Wednesday, January 10, 2024

ಪ್ರೊ.ಎಸ್.ಎಸ್ ವಿಜಯರಿಗೆ `ಶಕುಂತಲ ಜಯದೇವ ಶರಣ ಪ್ರಶಸ್ತಿ' ಪ್ರದಾನ

ವಚನ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಭದ್ರಾವತಿ ನಗರದ ನಿವಾಸಿ, ನಿವೃತ್ತ ಪ್ರಾಧ್ಯಾಪಕಿ, ಸಾಹಿತಿ ಪ್ರೊ. ಎಸ್.ಎಸ್ ವಿಜಯ (ಡಾ. ವಿಜಯದೇವಿ) ಅವರಿಗೆ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಮೈಸೂರು ವತಿಯಿಂದ ಜ.೭ರ ಭಾನುವಾರ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆ ಆವರಣ, ಶ್ರೀ ರಾಜೇಂದ್ರ ಭವನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ `ಶಕುಂತಲ ಜಯದೇವ ಶರಣ ಪ್ರಶಸ್ತಿ' ಪ್ರದಾನ ಮಾಡಿ ಗೌರವಿಸಲಾಯಿತು.
    ಭದ್ರಾವತಿ: ವಚನ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ನಗರದ ನಿವಾಸಿ, ನಿವೃತ್ತ ಪ್ರಾಧ್ಯಾಪಕಿ, ಸಾಹಿತಿ ಪ್ರೊ. ಎಸ್.ಎಸ್ ವಿಜಯ (ಡಾ. ವಿಜಯದೇವಿ) ಅವರಿಗೆ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಮೈಸೂರು ವತಿಯಿಂದ ಜ.೭ರ ಭಾನುವಾರ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆ ಆವರಣ, ಶ್ರೀ ರಾಜೇಂದ್ರ ಭವನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ `ಶಕುಂತಲ ಜಯದೇವ ಶರಣ ಪ್ರಶಸ್ತಿ' ಪ್ರದಾನ ಮಾಡಿ ಗೌರವಿಸಲಾಯಿತು.
    ಶ್ರೀ ಸುತ್ತೂರು ಕ್ಷೇತ್ರ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.  ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್.ಕೆ ಲೋಕನಾಥ್ ಉದ್ಘಾಟಿಸಿದರು.  ಅಖಿಲ ಭಾರತ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸಿ. ಸೋಮಶೇಖರ ಅಧ್ಯಕ್ಷತೆ ವಹಿಸಿದ್ದರು. ದತ್ತಿ ದಾಸೋಹಿ ಶಕುಂತಲ ಜಯದೇವ, ಪರಿಷತ್ ಜಿಲ್ಲಾ ಅಧ್ಯಕ್ಷ ಸದಾನಂದಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ರಸ್ತೆ ಸುರಕ್ಷಾ ಸಪ್ತಾಹ : ಬೈಕ್ ಜಾಥಾ ಮೂಲಕ ಜಾಗೃತಿ

ರಸ್ತೆ ಸುರಕ್ಷಾ ಸಪ್ತಾಹ ಅಂಗವಾಗಿ ಭದ್ರಾವತಿ ಪೊಲೀಸ್ ಉಪವಿಭಾಗ, ಸಂಚಾರಿ ಪೊಲೀಸ್ ಠಾಣೆ ಹಾಗು ಸರ್.ಎಂ ವಿಶ್ವೇಶ್ವರಯ್ಯ ದ್ವಿಚಕ್ರ ವಾಹನ ದುರಸ್ತಿಗಾರರ ಸಂಘದ ಸಹಯೋಗದೊಂದಿಗೆ ಬುಧವಾರ `ಹೆಲ್ಮೆಟ್ ಧರಿಸಿ, ಜೀವ ಉಳಿಸಿ', `ನಮ್ಮ ನಡೆ ಸುರಕ್ಷಾ ಚಾಲನೆ ಕಡೆ' ಎಂಬ ಧ್ಯೇಯ ವಾಕ್ಯದೊಂದಿಗೆ ಬೈಕ್ ಜಾಥಾ ನಡೆಸಲಾಯಿತು.  
    ಭದ್ರಾವತಿ: ರಸ್ತೆ ಸುರಕ್ಷಾ ಸಪ್ತಾಹ ಅಂಗವಾಗಿ ಪೊಲೀಸ್ ಉಪವಿಭಾಗ, ಸಂಚಾರಿ ಪೊಲೀಸ್ ಠಾಣೆ ಹಾಗು ಸರ್.ಎಂ ವಿಶ್ವೇಶ್ವರಯ್ಯ ದ್ವಿಚಕ್ರ ವಾಹನ ದುರಸ್ತಿಗಾರರ ಸಂಘದ ಸಹಯೋಗದೊಂದಿಗೆ ಬುಧವಾರ `ಹೆಲ್ಮೆಟ್ ಧರಿಸಿ, ಜೀವ ಉಳಿಸಿ', `ನಮ್ಮ ನಡೆ ಸುರಕ್ಷಾ ಚಾಲನೆ ಕಡೆ' ಎಂಬ ಧ್ಯೇಯ ವಾಕ್ಯದೊಂದಿಗೆ ಬೈಕ್ ಜಾಥಾ ನಡೆಸಲಾಯಿತು.  
    ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಲ್ಲಿ ಪೊಲೀಸ್ ನಗರ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಜಾಥಾ ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮೂಲಕ ಎನ್‌ಎಂಸಿ ರಸ್ತೆ, ಸೀಗೆಬಾಗಿವರೆಗೂ ಸಾಗಿ ಸಿ.ಎನ್ ರಸ್ತೆ ಮೂಲಕ ರಂಗಪ್ಪ ವೃತ್ತ ತಲುಪಿ ಅಂತ್ಯಗೊಂಡಿತು.


