Sunday, April 6, 2025

ಶ್ರೀರಾಮನವಮಿಯಂದು ಗುಡ್ಡದ ಮೇಲೊಂದು ಜಾತ್ರೆ

ಭದ್ರಾವತಿ: ತಾಲೂಕಿನ ಐತಿಹಾಸಿಕ ಧಾರ್ಮಿಕ ಹಾಗು ಪ್ರಾಕೃತಿಕ ಧಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗೊಂದಿ  ಶ್ರೀ ಕ್ಷೇತ್ರ ಹೊನ್ನೆಗುಡ್ಡದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀರಾಮನವಮಿಯಂದು ಭಾನುವಾರ ಶ್ರೀ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. 
    ಭದ್ರಾವತಿ: ತಾಲೂಕಿನ ಐತಿಹಾಸಿಕ ಧಾರ್ಮಿಕ ಹಾಗು ಪ್ರಾಕೃತಿಕ ಧಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗೊಂದಿ  ಶ್ರೀ ಕ್ಷೇತ್ರ ಹೊನ್ನೆಗುಡ್ಡದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀರಾಮನವಮಿಯಂದು ಭಾನುವಾರ ಶ್ರೀ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. 
    ಶ್ರೀ ಹೊನ್ನೆಗುಡ್ಡ ಲಕ್ಷ್ಮೀರಂಗನಾಥಸ್ವಾಮಿ ಹಾಗು ಶ್ರೀ ಕೂಗು ಮಲ್ಲೇಶ್ವರಸ್ವಾಮಿ ದೇವಾಲಯದ ಅಧಿದೇವತೆಯಾಗಿರುವ ಶ್ರೀ ರಂಗನಾಥಸ್ವಾಮಿಯ ಮಹಾರಥೋತ್ಸವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗು ಶ್ರೀ ಕ್ಷೇತ್ರ ಹೊನ್ನೆಗುಡ್ಡದ ಶ್ರೀ ವಿಠ್ಠಲಾನಂದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ನಡೆಯಿತು. 
    ದೇವಾಲಯದ ಮೂಲ ವಿಗ್ರಹಗಳಿಗೆ ಅಭಿಷೇಕ, ವಿಶೇಷ ಅಲಂಕಾರ, ಹೋಮ-ಹವನ, ದೇವರುಗಳ ಪಲ್ಲಕ್ಕಿ ಉತ್ಸವ, ನಂತರ ಮಹಾರಥೋತ್ಸವ ಹಾಗೂ ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಧಾರ್ಮಿಕರ ಆಚರಣೆ ಜರುಗಿದವು. 
    ಭಕ್ತರಿಗೆ ಶ್ರೀರಾಮನವಮಿ ಅಂಗವಾಗಿ ಕೋಸಂಬರಿ, ಪಾನಕ ವಿತರಣೆ ಹಾಗು ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಗೊಂದಿ, ಚಿಕ್ಕಗೊಪ್ಪೇನಹಳ್ಳಿ, ತಾರೀಕಟ್ಟೆ, ಅರಳಿಕೊಪ್ಪ, ಸುಲ್ತಾನ್‌ಮಟ್ಟಿ, ಹೊನ್ನಟ್ಟಿ ಹೊಸೂರು, ಹುಣಸೇಕಟ್ಟೆ, ಶಂಕರಘಟ್ಟ, ಗೋಣಿಬೀಡು, ಸಿಂಗನಮನೆ, ಹಿರಿಯೂರು ಬೊಮ್ಮನಕಟ್ಟೆ, ತಿಮ್ಲಾಪುರ, ಬಾಳೆಮಾರನಹಳ್ಳಿ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಸಹಸ್ರರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.

ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ : ಕನ್ನಡದ ತೇರು ತೆಳೆಯುವ ಕಾರ್ಯಕ್ಕೆ ಕೈ ಜೋಡಿಸಿ

ಭವನ ನಿರ್ಮಾಣಕ್ಕೆ ಸಹಕಾರ ನೀಡಲು ಬದ್ಧ : ಶಾಸಕ ಬಿ.ಕೆ ಸಂಗಮೇಶ್ವರ್ 

ಭದ್ರಾವತಿ ನಗರಸಭೆ ವ್ಯಾಪ್ತಿಯ ವಾರ್ಡ್ ನಂ. ೨೮ರ ಹೊಸ ಸಿದ್ದಾಪುರ ಬಡಾವಣೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ನಿವೇಶನದಲ್ಲಿ ನೂತನವಾಗಿ ಸುಮಾರು ೩.೮೦ ಕೋ. ರು. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು. ತಾಲೂಕು ಕಸಾಪ ಅಧ್ಯಕ್ಷ ಕೋಡ್ಲು ಯಜ್ಞಯ್ಯ ವೈಯಕ್ತಿಕವಾಗಿ ೫೫ ಸಾವಿರ ರು. ದೇಣಿಗೆ ಚೆಕ್ ಮೂಲಕ ನೀಡಿದರು. 
    ಭದ್ರಾವತಿ: ತಾಲೂಕಿನಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಹೆಚ್ಚಿನ ಆರ್ಥಿಕ ನೆರವಿನೊಂದಿಗೆ ಎಲ್ಲಾ ರೀತಿಯ ಸಹಕಾರ ಸಾಹಿತ್ಯ ಹಾಗು ಕನ್ನಡಾಭಿಮಾನಿಗಳು ಸೇರಿದಂತೆ ಸಮಸ್ತ ನಾಗರಿಕರು ನೀಡಬೇಕು. ಆ ಮೂಲಕ ಕನ್ನಡದ ತೇರು ಎಳೆಯುವ ಈ ಕಾರ್ಯದಲ್ಲಿ ಕೈಜೋಡಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು. 
    ಅವರು ಭಾನುವಾರ ನಗರಸಭೆ ವ್ಯಾಪ್ತಿಯ ವಾರ್ಡ್ ನಂ. ೨೮ರ ಹೊಸ ಸಿದ್ದಾಪುರ ಬಡಾವಣೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ನಿವೇಶನದಲ್ಲಿ ನೂತನವಾಗಿ ಸುಮಾರು ೩.೮೦ ಕೋ. ರು. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. 
    ಸಾಹಿತ್ಯ ಭವನ ಕಾಮಗಾರಿ ಯಶಸ್ವಿಯಾಗಿ ನಡೆಯಬೇಕು. ಈ ಕಾರ್ಯದಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು. ಯಾವುದೇ ಅಡೆತಡೆಗಳಿಗೂ ಅವಕಾಶ ನೀಡಬಾರದು. ಕಾಮಗಾರಿ ಪೂರ್ಣಗೊಳಿಸಿ ಭವನ ಲೋಕಾರ್ಪಣೆಗೊಳಿಸಲು ನಾನು ಸಹ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧವಿದ್ದೇನೆ. ಒಂದು ವೇಳೆ ಆರ್ಥಿಕ ನೆರವಿನ ಕೊರತೆ ಕಂಡು ಬಂದಲ್ಲಿ ಅದನ್ನು ಸಹ ಸಂಪೂರ್ಣವಾಗಿ ನಾನೇ ವಹಿಸಿಕೊಂಡು ಭರಿಸಲು ಸಿದ್ದವಿದ್ದೇನೆ ಎಂದರು. 
    ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಮಾತನಾಡಿ, ತಾಲೂಕು ಕೇಂದ್ರಗಳಲ್ಲಿ ಸಾಹಿತ್ಯ ಚಟುವಟಿಕೆಗಳನ್ನು ನಡೆಸಲು ಒಂದು ನೆಲೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣಗೊಳ್ಳುತ್ತಿದ್ದು, ಭವನ ನಿರ್ಮಾಣಕ್ಕೆ ಶಾಸಕರು ಹೆಚ್ಚಿನ ಕಾಳಜಿ ವಹಿಸಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಸ್ತುತ ಭೂಮಿ ಪೂಜೆ ನೆರವೇರಿಸಲು ಸಾಧ್ಯವಾಗುತ್ತಿದೆ. ಅವರ ಪ್ರಯತ್ನದಿಂದ ನಗರಸಭೆ ಆಡಳಿತ ಸುಮಾರು ೨೫ ಲಕ್ಷ ರು. ಆರ್ಥಿಕ ನೆರವು ನೀಡುತ್ತಿದ್ದು, ಅಲ್ಲದೆ ಅಧ್ಯಕ್ಷರು ಸೇರಿದಂತೆ ಸದಸ್ಯರು ತಮ್ಮ ಒಂದು ತಿಂಗಳ ವೇತನ ಸಹ ನೀಡುತ್ತಿರುವುದು ಮಾದರಿಯಾಗಿದೆ. ಈ ಹಿನ್ನಲೆಯಲ್ಲಿ ನಗರಸಭೆ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಭವನ ನಿರ್ಮಾಣಕ್ಕೆ ಎಲ್ಲರೂ ಸಹ ಹೆಚ್ಚಿನ ನೆರವು ನೀಡಬೇಕೆಂದರು. 
    ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಮಿತಿ ಅಧ್ಯಕ್ಷೆ ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ, ಉಪಾಧ್ಯಕ್ಷ ಡಾ. ಡಿ. ಪ್ರಭಾಕರ ಬೀರಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಎಂ.ಈ ಜಗದೀಶ್, ಎಂ.ಎಸ್ ಸುಧಾಮಣಿ, ಕಾರ್ಯದರ್ಶಿಗಳಾದ ಡಿ. ನಾಗೋಜಿರಾವ್, ಬಿ.ಎಲ್ ಮೋಹನಕುಮಾರ್, ಖಜಾಂಚಿ ಬಿ.ಎಸ್ ಪ್ರಕಾಶ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಡ್ಲು ಯಜ್ಞಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಟಿ. ತಿಮ್ಮಪ್ಪ ಕಾರ್ಯಕ್ರಮ ನಿರೂಪಿಸಿದರು. ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಎಂ.ಆರ್ ರೇವಣಪ್ಪ ಮತ್ತು ಜಾನಪದ ಕಲಾವಿದ ದಿವಾಕರ್ ಭೂಮಿ ಪೂಜೆ ಕುರಿತು ಕವನ ವಾಚಿಸಿದರು. ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಮಿತಿ ಉಪಾಧ್ಯಕ್ಷ ಸಿ. ಜಯಪ್ಪ ಹೆಬ್ಬಳಗೆರೆ ವಂದಿಸಿದರು. 
    ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಮಿತಿ  ಪ್ರಧಾನ ಕಾರ್ಯದರ್ಶಿ ಎಂ.ಎಸ್ ಸುಧಾಮಣಿ, ಕಸಾಪ ನಿಕಟಪೂರ್ವ ಕೋಶಾಧ್ಯಕ್ಷ ಜಿ.ಎಸ್ ಸತ್ಯಮೂರ್ತಿ, ಮೋಹನ್, ಸೂಡಾ ಸದಸ್ಯ ಎಚ್. ರವಿಕುಮಾರ್ ಸೇರಿದಂತೆ ಇನ್ನಿತರರು ವೈಯಕ್ತಿಕವಾಗಿ ದೇಣಿಗೆ ನೀಡಿದರು. 
    ಕಸಾಪ ನಿಕಟಪೂರ್ವ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯ ಸುರೇಶ್‌ನಾಯರ್, ಎಸ್. ಉಮಾ, ಮಾಯಮ್ಮ, ಭಾಗ್ಯಮ್ಮ, ಆರ್. ಶೋಭಾ, ಕುಸುಮ, ಉಷಾ, ಮಲ್ಲಿಕಾಂಬ ಹಾಗು ಕಸಾಪ, ಕಜಾಪ, ಕಸಾಸಾಂವೇ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು. 

