ಶಾರದ ಅಪ್ಪಾಜಿ
ಭದ್ರಾವತಿ; ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಧರ್ಮಪತ್ನಿ, ಜಾತ್ಯತೀತ ಜನತಾದಳ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿಯವರ ಹುಟ್ಟುಹಬ್ಬ ಜ.೧ರ ಸೋಮವಾರ ಆಚರಿಸಲಾಗುತ್ತಿದೆ.
ಕಳೆದ ಸುಮಾರು ೧ ವಾರದಿಂದ ಹುಟ್ಟುಹಬ್ಬ ಆಚರಣೆಗಾಗಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗು ಅಭಿಮಾನಿಗಳು ಮುಂದಾಗಿದ್ದಾರೆ. ನಗರದ ವಿವಿಧೆಡೆ ಹುಟ್ಟುಹಬ್ಬ ಅಂಗವಾಗಿ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದೆ. ಅಲ್ಲದೆ ವಿವಿಧೆಡೆ ಹಲವು ಕಾರ್ಯಕ್ರಮಗಳ ಆಯೋಜನೆಗೆ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ.
ಶಾರದ ಅಪ್ಪಾಜಿಯವರು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪ್ರಥಮ ಬಾರಿ ಸ್ಪರ್ಧಿಸಿ ಅಲ್ಪ ಮತಗಳ ಅಂತರದಿಂದ ಸೋಲು ಕಂಡಿದ್ದು, ಕ್ಷೇತ್ರದಲ್ಲಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಜನರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಚುನಾವಣೆಯಲ್ಲಿ ಸೋಲು ಕಂಡರೂ ಸಹ ಇಂದಿಗೂ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಪಕ್ಷ ಸಂಘಟನೆ ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಮುನ್ನಡೆಯುತ್ತಿದ್ದಾರೆ.
ರೋಗಿಗಳಿಗೆ ಹಾಲು, ಹಣ್ಣು ಮತ್ತು ಬ್ರೆಡ್ ವಿತರಣೆ:
ಶಾರದ ಅಪ್ಪಾಜಿಯವರ ಹುಟ್ಟುಹಬ್ಬದ ಅಂಗವಾಗಿ ಜ.೧ರ ಸೋಮವಾರ ಬೆಳಿಗ್ಗೆ ೧೦ ಗಂಟೆಗೆ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಜಾತ್ಯತೀತ ಜನತಾದಳ ಪಕ್ಷದ ತಾಲೂಕು ಘಟಕದ ವತಿಯಿಂದ ಒಳರೋಗಿಗಳಿಗೆ ಹಾಲು, ಹಣ್ಣು ಮತ್ತು ಬ್ರೆಡ್ ವಿತರಣೆ ನಡೆಯಲಿದೆ.
ಕಾರ್ಯಕ್ರಮಕ್ಕೆ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಬಿ.ಎಸ್ ಮಧುಸೂಧನ್ ಕೋರಿದ್ದಾರೆ.