ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಬಾಬು ಜಗ ಜೀವನ್‌ರಾಂರವರ ಜಯಂತಿ ಅಂಗವಾಗಿ ಜರುಗಿದ ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು.
ಭದ್ರಾವತಿ : ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೪ನೇ ಮತ್ತು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಂರವರ ೧೧೭ನೇ ಜಯಂತಿ ಎಲ್ಲರೂ ಒಗ್ಗಟ್ಟಾಗಿ ಈ ಇಬ್ಬರು ಮಹಾನ್ ನಾಯಕರಿಗೆ ಗೌರವ ತಂದುಕೊಡುವ ರೀತಿಯಲ್ಲಿ ಅರ್ಥಪೂರ್ಣವಾಗಿ ಆಚರಿಲು ಮುಂದಾಗಿ ಎಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಅವರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಬಾಬು ಜಗ ಜೀವನ್‌ರಾಂರವರ ಜಯಂತಿ ಅಂಗವಾಗಿ ಜರುಗಿದ ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು.
ಎಲ್ಲರೂ ಒಗ್ಗಟ್ಟಾಗಿ ಜಾತ್ಯಾತೀತವಾಗಿ ಮಹಾನ್ ವ್ಯಕ್ತಿಗಳ ಜಯಂತಿ ಆಚರಿಸಬೇಕು. ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ಸಹ ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂದರು.
ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಂಬೇಡ್ಕರ್ ಭವನ ಉದ್ಘಾಟನೆ ಸಂಬಂಧ ದಲಿತ ಮುಖಂಡರು ಒಮ್ಮತದ ನಿರ್ಧಾರ ಕೈಗೊಳ್ಳುವುದು ಸೂಕ್ತ. ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹಾದೇವಪ್ಪ ಅವರನ್ನು ಉದ್ಘಾಟನೆಗೆ ಆಹ್ವಾನಿಸಬಹುದು. ಈ ಸಂಬಂಧ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಿ ಎಂದರು.
ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಬಾಬು ಜಗಜೀವನ್‌ರಾಂರವರ ಜಯಂತಿ ಅಂಗವಾಗಿ ೨ ನೇ ಪೂರ್ವಭಾವಿ ಸಭೆ ಕರೆಯಲಾಗಿದೆ. ಕೆಲ ಅಧಿಕಾರಿಗಳು ಬಾರದಿರುವುದು ವಿಪರ್ಯಾಸದ ಸಂಗತಿಯಾಗಿದೆ. ಈ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕೆಂದರು.
ಆರಂಭದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಸೀಲ್ದಾರ್ ಪರುಸಪ್ಪ ಕುರುಬರ ಕಾರ್ಯಕ್ರಮದ ವಿವರಣೆ ನೀಡಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ಪೊಲೀಸ್ ನಗರ ವೃತ್ತ ನಿರೀಕ್ಷಕ ಶ್ರೀಶೈಲಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಸಮಾಜ ಕಲ್ಯಾಧಿಕಾರಿ ಸುರೇಶ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಸಿದ್ದಬಸಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭೆಯಲ್ಲಿ ಬಿ.ಟಿ.ನಾಗರಾಜ್, ಉಮಾ, ಶಿವಬಸಪ್ಪ, ಬಿ.ಎನ್.ರಾಜು, ಪ್ರಜಾಪ್ರತಿನಿಧಿ ಸುರೇಶ್, ಮುತ್ತು, ಪುಟ್ಟರಾಜು, ರಂಗನಾಥ್, ವಿನೋದ್, ಮಂಜುನಾಥ್, ರಾಜು, ಹೊಳೆಹೊನ್ನೂರು ಭಾಗದ ದಲಿತ ಮುಖಂಡರಾದ ಸುರೇಶ್, ಕೃಷ್ಣಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.