ಕಣ್ಮನ ಸೆಳೆಯುತ್ತಿರುವ ಅಮ್ಮನವರ ಅಲಂಕಾರ, ಬೃಹತ್ ಅನ್ನಸಂತರ್ಪಣೆ
ಭದ್ರಾವತಿ ನಗರದ ಬಿ.ಎಚ್ ರಸ್ತೆ ಮೀನುಗಾರರ ಬೀದಿ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ ಪ್ರತಿ ವರ್ಷದಂತೆ ಈ ಬಾರಿ ಸಹ ಕಳೆದ ೩ ದಿನಗಳಿಂದ ಅದ್ದೂರಿಯಾಗಿ ಜರುಗುತ್ತಿದ್ದು, ಸೋಮವಾರ ಸರಸ್ವತಿ ಅಲಂಕಾರ ಹಾಗು ಬುಧವಾರ ನೋಟುಗಳ ಮೂಲಕ ಲಕ್ಷ್ಮೀ ಅಲಂಕಾರ ಕೈಗೊಳ್ಳಲಾಗುತ್ತಿತ್ತು. ಅಮ್ಮನವರ ಅಲಂಕಾರ ಕಣ್ಮನ ಸೆಳೆಯಿತು.
ಭದ್ರಾವತಿ: ನಗರದ ಬಿ.ಎಚ್ ರಸ್ತೆ ಮೀನುಗಾರರ ಬೀದಿ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ ಪ್ರತಿ ವರ್ಷದಂತೆ ಈ ಬಾರಿ ಸಹ ಕಳೆದ ೩ ದಿನಗಳಿಂದ ಅದ್ದೂರಿಯಾಗಿ ಜರುಗುತ್ತಿದ್ದು, ಬುಧವಾರ ಬೃಹತ್ ಅನ್ನಸಂತರ್ಪಣೆ ನೆರವೇರಿತು.
ಸೋಮವಾರ ಭದ್ರಾ ನದಿಯಿಂದ ಶಕ್ತಿ ತೀರ್ಥದ ಬಿಂದಿಗೆ ತೆಗೆದುಕೊಂಡು ಅಮ್ಮನವರ ಗರ್ಭಗುಡಿಗೆ ಅಭಿಷೇಕ ಮಾಡಲಾಯಿತು. ಮಂಗಳವಾರ ಸಂಜೆ ಅಗ್ನಿಕುಂಡ ತ್ರಿಶೂಲ ಮುದ್ರೆಯೊಂದಿಗೆ ದೇವಸ್ಥಾನಕ್ಕೆ ಭದ್ರಾನದಿಯಿಂದ ಶಕ್ತಿ ಕರಗ ತರಲಾಯಿತು.
ಬುಧವಾರ ಬೆಳಿಗ್ಗೆ ೫ ಗಂಟೆ ಸಮಯದಲ್ಲಿ ಪೊಂಗಲ್ ನಡೆಯಿತು. ಮಧ್ಯಾಹ್ನ ೧೨ ಗಂಟೆಯಿಂದ ಸಂಜೆ ೪ ಗಂಟೆವರೆಗೂ ಬೃಹತ್ ಅನ್ನ ಸಂತರ್ಪಣೆ ನೆರವೇರಿತು. ಸಾವಿರಾರು ಮಂದಿ ಭಕ್ತರು ಪಾಲ್ಗೊಂಡಿದ್ದರು. ಸಂಜೆ ೭ ಗಂಟೆಗೆ ಅಮ್ಮನವರ ರಾಜಬೀದಿ ಉತ್ಸವ ಮೆರವಣಿಗೆ ಹಾಗು ಮಹಾಮಂಗಳಾರತಿ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಜ.೪ರ ಗುರುವಾರ ಸಂಜೆ ೭ ಗಂಟೆಗೆ ತಮಿಳುನಾಡಿನ ತಿರುಚಿ ಶಿವನ್ ಶಕ್ತಿ ನಾಟಕ ಮಂಡಳಿ ಚೆನ್ನೈ ಬಾಯ್ಸ್ ಹಾಗು ಸ್ನೇಹ ಆರ್ಕೇಸ್ಟ್ರಾ ಕಲಾವಿದರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.
ಅಮ್ಮನವರಿಗೆ ವಿಶೇಷ ಅಲಂಕಾರ :
ಪ್ರತಿದಿನ ಅಮ್ಮನವರಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗುತ್ತಿದ್ದು, ಸೋಮವಾರ ಸರಸ್ವತಿ ಅಲಂಕಾರ ಹಾಗು ಬುಧವಾರ ನೋಟುಗಳ ಮೂಲಕ ಲಕ್ಷ್ಮೀ ಅಲಂಕಾರ ಕೈಗೊಳ್ಳಲಾಗುತ್ತಿತ್ತು. ಅಮ್ಮನವರ ಅಲಂಕಾರ ಕಣ್ಮನ ಸೆಳೆಯಿತು.
ಮಾರಿಯಮ್ಮ ದೇವಾಲಯ ಕಮಿಟಿ ಅಧ್ಯಕ್ಷ ಎ. ಮಾಧು ನೇತೃತ್ವದಲ್ಲಿ ಈ ಬಾರಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯುತ್ತಿದ್ದು, ಪ್ರತಿ ದಿನ ವಿವಿಧೆಡೆಗಳಿಂದ ಸಾವಿರಾರು ಭಕ್ತರು ಆಗಮಿಸಿ ಅಮ್ಮನವರ ದರ್ಶನ ಪಡೆಯುತ್ತಿದ್ದಾರೆ.