ಭದ್ರಾವತಿಯಲ್ಲಿ ಬುಧವಾರ ಹೆಲ್ಮೆಟ್ ಧರಿಸುವ ಬಗ್ಗೆ ಹಾಗು ಸುರಕ್ಷಾ ಚಾಲನೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಸರ್.ಎಂ ವಿಶ್ವೇಶ್ವರಯ್ಯ ದಿಚಕ್ರ ವಾಹನ ದುರಸ್ತಿಗಾರರ ಸಂಘಕ್ಕೆ ಇಲಾಖೆ ವತಿಯಿಂದ ಅಭಿನಂದಿಸಿ ಸಂಘದ ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಲಾಯಿತು.
  ಹೆಲ್ಮೆಟ್ ಧರಿಸುವ ಬಗ್ಗೆ ಹಾಗು ಸುರಕ್ಷಾ ಚಾಲನೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಸರ್.ಎಂ ವಿಶ್ವೇಶ್ವರಯ್ಯ ದಿಚಕ್ರ ವಾಹನ ದುರಸ್ತಿಗಾರರ ಸಂಘಕ್ಕೆ ಇಲಾಖೆ ವತಿಯಿಂದ ಅಭಿನಂದಿಸಿ ಸಂಘದ ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಸಂಚಾರಿ ಪೊಲೀಸ್ ಠಾಣಾಧಿಕಾರಿ ಶಾಂತಲ ಸೇರಿದಂತೆ ವಿವಿಧ ಠಾಣೆಗಳ ಠಾಣಾಧಿಕಾರಿಗಳು, ಸಂಚಾರಿ ಪೊಲೀಸರು, ದ್ವಿಚಕ್ರ ವಾಹನ ದುರಸ್ತಿಗಾರರು ಜಾಥಾದಲ್ಲಿ ಪಾಲ್ಗೊಂಡಿದ್ದರು.
    ರಸ್ತೆ ಸುರಕ್ಷಾ ಸಪ್ತಾಹ ಅಂಗವಾಗಿ ಈಗಾಗಲೇ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಜಾಥಾ, ಜಾನಪದ ಕಲಾವಿದರಿಂದ ಬೀದಿ ನಾಟಕ ಸೇರಿದಂತೆ ಇಲಾಖೆ ವತಿಯಿಂದ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ೧ ವರ್ಷ : ಜ.೧೬ ಕರಾಳ ದಿನ, ೧೮ರಂದು ಬೈಕ್ ರ್‍ಯಾಲಿ

ಶಾಶ್ವತವಾಗಿ ಕಾರ್ಖಾನೆ ಮುಚ್ಚುವ ಆದೇಶ ಕೇಂದ್ರ ಸರ್ಕಾರ ಹಿಂಪಡೆಯಲಿ : ಪತ್ರಿಕಾಗೋಷ್ಠಿಯಲ್ಲಿ ಆಗ್ರಹ

