Wednesday, April 2, 2025

ಏ.೩ರಂದು ವಿಶ್ವ ರಂಗಭೂಮಿ ದಿನಾಚರಣೆ

    ಭದ್ರಾವತಿ : ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ವತಿಯಿಂದ ಏ.೩ರಂದು ಸಂಜೆ ೬ ಗಂಟೆಗೆ ಜನ್ನಾಪುರ, ರಾಜಪ್ಪ ಲೇಔಟ್, ಅಂಗಾಳ ಪರಮೇಶ್ವರಿ ನಿಲಯದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. 
    ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್, ವಿಕಸಂ ಹಿರಿಯ ರಂಗಕಲಾವಿದ ಕೆ.ಬಿ ಕಪನಿಗೌಡ, ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಬಿ. ಜಗದೀಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಂಘದ ಉಪಾಧ್ಯಕ್ಷೆ ರತ್ನಾ ಗಂಗಾಧರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಕಸಂ ಹಿರಿಯ ರಂಗಕಲಾವಿದ ಕೆ.ಎಸ್ ರವಿಕುಮಾರ್‌ರವರಿಗೆ ಗೌರವ ಸಮರ್ಪಣೆ ನಡೆಯಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಾನಪದ ಕಲಾವಿದ ತಮಟೆ ಜಗದೀಶ್ ಮನವಿ ಮಾಡಿದ್ದಾರೆ. 

ಅಕ್ಕಮಹಾದೇವಿ ಜಯಂತಿ ಅಂಗವಾಗಿ ಏ.೧೫ರಂದು ವಚನ ಗಾಯನ ಸ್ಪರ್ಧೆ

    ಭದ್ರಾವತಿ: ತಾಲೂಕು ವೀರಶೈವ ಲಿಂಗಾಯಿತ ಮಹಿಳಾ ಸಮಾಜದ ವತಿಯಿಂದ ಅಕ್ಕಮಹಾದೇವಿ ಜಯಂತಿ ಅಂಗವಾಗಿ ಮಹಿಳೆಯರಿಗೆ ತಾಲೂಕು ಮಟ್ಟದ ವಚನ ಗಾಯನ ಸ್ಪರ್ಧೆ ಏ.೧೫ರ ಮಂಗಳವಾರ ಬೆಳಿಗ್ಗೆ ೧೦.೩೦ಕ್ಕೆ ಏರ್ಪಡಿಸಲಾಗಿದೆ. 
    ಹಳೇನಗರದ ತಾಲೂಕು ಕಚೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಸ್ಪರ್ಧೆ ಜರುಗಲಿದೆ. ಭಾಗವಹಿಸಲಿಚ್ಚಿಸುವವರು ಹೆಸರು ನೋಂದಾಯಿಸಲು ಏ.೧೩ ಕಡೆ ದಿನಾಂಕವಾಗಿರುತ್ತದೆ.  ಹೆಚ್ಚಿನ ಮಾಹಿತಿಗೆ ಮೊ: ೯೪೮೦೨೦೫೭೧೨ ಅಥವಾ ೯೪೪೯೫ ೮೨೮೦೦ ಸಂಪರ್ಕಿಸಬಹುದಾಗಿದೆ ಎಂದು ಸಮಾಜದ ಅಧ್ಯಕ್ಷೆ ನಾಗರತ್ನ ವಾಗೀಶ್ ಕೋಠಿ ತಿಳಿಸಿದ್ದಾರೆ. 

ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ

ಜಿಲ್ಲೆಯಾದ್ಯಂತ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಗೋ ರಕ್ಷಣೆಯಲ್ಲಿ ತೊಡಗಿದ್ದು, ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ೪ ಗೋವುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.  
    ಭದ್ರಾವತಿ: ಜಿಲ್ಲೆಯಾದ್ಯಂತ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಗೋ ರಕ್ಷಣೆಯಲ್ಲಿ ತೊಡಗಿದ್ದು, ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ೪ ಗೋವುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.  
    ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ೪ ಮಲ್ನಾಡ್ ಗಿಡ್ಡ ತಳಿಯ ಗೋವುಗಳನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರೊಂದಿಗೆ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. 
    ಗೋವುಗಳನ್ನು ರಕ್ಷಿಸಿ ಗೋ ಶಾಲೆಗೆ ಬಿಡಲಾಗಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆಂದು ವೇದಿಕೆ ಮುಖಂಡರು ಮಾಹಿತಿ ನೀಡಿದ್ದಾರೆ. 
    ಕ್ಷೇತ್ರದಲ್ಲಿ ಇತ್ತೀಚೆಗೆ ಅಪಾರ ಪ್ರಮಾಣದಲ್ಲಿ ಗೋವುಗಳ ಮೂಳೆ ಪತ್ತೆ ಪತ್ತೆಯಾಗಿದ್ದು, ಸರ್ಕಾರ ಗೋ ನಿಷೇಧ ಕಾಯ್ಕೆ ಜಾರಿಗೆ ತಂದಿದ್ದರೂ ಸಹ ನಿರಂತರವಾಗಿ ಗೋವು ಹತ್ಯೆ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದವು. 