Saturday, April 5, 2025

ಭದ್ರಗಿರಿಯಲ್ಲಿ ಪಂಗುಣಿ ಉತ್ತರ ತೀರ್ಥ ಉತ್ಸವ ಜಾತ್ರಾ ಮಹೋತ್ಸವಕ್ಕೆ ಚಾಲನೆ

 

ಭದ್ರಾವತಿ ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪಂಗುಣಿ ಉತ್ತರ ತೀರ್ಥ ಉತ್ಸವ ಜಾತ್ರಾ ಮಹೋತ್ಸವ ಏ.೧೧ರಂದು ಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಶನಿವಾರ ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ ಹಾಗು ತರೀಕೆರೆ ಎಂ.ಸಿ ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ  ರಾಮೇಗೌಡರವರು ಧ್ವಜಾರೋಹಣದೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು. 
    ಭದ್ರಾವತಿ: ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪಂಗುಣಿ ಉತ್ತರ ತೀರ್ಥ ಉತ್ಸವ ಜಾತ್ರಾ ಮಹೋತ್ಸವ ಏ.೧೧ರಂದು ಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಶನಿವಾರ ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ ಹಾಗು ತರೀಕೆರೆ ಎಂ.ಸಿ ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ  ರಾಮೇಗೌಡರವರು ಧ್ವಜಾರೋಹಣದೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು. 
    ಶ್ರೀ ಕ್ಷೇತ್ರದ ಶ್ರೀ ಮುರುಗೇಶ್ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಬೆಳಿಗ್ಗೆ ಶ್ರೀ ಕ್ಷೇತ್ರದಲ್ಲಿರುವ ಮೂಲ ವಿಗ್ರಹಗಳಿಗೆ ಅಭಿಷೇಕ, ವಿಶೇಷ ಪೂಜೆ, ಹೋಮ-ಹವನ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. 
    ಶ್ರೀ ಭದ್ರಗಿರಿ ಸೇವಾ ಟ್ರಸ್ಟ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಸೇವಾಕರ್ತರು ಉಪಸ್ಥಿತರಿದ್ದರು. ಶಿವಮೊಗ್ಗ ಹಾಗು ಚಿಕ್ಕಮಗಳೂರು ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು.  ಏ.೧೧ರಂದು ನಡೆಯಲಿರುವ ಜಾತ್ರಾ ಮಹೋತ್ಸವದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ. 

ಅರವಿಂದ್ ಹೇಮಣ್ಣರಿಗೆ ಡಾಕ್ಟರೇಟ್ ಪದವಿ

ಅರವಿಂದ್ ಹೇಮಣ್ಣ 
    ಭದ್ರಾವತಿ: ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಅರವಿಂದ್ ಹೇಮಣ್ಣರವರು `ಆಡಳಿತ ನಿರ್ವಹಣಾ ಶಾಸ್ತ್ರ' ವಿಷಯದಲ್ಲಿ ಡಾಕ್ಟರ್ ಆಫ್ ಫಿಲಾಸಫಿ ಪದವಿ ಪಡೆದುಕೊಂಡಿದ್ದಾರೆ. 
    ಏ.೨ರಂದು ಜರುಗಿದ ವಿಶ್ವವಿದ್ಯಾನಿಲಯದ ೧೨ನೇ ವಾರ್ಷಿಕ ಘಟಿಕೋತ್ಸವದಲ್ಲಿ ಹೇಮಣ್ಣರವರು ಪದವಿ ಸ್ವೀಕರಿಸಿದರು. ಇವರು ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಉದ್ಯೋಗಿ ಮಹಾದೇವಿ ಹೇಮಣ್ಣರವರ ಪುತ್ರ ರಾಗಿದ್ದಾರೆ. ಇವರಿಗೆ ಕೆಇಬಿ ನೌಕರ ಲೋಕೇಶ್ ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ. 

