ಭದ್ರಾವತಿ ನಗರದ ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಒಡೆಯರ್‌ರವರ ಭಾವಚಿತ್ರ ಹಾಗು ಕರ್ನಾಟಕ ರಾಜ್ಯ ಲಾಂಛನ ಕಛೇರಿಗಳಿಗೆ ನೀಡುವ ಮೂಲಕ ಬುಧವಾರ ಒಡೆಯರ್‌ರವರ ಜನ್ಮದಿನ ವಿಶಿಷ್ಟವಾಗಿ ಆಚರಿಸಲಾಯಿತು.
ಭದ್ರಾವತಿ: ನಗರದ ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಒಡೆಯರ್‌ರವರ ಭಾವಚಿತ್ರ ಹಾಗು ಕರ್ನಾಟಕ ರಾಜ್ಯ ಲಾಂಛನ ಕಛೇರಿಗಳಿಗೆ ನೀಡುವ ಮೂಲಕ ಬುಧವಾರ ಒಡೆಯರ್‌ರವರ ಜನ್ಮದಿನ ವಿಶಿಷ್ಟವಾಗಿ ಆಚರಿಸಲಾಯಿತು.
ನಗರದಲ್ಲಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಹಾಗು ಮೈಸೂರು ಕಾಗದ ಕಾರ್ಖಾನೆ ಆರಂಭಿಸುವ ಮೂಲಕ ಲಕ್ಷಾಂತರ ಕುಟುಂಬಗಳಿಗೆ ಅನ್ನದಾತರಾದ ಮೈಸೂರು ಮಹಾರಾಜ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ನೆನಪಿನಲ್ಲಿ ಕಳೆದ ಕೆಲವು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘ ಹಲವಾರು ಜನಪರ ಹಾಗು ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳುವ ಜೊತೆಗೆ ಅನ್ಯಾಯ, ಶೋಷಣೆಗಳ ವಿರುದ್ಧ ಹೋರಾಟ ನಡೆಸಿಕೊಂಡು ಬರುತ್ತಿದೆ.
ಒಡೆಯರ್‌ರವರ ಹೆಸರನ್ನು ಅಜರಾಮರಗೊಳಿಸುವ ನಿಟ್ಟಿನಲ್ಲಿ ಅವರ ಭಾವಚಿತ್ರ ಸರ್ಕಾರಿ ಕಛೇರಿಗಳಿಗೆ ಉಚಿತವಾಗಿ ನೀಡುವ ಕಾರ್ಯಕ್ಕೆ ಮುಂದಾಗಿದೆ. ಬುಧವಾರ ನಗರದ ನ್ಯೂಟೌನ್ ಪೊಲೀಸ್ ಠಾಣೆಗೆ ತೆರಳಿ ಠಾಣಾ ಉಪ ನಿರೀಕ್ಷಕ ರಮೇಶ್‌ರವರಿಗೆ ಭಾವಚಿತ್ರ ವಿತರಿಸಲಾಯಿತು.
ಸಂಘದ ಅಧ್ಯಕ್ಷ ಆರ್. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ರವಿನಾಯ್ಕ, ಉಪಾಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಕುಮಾರ್, ಖಜಾಂಚಿ ಶಂಕರ್ ನಾಯ್ಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.