ಭದ್ರಾವತಿ ಲಯನ್ಸ್ ಕ್ಲಬ್ ಪ್ರಸ್ತುತ ಪದಾಧಿಕಾರಿಗಳ ಅವಧಿ ಮುಕ್ತಾಯಗೊಳ್ಳತ್ತಿದ್ದು, ಈ ಹಿನ್ನಲೆಯಲ್ಲಿ ಲಯನ್ಸ್ ಜಿಲ್ಲಾ ಗವರ್ನರ್(೩೧೭-ಸಿ) ಮಹಮದ್ ಹನೀಫ್ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಿದರು.
ಭದ್ರಾವತಿ : ನಗರದ ಲಯನ್ಸ್ ಕ್ಲಬ್ ಪ್ರಸ್ತುತ ಪದಾಧಿಕಾರಿಗಳ ಅವಧಿ ಮುಕ್ತಾಯಗೊಳ್ಳತ್ತಿದ್ದು, ಈ ಹಿನ್ನಲೆಯಲ್ಲಿ ಲಯನ್ಸ್ ಜಿಲ್ಲಾ ಗವರ್ನರ್(೩೧೭-ಸಿ) ಮಹಮದ್ ಹನೀಫ್ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಿದರು.
ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಮೂರ್ತಿ ನಾಯ್ಡು, ಕಾರ್ಯದರ್ಶಿ ಎನ್. ಶಿವಕುಮಾರ್ ಮತ್ತು ಖಜಾಂಚಿ ರಾಜ್‌ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ರಾಮಮೂರ್ತಿ ನಾಯ್ಡು ನೇತೃತ್ವದ ತಂಡ ಹಲವಾರು ಸೇವಾಕಾರ್ಯಗಳನ್ನು ಯಶಸ್ವಿಯಾಗಿ ನಡೆಸಿದ್ದು, ಎಲ್ಲರ ಮೆಚ್ಚಿಗೆಗೆ ಪಾತ್ರವಾಗಿದೆ. ಭವಿಷ್ಯದ ಕ್ಲಬ್ ಸದಸ್ಯರಿಗೆ ಮಾದರಿಯಾಗಿದೆ.
ಜಿಲ್ಲಾ ಗವರ್ನರ್ ಮಹಮದ್ ಹನೀಫ್, ಪ್ರಮುಖರಾದ ಬಿ. ದಿವಾಕರ ಶೆಟ್ಟಿ, ಬಿ.ಎಸ್ ಮಹೇಶ್ ಕುಮಾರ್, ಡಾ. ರವೀಂದ್ರನಾಥ ಕೋಠಿ, ಎಚ್.ಬಿ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.