ಪೊಲೀಸ್ ಇಲಾಖೆ ಕರ್ತವ್ಯ ನಿರ್ವಹಣೆಗೆ ಸಹಕಾರಿಯಾಗುವಂತೆ ಭದ್ರಾವತಿ ತಾಲೂಕಿನ ಎಲ್ಲಾ ಪೊಲೀಸ್ ಠಾಣೆಗಳಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಸ್ವಂತ ಹಣದಲ್ಲಿ ಉಚಿತವಾಗಿ ಕಂಪ್ಯೂಟರ್‌ಗಳನ್ನು ವಿತರಿಸಿದ್ದಾರೆ.
ಭದ್ರಾವತಿ : ಪೊಲೀಸ್ ಇಲಾಖೆ ಕರ್ತವ್ಯ ನಿರ್ವಹಣೆಗೆ ಸಹಕಾರಿಯಾಗುವಂತೆ ತಾಲೂಕಿನ ಎಲ್ಲಾ ಪೊಲೀಸ್ ಠಾಣೆಗಳಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಸ್ವಂತ ಹಣದಲ್ಲಿ ಉಚಿತವಾಗಿ ಕಂಪ್ಯೂಟರ್‌ಗಳನ್ನು ವಿತರಿಸಿದ್ದಾರೆ.
ತಾಲೂಕಿನ ಪೊಲೀಸ್ ಉಪವಿಭಾಗ ವ್ಯಾಪ್ತಿಯಲ್ಲಿ ನ್ಯೂಟೌನ್, ಹಳೇನಗರ, ಹೊಸಮನೆ ಶಿವಾಜಿ ಸರ್ಕಲ್, ಪೇಪರ್ ಟೌನ್, ಗ್ರಾಮಾಂತರ ಹಾಗು ಬಿ.ಆರ್.ಪಿ(ಗ್ರಾಮಾಂತರ ಉಪ ಠಾಣೆ) ಮತ್ತು ಸಂಚಾರಿ ಹಾಗೂ ಹೊಳೆಹೊನ್ನೂರು ಪೊಲೀಸ್ ಠಾಣೆಗಳಿದ್ದು, ಅಲ್ಲದೆ ಪೊಲೀಸ್ ಉಪಾಧೀಕ್ಷಕರ ಹಾಗು ನಗರ ಮತ್ತು ಗ್ರಾಮಾಂತರ ವೃತ್ತ ನಿರೀಕ್ಷಕರ ಕಛೇರಿಗಳಿವೆ. ಎಲ್ಲಾ ಪೊಲೀಸ್ ಠಾಣೆಗಳಿಗೂ ಸಹ ಉಚಿತವಾಗಿ ಕಂಪ್ಯೂಟರ್‌ಗಳನ್ನು ಭಾನುವಾರ ಶಾಸಕರ ಗೃಹ ಕಛೇರಿಯಲ್ಲಿ ವಿತರಿಸಲಾಯಿತು.
ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು, ನಗರ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್, ಪೇಪರ್ ಟೌನ್ ಠಾಣಾ ನಿರೀಕ್ಷಕಿ ನಾಗಮ್ಮ, ಹೊಸಮನೆ ಶಿವಾಜಿ ಸರ್ಕಲ್ ಠಾಣಾ ಸಹಾಯಕ ನಿರೀಕ್ಷಕ ಕೃಷ್ಣಕುಮಾರ್ ಮಾನೆ, ನ್ಯೂಟೌನ್ ಪೊಲೀಸ್ ಠಾಣಾ ಸಹಾಯಕ ನಿರೀಕ್ಷಕ ರಮೇಶ್, ಸಂಚಾರಿ ಠಾಣಾ ಸಹಾಯಕ ನಿರೀಕ್ಷಕಿ ಶಾಂತಲ, ಬಗರ್ ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಎಸ್. ಮಣಿಶೇಖರ್, ಮುಖಂಡರಾದ ಬಿ.ಎಸ್ ಗಣೇಶ್, ಬಿ.ಎಸ್ ಬಸವೇಶ್ ಹಾಗು ಎಲ್ಲಾ ಠಾಣೆಗಳ ಠಾಣಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.