ಭದ್ರಾವತಿ ಹೊಳೆಹೊನ್ನೂರು ರಸ್ತೆ ಸೀಗೇಬಾಗಿ ಕ್ರಾಸ್ ಬಸ್ ನಿಲ್ದಾಣದ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ೧ ಕೆ.ಜಿ ೧೪೦ ಗ್ರಾಂ. ತೂಕದ ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳುವಲ್ಲಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಭದ್ರಾವತಿ : ಬಸ್ ನಿಲ್ದಾಣದ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ೧ ಕೆ.ಜಿ ೧೪೦ ಗ್ರಾಂ. ತೂಕದ ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳುವಲ್ಲಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿರುವ ಘಟನೆ ನಡೆದಿದೆ.
ಹೊಳೆಹೊನ್ನೂರು ರಸ್ತೆ ಸೀಗೇಬಾಗಿ ಕ್ರಾಸ್ ಬಸ್ ನಿಲ್ದಾಣದ ಬಳಿ ಇಬ್ಬರು ಅಪರಿಚಿತ ವ್ಯಕ್ತಿಗಳು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಠಾಣಾ ಉಪ ನಿರೀಕ್ಷಕ ಸುನೀಲ್ ಬಿ ತೇಲಿಯವರ ನೇತೃತ್ವದಲ್ಲಿ ಜು.೧೨ರಂದು ಮಧ್ಯಾಹ್ನ ದಾಳಿ ನಡೆಸಲಾಗಿದ್ದು, ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ನಾಗರಾಜ್ ಮತ್ತು ಕಾರ್ತಿಕ್‌ರನ್ನು ಬಂಧಿಸಿ ಇವರಿಂದ ಸುಮಾರು ೨೦ ಸಾವಿರ ರು. ಮೌಲ್ಯದ ೧ ಕೆ.ಜಿ ೧೪೦ ಗ್ರಾಂ. ತೂಕದ ಗಾಂಜಾ ಮತ್ತು ಗಾಂಜಾ ಮಾರಾಟದಿಂದ ಬಂದ ರು.೧,೫೦೦ ನಗದು ಹಾಗು ಸುಮಾರು ೬೦ ಸಾವಿರ ರು. ಮೌಲ್ಯದ ದ್ವಿಚಕ್ರ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ನಗರಸಭೆ ಸಿಬ್ಬಂದಿಗಳಾದ ಆಶಾಲತಾ, ರವಿ, ಜಿಲ್ಲಾ ಸಹಾಯಕ ಡ್ರಗ್ ಕಂಟ್ರೋಲರ್ ಡಾ. ವೀರೇಶ್ ಬಾಬು, ಪೊಲೀಸ್ ಸಿಬ್ಬಂದಿಗಳಾದ ಹಾಲಪ್ಪ, ಚಿನ್ನನಾಯ್ಕ, ಚಿಕ್ಕಪ್ಪ, ಮೌನೇಶ, ಪ್ರಪ್ಪೂಲ್, ರಾಘವೇಂದ್ರ, ಚಂದ್ರು, ವೀರನಗೌಡ, ಮಂಜುನಾಥ ಮತ್ತು ಶಬ್ಬಿರ್ ಪಾಲ್ಗೊಂಡ್ಡಿದ್ದರು.