ಸ್ಥಳೀಯರಿಂದ ಏ.೧೫ರಂದು ಶ್ರೀ ಅಂತರಘಟ್ಟಮ್ಮ ದೇವಿಯ ಜಾತ್ರಾ ಮಹೋತ್ಸವ

ಅಕ್ರಮವಾಗಿ ನಿರ್ಮಿಸಿಕೊಂಡಿರುವ ಕಟ್ಟಡ ಸ್ಥಳೀಯರ ಅನುಕೂಲಕ್ಕೆ ಬಿಟ್ಟು ಕೊಡಿ 

ಭದ್ರಾವತಿ ನಗರದ ಜನ್ನಾಪುರ  ಫಿಲ್ಟರ್ ಶೆಡ್ ನಾಗರಿಕರು ಮತ್ತು ಭಕ್ತರಿಂದ ಶ್ರೀ ಅಂತರಘಟ್ಟಮ್ಮ ದೇವಿಯ ಜಾತ್ರಾ ಮಹೋತ್ಸವ ಏ.೧೫ ರಂದು ಆಚರಿಸಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 
    ಭದ್ರಾವತಿ: ನಗರದ ಜನ್ನಾಪುರ  ಫಿಲ್ಟರ್ ಶೆಡ್ ನಾಗರಿಕರು ಮತ್ತು ಭಕ್ತರಿಂದ ಶ್ರೀ ಅಂತರಘಟ್ಟಮ್ಮ ದೇವಿಯ ಜಾತ್ರಾ ಮಹೋತ್ಸವ ಏ.೧೫ ರಂದು ಆಚರಿಸಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ತಿಳಿಸಿದರು. 
      ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷ ಸಹ ಜಾತ್ರಾ ಮಹೋತ್ಸವ ಆಚರಿಸಲಾಗುತ್ತಿದ್ದು ಬೆಳಗ್ಗೆ ೧೧ ಗಂಟೆಗೆ ಆರಂಭಗೊಳ್ಳುವ ಜಾತ್ರೆ ಸಂಜೆ ೫ ಗಂಟೆಗೆ ದೇವಿಯ ಮಹಾಮಂಗಳಾರತಿ ನಡೆಸುವ ಮೂಲಕ ಸಂಪನ್ನಗೊಳ್ಳಲಿದೆ ಎಂದರು.
    ಇಲ್ಲಿನ ನಿವಾಸಿಗಳು ಬಹಳ ವರ್ಷಗಳಿಂದ ಜಾತ್ರಾ ಮಹೋತ್ಸವ ಆಚರಿಸಿಕೊಂಡು ಬರುತ್ತಿದ್ದು, ಆದರೆ ಕೆಲವರು ದೇವಸ್ಥಾನದ ಅಭಿವೃದ್ಧಿ ವಿಚಾರ ಹಾಗೂ ಸ್ಥಳೀಯ ನಿವಾಸಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕುತಂತ್ರ ನಡೆಸುತ್ತಿದ್ದಾರೆ. ವೈಯಕ್ತಿಕ ಲಾಭಕ್ಕಾಗಿ ದೇವಸ್ಥಾನ ಸಮೀಪದಲ್ಲಿರುವ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ  ಕಟ್ಟಡ ನಿರ್ಮಿಸಿಕೊಂಡಿದ್ದಾರೆ. ಇದರ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ ಎಂದರು. 
     ಸರ್ಕಾರಿ ಜಾಗದಲ್ಲಿ ಸಾರ್ವಜನಿಕರಿಂದ ಹಾಗೂ ಸರ್ಕಾರದ ಅನುದಾನ ಪಡೆದು ಆಕ್ರಮವಾಗಿ ಕಟ್ಟಡ ನಿರ್ಮಿಸಿಕೊಂಡು ಕೆಲವೇ ಕೆಲವು ಜನರು ಸೀಮಿತಗೊಂಡಂತೆ ಟ್ರಸ್ಟ್ ರಚಿಸಿಕೊಂಡು ಅಕ್ರಮ ವೆಸಗುತ್ತಿದ್ದಾರೆ ಎಂದು ಆರೋಪಿಸಿದರು. 
  ಅಕ್ರಮವಾಗಿ ನಿರ್ಮಿಸಿರುವ ಕಟ್ಟಡವನ್ನು ತಾಲೂಕು ಆಡಳಿತ ಅಥವಾ ನಗರಸಭೆ ಅಥವಾ ವಿಐಎಸ್‌ಎಲ್ ಆಡಳಿತ ವಶಕ್ಕೆ ಪಡೆದುಕೊಂಡು ಸ್ಥಳೀಯ ನಿವಾಸಿಗಳ ಉಪಯೋಗಕ್ಕೆ ಅನುಕೂಲ ಕಲ್ಪಿಸಿ ಕೊಡಬೇಕೆಂದು ಒತ್ತಾಯಿಸಿದರು.
    ಫಿಲ್ಟರ್‌ಶೆಡ್‌ನಲ್ಲಿ ವಾಸಿಸುತ್ತಿರುವವರು ಕಡುಬಡವರಾಗಿದ್ದು, ಹೆಚ್ಚಿನ ಹಣ ವ್ಯಯಮಾಡಿ ಸಭೆ, ಸಮಾರಂಭಗಳು ಸೇರಿದಂತೆ ಮತ್ತಿತರ ಕಾರ್ಯಕ್ರಮಗಳನ್ನು ನಡೆಸಲು ಅಶಕ್ತರಾಗಿದ್ದಾರೆ. ಇಲ್ಲಿನ ನಿವಾಸಿಗಳಿಗೆ ಯಾವುದೇ ಕಟ್ಟಡಗಳು ಇರುವುದಿಲ್ಲ. ಈ ಹಿನ್ನಲೆಯಲ್ಲಿ ಈ ಕಟ್ಟಡವನ್ನು ಬಿಡುಕೊಡುವ ಮೂಲಕ ಸ್ಥಳೀಯರ ಸಂಕಷ್ಟಗಳಿಗೆ ಸ್ಪಂದಿಸುವಂತೆ ಮನವಿ ಮಾಡಿದರು. ಪತ್ರಿಕಾಘೋಷ್ಠಿಯಲ್ಲಿ ದಿವ್ಯಶ್ರೀ ಸೇರಿದಂತೆ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು. 

