![](https://blogger.googleusercontent.com/img/a/AVvXsEiJ3jD7uRZsbyTwLIWinHp0L9VlyMKYaj8YDSTrslHTDMMlkZM4NYPixqG_bSZIZa_DyAUxt3sdVPXWoRtf59m9v83GOOVjTDTzwSovQI0poqkk6x6P7TwMzIKpFhj6ZV82pYnn_3zfUvOL86dHQbkJbYRHoxE-gvF4O88Dlb1kUTaH18o0wtT9JMBdHo7x=w400-h196-rw)
ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಪುತ್ರ ಬಿ.ಎಸ್ ಬಸವೇಶ್‌ರವರ ಜನ್ಮದಿನದ ಅಂಗವಾಗಿ ಓಂ ಕ್ರಿಕೆಟರ್‍ಸ್ ಕ್ಲಬ್ ವತಿಯಿಂದ ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ಆಯೋಜಿಸಲಾಗಿರುವ ಟೆನ್ನಿಸ್ ಬಾಲ್ ಅಂತರಾಷ್ಟ್ರೀಯ `ಓಂ ಕಪ್ ಕ್ರಿಕೆಟ್ ಪಂದ್ಯಾವಳಿ'ಗೆ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ : ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಪುತ್ರ ಬಿ.ಎಸ್ ಬಸವೇಶ್‌ರವರ ಜನ್ಮದಿನದ ಅಂಗವಾಗಿ ಓಂ ಕ್ರಿಕೆಟರ್‍ಸ್ ಕ್ಲಬ್ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ಆಯೋಜಿಸಲಾಗಿರುವ ಟೆನ್ನಿಸ್ ಬಾಲ್ ಅಂತರಾಷ್ಟ್ರೀಯ `ಓಂ ಕಪ್ ಕ್ರಿಕೆಟ್ ಪಂದ್ಯಾವಳಿ'ಗೆ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಚಾಲನೆ ನೀಡಿದರು.
ಸುಮಾರು ೧೫ ಲಕ್ಷ ರು. ವೆಚ್ಚದಲ್ಲಿ ಪಂದ್ಯಾವಳಿ ಆಯೋಜಿಸಲಾಗಿದ್ದು, ಪಂದ್ಯಾವಳಿಯಲ್ಲಿ ಹೊರರಾಜ್ಯದ ಚನ್ನೈ, ರಾಜ್ಯದ ಉಡುಪಿ, ಬೆಂಗಳೂರು, ಶಿವಮೊಗ್ಗ ಹಾಗು ಬಿಜಾಪುರ ಜಿಲ್ಲೆಗಳಿಂದ ಒಟ್ಟು ೧೬ ತಂಡಗಳು ಭಾಗವಹಿಸಿವೆ. ಪಂದ್ಯಾವಳಿ ವೀಕ್ಷಿಸಲು ಸ್ಥಳೀಯ ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಆಗಮಿಸಿದ್ದು, ಶುಕ್ರವಾರ ಮತ್ತು ಶನಿವಾರ ವಿಜೇತರಾದ ತಂಡಗಳು ಭಾನುವಾರ ಭಾಗವಹಿಸಲಿವೆ. ಅಂತಿಮ ಪಂದ್ಯ ರೋಚಕವಾಗಿ ನಡೆಯಲಿದ್ದು, ಈ ಬಾರಿ ಕಪ್ ಯಾರಿಗೆ ಎಂಬುದನ್ನು ಕಾದು ನೋಡಬೇಕಾಗಿದೆ.
ಓಂ ಕ್ರಿಕೆಟರ್‍ಸ್ ಕ್ಲಬ್ ಅಧ್ಯಕ್ಷ ಗಿರೀಶ್, ನಗರಸಭೆ ಸದಸ್ಯರಾದ ಲತಾ ಚಂದ್ರಶೇಖರ್, ಸುದೀಪ್ ಕುಮಾರ್, ಯುವ ಮುಖಂಡ ಬಿ.ಎಸ್ ಗಣೇಶ್, ಕುವೆಂಪು ವಿ.ವಿ ಸಿಂಡಿಕೇಟ್ ಸದಸ್ಯ ಎಂ. ಶಿವಕುಮಾರ್, ಪ್ರಮುಖರಾದ ಕುಮಾರ್(ಮಾಸ್ಟರ್), ಅಭಿಲಾಷ್, ಚಂದ್ರಶೇಖರ್, ಶಿವು ಪಾಟೀಲ್, ಕೇಶವ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.