ಭದ್ರಾವತಿಯಲ್ಲಿ ವಿಐಎಸ್‌ಪಿ ಕಾಂಟ್ರಾಕ್ಟ್ ವರ್ಕರ್ಸ್ ಯೂನಿಯನ್ ವತಿಯಿಂದ ಬುಧವಾರ ಪತ್ರಿಕಾಗೋಷ್ಠಿ ನಡೆಸಲಾಯಿತು.
    ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ೧೬ ಜನವರಿ ೨೦೨೩ರಂದು ಉಕ್ಕು ಪ್ರಾಧಿಕಾರ ತೀರ್ಮಾನ ತೆಗೆದುಕೊಂಡಿದ್ದು, ಇದನ್ನು ವಿರೋಧಿಸಿ ವಿಐಎಸ್‌ಪಿ ಕಾಂಟ್ರಾಕ್ಟ್ ವರ್ಕರ್ಸ್ ಯೂನಿಯನ್ ವತಿಯಿಂದ ಅಂದಿನಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಹೋರಾಟ ೧ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಜ.೧೬ರಂದು `ಭದ್ರಾವತಿಯ ಕರಾಳ ದಿನ' ಆಚರಿಸಲಾಗುತ್ತಿದೆ ಎಂದು ಯೂನಿಯನ್ ಅಧ್ಯಕ್ಸ ಎಚ್.ಜಿ ಸುರೇಶ್ ತಿಳಿಸಿದರು.
    ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಖಾನೆ ಮುಂಭಾಗ ನಡೆಸುತ್ತಿರುವ ಹೋರಾಟಕ್ಕೆ ಪ್ರತಿಯೊಬ್ಬರು ಸಹಕಾರ ನೀಡಿದ್ದಾರೆ. ಮುಂದೆ ಸಹ ಇದೆ ರೀತಿ ಸಹಕಾರ ನಿರೀಕ್ಷಿಸಲಾಗುತ್ತಿದೆ. ಹೋರಾಟವನ್ನು ಪಕ್ಷಾತೀತವಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದು, ಕೇಂದ್ರ ಸರ್ಕಾರ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯಬೇಕೆಂದು ಆಗ್ರಹಿಸಿದರು.
    ಜ.೧೬ರಂದು `ಭದ್ರಾವತಿಯ ಕರಾಳ ದಿನ' ಆಚರಿಸಲಾಗುತ್ತಿದ್ದು, ಅಂದು ಸಂಜೆ ೫ ಗಂಟೆಗೆ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತ ಪ್ರಮುಖ ರಸ್ತೆಗಳು ಸೇರಿದಂತೆ ನಗರಾದ್ಯಂತ ಪಂಜಿನ ಮೆರವಣಿಗೆ ನೆಡೆಸಲಾಗುವುದು. ಜ.೧೮ರಂದು ಮಧ್ಯಾಹ್ನ ೧ ಗಂಟೆಗೆ ಕಾರ್ಖಾನೆ ಮುಂಭಾಗದಿಂದ ಶಿವಮೊಗ್ಗದಲ್ಲಿರುವ ಸಂಸದ ಬಿ.ವೈ ರಾಘವೇಂದ್ರ ಅವರ ನಿವಾಸದವರೆಗೂ ಬೈಕ್ ರ್‍ಯಾಲಿ ನಡೆಸಲಾಗುವುದು. ನಂತರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ವಿವಿಧ ಸಂಘ-ಸಂಸ್ಥೆಗಳು, ಮಹಿಳೆಯರು, ರೈತರು, ಕಾರ್ಮಿಕರು ಸೇರಿದಂತೆ ಸಮಸ್ತ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಕೋರಿದರು.
    ಯೂನಿಯನ್ ಪ್ರಧಾನ ಕಾರ್ಯದರ್ಶಿ ಪಿ. ರಾಕೇಶ್, ಉಪಾಧ್ಯಕ್ಷ ವಿನೋದ್‌ಕುಮಾರ್, ಜಂಟಿ ಕಾರ್ಯದರ್ಶಿಗಳಾದ ಗುಣಶೇಖರ್, ವಿನಯ್ ಕುಮಾರ್, ಖಜಾಂಚಿ ಜಿ. ಆನಂದ್, ಎಐಟಿಯುಸಿ ಸಂಘಟನೆ ಅಧ್ಯಕ್ಷ ಕುಮಾರಸ್ವಾಮಿ, ಐಸಾಕ್ ಲಿಂಕನ್ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
    ಮುಖ್ಯಮಂತ್ರಿಗೆ ಬಹಿರಂಗ ಮನವಿ ಪತ್ರ:
    ವಿಧಾನಸಭಾ ಕ್ಷೇತ್ರದ ೨೦೧೮ ಮತ್ತು ೨೩ರ ಪರಾಜಿತ ಪಕ್ಷೇತರ ಅಭ್ಯರ್ಥಿ ಜಾನ್‌ಬೆನ್ನಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಬಹಿರಂಗ ಮನವಿ ಪತ್ರ ಬರೆದಿದ್ದಾರೆ.
    ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯರವರು ಜ. ೧೨ರ ಶುಕ್ರವಾರ ಶಿವಮೊಗ್ಗ ನಗರಕ್ಕೆ ಸಚಿವ ಸಂಪುಟದ ಸಹೋದ್ಯೋಗಿಳೊಂದಿಗೆ ಆಗಮಿಸಿ ೫ನೇ ಗ್ಯಾರಂಟಿ ಯೋಜನೆಯಾದ `ಯುವನಿಧಿ'ಗೆ ಚಾಲನೆ ನೀಡುವ ಮೂಲಕ ವಿದ್ಯಾವಂತ ನಿರುದ್ಯೋಗಿಗಳಿಗೆ ನೆರವಾಗುತ್ತಿರುವುದು ಸ್ವಾಗತಾರ್ಹವಾಗಿದೆ.
    ದೇಶದ ಕೈಗಾರಿಕಾ ಭೂ ಪುಟದಲ್ಲಿ ಮಹತ್ವದ ಸ್ಥಾನ ಪಡೆದು ಗಮನ ಸೆಳೆದಿದ್ದ ಹಾಗೂ ಜಿಲ್ಲೆಯ ಜನರ ಜೀವನಾಡಿಯಾಗಿದ್ದ ಪ್ರತಿಷ್ಠಿತ ವಿಐಎಸ್‌ಎಲ್ ಮತ್ತು ಎಂಪಿಎಂ ಅವಳಿ ಕಾರ್ಖಾನೆಗಳ ಅಳಿವಿನಿಂದಾಗಿ ಕ್ಷೇತ್ರದಲ್ಲಿ ಆರ್ಥಿಕ ಚಟುವಟಿಕೆ ಸಂಪೂರ್ಣ ಕುಂಠಿತ ಗೊಂಡಿದ್ದು, ವಿದ್ಯಾವಂತ ಯುವಕರು ಹೊಟ್ಟೆ ಪಾಡಿಗಾಗಿ ಬೇರೆಡೆ ಗುಳೆಹೋಗುವ, ಎಷ್ಟೋ ಕುಟುಂಬಗಳು ತುತ್ತು ಅನ್ನಕ್ಕಾಗಿ ಪರದಾಡುವಂಥಹ ಸ್ಥಿತಿ ನಿರ್ಮಾಣವಾಗಿದೆ.


