ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಭೆಯಲ್ಲಿ ಹಿರಿಯ ಮುಖಂಡ ಜಿ. ಮೂರ್ತಿ
ಪ್ರೊ. ಬಿ. ಕೃಷ್ಣಪ್ಪ ಅವರು ಸಂಘಟಿಸಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಇದೀಗ ೫೦ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದ್ದು, ಶುಕ್ರವಾರ ಭದ್ರಾವತಿ ನಗರದಲ್ಲಿ ಚಾಲನೆ ನೀಡಲಾಯಿತು.
ಭದ್ರಾವತಿ : ಪ್ರೊ. ಬಿ. ಕೃಷ್ಣಪ್ಪ ಅವರು ಸಂಘಟಿಸಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಇದೀಗ ೫೦ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದ್ದು, ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು.
ಇದಕ್ಕೂ ಮೊದಲು ನಗರದ ರಂಗಪ್ಪ ವೃತ್ತ, ಜೈಭೀಮ್ ನಗರದಿಂದ ಕಲಾ ತಂಡಗಳೊಂದಿಗೆ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದವರೆಗೂ ಮೆರವಣಿಗೆ ನಡೆಸಲಾಯಿತು. ನಂತರ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಪ್ರೊ. ಬಿ. ಕೃಷ್ಣಪ್ಪನವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಲಾಯಿತು. ಮೆರವಣಿಗೆಯಲ್ಲಿ ಸಮಿತಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ನಂತರ ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಭೆಗೆ ಚಾಲನೆ ನೀಡಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ಹಿರಿಯ ಮುಖಂಡ ಜಿ.ಮೂರ್ತಿ, ಬಿ. ಕೃಷ್ಣಪ್ಪ ಅವರು ಸದಾ ಕಾಲ ದಲಿತರ ಪರವಾದ ಚಿಂತನೆಗಳನ್ನು ಹೊಂದುವ ಮೂಲಕ ಅವರ ಏಳಿಗೆಗಾಗಿ ಶ್ರಮಿಸಿದ ಧೀಮಂತ ವ್ಯಕ್ತಿ. ತಮ್ಮ ಸ್ವಂತ ಹಣದಲ್ಲಿಯೇ ಸಂಘಟನೆ ಕಟ್ಟುವ ಜೊತೆಗೆ ನಗರದ ವಿಐಎಸ್‌ಎಲ್ ಹಾಗು ಎಂಪಿಎಂ ಈ ಎರಡು ಅವಳಿ ಕಾರ್ಖಾನೆಗಳ ಕಾರ್ಮಿಕರು ನೀಡಿದ ತಲಾ ಎರಡು ರುಪಾಯಿ ಕೆಂಪು ನೋಟಿನ ಹಣದಲ್ಲಿ ಇಡೀ ರಾಜ್ಯಾದ್ಯಂತ ಸಂಘಟನೆ ವಿಸ್ತರಿಸಿದರು. ಆ ಮೂಲಕ ಹಲವು ಹೋರಾಟಗಳಲ್ಲಿ ಯಶಸ್ಸು ಸಾಧಿಸಿ ಶೋಷಿತರಿಗೆ ನ್ಯಾಯ ಒದಗಿಸಿಕೊಟ್ಟರು ಎಂದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಆಶಯ ಹಾಗು ಸಂವಿಧಾನದ ಆಧಾರದಲ್ಲಿ ದಲಿತ ಸಂಘರ್ಷ ಸಮಿತಿಯನ್ನು ಸ್ಥಾಪಿಸಲಾಗಿದೆ. ಇಂಥದೊಂದು ಸಂಘಟನೆವ ೫೦ ವರ್ಷಗಳನ್ನು ಪೂರೈಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಪ್ರೊ. ಬಿ. ಕೃಷ್ಣಪ್ಪ ಅವರು ಸಂಘಟಿಸಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಇದೀಗ ೫೦ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದ್ದು, ಶುಕ್ರವಾರ ಭದ್ರಾವತಿ ನಗರದಲ್ಲಿ ಮೆರವಣಿಗೆ ನಡೆಸಲಾಯಿತು.
ಅನೇಕ ಚಳವಳಿಗಳು ಆರಂಭಗೊಂಡು ಕೆಲಕಾಲದಲ್ಲಿಯೇ ನಶಿಸಿವೆ. ಆದರೆ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರ ನಡುವೆ ಹುಟ್ಟಿದ ಚಳವಳಿಯಾಗಿದ್ದರಿಂದ ಇಂದಿಗೂ ಜೀವಂತವಾಗಿದೆ. ಸಾಮಾಜಿಕ ಮಾಧ್ಯಮಗಳಿಲ್ಲದ ಕಾಲದಲ್ಲಿಯೂ ಸದೃಢವಾಗಿ ಬಲಗೊಂಡ ಸಂಘಟನೆ ದಲಿತ ಸಂಘರ್ಷ ಸಮಿತಿ ಎಂದರು.
ಜಿಲ್ಲಾ ಸಂಚಾಲಕ ಚಿನ್ನಯ್ಯ ಮಾತನಾಡಿ, ದಲಿತ ಸಂಘರ್ಷ ಸಮಿತಿ ಅನೇಕ ಕಾಯ್ದೆಗಳು ರೂಪಿಸಲು ಕಾರಣವಾಗಿದೆ. ಅನೇಕ ಬಡವರ ಜಮೀನುಗಳನ್ನು ಉಳಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಪ್ರಸ್ತುತ ದಲಿತರು ಅನೇಕ ಸೌಲಭ್ಯಗಳನ್ನು ಪಡೆಯುವಲ್ಲಿ ಕದಸಂಸ ಪಾತ್ರ ಪ್ರಮುಖವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಸದಸ್ಯ ಚನ್ನಪ್ಪ, ಮುಖಂಡರುಗಳಾದ ಈಶ್ವರಪ್ಪ, ಪ್ರಸನ್ನಕುಮಾರ್, ರಂಗನಾಥ್, ಕಾಣಿಕ್ ರಾಜ್, ಎಸ್. ಉಮಾ, ಶಾಂತಿ, ತಿಪ್ಪೇಸ್ವಾಮಿ, ಪರಮೇಶ್ವರಪ್ಪ, ಗಂಗಾಧರ್, ವಿ. ವಿನೋದ್, ಜಿಂಕ್‌ಲೈನ್ ಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.