ನೂತನ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಏ.೬ರಂದು ಭೂಮಿ ಪೂಜೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.೨೮ರ ಹೊಸ ಸಿದ್ದಾಪುರ ಬಡಾವಣೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ನಿವೇಶನದಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣಗೊಳ್ಳುತ್ತಿದ್ದು, ಇದರ ನೀಲನಕ್ಷೆ ಸಿದ್ದಪಡಿಸಲಾಗಿದೆ. 
    ಭದ್ರಾವತಿ : ಸಾಹಿತ್ಯ ಹಾಗು ಕನ್ನಡಾಭಿಮಾನಿಗಳ ಮತ್ತು ಕ್ಷೇತ್ರದ ಸಮಸ್ತ ನಾಗರಿಕರ ಬಹಳ ವರ್ಷಗಳ ಬೇಡಿಕೆಯಾಗಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ನೂತನ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಏ.೬ರಂದು ಭೂಮಿ ಪೂಜೆ ನೆರವೇರಲಿದೆ. 
    ನಗರಸಭೆ ವ್ಯಾಪ್ತಿಯ ವಾರ್ಡ್ ನಂ.೨೮ರ ಹೊಸ ಸಿದ್ದಾಪುರ ಬಡಾವಣೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ನಿವೇಶನದಲ್ಲಿ ಭವನ ನಿರ್ಮಾಣಗೊಳ್ಳುತ್ತಿದ್ದು, ಬೆಳಿಗ್ಗೆ ೧೦ ಗಂಟೆಗೆ ಭೂಮಿ ಪೂಜೆ ಆರಂಭಗೊಳ್ಳಲಿದೆ. ಕರ್ನಾಟಕ ರಾಜ್ಯ ಗ್ರಾಮಿಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. 
    ಸಂಸದ ಬಿ.ವೈ ರಾಘವೇಂದ್ರ, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಪೂರ್‍ಯಾನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು, ಡಾ. ಧನಂಜಯ ಸರ್ಜಿ, ಡಿ.ಎಸ್ ಅರುಣ್ ಮತ್ತು ಎಸ್.ಎಲ್ ಭೋಜೇಗೌಡ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ನಗರಸಭೆ ಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗು ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿರುವರು. ಸಾಹಿತ್ಯ ಹಾಗು ಕನ್ನಡಾಭಿಮಾನಿಗಳು, ಕ್ಷೇತ್ರದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಮಿತಿ ಅಧ್ಯಕ್ಷೆ ಡಾ. ವಿಜಯದೇವಿ ಕೋರಿದ್ದಾರೆ. 
    ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಮಿತಿ ರಚನೆ : 
    ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧೀನದಲ್ಲಿ ಭವನ ನಿರ್ಮಾಣಕ್ಕೆ ಸಮಿತಿ ರಚಿಸಲಾಗಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಸಮಿತಿ ಗೌರವಾಧ್ಯಕ್ಷರಾಗಿದ್ದಾರೆ. ಎಮೆರಿಟಸ್  ಪ್ರಾಧ್ಯಾಪಕಿ ಡಾ. ವಿಜಯದೇವಿ ಅಧ್ಯಕ್ಷರಾಗಿದ್ದು, ಉಪಾಧ್ಯಕ್ಷರಾಗಿ ಬಿ.ಕೆ ಜಗನ್ನಾಥ್, ಡಾ. ಡಿ. ಪ್ರಭಾಕರ ಬೀರಯ್ಯ, ಪ್ರಧಾನ ಕಾರ್ಯದರ್ಶಿಗಳಾಗಿ ಎಂ.ಈ ಜಗದೀಶ್, ಸಿ. ಜಯಪ್ಪ ಹೆಬ್ಬಳಗೆರೆ, ಎಂ.ಎಸ್ ಸುಧಾಮಣಿ, ಕಾರ್ಯದರ್ಶಿಗಳಾಗಿ ಡಿ. ನಾಗೋಜಿರಾವ್, ಬಿ.ಎಲ್ ಮೋಹನ್ ಕುಮಾರ್ ಮತ್ತು ಖಜಾಂಚಿಯಾಗಿ ಬಿ.ಎಸ್ ಪ್ರಕಾಶ್ ಕಾರ್ಯ ನಿರ್ವಹಿಸಲಿದ್ದಾರೆ. 
    ೩.೮೦ ಕೋ.ರು ವೆಚ್ಚದಲ್ಲಿ ಭವನ ನಿರ್ಮಾಣ : 
    ೧೦೦*೭೯ ಅಡಿ ವಿಸ್ತೀರ್ಣದ ನಿವೇಶನದಲ್ಲಿ ಪರಿಷತ್ ನೂತನ ಕನ್ನಡ ಸಾಹಿತ್ಯ ಭವನ ಸುಮಾರು ೩.೮೦ ಕೋ.ರು. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಮೊದಲ ಹಂತವಾಗಿ ೧ ಕೋ.ರು. ವೆಚ್ಚದಲ್ಲಿ ನೆಲ ಕಟ್ಟಡ ನಿರ್ಮಿಸಲಾಗುತ್ತಿದೆ. ಈಗಾಗಲೇ ಕಟ್ಟಡದ ನೀಲನಕ್ಷೆ ಸಿದ್ದಪಡಿಸಲಾಗಿದ್ದು, ಅದರಂತೆ ೩೬.೬*೧೫ ಅಡಿ ಅಳತೆಯಲ್ಲಿ ಬೃಹತ್ ವೇದಿಕೆ ಹಾಗು ೫೯*೩೯.೮ ಅಡಿ ಅಳತೆಯಲ್ಲಿ ಸಭಾಂಗಣ, ವೇದಿಕೆ ಎರಡು ಬದಿಯಲ್ಲೂ ಪುರುಷ ಮತ್ತು ಮಹಿಳೆಯರಿಗೆ ೨ ಪ್ರತ್ಯೇಕ ಕೊಠಡಿಗಳು ನಿರ್ಮಾಣಗೊಳ್ಳಲಿವೆ. ಅಲ್ಲದೆ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ವಾಹನಗಳ ನಿಲುಗಡೆ ವ್ಯವಸ್ಥೆ ಸೇರಿದಂತೆ ಇನ್ನಿತರ ಹಲವು ಸೌಲಭ್ಯಗಳನ್ನು ಭವನ ಹೊಂದಲಿದೆ. 
    ೫೦ ಸಾವಿರ ರು. ದೇಣಿಗೆ : 
    ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕನ್ನಡ ಸಾಹಿತ್ಯ ಭವನಕ್ಕೆ ಪ್ರಧಾನ ಕಾರ್ಯದರ್ಶಿ ಎಂ.ಈ ಜಗದೀಶ್ ವೈಯಕ್ತಿಕವಾಗಿ ೫೦ ಸಾವಿರು ರು. ದೇಣಿಗೆ ನೀಡಿದ್ದು, ಈ ಮೂಲಕ ಭವನ ನಿರ್ಮಾಣಕ್ಕೆ ಸಾಹಿತ್ಯ ಹಾಗು ಕನ್ನಡಾಭಿಮಾನಿಗಳು ಸೇರಿದಂತೆ ಸಮಸ್ತ ನಾಗರಿಕರು ಹೆಚ್ಚಿನ ಆರ್ಥಿಕ ನೆರವಿನೊಂದಿಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ಪ್ರೇರೇಪಿಸಿದ್ದಾರೆ. 
 

