೭ನೇ ತರಗತಿ, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ಅತಿಹೆಚ್ಚು ಅಂಕಪಡೆದ ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಉದ್ಯೋಗಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
ಭದ್ರಾವತಿ : ೭ನೇ ತರಗತಿ, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ಅತಿಹೆಚ್ಚು ಅಂಕಪಡೆದ ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಉದ್ಯೋಗಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
ಕಾರ್ಖಾನೆಯ ಭದ್ರಾ ಅತಿಥಿ ಗೃಹದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಶೇ. ೯೦ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸುವ ಮೂಲಕ ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ಹಾರೈಸಲಾಯಿತು.
ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ಮುಖ್ಯ ಮಹಾಪ್ರಬಂಧಕ(ಸ್ಥಾವರ), ಕೆ.ಎಸ್ ಸುರೇಶ್, ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್ ಮತ್ತು ಅಧಿಕಾರಿಗಳ ಸಂಘದ ಅಧ್ಯಕ್ಷ ಪಾರ್ಥಸಾರಥಿ ಮಿಶ್ರಾ ಮಕ್ಕಳಿಗೆ ಅಭಿನಂದನಾ ಪತ್ರ, ನಗದು ಪುರಸ್ಕಾರ ಮತ್ತು ಸಸಿಗಳನ್ನು ನೀಡಿ, ಅವರ ಸಾಧನೆಗಳನ್ನು ಪ್ರಶಂಸಿಸಲಾಯಿತು.
ಸಮಾರಂಭದಲ್ಲಿ ಕಾರ್ಮಿಕರ ಸಂಘ ಮತ್ತು ಅಧಿಕಾರಿಗಳ ಸಂಘದ ಪದಾಧಿಕಾರಿಗಳು, ಹಿರಿಯ ಅಧಿಕಾರಿಗಳು, ಕಾರ್ಮಿಕರು, ಅವರ ಕುಟುಂಬದವರು ಪಾಲ್ಗೊಂಡಿದ್ದರು.
ಮಹಾಪ್ರಬಂಧಕರು (ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಕಾಖಾನೆಯ ಉದ್ಯೋಗಿಗಳ ಮಕ್ಕಳಿಗೆ ಶೈಕ್ಷಣಿಕವಾಗಿ ಉತ್ತೇಜನ ನೀಡಲು ಇರುವ ಹಲವು ಯೋಜನೆಗಳ ಬಗ್ಗೆ ತಿಳಿಸಿದರು. ಎಸ್. ಅನನ್ಯ ಪ್ರಾರ್ಥಿಸಿದರು.