ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ತುಮಕೂರು ಸಿದ್ದಗಂಗಾ ಮಠದ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ೧೧೮ನೇ ಜನ್ಮದಿನದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿ ಸಹ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ವಿತರಿಸಲಾಯಿತು.
ಭದ್ರಾವತಿ: ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ತುಮಕೂರು ಸಿದ್ದಗಂಗಾ ಮಠದ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ೧೧೮ನೇ ಜನ್ಮದಿನದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿ ಸಹ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ವಿತರಿಸಲಾಯಿತು.
ಮಹಾಸಭಾ ತಾಲೂಕು ಅಧ್ಯಕ್ಷ ಕೆ.ಎಸ್ ವಿಜಯ್ ಕುಮಾರ್ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಮುಖರು ಮಾತನಾಡಿ, ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರು ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ಸ್ಮರಿಸುವ ಮೂಲಕ ಅವರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.
ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಮೆಸ್ಕಾಂ ಗ್ರಾಹಕರ ಸಲಾಹ ಸಮಿತಿ ಅಧ್ಯಕ್ಷ ಬಸವಂತಪ್ಪ, ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಮಲ್ಲಿಕಾರ್ಜುನ್, ಸಿದ್ದಾರೂಢ ಮಠದ ಕಾರ್ಯದರ್ಶಿ ರಾಮಮೂರ್ತಿ ಮತ್ತು ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಗು ಮಹಾಸಭಾ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.