ಉಗ್ರರಿಗೆ ನೆರವಾಗುವವರನ್ನು ಹುಡುಕಿ ಕಠಿಣ ಶಿಕ್ಷೆ ವಿಧಿಸಿ, ಗಡಿ ಭದ್ರತೆ ಹೆಚ್ಚಿಸಿ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ ಸಾವನ್ನಪ್ಪಿದ ಪ್ರವಾಸಿಗರಿಗೆ ಭದ್ರಾವತಿ ನಗರದ ಚುಂಚಾದ್ರಿ ಮಹಿಳಾ ವೇದಿಕೆ ಸಂತಾಪ ಸೂಚಿಸುವ ಮೂಲಕ ಕೇಂದ್ರ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ದೇಶದಲ್ಲಿ ಉಗ್ರರರಿಗೆ ನೆರವಾಗುವವರಿಗೂ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಸೋಮವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿತು.
ಭದ್ರಾವತಿ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ ಸಾವನ್ನಪ್ಪಿದ ಪ್ರವಾಸಿಗರಿಗೆ ನಗರದ ಚುಂಚಾದ್ರಿ ಮಹಿಳಾ ವೇದಿಕೆ ಸಂತಾಪ ಸೂಚಿಸುವ ಮೂಲಕ ಕೇಂದ್ರ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ದೇಶದಲ್ಲಿ ಉಗ್ರರರಿಗೆ ನೆರವಾಗುವವರಿಗೂ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಸೋಮವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿತು.
ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿಯವರ ನೇತೃತ್ವದಲ್ಲಿ ವೇದಿಕೆ ಪದಾಧಿಕಾರಿಗಳು ಹಾಗು ಸದಸ್ಯರು ಪ್ರತಿಭಟಿಸಿ ಉಗ್ರರ ಕೃತ್ಯವನ್ನು ಖಂಡಿಸಿದರು. ಇದೊಂದು ಹೇಯ ಕೃತ್ಯವಾಗಿದ್ದು, ಅಮಾಯಕ ಪ್ರವಾಸಿಗರನ್ನು ಹತ್ಯೆ ಮಾಡಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದೆ. ಈ ಕೃತ್ಯದಲ್ಲಿ ಹತ್ಯೆಯಾದ ಒಟ್ಟು ೨೬ ಮಂದಿಗೂ ವೇದಿಕೆ ಸಂತಾಪ ಸೂಚಿಸುವ ಮೂಲಕ ಶ್ರದ್ದಾಂಜಲಿ ಸಲ್ಲಿಸುತ್ತದೆ ಎಂದರು.
ದೇಶದ ಒಳಗೆ ಇದ್ದು ದೇಶದ ಹೊರಗಿನಿಂದ ಬರುವ ಉಗ್ರರಿಗೆ ನೆರವಾಗುವವರನ್ನು ಹುಡುಕಿ ಅವರಿಗೆ ಕಠಿಣವಾದ ಶಿಕ್ಷೆ ವಿಧಿಸಬೇಕು. ಇದರಿಂದ ಭವಿಷ್ಯದಲ್ಲಿ ಯಾರು ಸಹ ಈ ರೀತಿಯ ಕೃತ್ಯಗಳನ್ನು ನಡೆಸುವವರಿಗೆ ನೆರವಾಗುದಿಲ್ಲ. ದೇಶದ ಗಡಿ ಭದ್ರತೆ ಮತ್ತಷ್ಟು ಹೆಚ್ಚಿಸಬೇಕಾಗಿದೆ. ಉಗ್ರಹ ಒಳನುಸುಳುವುದನ್ನು ನಿಗ್ರಹಿಸಬೇಕೆಂದು ಆಗ್ರಹಿಸಿದರು.
ವೇದಿಕೆ ಪ್ರಮುಖರಾದ ಉಪಾಧ್ಯಕ್ಷೆ ಸುಮಾ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಪ್ರತಿಭಾ .ಆರ್, ಸಹ ಕಾರ್ಯದರ್ಶಿ ಶೀಲಾ ರವಿ, ಖಜಾಂಚಿ ಭಾರತಿ ಕುಮಾರ್, ಕುಸುಮಾ, ಕೋಕಿಲಾ, ಮಲ್ಲಿಕಾಂಬ, ಪ್ರಕಾಶ್ ರಾವ್, ಮುರುಗೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.