ಭದ್ರಾವತಿ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗದ ಆಟೋ ನಿಲ್ದಾಣದಲ್ಲಿ ಶುಕ್ರವಾರ ಆಟೋ ಮಾಲೀಕರು, ಚಾಲಕರು ಹಾಗು ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಅಭಿಮಾನಿಗಳಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ನಾಡಪ್ರಭು ಕೆಂಪೇಗೌಡರ ಜನ್ಮದಿನ ಆಚರಿಸಲಾಯಿತು.
ಭದ್ರಾವತಿ: ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗದ ಆಟೋ ನಿಲ್ದಾಣದಲ್ಲಿ ಶುಕ್ರವಾರ ಆಟೋ ಮಾಲೀಕರು, ಚಾಲಕರು ಹಾಗು ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಅಭಿಮಾನಿಗಳಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ನಾಡಪ್ರಭು ಕೆಂಪೇಗೌಡರ ಜನ್ಮದಿನ ಆಚರಿಸಲಾಯಿತು.
ತಾಲೂಕು ಒಕ್ಕಲಿಗರ ಸಂಘದ ಗೌರವಾಧ್ಯಕ್ಷೆ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ಕಾರ್ಯಕ್ರಮ ಉದ್ಘಾಟಿಸಿ, ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಪಟಾಕಿ ಸಿಡಿಸಿ ಸಂಭ್ರಮಿಸಿ ಸಾರ್ವಜನಿಕರಿಗೆ ಲಾಡು ಹಂಚಲಾಯಿತು.
ಮುಖಂಡರಾದ ತಿಮ್ಮೇಗೌಡ, ಆಟೋ ಚಾಲಕ ಸಂಘದ ಲಕ್ಷ್ಮಣ್, ಅರುಣ್, ವಿಶ್ವೇಶ್ವರ ಗಾಯಕ್ವಾಡ್, ಕಾರ್ಮಿಕ ಮುಖಂಡ ಎನ್. ಶ್ರೀನಿವಾಸ್, ಭಾಗ್ಯಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.