![](https://blogger.googleusercontent.com/img/a/AVvXsEhmwsNzWQnCOdfDq_9p2s-8Jt8iDZbYNrunANZevxcb_aiBmNZVhqdd6yaS_0tbjz7QT4WsPhTAiXVNhMtWKYEx3ixugCEFjp7wGcWjI7-ft-AoQgclpt__4A6NHnyCyxRATFTPA5OeNr4OLtsKbisTSl0q7-kcypPVxUBjLhX0UvCS6S7CMEFGsDkZAbb0=w400-h266-rw)
ಭದ್ರಾವತಿ : ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಉತ್ಸವ ಮೆರವಣೆಗೆಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಶನಿವಾರ ಚಾಲನೆ ನೀಡಿದರು.
ನಗರದ ಬಿ.ಎಚ್ ರಸ್ತೆ, ಲೋಯರ್ ಹುತ್ತಾ, ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಸುಮಾರು ೪ ಗಂಟೆ ಸಮಯದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿ ಹಾಗು ನಂದಿ ಧ್ವಜಕ್ಕೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ನಗರಸಭೆ ಅಧ್ಯಕ್ಷ ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್, ಪೊಲೀಸ್ ನಗರ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಉತ್ಸವ ಮೆರವಣೆಗೆಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಶನಿವಾರ ಚಾಲನೆ ನೀಡಿದರು. ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು, ಶ್ರೀ ವಿವೇಕಾನಂದ ಸ್ವಾಮಿ ವಿದ್ಯಾಸಂಸ್ಥೆ, ಶ್ರೀ ಸತ್ಯ ಸಾಯಿಬಾಬಾ ಸಮಗ್ರ ಶಿಕ್ಷಣ ಸಂಸ್ಥೆ ಸೇರಿದಂತೆ ವಿವಿಧ ಶಾಲೆಗಳ ಸ್ಥಬ್ದ ಚಿತ್ರಗಳು, ಹಳೇನಗರದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ, ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ, ಶ್ರೀ ಆಂಜನೇಯ ಸ್ವಾಮಿ, ಶ್ರೀ ರಾಮೇಶ್ವರಸ್ವಾಮಿ, ಶ್ರೀ ಹಳದಮ್ಮ ದೇವಿ, ಶ್ರೀ ಕಾಳಿಕಾಂಬ ದೇವಿ, ಶ್ರೀ ಕೋಟೆ ಬಸವಣ್ಣ ಸ್ವಾಮಿ, ಭೋವಿ ಕಾಲೋನಿ ಶ್ರೀ ಪಿಳ್ಳಗಮ್ಮ ದೇವಿ, ಶ್ರೀ ಸವದತ್ತಿ ಯಲ್ಲಮ್ಮ, ಶ್ರೀ ಶೆಟ್ಟಮ್ಮದೇವಿ, ಶ್ರೀ ಲಕ್ಷ್ಮಮ್ಮ ದೇವಿ, ಶ್ರೀ ಸಿಗಂದೂರು ಚೌಡೇಶ್ವರಿ, ಶ್ರೀ ಕಾಲರಮ್ಮ ದೇವಿ, ಕುಕ್ಕುವಾಡೇಶ್ವರಿ ದೇವಿ, ಶ್ರೀ ಕೋಟೆ ಮಾರಿಯಮ್ಮ ದೇವಿ, ದಾನವಾಡಮ್ಮ, ತಮ್ಮಣ್ಣ ಕಾಲೋನಿ ಶ್ರೀ ಚೌಡೇಶ್ವರಿ ದೇವಿ, ಸಂತೇ ಮೈದಾನದ ಶ್ರೀ ಸುಂಕಲಮ್ಮ ದೇವಿ, ಜನ್ನಾಪುರ ಪ್ಲೇಗ್ ಮಾರಿಯಮ್ಮ, ಭೂತನಗುಡಿ ಶ್ರೀಶನೇಶ್ವರ ಸ್ವಾಮಿ, ವಿಜಯನಗರ ಶ್ರೀ ಶನಿದೇವರು, ಬಿ.