ವಿಧಾನಸಭಾ ಕ್ಷೇತ್ರದ ೨೦೧೮ ಮತ್ತು ೨೩ರ ಪರಾಜಿತ ಪಕ್ಷೇತರ ಅಭ್ಯರ್ಥಿ ಜಾನ್‌ಬೆನ್ನಿ
    ಸಿದ್ದರಾಮಯ್ಯರವರು ಮೂಲತಃ ಮೈಸೂರು ಪ್ರಾಂತ್ಯದವರೇ ಆಗಿದ್ದು, ಯದುವಂಶಜರಿಂದ ಸ್ಥಾಪನೆಯಾದ ಅವಳಿ ಕಾರ್ಖಾನೆಗಳ ದು:ಸ್ಥಿತಿ ನಿಜಕ್ಕೂ ನೋವಿನ ಸಂಗತಿಯಾಗಿದೆ. ಪ್ರತಿ ಬಾರಿ ವಿಧಾನಸಭೆ ಹಾಗು ಲೋಕಸಭೆ ಚುನಾವಣೆಗಳ ಸಂದರ್ಭಗಳಲ್ಲಿ ರಾಜಕೀಯ ಪಕ್ಷಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಸುಳ್ಳು ಭರವಸೆ ನೀಡಿ ಮತದಾರರನ್ನು ವಂಚಿಸಿ ಅಧಿಕಾರದ ಗದ್ದುಗೆ ಹಿಡಿಯುವುದನ್ನು ಕರಗತಮಾಡಿಕೊಂಡಿರುವುದು ನಾಚಿಕೆ ಗೇಡಿನ ಸಂಗತಿಯಾಗಿದೆ.
    ಎಂಪಿಎಂ ಕಾರ್ಖಾನೆ ಸಂಪೂರ್ಣವಾಗಿ ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿದ್ದು, ತಾವು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಸ್ವಯಂ ನಿವೃತ್ತಿ ಘೋಷಣೆಯಾಗಿ ಕಾರ್ಖಾನೆ ಬಾಗಿಲು ಮುಚ್ಚುವ ಪರಿಸ್ಥಿತಿ ನಿರ್ಮಾಣವಾದದ್ದು ನೋವಿನ ಸಂಗತಿಯಾಗಿರುತ್ತದೆ. ಇದೀಗ ತಾವು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಗೆ ಆಗಮಿಸುತ್ತಿದ್ದು, ಎಂಪಿಎಂ ಕಾರ್ಖಾನೆ ಕಾಯಕಲ್ಪಕ್ಕೆ ಮುಂದಾಗುವಂತೆ ಜನತೆಯ ಪರವಾಗಿ ಒತ್ತಾಯಿಸುತ್ತೇನೆ.
    ಶತಮಾನ ಪೂರೈಸಿರುವ ವಿಐಎಸ್‌ಎಲ್ ಪರಿಸ್ಥಿತಿ ಸಹ ಶೋಚನೀಯವಾಗಿದ್ದು, ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಕಾರ್ಖಾನೆಯನ್ನು ರಾಜ್ಯ ಸರ್ಕಾರ ಕೇವಲ ಒಂದು ರೂಪಾಯಿ ಮುಖಬೆಲೆಗೆ ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದ್ದು, ಕಾರ್ಖಾನೆಯನ್ನು ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿಯೇ ಬಂಡವಾಳ
    ತೊಡಗಿಸಿ ಪುನರುಜೀವನ ಗೊಳಿಸುವ ಬಗ್ಗೆ ಕೇಂದ್ರದ ಮೇಲೆ ಒತ್ತಡ ತರುವಂತೆ ಅಥವಾ ವಾಪಾಸ್ಸು ಪಡೆದು ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿಯೇ ಕಾರ್ಖಾನೆಯನ್ನು ಪೂರ್ಣ ಪ್ರಮಾಣದಲ್ಲಿ ಮುಂದುವರೆಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ ಎಂದು ಜಾನ್‌ಬೆನ್ನಿ ಬಹಿರಂಗ ಪತ್ರದಲ್ಲಿ ತಿಳಿಸಿದ್ದಾರೆ.

