ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ನ್ಯೂಟೌನ್ ವಿಐಎಸ್‌ಎಲ್ ಭದ್ರಾ ಅತಿಥಿ ಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗಾಂಧಿ ಜಯಂತಿ ಅಂಗವಾಗಿ ತಾಲೂಕಿನ ಶಾಲಾ ಮಕ್ಕಳಿಗೆ ಮತ್ತು ಕಾರ್ಖಾನೆಯ ಉದ್ಯೋಗಿಗಳು ಹಾಗು ಕುಟುಂಬ ವರ್ಗದವರಿಗೆ ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಭದ್ರಾವತಿ: ಭಾರತೀಯ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ಬಿಜೆಪಿ ತಾಲೂಕು ಮಂಡಲ, ಲಯನ್ಸ್ ಕ್ಲಬ್ ಶುಗರ್ ಟೌನ್, ಬಿಪಿಎಲ್ ಸಂಘ ಸೇರಿದಂತೆ ವಿವಿಧೆಡೆ ಬುಧವಾರ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಆಚರಿಸಲಾಯಿತು.
ನ್ಯೂಟೌನ್ ವಿಐಎಸ್‌ಎಲ್ ಭದ್ರಾ ಅತಿಥಿ ಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿಜೀಯವರ ಭಾವಚಿತ್ರಕ್ಕೆ ಪುಷ್ಪನಮನ, ನಂತರ ವಿಶೇಷವಾಗಿ ಈ ಬಾರಿ ಮಕ್ಕಳಿಂದ ಧರ್ಮ ಗ್ರಂಥಗಳಾದ ಭಗವದ್ಗೀತೆ, ಕುರಾನ್ ಮತ್ತು ಬೈಬಲ್ ಸಂದೇಶ ವಾಚನ ನಡೆಯಿತು. ಗಾಂಧಿ ಜಯಂತಿ ಅಂಗವಾಗಿ ತಾಲೂಕಿನ ಶಾಲಾ ಮಕ್ಕಳಿಗೆ ಮತ್ತು ಕಾರ್ಖಾನೆಯ ಉದ್ಯೋಗಿಗಳು ಹಾಗು ಕುಟುಂಬ ವರ್ಗದವರಿಗೆ ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ಅಧಿಕಾರಿಗಳ ಸಂಘದ ಅಧ್ಯಕ್ಷ ಪಾರ್ಥಸಾರಥಿ ಮಿಶ್ರಾ, ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್ ಮತ್ತು ರವಿಚಂದ್ರನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳಾದ ಎಲ್. ಪ್ರವೀಣ್‌ಕುಮಾರ್, ಮೋಹನ್‌ರಾಜ್ ಶೆಟ್ಟಿ, ಯೋಗೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾರ್ಮಿಕ ಸಂಘ ಹಾಗು ಅಧಿಕಾರಿಗಳ ಸಂಘದ ಪದಾಧಿಕಾರಿಗಳು, ನಿರ್ದೇಶಕರು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಮತ್ತು ಕುಟುಂಬ ವರ್ಗದವರು ಪಾಲ್ಗೊಂಡಿದ್ದರು.
ಬಿಜೆಪಿ ಮಂಡಲದಿಂದ ಲಾಲ್ ಬಹದ್ದೂರ್ ಶಾಸ್ತ್ರಿ-ಗಾಂಧಿ ಜಯಂತಿ :
ಮಂಡಲದ ಅಧ್ಯಕ್ಷ ಜಿ. ಧರ್ಮಪ್ರಸಾದ್ ನೇತೃತ್ವದಲ್ಲಿ ಗಾಂಧಿಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದ ಪ್ರಯುಕ್ತ ಹಾಗೂ ಸೇವಾ ಪಾಕ್ಷಿಕ ಅಂಗವಾಗಿ ನಗರದ ತರೀಕೆರೆ ರಸ್ತೆಯ ಮಹಾತ್ಮ ಗಾಂಧಿ ವೃತ್ತದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಖಾದಿ ಗ್ರಾಮೋದ್ಯೋಗ ಭವನದಲ್ಲಿ ಖಾದಿ ಖರೀದಿಸಲಾಯಿತು.
