ಅಂಬೇಡ್ಕರ್‌ರವರ ೧೨ ಅಡಿ ಎತ್ತರದ ಕಂಚಿನ ಪ್ರತಿಮೆ
ಭದ್ರಾವತಿ: ನಗರದ ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಬಳಿ, ಅಂಬೇಡ್ಕರ್ ವೃತ್ತದಲ್ಲಿ ನೂತನವಾಗಿ ಉದ್ಘಾಟನೆಗೊಂಡಿರುವ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಪುತ್ಥಳಿಗೆ ಕರ್ನಾಟಕ ರಾಜ್ಯ ಚಾಣುಕ್ಯ ಸೇನೆ ವತಿಯಿಂದ ಫೆ. ೧೯ರಂದು ಹಾಲಿನ ಅಭಿಷೇಕ ಮತ್ತು ಬೃಹತ್ ಮಾಲಾರ್ಪಣೆ ನಡೆಯಲಿದೆ.
ನಗರಸಭೆ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ೧೨ ಅಡಿ ಎತ್ತರದ ಡಾ. ಬಿ.ಆರ್ ಅಂಬೇಡ್ಕರ್‌ರವರ ನೂತನ ಕಂಚಿನ ಪ್ರತಿಮೆ ಜ.೨೬ರಂದು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟನೆಗೊಳಿಸಿದ್ದರು. ಈ ಹಿಂದೆ ಪ್ರತಿಷ್ಠಾಪಿಸಲಾಗಿದ್ದ ಮೂರ್ತಿ ಬದಲಿಗೆ ಹೊಸದಾಗಿ ಅಂಬೇಡ್ಕರ್ ನೈಜತೆ ಹೋಲುವ ಪ್ರತಿಮೆ ಪ್ರತಿಷ್ಠಾಪಿಸುವಂತೆ ಪ್ರಗತಿಪರ ಹಾಗು ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಹೋರಾಟಗಾರರ ಬಹಳ ವರ್ಷಗಳ ಬೇಡಿಕೆಗೆ ಸ್ಪಂದಿಸಿ ನೂತನ ಪ್ರತಿಮೆ ಪ್ರತಿಮೆ ಪ್ರತಿಷ್ಠಾಪಿಸಲಾಗಿದೆ.
ಬೆಳಿಗ್ಗೆ ೧೧ ಗಂಟೆಗೆ ನಡೆಯಲಿರುವ ಹಾಲಿನ ಅಭಿಷೇಕ ಮತ್ತು ಬೃಹತ್ ಮಾಲಾರ್ಪಣೆ ಕಾರ್ಯಕ್ರಮಕ್ಕೆ ಕ್ಷೇತ್ರದ ಸಮಸ್ತ ನಾಗರೀಕರು ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸುವಂತೆ ಕರ್ನಾಟಕ ರಾಜ್ಯ ಚಾಣುಕ್ಯ ಸೇನೆ ರಾಜ್ಯಾಧ್ಯಕ್ಷ ನಾರಾಯಣ ಐಹೊಳೆ ಕೋರಿದ್ದಾರೆ.