Tuesday, January 9, 2024

ಅರಣ್ಯ ಪ್ರದೇಶಕ್ಕೆ ಸಾಗುವಳಿ ಚೀಟಿ, ಪಹಣಿ ನೀಡಿ ಜಮೀನು ಮಂಜೂರಾತಿ

ತಹಸೀಲ್ದಾರ್ ಆರ್. ಪ್ರದೀಪ್‌ರನ್ನು ಸೇವೆಯಿಂದ ಅಮಾನತುಗೊಳಿಸಿ, ಸೂಕ್ತ ಕ್ರಮ ಕೈಗೊಳ್ಳಿ

ಶಿವಕುಮಾರ್
    ಭದ್ರಾವತಿ : ಈ ಹಿಂದಿನ ತಹಸೀಲ್ದಾರ್ ಆರ್. ಪ್ರದೀಪ್‌ರವರು ನಿಯಮ ಮೀರಿ ಅರಣ್ಯ ಪ್ರದೇಶಕ್ಕೆ ಸಾಗುವಳಿ ಚೀಟಿ, ಪಹಣಿ ನೀಡಿ ಜಮೀನು ಮಂಜೂರಾತಿ ಮಾಡಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸುಮಾರು ೬ ತಿಂಗಳ ಹಿಂದೆಯೇ ದೂರು ಸಲ್ಲಿಸಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಾಲೂಕಿನ ಉಕ್ಕುಂದ ಗ್ರಾಮದ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಆರೋಪಿಸಿದ್ದಾರೆ.
    ತಾಲೂಕು ಹೊಳೆಹೊನ್ನೂರು ಹೋಬಳಿ ಮಲ್ಲಾಪುರ ಗ್ರಾಮದ ಸರ್ವೆ ನಂ. ೮೭ ರಲ್ಲಿ ಮಲ್ಲೇಶಪ್ಪ ಬಿನ್ ಮಲ್ಲಾರಪ್ಪ ಎಂಬುವರಿಗೆ ಸಾಗುವಳಿ ಚೀಟಿ ನೀಡಿ ಪಹಣೆ ಹಾಗೂ ಎಂ.ಆರ್ ಎಚ್ ೨೧/೨೦೨೨-೨೩ ೧೬-೦೨-೨೦೨೩ ರಲ್ಲಿ ೪ ಎಕರೆ ೫ ಗುಂಟೆ ಜಮೀನು ಮಂಜೂರು ಮಾಡಿರುತ್ತಾರೆ. ಮಲ್ಲಾಪುರ ಗ್ರಾಮದ ಸರ್ವೆ ನಂ. ೮೭ ಮೀಸಲು ಅರಣ್ಯ ಪ್ರದೇಶವಾಗಿದ್ದು, ಮಲ್ಲೇಶಪ್ಪ ಅವರು ಅರಣ್ಯಾಧಿಕಾರಿಗಳಿಂದ ಎನ್‌ಓಸಿ ಪಡೆಯಲು ಅರ್ಜಿ ಸಲ್ಲಿಸಿದ್ದರು. ಅದರಂತೆ ವಲಯ ಅರಣ್ಯಾಧಿಕಾರಿ ಶಾಂತಿಸಾಗರ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಚನ್ನಗಿರಿ ಉಪವಿಭಾಗ ಹಾಗು ಉಪ ಅರಣ್ಯ ಸಂರಕ್ಷಣಾಧಿಕಾರಿ ಭದ್ರಾವತಿ ವಿಭಾಗರವರು ಸ್ಥಳ ಪರಿಶೀಲಿಸಿ ೩ ಎಕರೆ ೩೦ ಗುಂಟೆ ಜಮೀನು ಅರಣ್ಯ ಇಲಾಖೆಯ ಮೀಸಲು ಅರಣ್ಯ ಪ್ರದೇಶವೆಂದು ಎನ್‌ಓಸಿ ನೀಡಲು ಬರುವುದಿಲ್ಲವೆಂದು ೨ ಜನವರಿ ೨೦೨೩ ರಲ್ಲಿ ತಿಳಿಸಿರುತ್ತಾರೆ. ಆದರೆ ಇದ್ಯಾವುದನ್ನು ಗಮನಿಸದೇ ತಾಲೂಕ್ ಬಗರ್ ಹುಕುಂ ಕಮಿಟಿಯಲ್ಲಿ ಏಕಪಕ್ಷಿಯವಾಗಿ ಉಳುಮೆ ಮಾಡದ ಹಾಲಿ ಮರ ಗಿಡಗಳಿಂದ ಕೂಡಿರುವ ಅರಣ್ಯಕ್ಕೆ ತಹಸೀಲ್ದಾರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್. ಪ್ರದೀಪ್‌ರವರು  ಸಾಗುವಳಿ ಚೀಟಿ, ಪಹಣಿ ನೀಡಿ ಜಮೀನು ಮಂಜೂರಾತಿ ಮಾಡಿದ್ದು, ಅವ್ಯವಹಾರ ನಡೆದಿರುವುದು ಕಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ಅಂದಿನ ತಹಸೀಲ್ದಾರ್ ಆರ್. ಪ್ರದೀಪ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಹಾಗು ಅವ್ಯವಹಾರದಲ್ಲಿ ಭಾಗಿಯಾಗಿರುವ ತಾಲೂಕು ಕಛೇರಿಯ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ಧ ಸಹ ಕ್ರಮ ಕೈಗೊಳ್ಳುವಂತೆ ಶಿವಕುಮಾರ್ ದೂರು ಸಲ್ಲಿಸಿದ್ದರು.
    ಜಿಲ್ಲಾಧಿಕಾರಿಗಳು ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ನಡುವೆ ತಾಲೂಕು ಕಛೇರಿಯಲ್ಲಿ ಭ್ರಷ್ಟಾಚಾರ ಮತ್ತಷ್ಟು ಹೆಚ್ಚಾಗಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಲಂಚ ಸ್ವೀಕರಿಸದೆ ಯಾವುದೇ ಕೆಲಸ ಮಾಡುವುದಿಲ್ಲ. ಇದರಿಂದಾಗಿ ಸಾರ್ವಜನಿಕರು ತೊಂದರೆ ಎದುರಿಸುವಂತಾಗಿದೆ. ಈ ಹಿನ್ನಲೆಯಲ್ಲಿ ತಪ್ಪಿತಸ್ಥ ಅಧಿಕಾರಿಗಳು ಹಾಗು ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಶಿವಕುಮಾರ್ ಮನವಿ ಮಾಡಿದ್ದಾರೆ.

ಹಲ್ಲೆ ನಡೆಸಿರುವವರ ಪರ ಶಾಸಕರ ಪುತ್ರರು : ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ

ಪೊಲೀಸ್ ಉಪಾಧೀಕ್ಷಕರ ಕಛೇರಿ ಮುಂಭಾಗ ವಿವಿಧ ಸಂಘಟನೆಗಳ ಮುಖಂಡರ ಪ್ರತಿಭಟನೆ

ಭದ್ರಾವತಿ ಕ್ಷೇತ್ರದಲ್ಲಿ ಪೊಲೀಸ್ ಇಲಾಖೆ ಏಕಪಕ್ಷೀಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಮುಖಂಡರು ನಗರದ ನ್ಯೂಟೌನ್ ಪೊಲೀಸ್ ಉಪಾಧೀಕ್ಷಕರ ಕಛೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.
    ಭದ್ರಾವತಿ: ಕ್ಷೇತ್ರದಲ್ಲಿ ಪೊಲೀಸ್ ಇಲಾಖೆ ಏಕಪಕ್ಷೀಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಮುಖಂಡರು ನಗರದ ನ್ಯೂಟೌನ್ ಪೊಲೀಸ್ ಉಪಾಧೀಕ್ಷಕರ ಕಛೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.
    ಜಮೀನಿನ ಬೇಲಿ ವಿಷಯಕ್ಕೆ ಸಂಬಂಧಿಸಿದಂತೆ ವೀರಾಪುರ ಗ್ರಾಮದ ನಿವಾಸಿ ಸುನಿಲ್(೩೦) ಎಂಬಾತ ಮೇಲೆ ೧೦ ಜನರ ತಂಡ ಹಲ್ಲೆ ನಡೆಸಿ, ಜಾತಿನಿಂದನೆ ಮಾಡಿದೆ. ಹಲ್ಲೆ ಮಾಡಿರುವವರ ಪರವಾಗಿ ಶಾಸಕರ ಪುತ್ರರಾದ ಬಿ.ಎಸ್ ಬಸವೇಶ್, ಬಿ.ಎಸ್ ಗಣೇಶ್ ಹಾಗು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಕುಮಾರ್ ಬೆಂಬಲ ನೀಡಿದ್ದು ಹಲ್ಲೆಗೊಳಗಾದ ವ್ಯಕ್ತಿಗೆ ಪ್ರಾಣ ಬೆದರಿಕೆಯೊಡ್ಡಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಆಡಳಿತ ಏಕಪಕ್ಷೀಯವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.
    ಪ್ರತಿಭಟನೆಯಲ್ಲಿ ಮುಖಂಡರುಗಳಾದ ಬಾಲಕೃಷ್ಣ, ಟಿ. ಚಂದ್ರೇಗೌಡ, ಎಂ.ಎ ಅಜಿತ್, ಸುರೇಶ್, ವೆಂಕಟೇಶ್, ಉಮೇಶ್, ಎ.ಟಿ ರವಿ, ಡಿ. ಆನಂದ, ಚಂದ್ರಣ್ಣ, ಕರೀಗೌಡ, ರಾಮಕೃಷ್ಣ ಮತ್ತು ಉಮೇಶ್(ವಕೀಲ) ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ವಿಜೃಂಭಣೆಯಿಂದ ಜರುಗಿದ ಕಾಗದನಗರ ಶ್ರೀಚೌಡೇಶ್ವರಿ ದೇವಿ ಜಾತ್ರಾಮಹೋತ್ಸವ

ಶ್ರೀಚೌಡೇಶ್ವರಿ ದೇವಾಲಯ ಪೂಜಾ ಸಮಿತಿ ಹಾಗು ಅನ್ನಪೂರ್ಣೇಶ್ವರಿ ಯುವಕರ ಸಂಘದ ಸಹಯೋಗದೊಂದಿಗೆ ಭದ್ರಾವತಿ ಕಾಗದನಗರ ಶ್ರೀಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
    ಭದ್ರಾವತಿ: ಶ್ರೀಚೌಡೇಶ್ವರಿ ದೇವಾಲಯ ಪೂಜಾ ಸಮಿತಿ ಹಾಗು ಅನ್ನಪೂರ್ಣೇಶ್ವರಿ ಯುವಕರ ಸಂಘದ ಸಹಯೋಗದೊಂದಿಗೆ ಕಾಗದನಗರ ಶ್ರೀಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
    ಮುಂಜಾನೆಯಿಂದಲೇ ಧಾರ್ಮಿಕ ಆಚರಣೆಗಳು ಜರುಗಿದವು. ಉದ್ಯಮಿ ಬಿ.ಕೆ ಶಿವಕುಮಾರ್ ಸೇರಿದಂತೆ ಸಹಸ್ರಾರು ಭಕ್ತರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು.
    ಉತ್ಸವದ ಅಂಗವಾಗಿ ರಾತ್ರಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವಮುಖಂಡ ಬಿ.ಎಸ್ ಗಣೇಶ್, ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಸಿ, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸದಸ್ಯರಾದ ವಿಜಯಮ್ಮ, ಚನ್ನಪ್ಪ, ಮಾಜಿ ಸದಸ್ಯರಾದ ಬದರಿ ನಾರಾಯಣ್, ಮಹೇಶ್, ಮೇರಿ, ಪ್ರವೀಣ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್.ಕುಮಾರ್, ಮಣಿಶೇಖರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಸದಸ್ಯರಲ್ಲದವರಿಗೆ ನಿವೇಶನಗಳ ಮಾರಾಟ : ಜ.೧೬ರಿಂದ ೪ ದಿನ ದಾಖಲೆಗಳ ಪರಿಶೀಲನೆ, ಅಹವಾಲು ಸ್ವೀಕಾರ

ಮೈಸೂರು ಕಾಗದ ಕಾರ್ಖಾನೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಅಧ್ಯಕ್ಷ ಟಿ.ಜಿ ಬಸವರಾಜಯ್ಯ

