ಭದ್ರಾವತಿ : ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ ಹಾಗು ಲಿಂಗೈಕ್ಯ ಶ್ರೀ ರಾಚೋಟಿ ಶಿವಾಚಾರ್ಯ ಸ್ವಾಮಿಗಳವರ ೫೭ನೇ ವರ್ಷದ ಪುಣ್ಯ ಸ್ಮರಣೋತ್ಸವ ಧರ್ಮ ಸಮಾರಂಭ ಅ.೩೦ರಂದು ನಡೆಯಲಿದೆ.
ಅಂದು ಬೆಳಿಗ್ಗೆ ೬ ಗಂಟೆಗೆ ಗಂಗೆ ಪೂಜೆಯೊಂದಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ, ಶ್ರೀ ವೀರಭದ್ರಸ್ವಾಮಿಗೆ ಮತ್ತು ಶ್ರೀ ಶಕ್ತಿಮಾತೆ ಚೌಡೇಶ್ವರಿ ದೇವಿಗೆ ಮಹಾರುದ್ರಾಭಿಷೇಕ, ಕುಂಕುಮಾರ್ಚನೆ, ಬಿಲ್ವಾರ್ಚನೆ, ಅಷ್ಟೋತ್ತರ, ವಿಶೇಷ ಅಲಂಕಾರ, ಮಹಾಮಂಗಳಾರತಿ, ತೀರ್ಥ-ಪ್ರಸಾದ ವಿನಿಯೋಗ ಮತ್ತು ೮ ಗಂಟೆಗೆ ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಅಷ್ಟಲಿಂಗ ಮಹಾಪೂಜೆ ಹಾಗು ೧೦ ಗಂಟೆಗೆ ಅಂಗೈಕ್ಯ ಶ್ರೀಗಳವರ ಪುಣ್ಯ ಸ್ಮರಣೋತ್ಸವ ಧರ್ಮ ಸಮಾರಂಭ ನಡೆಯಲಿದೆ.
ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಶ್ರೀ ೧೦೦೮ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸಲಿದ್ದು, ಖಾಸಾ ಶಾಖಾಮಠ, ಎಡೆಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗು ಬಿಳಿಕಿ ಹಿರೇಮಠ ಗೌರವಾಧ್ಯಕ್ಷ ಟಿ. ವಿ. ಈಶ್ವರಯ್ಯ ಉಪಸ್ಥಿತರುವರು.
ಸಂಸದ ಬಿ.ವೈ ರಾಘವೇಂದ್ರ ಸಮಾರಂಭ ಉದ್ಘಾಟಿಸಲಿದ್ದು, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ. ಕೆ. ಸಂಗಮೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ಹೊನ್ನಾಳಿ ಹಿರೇಕಲ್ಮಠದ ಶ್ರೀ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಹುಣಸಘಟ್ಟ, ಹಾಲಸ್ವಾಮಿಮಠದ ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ, ರಟ್ಟಿಹಳ್ಳಿ ಕಬ್ಬಿಣಕಂಥಿಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಮಾದಿಹಳ್ಳಿ ಹಿರೇಮಠದ ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ತೊಗರ್ಶಿ ಪಂಚವಣ್ಣಿಗಿಮಠದ ಶ್ರೀ ಚನ್ನವೀರ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಬೀರೂರು ಬಾಳೆಹೊನ್ನೂರು ಖಾಸಾ ಶಾಖಾಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಕೆ. ಬಿದಿರೆ ದೊಡ್ಡಮಠದ ಶ್ರೀ ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ, ಮೆಟಿಕುರ್ಕೆಮಠದ ಶ್ರೀ ಶಶಿಶೇಖರ ಸಿದ್ದಬಸವ ಸ್ವಾಮೀಜಿ, ಸಂಸ್ಥಾನ ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಹಾರನಹಳ್ಳಿ ರಾಮಲಿಂಗೇಶ್ವರಮಠದ ಶ್ರೀ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ತಾವರೆಕೆರೆ ಶಿಲಾಮಠ, ಶ್ರೀ ಡಾ. ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಕುರವತ್ತಿ ಹಿರೇಮಠದ ಶ್ರೀ ಸಿದ್ಧನಂದೀಶ್ವರ ಶಿವಾಚಾರ್ಯ ಸ್ವಾಮೀಜಿ, ದಿಂಡದಹಳ್ಳಿ ಧರ್ಮಕ್ಷೇತ್ರ ಮಠದ ಶ್ರೀ ಪಶುಪತಿ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ನಂದಿಪುರ ನಂದಿಪುರಮಠದ ಶ್ರೀ ನಂದೀಶ್ವರ ಶಿವಾಚಾರ್ಯ ಸ್ವಾಮೀಜಿ, ಹಣ್ಣೆಮಠದ ಶ್ರೀ ಮರುಳಸಿದ್ದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮತ್ತು ಬುಡರಕಟ್ಟಿ ಶ್ರೀಗುರು ಮಡಿವಾಳೇಶ್ವರಮಠದ ಶ್ರೀ ಶಿವಪಂಚಾಕ್ಷರಿ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಎನ್. ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಶಿವಮೊಗ್ಗ ಬಸವೇಶ್ವರ ವೀರಶೈವ ಸಮಾಜ ಅಧ್ಯಕ್ಷ ಎಸ್. ಎಸ್. ಜ್ಯೋತಿಪ್ರಕಾಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್. ಎನ್. ಮಹಾಲಿಂಗಯ್ಯ ಶಾಸ್ತ್ರಿ, ಜಿಲ್ಲಾ ಜಂಗಮ ಸಮಾಜದ ಅಧ್ಯಕ್ಷ ಎ. ಎಂ. ಚಂದ್ರಯ್ಯ, ಜಿಲ್ಲಾ ವೀರಶೈವ ಪುರೋಹಿತ ಮತ್ತು ಅರ್ಚಕರ ಸಂಘದ ಅಧ್ಯಕ್ಷ ಎಚ್. ಮಲ್ಲಿಕಾರ್ಜುನಸ್ವಾಮಿ, ಜಿಲ್ಲಾ ವೀರಶೈವ ಪುರೋಹಿತ-ಜ್ಯೋತಿಷ್ಯರ ಸಂಘದ ಅಧ್ಯಕ್ಷ ಶ್ರೀ ವಿದ್ವಾನ್ ಡಾ. ರೇಣುಕಾರಾಧ್ಯ ಶಾಸ್ತ್ರಿಗಳು, ಮುಖಂಡರಾದ ಮಂಗೋಟೆ ರುದ್ರೇಶ್, ಶಾರದ ಅಪ್ಪಾಜಿ, ಆರ್. ಮಹೇಶ್ ಕುಮಾರ್ ಮತ್ತು ಸಿದ್ದಲಿಂಗಯ್ಯ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ.
ಜನ್ಮ ಶತಮಾನೋತ್ಸವ ಅಂಗವಾಗಿ ಹೊನ್ನಾಳಿ ಕೋಟೆಮಲ್ಲೂರು ನಿವೃತ್ತ ಮುಖ್ಯೋಪಾಧ್ಯಾಯ ವಿ.ಎಂ ಶಿವಲಿಂಗಾರಾಧ್ಯ ಶಾಸ್ತ್ರಿಗಳಿಗೆ `ಸೌಜನ್ಯ ಸುಧಾಕರ ರತ್ನ' ವಿಶೇಷ ಪ್ರಶಸ್ತಿ ಪ್ರದಾನ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.