ಫಾಸ್ಟರ್ ಪ್ರವೀಣ್ ಪಗಡಾಲ ಸಾವಿನ ಕುರಿತು ಸಿ.ಬಿ.ಐ ತನಿಖೆ ನಡೆಸಿ

ಅಖಲ ಭಾರತ ಕ್ರೈಸ್ತ ಮಹಾಸಭಾ ರಾಷ್ಟ್ರಪತಿಗಳಿಗೆ ಮನವಿ 

ಅಂಧ್ರ ಪ್ರದೇಶದ ರಾಜಮಂಡ್ರಿ ಫಾಸ್ಟರ್ ಪ್ರವೀಣ್ ಪಗಡಾಲರವರ ಸಾವಿನ ಕುರಿತು ಸಿ.ಬಿ.ಐ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿ ಬುಧವಾರ ಭದ್ರಾವತಿಯಲ್ಲಿ ಅಖಲ ಭಾರತ ಕ್ರೈಸ್ತ ಮಹಾಸಭಾ ವತಿಯಿಂದ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. 
    ಭದ್ರಾವತಿ : ಅಂಧ್ರ ಪ್ರದೇಶದ ರಾಜಮಂಡ್ರಿ ಫಾಸ್ಟರ್ ಪ್ರವೀಣ್ ಪಗಡಾಲರವರ ಸಾವಿನ ಕುರಿತು ಸಿ.ಬಿ.ಐ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿ ಬುಧವಾರ ಅಖಲ ಭಾರತ ಕ್ರೈಸ್ತ ಮಹಾಸಭಾ ವತಿಯಿಂದ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. 
    ತಹಸೀಲ್ದಾರ್ ಪರುಸಪ್ಪ ಕುರುಬರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಕ್ರೈಸ್ತ ಮುಖಂಡರು, ದೇಶದಲ್ಲಿ ಅನೇಕ ಧರ್ಮಗಳ ನಡುವೆ ಅಲ್ಪಸಂಖ್ಯಾತರೆಂಬ ಶಿರೋನಾಮೆಯೊಂದಿಗೆ ಕ್ರೈಸ್ತರು ಪ್ರೀತಿ, ಸೌಹಾರ್ದತೆ, ಸಾಮ್ಯರಸ್ಯಗಳಿಂದ ಕೂಡಿ ಬದುಕುತ್ತಿದ್ದೇವೆ. ಅಲ್ಲದೆ ದೇಶಕ್ಕೆ ನಮ್ಮದೇ ಆದ ಕೊಡುಗೆಗಳನ್ನು ನೀಡಿದ್ದೇವೆ ಎಂದರು. 
    ಆಂಧ್ರ ಪ್ರದೇಶದ ರಾಜಮಂಡ್ರಿ ಫಾಸ್ಟರ್ ಪ್ರವೀಣ್ ಪಗಡಾಲರವರು ಒಬ್ಬ ಒಳ್ಳೆಯ ದೇವರ ಸೇವಕರು ಮತ್ತು ಸ್ವಂತ ಸಾಫ್ಟ್‌ವೇರ್ ಕಂಪನಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಅಲ್ಲದೆ ಹಲವಾರು ಸಾಮಾಜಿಕ ಕಾರ್ಯಗಳೊಂದಿಗೆ ಸಮಾಜ ಸೇವಕರಾಗಿದ್ದಾರೆ. ಆಂಧ್ರ ಪ್ರದೇಶ ಸರ್ಕಾರ ಯಾವುದೇ ಸಾಕ್ಷಿ ಇಲ್ಲದೆ ಇವರ ಸಾವು ಅಪಘಾತ ಎಂದು ಪರಿಗಣಿಸಿದೆ. ಆದರೆ ಇವರ ಸಾವು ಹಲವಾರು ಅನುಮಾನದಿಂದ ಕೂಡಿದೆ ಎಂದು ಆರೋಪಿಸಿದರು. 
    ಪ್ರವೀಣ್ ಪಗಡಾಲರವರ ಸಾವಿನ ಸತ್ಯಾಂಶ ಹೊರಬರಬೇಕು. ಅವರ ಕುಟುಂಬಕ್ಕೂ ಮತ್ತು ಕ್ರೈಸ್ತರಿಗೂ ನ್ಯಾಯ ದೊರಕಿಸಿ ಕೊಡಬೇಕು. ದೇಶದಲ್ಲಿ ಅಲ್ಪ ಸಂಖ್ಯಾತರಾಗಿರುವ ಕ್ರೈಸ್ತರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು. 
    ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಆರ್ ಸುರೇಶ್ ನಾಯ್ಕ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ವಿವಿಧ ಕ್ರೈಸ್ತ ಸಂಘಟನೆಗಳ ಪ್ರಮುಖರಾದ ಫಾಸ್ಟರ್ ರೈಮಂಡ್, ಸೆಲ್ವರಾಜ್, ನಗರಸಭೆ ಸದಸ್ಯರಾದ ಜಾರ್ಜ್, ಐ.ವಿ ಸಂತೋಷ್, ಮಾಜಿ ಸದಸ್ಯ ಫ್ರಾನ್ಸಿಸ್, ಸೂಡಾ ಸದಸ್ಯ ಎಚ್. ರವಿಕುಮಾರ್, ಆರ್. ಮೋಸಸ್, ವಿಲ್ಸನ್‌ಬಾಬು, ದಾಸ್, ಸ್ಪೀಫನ್, ಕಾಕನಿ ಪ್ರಕಾಶ್, ಅಂತೋಣಿ ಪ್ರಕಾಶ್, ಕೃಪಾ ಮೇರಿ ಮತ್ತು ಶೈನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

