ಭದ್ರಾವತಿ ನಗರಸಭೆ ವ್ಯಾಪ್ತಿಯ ಕಾಗದನಗರ ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಚೌಡೇಶ್ವರಿ ದೇವಸ್ಥಾನದ ದೇವಿಯ ಆಲಯ ಪ್ರವೇಶ ಸ್ಥಿರಬಿಂಬ ಪ್ರತಿಷ್ಠಾಪನೆ ಹಾಗು ದೇವಿಯ ಗೋಪುರ ಪ್ರತಿಷ್ಠೆ ಕಳಸಾರೋಹಣ ಹಾಗು ದೀಪ ಸ್ಥಂಭ ಪ್ರತಿಷ್ಠಾಪನೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಭದ್ರಾವತಿ : ನಗರಸಭೆ ವ್ಯಾಪ್ತಿಯ ಕಾಗದನಗರ ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಚೌಡೇಶ್ವರಿ ದೇವಸ್ಥಾನದ ದೇವಿಯ ಆಲಯ ಪ್ರವೇಶ ಸ್ಥಿರಬಿಂಬ ಪ್ರತಿಷ್ಠಾಪನೆ ಹಾಗು ದೇವಿಯ ಗೋಪುರ ಪ್ರತಿಷ್ಠೆ ಕಳಸಾರೋಹಣ ಹಾಗು ದೀಪ ಸ್ಥಂಭ ಪ್ರತಿಷ್ಠಾಪನೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ೪.೩೦ ರಿಂದ ೬.೩೦ರ ವರೆಗೆ ಗಂಗಾಪೂಜೆ, ಆಲಯ ಪ್ರವೇಶ, ಪಂಚಾಮೃತ ಅಭಿಷೇಕ, ಅಲಂಕಾರ ಮೂರ್ತಿ ಕ್ಷೇಮ ಮಹಾಪ್ರತಿಷ್ಠೆ ಹಾಗು ಮಹಾಪೂರ್ಣಾಹುತಿ ಹಾಗು ಅಭಿಜಿತ್ ಲಗ್ನದ ಶುಭ ಮುಹೂರ್ತದಲ್ಲಿ ಮಧ್ಯಾಹ್ನ ೧೨ ಗಂಟೆಗೆ ಕಳಸಾರೋಹಣ ಮತ್ತು ಮಧ್ಯಾಹ್ನ ೧ ಗಂಟೆಗೆ ಅನ್ನಸಂತರ್ಪಣೆ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ಮುರಳಿಧರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಕಾಗದನಗರ ೭ನೇ ವಾರ್ಡ್ ಶ್ರೀ ನಾಗರಕಟ್ಟೆ ದೇವಸ್ಥಾನದ ಪ್ರಧಾನ ಅರ್ಚಕ ರಮೇಶ್ ತರಳಿಮಠ ಅವರ ನೇತೃತ್ವದಲ್ಲಿ ಅಮ್ಮನವರ ಮೂಲ ವಿಗ್ರಹ ಹಾಗು ಹೊರಭಾಗದಲ್ಲಿ ಉತ್ಸವ ಮೂರ್ತಿ ಮತ್ತು ಇನ್ನಿತರ ದೇವಾನುದೇವತೆಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.
ಭದ್ರಾವತಿ ಕಾಗದನಗರ ೭ನೇ ವಾರ್ಡ್ ಶ್ರೀ ನಾಗರಕಟ್ಟೆ ದೇವಸ್ಥಾನದ ಪ್ರಧಾನ ಅರ್ಚಕ ರಮೇಶ್ ತರಳಿಮಠ ಅವರ ನೇತೃತ್ವದಲ್ಲಿ ಅಮ್ಮನವರ ಮೂಲ ವಿಗ್ರಹ ಹಾಗು ಹೊರಭಾಗದಲ್ಲಿ ಉತ್ಸವ ಮೂರ್ತಿ ಮತ್ತು ಇನ್ನಿತರ ದೇವಾನುದೇವತೆಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.
ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಎಚ್ ಶ್ರೀನಿವಾಸ್, ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಸುರಗಿತೋಪು, ಕಾಗದನಗರ, ನ್ಯೂಟೌನ್, ಜೆಪಿಎಸ್ ಕಾಲೋನಿ, ಬಾಲಭಾರತಿ, ಆಂಜನೇಯ ಅಗ್ರಹಾರ, ಜನ್ನಾಪುರ, ಉಜ್ಜನಿಪುರ ಸೇರಿದಂತೆ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು.
ದೇವಸ್ಥಾನ ಟ್ರಸ್ಟ್ ಗೌರವಾಧ್ಯಕ್ಷ ಎಂ. ರಾಮಕೃಷ್ಣಪ್ಪ, ಅಧ್ಯಕ್ಷ ಶಿವರಾಜ್, ಉಪಾಧ್ಯಕ್ಷ ಎನ್. ಉಮೇಶ್, ಪ್ರಧಾನ ಕಾರ್ಯದರ್ಶಿ ಕೆ. ಪರಮೇಶ್, ಸಹ ಕಾರ್ಯದರ್ಶಿ ತಿಮ್ಮಪ್ಪ ಬಾನು ತೇಜ, ಖಜಾಂಚಿ ಶ್ಯಾಮ್ ಕುಮಾರ್, ಸಂಘಟನಾ ಕಾರ್ಯದರ್ಶಿಗಳಾದ ಜಿ.ಆರ್ ಸಾಗರ್, ವೈ. ಗೌತಮ್, ಟ್ರಸ್ಟಿಗಳಾದ ಅವಿನಾಶ್, ವಿ. ಯತಿರಾಜ್, ಚೇತನ್‌ಕುಮಾರ್, ಚಂದ್ರಶೇಖರ್, ಕರಿಯಪ್ಪ, ಯಲ್ಲಪ್ಪ ಮತ್ತು ಸಿ. ಕಾಶಿ ಹಾಗು ಸೇವಾಕರ್ತರು, ಊರಿನ ಪ್ರಮುಖರು ಉಪಸ್ಥಿತರಿದ್ದರು.
ಭದ್ರಾವತಿ ನಗರಸಭೆ ವ್ಯಾಪ್ತಿಯ ಕಾಗದನಗರ ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಚೌಡೇಶ್ವರಿ ದೇವಸ್ಥಾನದ ದೇವಿಯ ಆಲಯ ಪ್ರವೇಶ ಸ್ಥಿರಬಿಂಬ ಪ್ರತಿಷ್ಠಾಪನೆ ಹಾಗು ದೇವಿಯ ಗೋಪುರ ಪ್ರತಿಷ್ಠೆ ಕಳಸಾರೋಹಣ ಹಾಗು ದೀಪ ಸ್ಥಂಭ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.