ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಎಲ್ಲಾ ರೋಗಗಳಿಗೂ ಚಿಕಿತ್ಸೆ ನೀಡುವ ಆಯುರ್ವೇದ ತಜ್ಞ ಚಿಕಿತ್ಸಾ ಕೇಂದ್ರ 'ಆಯುಷ್' ಡಿ.೩೧ರಿಂದ ಭದ್ರಾವತಿಯಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದು ಆಯುಷಿ ವೈದ್ಯ ವೃಂದ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ.
ಭದ್ರಾವತಿ: ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಎಲ್ಲಾ ರೋಗಗಳಿಗೂ ಚಿಕಿತ್ಸೆ ನೀಡುವ ಆಯುರ್ವೇದ ತಜ್ಞ ಚಿಕಿತ್ಸಾ ಕೇಂದ್ರ 'ಆಯುಷ್' ಡಿ.೩೧ರಿಂದ ಕಾರ್ಯಾರಂಭಗೊಳ್ಳಲಿದೆ ಎಂದು ಆಯುಷಿ ವೈದ್ಯ ವೃಂದ ತಿಳಿಸಿದೆ.
ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಜ್ಞ ವೈದ್ಯರು, ಇಲ್ಲಿಯೇ ಹುಟ್ಟಿ ಬೆಳೆದು ಆಯುರ್ವೇದದಲ್ಲಿ ಉನ್ನತ ಶಿಕ್ಷಣ ಪಡೆದು ಸ್ವಂತ ಆಯುರ್ವೇದ ಕ್ಲಿನಿಕ್‌ಗಳನ್ನು ನಗರದಲ್ಲಿ ತೆರೆದು ಸುಮಾರು ೧೦-೧೨ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದೇವೆ. ಹೆಚ್ಚಿನ ಅನುಭವ ಹೊಂದಿದ್ದು, ಎಲ್ಲಾ ರೀತಿಯ ರೋಗಗಳಿಗೂ ಚಿಕಿತ್ಸೆ ನೀಡಲಾಗುವುದು. ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಒಂದೇ ಕಡೆ ಎಲ್ಲಾ ರೋಗಗಳಿಗೂ ಚಿಕಿತ್ಸೆ ನೀಡುವ ಕೇಂದ್ರ ಆರಂಭಿಸುವ ಉದ್ದೇಶದಿಂದ ಇದೀಗ ಆಯುಷಿ ಕೇಂದ್ರ ತೆರೆಯಲಾಗುತ್ತಿದೆ ಎಂದರು.
೫ ಜನರನ್ನೊಳಗೊಂಡ ಆಯುಷಿ ವೈದ್ಯ ವೃಂದ ಉತ್ತಮ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಕೈಗೊಂಡಿದೆ. ಆರಂಭಿಕವಾಗಿ ಗಾಂಧಿನಗರದ ೨ನೇ ಅಡ್ಡ ರಸ್ತೆಯಲ್ಲಿರುವ ಭದ್ರಾ ನರ್ಸಿಂಗ್ ಹೋಂ ಪಕ್ಕದಲ್ಲಿ ಆಯುಷಿ ತಜ್ಞ ಚಿಕಿತ್ಸಾ ಕೇಂದ್ರ ತೆರೆಯಲಾಗುತ್ತಿದೆ. ಡಿ.೩೧ರಂದು ಬೆಳಿಗ್ಗೆ ೧೧ ಗಂಟೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ವೈದ್ಯರಾದ ಡಾ. ಎಂ. ಅರುಣ ಕುಮಾರಿ, ಡಾ. ದಿವ್ಯ, ಡಾ. ಟಿ.ಸಿ ವಿನಯ್, ಡಾ. ಪ್ರಶಾಂತ್ ಮತ್ತು ಡಾ. ಸಿ. ವಿಕ್ರಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.