Tuesday, April 1, 2025

ಏ.೨ರಂದು ವಿದ್ಯುತ್ ವ್ಯತ್ಯಯ


    ಭದ್ರಾವತಿ: ಮೆಸ್ಕಾಂ ನಗರ ಉಪವಿಭಾಗ, ಘಟಕ-೩ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.೨ ರ ಬುಧವಾರ ಬೆಳಿಗ್ಗೆ ೯.೩೦ ರಿಂದ ಸಂಜೆ ೫.೩೦ರವರೆಗೆ ವಿದ್ಯುತ್ ಅಡಚಣೆ ವ್ಯತ್ಯಯ ಉಂಟಾಗಲಿದೆ. 
    ನಗರ ವ್ಯಾಪ್ತಿಯ ಜನ್ನಾಪುರ, ಹುತ್ತಾ ಕಾಲೋನಿ, ಅಪ್ಪರ್‌ಹುತ್ತ, ಜಿಂಕ್‌ಲೈನ್ ವೇಲೂರುಶೆಡ್, ಭಂಡಾರಹಳ್ಳಿ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ, ಗ್ರಾಹಕರು ಸಹಕರಿಸಲು ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

ಉಚಿತ ಕುಡಿಯುವ ನೀರಿನ ಸೇವೆಗೆ ಚಾಲನೆ : ಪ್ರತಿಯೊಬ್ಬರು ಸೇವಾ ಕಾರ್ಯ ಮೈಗೂಡಿಸಿಕೊಳ್ಳಿ

ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ 

ಭದ್ರಾವತಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಹಾಗು ಶ್ರೀ ಸತ್ಯ ಸಾಯಿ ಶಾಲಾ ಸಮಿತಿ ವತಿಯಿಂದ  ಉಚಿತ ಕುಡಿಯುವ ನೀರಿನ ಸೇವೆ ಹಮ್ಮಿಕೊಳ್ಳಲಾಗಿದ್ದು, ಮಂಗಳವಾರ ವ್ಯವಸ್ಥಾಪಕ ಕೃಷ್ಣಮೂರ್ತಿ ಚಾಲನೆ ನೀಡಿದರು. 
    ಭದ್ರಾವತಿ : ಶ್ರೀ ಸತ್ಯಸಾಯಿ ಬಾಬಾರವರ ಪ್ರೇರಣೆಯಿಂದ ಪ್ರತಿ ವರ್ಷ ಬೇಸಿಗೆಯಲ್ಲಿ ಪ್ರಯಾಣಿಕರಿಗೆ ಉಚಿತ ಕುಡಿಯುವ ನೀರಿನ ಸೇವೆ ಮಾಡುತ್ತಿದ್ದು, ಈ ಕಾರ್ಯದಲ್ಲಿ ಸ್ವಯಂ ಪ್ರೇರಣೆಯಿಂದ ಭಕ್ತರು ಪಾಲ್ಗೊಂಡು ಯಶಸ್ವಿಗೆ ಸಹಕರಿಸುತ್ತಿದ್ದಾರೆ. ಪ್ರತಿಯೊಬ್ಬರು ಇಂತಹ ಸೇವಾ ಕಾರ್ಯ ಮೈಗೂಡಿಸಿಕೊಳ್ಳಬೇಕೆಂದು ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ ಹೇಳಿದರು. 
    ಅವರು ಮಂಗಳವಾರ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಹಾಗು ಶ್ರೀ ಸತ್ಯ ಸಾಯಿ ಶಾಲಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಕುಡಿಯುವ ನೀರಿನ ಸೇವೆ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದರು. 
    ಬಾಬಾರವರ ಪ್ರೇರಣೆಯಿಂದ ಪ್ರತಿದಿನ ಹಲವಾರು ಸೇವಾ ಕಾರ್ಯಗಳು ನಡೆಯುತ್ತಿವೆ. ಈ ಪೈಕಿ ಉಚಿತ ಕುಡಿಯುವ ನೀರಿನ ಸೇವೆ ಸಹ ಒಂದಾಗಿದೆ. ೧೯೮೫ರಿಂದ ನಿರಂತರವಾಗಿ ಈ ಸೇವಾ ಕಾರ್ಯ ನಡೆಸಲಾಗುತ್ತಿದ್ದು, ೪೧ನೇ ವರ್ಷದ ಸೇವಾ ಕಾರ್ಯ ಇದಾಗಿದೆ. ಮಹಿಳೆಯರು, ಪುರುಷರು ಹಾಗು ಯುವ ಸಮುದಾಯದವರು ಈ ಸೇವಾ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿದ್ದು, ಈ ಕಾರ್ಯಕ್ಕೆ ಸಹಕರಿಸುತ್ತಿರುವ ಪ್ರತಿಯೊಬ್ಬರಿಗೂ ಬಾಬಾರವರು ಒಳ್ಳೆಯದನ್ನು ಮಾಡಲಿ ಎಂದರು.  
    ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕ ಕೃಷ್ಣಮೂರ್ತಿ ಉಚಿತ ಕುಡಿಯುವ ನೀರಿನ ಸೇವೆಗೆ ಚಾಲನೆ ನೀಡಿದರು. 
    ಪ್ರಶಾಂತಿ ಸೇವಾ ಟ್ರಸ್ಟ್ ಕಾರ್ಯದರ್ಶಿ ಸೌಮ್ಯ ಪ್ರಭಾಕರ ಬೀರಯ್ಯ, ರಾಮಕೃಷ್ಣಯ್ಯ, ಸಂತೋಷ್ ವರ್ಣೇಕರ್, ಶ್ರೀ ಸತ್ಯಸಾಯಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಮೃತ್ಯುಂಜಯ ಕಾನಿಟ್ಕರ್, ಶಾಮರಾಯ ಆಚಾರ್, ಶಿಕ್ಷಣ ಸಂಯೋಜಕ ಪರಮೇಶ್ವರಪ್ಪ ಸೇರಿದಂತೆ ಶಿಕ್ಷಕ ವೃಂದದವರು, ಸೇವಾಕರ್ತರು ಉಪಸ್ಥಿತರಿದ್ದರು. 

ಡಾ. ಶಿವಕುಮಾರ ಸ್ವಾಮೀಜಿ ಜನ್ಮದಿನ : ಒಳರೋಗಿಗಳಿಗೆ ಹಣ್ಣು ವಿತರಣೆ

ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ತುಮಕೂರು ಸಿದ್ದಗಂಗಾ ಮಠದ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ೧೧೮ನೇ ಜನ್ಮದಿನದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿ ಸಹ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ವಿತರಿಸಲಾಯಿತು. 
    ಭದ್ರಾವತಿ: ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ತುಮಕೂರು ಸಿದ್ದಗಂಗಾ ಮಠದ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ೧೧೮ನೇ ಜನ್ಮದಿನದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿ ಸಹ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ವಿತರಿಸಲಾಯಿತು. 
    ಮಹಾಸಭಾ ತಾಲೂಕು ಅಧ್ಯಕ್ಷ ಕೆ.ಎಸ್ ವಿಜಯ್ ಕುಮಾರ್ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಮುಖರು ಮಾತನಾಡಿ, ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರು ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ಸ್ಮರಿಸುವ ಮೂಲಕ ಅವರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು. 
    ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಮೆಸ್ಕಾಂ ಗ್ರಾಹಕರ ಸಲಾಹ ಸಮಿತಿ ಅಧ್ಯಕ್ಷ ಬಸವಂತಪ್ಪ, ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಮಲ್ಲಿಕಾರ್ಜುನ್, ಸಿದ್ದಾರೂಢ ಮಠದ ಕಾರ್ಯದರ್ಶಿ ರಾಮಮೂರ್ತಿ ಮತ್ತು ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಗು ಮಹಾಸಭಾ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.