ಭದ್ರಾವತಿ: ನಗರದ ಜನ್ನಾಪುರ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೂತನವಾಗಿ ಕಾರುಣ್ಯ ದಾರಿದೀಪ ಯೋಜನೆ ಜಾರಿಗೆ ತರಲಾಗುತ್ತಿದ್ದು, ನ.೧೪ರ ಮಕ್ಕಳ ದಿನಾಚರಣೆಯಂದು ಬೆಳಿಗ್ಗೆ ೯.ಕ್ಕೆ ಉದ್ಘಾಟನೆಗೊಳ್ಳುತ್ತಿದೆ. ಅಲ್ಲದೆ ಪ್ರೇರಕ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಮಾರ್ಗದರ್ಶಕರೊಂದಿಗೆ ಸಂವಾದ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗಿದೆ.
ಕಳೆದ ಮೂರು ವರ್ಷಗಳಿಂದ ಟ್ರಸ್ಟ್ ವತಿಯಿಂದ ಅನಾಥಶ್ರಮ ಮತ್ತು ವೃದ್ದಾಶ್ರಮ ನಡೆಸಿಕೊಂಡು ಬರುತ್ತಿದ್ದು, ಇದರ ಜೊತೆಗೆ ವೈಜ್ಞಾನಿಕಾ ಜಾಗೃತಿ ಕಾರ್ಯಕ್ರಮಗಳನ್ನು ಸಹ ನಡೆಸಿಕೊಂಡು ಬರಲಾಗುತ್ತಿದೆ. ಇದೀಗ ಹೊಸದೊಂದು ಯೋಜನೆ ಅನುಷ್ಠಾನಗೊಳಿಸಲು ಮುಂದಾಗಿದೆ. ತಾಲೂಕಿನಲ್ಲಿರುವ ಸರ್ಕಾರಿ ಶಾಲೆಗಳನ್ನು ಅಧ್ಯಯನ ಮಾಡಿ ಸರ್ಕಾರಿ ಶಾಲೆಯಲ್ಲಿರುವ ಮಕ್ಕಳ ಅಗತ್ಯತೆಗಳನ್ನು ಮನಗಂಡು ಕಾರುಣ್ಯ ದಾರಿದೀಪ ಎಂಬ ಯೋಜನೆಯನ್ನು ಜಾರಿಗೂಳಿಸಲಾಗುತ್ತಿದೆ. ಈ ಯೋಜನೆಗೆ ತಾಲೂಕಿನಲ್ಲಿರುವ ೩೩ ಪ್ರೌಢಶಾಲೆಗಳನ್ನು ಆಯ್ಕೆ ಮಾಡಲಾಗಿದ್ದು, ಆಯ ಶಾಲೆಯ ನುರಿತ ಶಿಕ್ಷಕರನ್ನು ಪ್ರೇರಕ ಶಿಕ್ಷಕರನ್ನಾಗಿ ಗುರುತಿಸಲಾಗಿದೆ.
ನೂತನ ಯೋಜನೆಯನ್ನು ವಿಐಎಸ್‌ಎಲ್ ಅತಿಥಿಗೃಹದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಟ್ರಸ್ಟ್ ಗೌರವಾಧ್ಯಕ್ಷ ಡಾ. ವಿಜಯ್. ಜಿ ದುಬೈ, ನಿರ್ದೇಶಕರಾದ ವಿ.ಟಿ ರಮೇಶ್ ಇನ್ನಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಟ್ರಸ್ಟ್ ಅಧ್ಯಕ್ಷ ಜಿ. ರಾಜು ಅಧ್ಯಕ್ಷತೆ ವಹಿಸಲಿದ್ದಾರೆ.