ಬಾಳೆಹೊನ್ನೂರು ರಂಭಾಪುರಿ ಪೀಠದ ಶ್ರೀಮದ್ ರಂಭಾಪುರಿ ವೀರ ಸಿಂಹಾಸನಾದೀಶ್ವರ ಶ್ರೀ ಶ್ರೀ ಶ್ರೀ ೧೦೦೮ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಗುರುವಾರ ಭದ್ರಾವತಿ ನಗರದ ಬಿ.ಎಚ್ ರಸ್ತೆ, ಲೋಯರ್ ಹುತ್ತಾ, ಸಹ್ಯಾದ್ರಿ ಬಡಾವಣೆಯಲ್ಲಿ ಉದ್ಯಮಿ ದಿವಂಗತ ಮಹಾದೇವಪ್ಪನವರ ನಿವಾಸದಲ್ಲಿ ಆಯೋಜಿಸಲಾಗಿದ್ದ ೪ನೇ ವರ್ಷದ ಇಷ್ಟಲಿಂಗ ಮಹಾಪೂಜೆ ಧಾರ್ಮಿಕ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಅಶೀರ್ವಚನ ನೀಡಿದರು.
ಭದ್ರಾವತಿ: ಪ್ರತಿಯೊಬ್ಬರಿಗೂ ಧರ್ಮ ಪರಿಪಾಲನೆ ಬಹಳ ಮುಖ್ಯವಾಗಿದ್ದು, ಇದನ್ನು ಅರಿತುಕೊಂಡಾಗ ನೆಮ್ಮದಿಯಿಂದ ಬದುಕಲು ಸಾಧ್ಯ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಶ್ರೀಮದ್ ರಂಭಾಪುರಿ ವೀರ ಸಿಂಹಾಸನಾದೀಶ್ವರ ಶ್ರೀ ಶ್ರೀ ಶ್ರೀ ೧೦೦೮ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು.
ಜಗದ್ಗುರುಗಳು ಗುರುವಾರ ನಗರದ ಬಿ.ಎಚ್ ರಸ್ತೆ, ಲೋಯರ್ ಹುತ್ತಾ, ಸಹ್ಯಾದ್ರಿ ಬಡಾವಣೆಯಲ್ಲಿ ಉದ್ಯಮಿ ದಿವಂಗತ ಮಹಾದೇವಪ್ಪನವರ ನಿವಾಸದಲ್ಲಿ ಆಯೋಜಿಸಲಾಗಿದ್ದ ೪ನೇ ವರ್ಷದ ಇಷ್ಟಲಿಂಗ ಮಹಾಪೂಜೆ ಧಾರ್ಮಿಕ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಅಶೀರ್ವಚನ ನೀಡಿದರು.
ಧರ್ಮಪರಿಪಾಲನೆಯಿಂದ ಉತ್ತಮ ಸಂಸ್ಕಾರ ರೂಢಿಸಿಕೊಳ್ಳಲು ಸಾಧ್ಯ. ಲೋಕ ಕಲ್ಯಾಣಾರ್ಥವಾಗಿ ನೆರವೇರಿಸುವ ಇಷ್ಟಲಿಂಗ ಮಹಾಪೂಜೆ ಈ ನಿಟ್ಟಿನಲ್ಲಿ ಸಹಕಾರಿಯಾಗಿದೆ. ಇಂತಹ ಧಾರ್ಮಿಕ ಕಾರ್ಯಗಳು ಹೆಚ್ಚಾಗಿ ನಡೆಯಬೇಕು. ಮಾನವ ಜನ್ಮ ಶ್ರೇಷ್ಠವಾಗಿದ್ದು, ಇದನ್ನು ಸಾರ್ಥಕಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಬೇಕೆಂದರು.
ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಮಾತನಾಡಿ, ನಾವು ನಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು. ಈ ನಿಟ್ಟಿನಲ್ಲಿ ಇಂತಹ ಆಚರಣೆಗಳು ಸಹಕಾರಿಯಾಗಿವೆ. ಮಕ್ಕಳು ಹಿರಿಯರನ್ನು ಕಡೆಗಣಿಸಬಾರದು. ಅವರನ್ನು ಕಡೆಯವರೆಗೂ ನೋಡಿಕೊಳ್ಳಬೇಕು. ಇದು ಮಕ್ಕಳ ಜವಾಬ್ದಾರಿಯಾಗಿದ್ದು, ಕುಟುಂಬದಲ್ಲಿ ಮಕ್ಕಳು, ಹಿರಿಯರು ಎಲ್ಲರೂ ಒಂದಾಗಿ ಬದುಕಿದಾಗ ಮಾತ್ರ ಆರೋಗ್ಯ ಪೂರ್ಣ ಸಮಾಜ ರೂಪುಗೊಳ್ಳಲು ಸಾಧ್ಯ ಎಂದರು.
ಮಳಲಿ ಮಠದ ಶ್ರೀ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಮತ್ತು ಶ್ರೀ ಶಾಂತವೀರ ಶಿವಾಚಾರ್ಯ ಸ್ವಾಮೀಜಿಯವರು ಉಪಸ್ಥಿತರಿದ್ದು ಮಾತನಾಡಿದರು.
ಕುಟುಂಬ ವರ್ಗದವರಾದ ರತ್ನಮ್ಮ ದಿವಂಗತ ಮಹಾದೇವಪ್ಪ, ಕೃಷ್ಣಮೂರ್ತಿ, ರಂಗಸ್ವಾಮಿ, ಮನು ಮತ್ತು ಸ್ವಾಮಿ ಹಾಗು ಪ್ರಮುಖರಾದ ಸಿದ್ದಲಿಂಗಯ್ಯ, ಕೆ.ಎಸ್ ವಿಜಯ್‌ಕುಮಾರ್, ಕೂಡ್ಲಿಗೆರೆ ಹಾಲೇಶ್, ಯಶವಂತರಾವ್ ಘೋರ್ಪಡೆ, ಎಚ್.ವಿ ಶಿವರುದ್ರಪ್ಪ ಸೇರಿದಂತೆ ಸ್ಥಳೀಯರು ಪಾಲ್ಗೊಂಡಿದ್ದರು.