![](https://blogger.googleusercontent.com/img/a/AVvXsEh0MDLHzYNxvF4nNCassqLfNiscnjyhcy71zLBXwNB0XfE5obXDFwL9aqViuZf3v-Aht7rRJxQ5pcQxiWentrZ2ctZUZp2iBFnip4Doo8RXr9qDm_RwewXdIZTO-9LqqxpLqMbq6H8wab25xHvzdnDQZjg3rrOgf_TOnDCZEYnMsmX7FgJEK9TV0EmUgWR0=w400-h300-rw)
ಭದ್ರಾವತಿ ಹಳೇನಗರದ ಕನಕಮಂಪ ಮೈದಾನದಲ್ಲಿ ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕುಸ್ತಿ ಪಂದ್ಯಾವಳಿ ಉದ್ಘಾಟಿಸಿ
ಭದ್ರಾವತಿ: ಯಾವುದಾದರೂ ಗುರಿ ಹೊಂದಿ ನಿರಂತರ ತೊಡಗಿದಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ಸ್ಥಾನ ಪಡೆಯಲು ಸಾಧ್ಯ. ಕುಸ್ತಿಪಟುಗಳು ವರ್ಷದ ಎಲ್ಲಾ ದಿನ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು. ಯಾರು ಬೇಕಾದರೂ ನಿರಂತರ ಅಭ್ಯಾಸದಲ್ಲಿ ತೊಡಗಿಸಿಕೊಂಡಾಗ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಹಿರಿಯ ಕುಸ್ತಿಪಟು ಮಹೇಶ್ವರಪ್ಪ ಹೇಳಿದರು.
ಅವರು ಸೋಮವಾರ ಹಳೇನಗರದ ಕನಕಮಂಪ ಮೈದಾನದಲ್ಲಿ ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕುಸ್ತಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
ಕುಸ್ತಿಪಟುಗಳು ದೈಹಿಕವಾಗಿ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಜೊತೆಗೆ ಏಕಾಗ್ರತೆ, ಸಾಮರಸ್ಯ ಬೆಳೆಸಿಕೊಳ್ಳಬಹುದಾಗಿದೆ. ಕುಸ್ತಿ ಕ್ರೀಡೆಗೆ ಹೆಚ್ಚಿನ ಮಹತ್ವವಿದ್ದು, ಅಲ್ಲದೆ ಕುಸ್ತಿಪಟುಗಳಿಗೆ ಸಮಾಜದಲ್ಲಿ ಒಳ್ಳೆಯ ಸ್ಥಾನಮಾನವಿದೆ ಎಂದರು.
ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ದಸರಾ ನಾಡಹಬ್ಬ ಕ್ರೀಡಾ ಸಮಿತಿ ಅಧ್ಯಕ್ಷ ಚನ್ನಪ್ಪ, ನಾಡಹಬ್ಬ ದಸರಾ ಆಚಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಪೌರ ಸೇವಾ ಕಾರ್ಮಿಕರ ಸೇವಾ ಸಂಘದ ಅಧ್ಯಕ್ಷ ಚೇತನ್ ಕುಮಾರ್, ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್ ಸೇರಿದಂತೆ ಇನ್ನಿತರರು. ಉಪಸ್ಥಿತರಿದ್ದರು.
ನಗರದ ಹಿರಿಯ ಕುಸ್ತಿ ಪಟುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ ಸ್ವಾಗತಿಸಿದರು.