ಎಚ್ ರಸ್ತೆ ಶ್ರೀ ವಿಶ್ವಸ್ವರೂಪಿಣಿ ಮಾರಿಯಮ್ಮ ದೇವಿ, ತಮ್ಮಣ್ಣ ಕಾಲೋನಿ ಮರದಮ್ಮ ದೇವಿ, ಚಾಮೇಗೌಡ ಏರಿಯಾ, ಮೀನುಗಾರರ ಬೀದಿ, ಜನ್ನಾಪುರ ಶ್ರೀ ಮಾರಿಯಮ್ಮ ದೇವಿ, ಚನ್ನಗಿರಿ ರಸ್ತೆ ಶ್ರೀ ಮಾರಿಕಾಂಬ ದೇವಿ, ನ್ಯೂಟೌನ್ ಶ್ರೀ ಮಾತಂಗಮ್ಮ ದೇವಿ, ಹಳೇನಗರ ಉಪ್ಪಾರಕೇರಿ ಶ್ರೀ ಅಂತರಘಟ್ಟಮ್ಮ, ಗೌಳಿಗರ ಬೀದಿ ಶ್ರೀ ರಾಮೇಶ್ವರ ಸ್ವಾಮಿ, ದೊಣಬಘಟ್ಟ ರಸ್ತೆ ಶ್ರೀ ರಂಗನಾಥ ಸ್ವಾಮಿ, ಶಿವರಾಮನಗರ ಶ್ರೀ ಯಲ್ಲಮ್ಮ ದೇವಿ, ಗೌಳಿಗರ ಬೀದಿ ಶ್ರೀ ಕರುಮಾರಿಯಮ್ಮ ದೇವಿ, ಬಸವೇಶ್ವರ ವೃತ್ತದ ಶ್ರೀ ಕುರುಪೇಶ್ವರಿ ದೇವಿ, ಶ್ರೀ ಕುಕ್ಕುವಾಡೇಶ್ವರಿ ದೇವಿ, ಹೊಸಮನೆ ಶ್ರೀ ಕೆರೆಕೋಡಮ್ಮ ದೇವಿ, ರಂಗಪ್ಪ ವೃತ್ತ ಗುಳ್ಳಮ್ಮ ದೇವಿ, ಅಂಬೇಡ್ಕರ್ ನಗರ(ಕಂಚಿನ ಬಾಗಿಲು ವೃತ್ತ) ದುರ್ಗಾಂಬಾ ದೇವಿ, ದುರ್ಗಿನಗರದ ಶ್ರೀ ದುರ್ಗಮ್ಮ ದೇವಿ, ಜೈಭೀಮ್ ನಗರದ ಶ್ರೀ ದೊಡ್ಡಮ್ಮ ದೇವಿ, ಕಂಚಿನಬಾಗಿಲು ಮತ್ತು ಬಿ.ಎಚ್ ರಸ್ತೆ ಶ್ರೀ ಚೌಡೇಶ್ವರಿ ದೇವಿ ಹಾಗು ತರೀಕೆರೆ ರಸ್ತೆಯ ಶ್ರೀ ಧರ್ಮಶಾಸ್ತ ಅಯ್ಯಪ್ಪಸ್ವಾಮಿ ಸೇರಿದಂತೆ ಸುಮಾರು ೫೦ ದೇವಸ್ಥಾನಗಳ ಅಲಂಕೃತಗೊಂಡ ದೇವಾನುದೇವತೆಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಕಣ್ಮನ ಸೆಳೆದವು.
ನಾಡಹಬ್ಬ ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಚುನಾಯಿತ ಹಾಗು ನಾಮನಿರ್ದೇಶಿತ ನಗರಸಭೆ ಸದಸ್ಯರು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರ ಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಪೌರಕಾರ್ಮಿಕರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು, ವಿವಿಧ ದೇವಸ್ಥಾನಗಳ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಅರ್ಚಕರು, ಗಣ್ಯರು ಸೇರಿದಂತೆ ಸ್ಥಳೀಯರು ಉತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಭದ್ರಾವತಿ ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಉತ್ಸವ ಮೆರವಣೆಗೆಯಲ್ಲಿ ನಗರದ ವಿವಿಧ ದೇವಸ್ಥಾನಗಳ ಅಲಂಕೃತಗೊಂಡ ದೇವಾನು ದೇವತೆಗಳು ಪಾಲ್ಗೊಂಡಿದ್ದವು.