Saturday, December 23, 2023
ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಕೊಡುಗೆ ಅಪಾರ : ಎಸ್. ಮಧುಬಂಗಾರಪ್ಪ
ಯರೇಹಳ್ಳಿ ಗ್ರಾಮದ ಉನ್ನತೀಕರಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಸಂಭ್ರಮಾಚರಣೆ
ಸಂಸದ ಬಿ.ವೈ ರಾಘವೇಂದ್ರ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾ ತನಾಡಿದರು. ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಿದ್ದರು.
ಜಿ.ಪಂ. ಮಾಜಿ ಸದಸ್ಯ ಎಸ್. ಕುಮಾರ್, ತಹಸೀಲ್ದಾರ್ ಕೆ.ಆರ್ ನಾಗರಾಜು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್ ಪರಮೇಶ್ವರಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಹಳೆಯ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷರಾದ ಕೆ. ವಿಠಲರಾವ್, ಆನಂದಪ್ಪ, ಅಧ್ಯಕ್ಷ ಬಿ. ರಮೇಶ್, , ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವೈ.ಕೆ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಅಮೃತ ಮಹೋತ್ಸವ ಆಚರಣೆ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಸ್ವಾಗತಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ಕೋಗಲೂರು ತಿಪ್ಪೇಸ್ವಾಮಿ ನಿರೂಪಿಸಿದರು.
ಭದ್ರಾವತಿ:ಸೆಳೆದ ವೈಕುಂಠನಾಥನ ದರ್ಶನ
ಭದ್ರಾವತಿ: ಪ್ರತಿವರ್ಷದಂತೆ ಈ ವರ್ಷ ಸಹ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಶನಿವಾರ ವೈಕುಂಠ ಏಕಾದಶಿ ಅದ್ದೂರಿಯಾಗಿ ಜರುಗಿತು.
ಬೆಳಗ್ಗೆ ೪.೩೦ರಿಂದಲೇ ವೈಕುಂಠನಾಥನ ದರ್ಶನ ಆರಂಭಗೊಂಡಿದ್ದು, ಈ ಬಾರಿ ಸಹ ಸ್ವಾಮಿಯ ದರ್ಶನ ಭಕ್ತರ ಕಣ್ಮನ ಸೆಳೆಯುತ್ತಿದೆ. ದೇವಾಲಯದ ಪ್ರಧಾನ ಅರ್ಚಕರಾದ ವೇ||ಬ್ರ|| ಶ್ರೀ ರಂಗನಾಥ ಶರ್ಮ ಅವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳುವ ಮೂಲಕ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು.
ಉಪವಿಭಾಗಾಧಿಕಾರಿ ಜಿ.ಎಚ್ ಸತ್ಯನಾರಾಯಣ, ತಹಸೀಲ್ದಾರ್ ಕೆ.ಆರ್ ನಾಗರಾಜು, ಡಿ. ದೇವರಾಜ ಅರಸು ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ. ಅನುರಾಧ ಪಟೇಲ್, ದೇವಾಲಯದ ಸಹಾಯಕ ಅರ್ಚಕ ಶ್ರೀನಿವಾಸ್, ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಾರುತಿ, ಪದಾಧಿಕಾರಿಗಳಾದ ಆಶಾ ಪುಟ್ಟಸ್ವಾಮಿ, ಗಿರಿನಾಯ್ಡು, ವಿಶ್ವೇಶ್ವರಗಾಯಕ್ವಾಡ್, ಉಪ ತಹಸೀಲ್ದಾರ್ ಮಂಜಾನಾಯ್ಕ, ಎ.ಟಿ.ಬಸವರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.