ಪ್ರಧಾನ ಕಾರ್ಯದರ್ಶಿಗಳಾ ಚನ್ನೇಶ್ ಮತ್ತು ಮೊಸರಳ್ಳಿ ಅಣ್ಣಪ್ಪ, ಮುಖಂಡರಾದ ಮಂಗೋಟೆ ರುದ್ರೇಶ್, ಎಚ್. ತೀರ್ಥಯ್ಯ, ರಾಜಶೇಖರ್ ಉಪ್ಪಾರ, ಧನುಷ್ ಬೋಸ್ಲೆ, ಜಿ. ಆನಂದ್‌ಕುಮಾರ್, ಸರಸ್ವತಿ, ರವಿಕುಮಾರ್, ರಘುರಾವ್, ನಿರಂಜನ್ ಗೌಡ, ಕಾ.ರಾ ನಾಗರಾಜ್, ಸುಲೋಚನಾ ಪ್ರಕಾಶ್, ಮಂಜುಳಾ, ಡಾ. ಜಿ.ಎಂ ನಟರಾಜ್, ಬಸವರಾಜ್ ಆಚಾರ್ ಸೇರಿದಂತೆ ಮಂಡಲದ ಪದಾಧಿಕಾರಿಗಳು, ಮೋರ್ಚಾ, ಮಹಾಶಕ್ತಿ ಕೇಂದ್ರದ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೫ನೇ ಜನ್ಮದಿನ ಹಾಗು ಲಾಲ್ ಬಹದ್ದೂರ್ ಶಾಸ್ತ್ರಿಯವರ ೧೨೦ನೇ ಜನ್ಮದಿನ ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಶುಗರ್ ಟೌನ್ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಅಂತರಾಷ್ಟ್ರೀಯ ಹಿರಿಯ ನಾಗರೀಕ ದಿನಾಚರಣೆ ಅಂಗವಾಗಿ ಕ್ಲಬ್ ಮಹಾಪೋಷಕರಾದ ಡಾ. ಟಿ. ನರೇಂದ್ರ ಭಟ್, ಕೆ. ಅನಂತ ಕೃಷ್ಣನಾಯಕ್ ಮತ್ತು ಮದಿಯಲಗನ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಲಯನ್ಸ್ ಕ್ಲಬ್ ಶುಗರ್ ಟೌನ್‌ನಲ್ಲಿ ಗಾಂಧಿ ಜಯಂತಿ :
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೫ನೇ ಜನ್ಮದಿನ ಹಾಗು ಲಾಲ್ ಬಹದ್ದೂರ್ ಶಾಸ್ತ್ರಿಯವರ ೧೨೦ನೇ ಜನ್ಮದಿನ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಶುಗರ್ ಟೌನ್ ಸಮುದಾಯ ಭವನದಲ್ಲಿ ಆಚರಿಸಲಾಯಿತು.
ಕ್ಲಬ್ ಆವರಣದಲ್ಲಿರುವ ಕೋಟಾ ಶಿವರಾಮ ಕಾರಂತ ವನದಲ್ಲಿ ಶ್ರಮದಾನ ನಡೆಸಲಾಯಿತು. ಅಂತರಾಷ್ಟ್ರೀಯ ಹಿರಿಯ ನಾಗರೀಕ ದಿನಾಚರಣೆ ಅಂಗವಾಗಿ ಕ್ಲಬ್ ಮಹಾಪೋಷಕರಾದ ಡಾ. ಟಿ. ನರೇಂದ್ರ ಭಟ್, ಕೆ. ಅನಂತ ಕೃಷ್ಣನಾಯಕ್ ಮತ್ತು ಮದಿಯಲಗನ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕ್ಲಬ್ ಅಧ್ಯಕ್ಷ ಆರ್. ಉಮೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮ್ಮೇಗೌಡ, ಎಂ.ಸಿ ಯೋಗೀಶ್, ಡಾ. ಸಿ.ಆರ್ ಗುರುರಾಜ್, ಲಿಂಗೋಜೀರಾವ್, ಮಂಜುನಾಥ್, ಕೃಷ್ಣ ,ನಾಗರಾಜ್ ಸೋಲಾರ್, ಮಧುಸೂದನ್ ಮತ್ತು ವಿಜಯ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು.
ಬಿಪಿಎಲ್ ಸಂಘದಿಂದ ಗಾಂಧಿ ಜಯಂತಿ :
ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು.
ಸಂಘದ ಅಧ್ಯಕ್ಷ ಬಿ. ಜಗದೀಶ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮಕ್ಳಳು, ಸಂಘದ ಪದಾಧಿಕಾರಿಗಳು, ನಿರ್ದೇಶಕರು ಹಾಗು ಸ್ಥಳೀಯರು ಪಾಲ್ಗೊಂಡಿದ್ದರು.