ಭದ್ರಾವತಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕನ್ನಡ ಸಾಹಿತ್ಯ ಭವನಕ್ಕೆ ನಿರ್ಮಾಣ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ಈ ಜಗದೀಶ್ ವೈಯಕ್ತಿಕವಾಗಿ ೫೦ ಸಾವಿರು ರು. ದೇಣಿಗೆ ನೀಡಿದ್ದು, ಈ ಮೂಲಕ ಭವನ ನಿರ್ಮಾಣಕ್ಕೆ ಸಾಹಿತ್ಯ ಹಾಗು ಕನ್ನಡಾಭಿಮಾನಿಗಳು ಸೇರಿದಂತೆ ಸಮಸ್ತ ನಾಗರಿಕರು ಹೆಚ್ಚಿನ ಆರ್ಥಿಕ ನೆರವಿನೊಂದಿಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ಪ್ರೇರೇಪಿಸಿದ್ದಾರೆ. 

ಉಚಿತ ಕುಡಿಯುವ ನೀರಿನ ಸೇವೆಗೆ ಮುಂದಾದ ಬಿಟಿವೈ

ಭದ್ರಾವತಿ ನಗರದಲ್ಲಿ ಭದ್ರಾವತಿ ತಮಿಳು ಯೂತ್ಸ್ ಅಸೋಸಿಯೇಷನ್(ಬಿಟಿವೈ) ವತಿಯಿಂದ ಬೇಸಿಗೆಯಲ್ಲಿ ಕುಡಿಯುವ ನೀರಿನ ದಾಹ ದಣಿಸುವ ನಿಟ್ಟಿನಲ್ಲಿ ಇದೀಗ ಚಾಲನೆ ನೀಡಲಾಗಿದ್ದು, ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗದ ಪೆಟ್ರೋಲ್ ಬಂಕ್ ಬಳಿ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. 
    ಭದ್ರಾವತಿ : ನಗರದಲ್ಲಿ ಭದ್ರಾವತಿ ತಮಿಳು ಯೂತ್ಸ್ ಅಸೋಸಿಯೇಷನ್(ಬಿಟಿವೈ) ವತಿಯಿಂದ ಬೇಸಿಗೆಯಲ್ಲಿ ಕುಡಿಯುವ ನೀರಿನ ದಾಹ ದಣಿಸುವ ನಿಟ್ಟಿನಲ್ಲಿ ಇದೀಗ ಚಾಲನೆ ನೀಡಲಾಗಿದ್ದು, ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗದ ಪೆಟ್ರೋಲ್ ಬಂಕ್ ಬಳಿ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. 
    ಕೆಲವು ವರ್ಷಗಳಿಂದ ವಿಭಿನ್ನ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ತಮಿಳು ಯೂತ್ಸ್ ಅಸೋಸಿಯೇಷನ್ ಬೇಸಿಗೆಯಲ್ಲಿ ಕುಡಿಯುವ ನೀರಿನ ದಾಹ ನೀಗಿಸುವ ನಿಟ್ಟಿನಲ್ಲಿ ಉಚಿತ ಸೇವೆಗೆ ಮುಂದಾಗಿದೆ. ಜನದಟ್ಟಣೆ ಹೆಚ್ಚಾಗಿರುವ ಸ್ಥಳದಲ್ಲಿ ಸೇವೆಗೆ ಮುಂದಾಗಿರುವುದು ಶ್ಲಾಘನೀಯ ಕಾರ್ಯವಾಗಿದೆ. ಈಗಾಗಲೇ ಅಸೋಸಿಯೇಷನ್ ವತಿಯಿಂದ ಕಡುಬಡವರು, ನಿರ್ಗತಿಕರು, ಅನಾಥರಿಗೆ ಬೆಳಗಿನ ಉಚಿತ ಉಪಹಾರ ವ್ಯವಸ್ಥೆ ಕೈಗೊಳ್ಳಲಾಗುತ್ತಿದ್ದು, ಯಶಸ್ವಿಯಾಗಿ ಮುನ್ನಡೆಯುತ್ತಿದೆ.