸಕಿ ಡಾ. ವಿಜಯದೇವಿ, ಜನಾರ್ಧನ ರಾವ್ ಸೇರಿದಂತೆ ಇನ್ನಿತರರು ತಮ್ಮ ಅನಿಸಿಕೆ, ಸಲಹೆ , ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
    ಸಮಾರೋಪ ಸಮಾರಂಭಕ್ಕೆ ಬಾರದ ಸಿ.ಎಂ, ಡಿ.ಸಿ.ಎಂ:
    ಶತಮಾನೋತ್ಸವ ಸಮಾರಂಭಕ್ಕೆ ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗು ರಾಜ್ಯ ಸಚಿವರು, ಸಂಸದರು, ಶಾಸಕರು ಆಗಮಿಸುವ ನಿರೀಕ್ಷೆ ಇತ್ತು. ಆದರೆ ಯಾರು ಸಹ ಆಗಮಿಸಲಿಲ್ಲ. ಶನಿವಾರ ನಡೆದ ಉದ್ಘಾಟನೆ ಸಮಾರಂಭದಲ್ಲೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಬಿ.ಕೆ ಸಂಗಮೇಶ್ವರ್, ಎಸ್. ರುದ್ರೇಗೌಡ ಹೊರತುಪಡಿಸಿ ಉಳಿದಂತೆ ಕೇಂದ್ರ ಸಚಿವರು, ಸಂಸದರು, ಜಿಲ್ಲೆಯ ಶಾಸಕರು ಪಾಲ್ಗೊಂಡಿರಲಿಲ್ಲ.

ಓ.ಸಿ ಜೂಜಾಟ : ಪ್ರಕರಣ ದಾಖಲು

    ಭದ್ರಾವತಿ:  ತಾಲೂಕಿನ ಅರಳಿಹಳ್ಳಿ ಗ್ರಾಮದ ಬಸ್ ನಿಲ್ದಾಣದ ಸಮೀಪ ಓ.ಸಿ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
    ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ದೇವೇಂದ್ರಪ್ಪ ಗಸ್ತು ಕರ್ತವ್ಯದಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ರಫಿ ಅಹಮದ್ ಅಲಿಯಾಸ್ ಸುಂದರ್ ಎಂಬಾತನ ವಿರುದ್ಧ ನ್ಯಾಯಾಲಯದ ಅನುಮತಿ ಮೇರೆಗೆ ಪ್ರಕರಣ ದಾಖಲಿಸಿದ್ದಾರೆ. 

ಪ್ರತಿಭಟನಾ ಧರಣಿ ಸತ್ಯಾಗ್ರಹಕ್ಕೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ

ಕೆಡಿಪಿ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ

ಭದ್ರಾವತಿ ಕ್ಷೇತ್ರದ ನಿರ್ಲಕ್ಷ್ಯ ಖಂಡಿಸಿ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಧರಣಿ ಸತ್ಯಾಗ್ರಹಕ್ಕೆ  ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸ್ಪಂದಿಸಿದ್ದು, ಶನಿವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದರು.
    ಭದ್ರಾವತಿ: ಕ್ಷೇತ್ರದ ನಿರ್ಲಕ್ಷ್ಯ ಖಂಡಿಸಿ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಧರಣಿ ಸತ್ಯಾಗ್ರಹಕ್ಕೆ  ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸ್ಪಂದಿಸಿದ್ದಾರೆ.
    ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ಶಿವಮೊಗ್ಗ, ಸಾಗರ, ಸೊರಬ ಕ್ಷೇತ್ರಗಳಿಗೆ ಮಾತ್ರ ಪದೇ ಪದೇ ಭೇಟಿ ನೀಡುತ್ತಿದ್ದು, ಆದರೆ ಈ ಕ್ಷೇತ್ರಕ್ಕೆ ಇದುವರೆಗೂ ಭೇಟಿ ನೀಡದೆ ನಿರ್ಲಕ್ಷ ವಹಿಸಿದ್ದಾರೆ. ಕ್ಷೇತ್ರದ ಸರ್ಕಾರಿ ಕಛೇರಿಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಕಳಪೆ ಕಾಮಗಾರಿಗಳು ಹೆಚ್ಚಾಗಿ ಅವ್ಯವಸ್ಥೆ ಉಂಟಾಗಿದೆ. ಇದುವರೆಗೂ ಸಚಿವರು ಕೆಡಿಪಿ ಸಭೆ ನಡೆಸಿ ಸಮಸ್ಯೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಿ ಬಗೆಹರಿಸದಿರುವುದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ೨೦೧೭ರಲ್ಲಿ ಪ್ರಾರಂಭವಾದ ಡಾ. ಬಿ.ಆರ್ ಅಂಬೇಡ್ಕರ್ ಭವನ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಪದೇ ಪದೇ ಹೋರಾಟಗಳ ಮೂಲಕ ಮನವಿ ಸಲ್ಲಿಸಿದ್ದರೂ ಸಹ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್‌ರವರ ಹೆಸರಿಗೆ ಅವಮಾನವಾಗುತ್ತಿದ್ದರು ಸಹ ಇದುವರೆಗೂ ಪೂರ್ಣಗೊಳಿಸದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವದಲ್ಲಿ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದ ಮುಂಭಾಗ ಅ.೩೧ರಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.
    ಸಚಿವ ಮಧು ಬಂಗಾರಪ್ಪ ಶನಿವಾರ ಪ್ರತಿಭಟನಾ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ಡಾ. ಬಿ.ಆರ್ ಅಂಬೇಡ್ಕರ್ ಹಾಗು ಎಸ್. ಬಂಗಾರಪ್ಪನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸಮಿತಿವತಿಯಿಂದ ಮನವಿ ಸ್ವೀಕರಿಸಿ ನಂತರ ಅಂಬೇಡ್ಕರ್ ಭವನ ಪರಿಶೀಲನೆ ನಡೆಸುವ ಮೂಲಕ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳುವ ಹಾಗು ಶೀಘ್ರದಲ್ಲಿಯೇ ಕೆಡಿಪಿ ಸಭೆ ನಡೆಸಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಿ ಬಗೆಹರಿಸುವುದಾಗಿ ಭರವಸೆ ನೀಡಿದರು.  
    ಶಾಸಕ ಬಿ.ಕೆ ಸಂಗಮೇಶ್ವರ್, ಸಮಿತಿ ಕಾರ್ಯಾಧ್ಯಕ್ಷ ಐ.ಎಲ್ ಅರುಣ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಅಕ್ರಂ ಖಾನ್, ಉಪಾಧ್ಯಕ್ಷರಾದ ಬ್ರಹ್ಮಲಿಂಗಯ್ಯ, ರಂಗಪ್ಪ, ಶೌಕತ್, ಎಂ.ವಿ ಚಂದ್ರಣ್ಣ, ಕಾರ್ಯದರ್ಶಿಗಳಾದ ರಾಕೇಶ್ ಕುಮಾರ್, ವೀರೇಶ್, ಪ್ರಧಾನ ಸಂಚಾಲಕರಾದ ಶ್ರೀನಿವಾಸ್, ಬಸವರಾಜ್, ಸಂಚಾಲಕರಾದ ಅಜಿತ್, ಅಜಯ್, ಕೆ. ಶಿವಕುಮಾರ್, ಟಿ.ಎನ್ ನಾಗರಾಜ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.