ನ್ಯಾಯವಾದಿ ಮಂಗೋಟೆ ರುದ್ರೇಶ್
ಭದ್ರಾವತಿ: ಭಾರತ-ಪಾಕಿಸ್ತಾನ ನಡುವೆ ನಡೆಯುತ್ತಿರುವ ಯುದ್ಧ ನಿಲ್ಲಬಾರದು. ಪಿಓಕೆ ನಮ್ಮ ದೇಶಕ್ಕೆ ಸೇರಬೇಕು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತೀಯ ಸೈನ್ಯ ಕೈಗೊಳ್ಳುತ್ತಿರುವ ನಿರ್ಧಾರಗಳು ಹಾಗು ನಡೆಸುತ್ತಿರುವ ಕಾರ್ಯಾಚರಣೆ ಸರಿಯಾಗಿದೆ ಎಂದು ನ್ಯಾಯವಾದಿ ಮಂಗೋಟೆ ರುದ್ರೇಶ್ ತಿಳಿಸಿದ್ದಾರೆ.
ನಗರದ ಹಿರಿಯ ಸಮಾಜವಾದಿ ನಾಯಕರು, ಪ್ರಸಿದ್ದ ನ್ಯಾಯವಾದಿಗಳಾಗಿ ಗುರುತಿಸಿಕೊಂಡಿದ್ದ ದಿವಂಗತ ಮಂಗೋಟೆ ಮುರುಗೆಪ್ಪನವರ ಪುತ್ರ, ನ್ಯಾಯವಾದಿ ಮಂಟೋಟೆ ರುದ್ರೇಶ್‌ರವರು ಭಾರತ-ಪಾಕಿಸ್ತಾನ ಯುದ್ಧ ಕುರಿತು ಸಾಮಾನ್ಯ ನಾಗರಿಕನಾಗಿ ಈ ಯುದ್ಧ ಮುಂದುವರೆಯಬೇಕೆಂದು ಬಯಸುತ್ತೇನೆ ಎಂದರು.
ಪಾಕಿಸ್ತಾನ ಭಯೋತ್ಪಾದಕರನ್ನು ರೂಪಿಸುವ ದೇಶವಾಗಿದ್ದು, ಪ್ರಪಂಚದಲ್ಲಿ ಭಯೋತ್ದಾದನೆ ಎಂದ ತಕ್ಷಣ ಮೊದಲಿಗೆ ಪ್ರಸ್ತಾಪಿಸುವ ಹೆಸರು ಪಾಕಿಸ್ತಾನವಾಗಿದೆ. ಈ ಹಿನ್ನಲೆಯಲ್ಲಿ ಭಯೋತ್ಪಾದನೆ ನಿರ್ಮೂಲನೆ ಮಾಡಬೇಕೆಂಬ ಆಶಯ ನನ್ನದಾಗಿದೆ. ಅಲ್ಲದೆ ಪಾಕಿಸ್ತಾನದ ವ್ಯಾಪ್ತಿಯಲ್ಲಿರುವ ಪಿಓಕೆ ನಮ್ಮ ದೇಶ ವಶಪಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ನಡೆಯುತ್ತಿರುವ ಯುದ್ಧದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಸೈನ್ಯ ಕೈಗೊಳ್ಳುವ ನಿರ್ಧಾರಗಳು ಹಾಗು ನಡೆಯುತ್ತಿರುವ ಕಾರ್ಯಾಚರಣೆಗೆ ನಾನು ಸಂಪೂರ್ಣ ಬೆಂಬಲ ನೀಡುತ್ತೇನೆ. ಅಲ್ಲದೆ ಯುದ್ಧದ ಸಂದರ್ಭದಲ್ಲಿ ಪಾಕಿಸ್ತಾನದ ಮೇಲೆ ಯಾರಿಗೂ ಯಾವುದೇ ರೀತಿ ಅನುಕಂಪ ಬೇಡ. ದೇಶದ ಪ್ರತಿಯೊಬ್ಬರು ಒಂದೇ ನಿಟ್ಟಿನಲ್ಲಿ ಯೋಚಿಸಿ ಇಂತಹ ಕಾರ್ಯಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.