ಪ್ರೊ. ಟಿ.ಎನ್ ಮಲ್ಲೇಶಪ್ಪ
ಭದ್ರಾವತಿ: ನಗರದ ಜನ್ನಾಪುರ ಕಿತ್ತೂರು ರಾಣಿ ಚೆನ್ನಮ್ಮ ಬಡಾವಣೆ(ಕೆ.ಸಿ ಬ್ಲಾಕ್) ನಿವಾಸಿ, ನಿವೃತ್ತ ಪ್ರಾಧ್ಯಾಪಕ ಪ್ರೊ. ಟಿ.ಎನ್ ಮಲ್ಲೇಶಪ್ಪ(೭೨) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.
ಇವರಿಗೆ ಪತ್ನಿ ಉಪನ್ಯಾಸಕಿ ಜಮುನಾ, ಇಬ್ಬರು ಪುತ್ರರಾದ ಡಾ. ಕುಶಾಲ್, ಡಾ. ಕಶ್ಯಪ್ ಇದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಮಲ್ಲೇಶಪ್ಪನವರು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಪ್ರಾಧ್ಯಾಪಕರಾಗಿದ್ದರು. ಇವರ ಅಂತ್ಯ ಸಂಸ್ಕಾರ ಮಾ.೨ರ ಭಾನುವಾರ ಬೆಳಿಗ್ಗೆ ನಡೆಯಲಿದೆ.
ಇವರ ನಿಧನಕ್ಕೆ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು, ಶಿಷ್ಯ ವೃಂದ ಹಾಗು ನಗರದ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.