ಭದ್ರಾವತಿಯಲ್ಲಿ ಮಂಗಳವಾರ ಮೈಸೂರು ಕಾಗದ ಕಾರ್ಖಾನೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
    ಭದ್ರಾವತಿ: ಮೈಸೂರು ಕಾಗದ ಕಾರ್ಖಾನೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ೨೦೦೬ ರಿಂದ ೨೦೧೪ ರ ವರೆಗೆ ನಿವೇಶನಗಳನ್ನು ಸದಸ್ಯರಲ್ಲದವರಿಗೆ ಮಾರಾಟ ಮಾಡುವ ಮೂಲಕ ಅವ್ಯವಹಾರ ನಡೆಸಲಾಗಿದ್ದು, ಈ ಸಂಬಂಧ ವಿಚಾರಣೆ ನಡೆದು ೭೪ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಜ.೧೬ ರಿಂದ ೧೯ರವರೆಗೆ ೪ ದಿನಗಳ ಕಾಲ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಟಿ.ಜಿ ಬಸವರಾಜಯ್ಯ ತಿಳಿಸಿದರು.
     ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ೨೨ ಜೂನ್ ೧೯೮೯ರಲ್ಲಿ ಈ ಸಂಘವು ಸ್ಥಾಪನೆಯಾಗಿದ್ದು, ಪ್ರತಿ ಸದಸ್ಯ ರು. ೧೦೦೦ ಬೆಲೆಯ ಷೇರುಗಳನ್ನು ಖರೀದಿಸಿರುತ್ತಾರೆ. ಸುಮಾರು ೪೦೦ಕ್ಕೂ ಹೆಚ್ಚು ಜನ ಷೇರುಗಳನ್ನು ಪಡೆದಿದ್ದರು. ೩೮೬ ಜನರಿಗೆ ಈ ಹಿಂದೆಯೇ ನಿವೇಶನಗಳನ್ನು ಅಲಾಟ್ ಮಾಡಲಾಗಿದೆ. ಬಹಳಷ್ಟು ಜನರಿಗೆ ನಿವೇಶನಗಳನ್ನು ನೋಂದಣಿ ಮಾಡಿಕೊಡಲಾಗಿತ್ತು.  ಮೈಸೂರು ಕಾಗದ ಕಾರ್ಖಾನೆಯವರಿಂದ ಸರ್ವೇ ನಂ. ೧೪ರಲ್ಲಿ ಸುಮಾರು ೧೪೪ ಎಕರೆ ಜಾಗದಲ್ಲಿ ೨೫ ಎಕರೆ ಜಾಗ  ೧೩ ಫೆಬ್ರವರಿ ೧೯೯೨ರಲ್ಲಿ ಸಂಘವು ಕ್ರಯಕ್ಕೆ ಪಡೆದುಕೊಂಡಿದೆ. ರೂ. ೩೫,೨೦೧.೪೦ರಂತೆ ಒಟ್ಟು ರೂ. ೮,೮೦,೦೩೫ ಹಣವನ್ನು ಕಂಪನಿಗೆ ಜಮಾ ಮಾಡಲಾಗಿತ್ತು. ನಿವೇಶನ ಅಲಾಟ್ ಆದವರೂ ಸೇರಿದಂತೆ ಕೆಲವು ಸದಸ್ಯರು ಸಂಘದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು ಎಂದರು.
   ಎಂಪಿಎಂ ಬಡಾವಣಿಯಲ್ಲಿ ಒಟ್ಟು ೪೧೬ ನಿವೇಶನಗಳನ್ನು ವಿಂಗಡನೆ ಮಾಡಿದ್ದು, ಅದರಲ್ಲಿ ವಿವಿಧ ರೀತಿಯ ಅಳತೆಯ ನಿವೇಶನಗಳನ್ನು ಮಾಡಲಾಗಿದೆ.
೩೦*೫೦ರ ೩೫೮ ಮತ್ತು ೩೦*೪೦ರ ೨೪ ಹಾಗು ಅಸ್ಪಷ್ಠ ಅಳತೆಯ ೩೪ ನಿವೇಶನಗಳು ಒಟ್ಟು ೪೧೬ ನಿವೇಶನಗಳಿವೆ. ಈ ಪೈಕಿ ೩೪೨ ನಿವೇಶನಗಳು ಸದಸ್ಯರಿಗೆ ಹಂಚಿಕೆ ಆಗಿದೆ. ೭೪ ನಿವೇಶನಗಳನ್ನು ಅಂದಿನ ಸಂಘದ ಪದಾಧಿಕಾರಿಗಳು ೨೦೦೬ ರಿಂದ ೨೦೧೪ರ ವರೆಗೆ ಸದಸ್ಯರಲ್ಲದವರಿಗೆ ಮಾರಾಟ ಮಾಡುವ ಮೂಲಕ ಅವ್ಯವಹಾರ ನಡೆಸಿದ್ದಾರೆಂದು ಆರೋಪಿಸಿದರು.
    ಮಾರಾಟ ಮಾಡಿದ ಹಣವನ್ನೂ ಕೂಡಾ ಸಂಘಕ್ಕೆ ಜಮಾ ಮಾಡದೆ ಅನ್ಯಾಯ ಮಾಡಿರುವುದು ತಿಳಿದುಬಂದ ಮೇಲೆ ಸಹಾಯಕ ನಿಬಂಧಕರಿಗೆ  ೧೨ ಸೆಪ್ಟಂಬರ್ ೨೦೧೮ ರಲ್ಲಿ ದೂರು ನೀಡಲಾಗಿತ್ತು. ಅವರು ೨೭ ನವೆಂಬರ್ ೨೦೧೮ ರಲ್ಲಿ ವಿಚಾರಣಾಧಿಕಾರಿಗಳನ್ನು ನೇಮಿಸಿ ಕಲಂ ೬೪ರ ವಿಚಾರಣೆ ನಡೆಸಿದ್ದು, ಅದರಲ್ಲಿ ಸದಸ್ಯರಲ್ಲದವರಿಗೆ ನಿವೇಶನಗಳನ್ನು ಮಾರಿರುವುದು ಸಾಬೀತಾಗಿರುತ್ತದೆ. ಅಲ್ಲದೆ ಸಂಘದ ಹೆಸರಿನಲ್ಲಿ ಇನ್ನೊಂದು ಬಡಾವಣೆ ಮಾಡುವುದಾಗಿ ಕೆಲವರ ಬಳಿ ಹಣ ಪಡೆದು ಸಂಘದ ಲೆಟರ್ ಹೆಡ್ ಮತ್ತು ರಸೀದಿಗಳನ್ನು ದುರುಪಯೋಗಪಡಿಸಿಕೊಂಡಿರುವುದು ವಿಚಾರಣೆಯಲ್ಲಿ ತಿಳಿದು ಬಂದಿರುತ್ತದೆ ಎಂದರು.
    ಸಹಾಯಕ ನಿಬಂಧಕರು ಕಲಂ ೬೮ರಂತೆ ೧೦ ಅಕ್ಟೋಬರ್ ೨೦೧೯ ರಲ್ಲಿ ಆದೇಶ ಮಾಡಿ, ಸದಸ್ಯರಲ್ಲದವರಿಗೆ ಮಾರಾಟ ಮಾಡಿದ್ದ ೭೪ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡು ನಿಯಮಾನುಸಾರ ಹಂಚಿಕೆ ಮಾಡುವಂತೆ ಹಾಗು ಸಂಘದ ಲೆಟರ್ ಹೆಡ್ ಮತ್ತು ರಸೀದಿಗಳನ್ನು ದುರುಪಯೋಗಪಡಿಸಿಕೊಂಡಿರುವ ಶ್ರೀನಿವಾಸ ಮತ್ತು ಮಂಜುನಾಥ ಹಾಗೂ ಮಾಸಿಲಾಮಣಿ ಇವರುಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಹಾಗು ಸಂಘಕ್ಕೆ ನಷ್ಟವಾದ ಹಣವನ್ನು ವಸೂಲು ಮಾಡುವಂತೆ ತಿಳಿಸಿರುತ್ತಾರೆ. ಇದರಂತೆ ಸಂಘವು ಮುನ್ನಡೆದಿದ್ದು, ಮೊದಲ ಕಲಂ ೨೯ಸಿ ಯಂತೆ ಆಡಳಿತ ಮಂಡಳಿಯಲ್ಲಿದ್ದ ಆರೋಪಿತರನ್ನು ವಿಚಾರಣೆ ನಡೆಸಿ ಅನರ್ಹರ ಆದೇಶದಂತೆ ಅನರ್ಹತೆಯಾಗಿರುತ್ತಾರೆ. ಅನರ್ಹತಗೊಂಡವರಲ್ಲಿ ಒಬ್ಬರು ಮೇಲ್ಮನವಿ ಸಲ್ಲಿಸಿದರೂ ಅಲ್ಲಿಯೂ ಕೂಡಾ ಸಂಘದ ಪರವಾಗಿ ತೀರ್ಪು ಬಂದಿರುತ್ತದೆ ಎಂದರು.
    ಕಲಂ ೬೯ ಹಾಗೂ ಕಲಂ ೧೦೩ ರಂತೆ ಆಗಿನ ನಿರ್ದೇಶಕರ ಮೇಲೆ ವಸೂಲಾತಿಗಾಗಿ ದಾವೆ ಹಾಕಿದ್ದು, ಅದು ೨೯ ಜುಲೈ ೨೦೨೨ ರಿಂದ ವಿಚಾರಣೆ ನಡೆಯುತ್ತಿದೆ. ಬಹುಮುಖ್ಯವಾಗಿ ೭೪ ನಿವೇಶನಗಳನ್ನು ಮಾರಾಟ ಮಾಡಿದ ಹಣದಲ್ಲಿ ಶೇ.೯೦ರಷ್ಟು ಹಣ ಅಂದಿನ ಆಡಳಿತ ಮಂಡಳಿಯವರು ಸಂಘಕ್ಕೆ ಜಮಾ ಮಾಡಿಲ್ಲ. ಅದರ ಅಂದಿನ ಮೌಲ್ಯವೇ ಸುಮಾರು ೭೪ ಲಕ್ಷ ರೂ.ಗಳಾಗಿದ್ದು, ಪ್ರಸ್ತುತ ಅದರ ಮೌಲ್ಯ ಸುಮಾರು ರೂ. ೧೫ ಕೋಟಿ ಎಂದು ಅಂದಾಜಿಸಲಾಗಿದೆ ಎಂದರು.
    ೭೪ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶದವಿದ್ದಾಗ್ಯೂ ಆ ನಿವೇಶನಗಳನ್ನು ಆಡಳಿತ ಮಂಡಳಿ ಮತ್ತು ಸರ್ವ ಸದಸ್ಯರ ಸಭೆಯಲ್ಲಿ ತೀರ್ಮಾನದಂತೆ ಕೊಂಡುಕೊಂಡವರನ್ನು ಒಮ್ಮೆ ಕರೆಸಿ ಅವರ ದಾಖಲೆಗಳನ್ನು ಪರಿಶೀಲಿಸಿ ಮತ್ತು ಅವರ ಅಹವಾಲನ್ನು ಕೇಳಬೇಕೆಂದು ಸಂಘದಲ್ಲಿ ಒಂದು ಉಪಸಮಿತಿಯನ್ನು ನೇಮಕ ಮಾಡಿದ್ದು, ಆ ಸಮಿತಿಯವರಾದ ಹಾಲಿ ನಿರ್ದೇಶಕರೂ ಆಗಿರುವ ಎಸ್.ಆರ್ ಸೋಮಶೇಖರ್, ಪರಮಶಿವ, ರಂಗಸ್ವಾಮಿ,
ಎಚ್. ಆನಂದಮೂರ್ತಿ, ಅಭಯ ಕುಮಾರ್ ಖಡ್ಡು ಮತ್ತು ಲೋಕಾನಂದ ರಾವ್ ಇವರುಗಳು  ೧೬ ಜನವರಿ ೨೦೨೪ ರಿಂದ ೧೯ರ ವರೆಗೆ ೪ ದಿನಗಳ ಕಾಲ ಬೆಳಗ್ಗೆ ೧೦.೩೦ ರಿಂದ ೧೨.೩೦ರ ವರೆಗೆ ಹಾಜರಿದ್ದು ಬಂದವರ ದಾಖಲೆಗಳನ್ನು ಮತ್ತು ಅಹವಾಲನ್ನು ದಾಖಲಿಸಿಟ್ಟುಕೊಳ್ಳುವರು ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ವಿ. ಗೋವಿಂದಪ್ಪ, ಕಾರ್ಯದರ್ಶಿ ಎಚ್. ವೀರಭದ್ರಪ್ಪ, ಎಸ್.ಆರ್ ಸೋಮಶೇಖರ್, ಪರಮಶಿವ, ಎಚ್. ಆನಂದಮೂರ್ತಿ, ಅಭಯ ಕುಮಾರ್, ಸಾರಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.