ಭಾನುವಾರ, ಆಗಸ್ಟ್ 17, 2025

ಅಂಬೇಡ್ಕರ್‌ರವರ ವಿಚಾರಧಾರೆ ಎಲ್ಲರೂ ಪರಿಪೂರ್ಣವಾಗಿ ಅರ್ಥಮಾಡಿಕೊಂಡಾಗ ಮಾತ್ರ ಪರಿವರ್ತನೆ ಸಾಧ್ಯ : ಅಹಿಂಸಾ ಚೇತನ್

ಭದ್ರಾವತಿ ನಗರದ ಮಿಲ್ಟ್ರಿಕ್ಯಾಂಪ್ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಚಲನಚಿತ್ರ ನಟ ಅಹಿಂಸಾ ಚೇತನ್ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ: ಈ ದೇಶದ ಜನರು ಅಂಬೇಡ್ಕರ್‌ರವರ ವಿಚಾರಧಾರೆಗಳನ್ನು ಪರಿಪೂರ್ಣವಾಗಿ ಅರ್ಥಮಾಡಿಕೊಳ್ಳುವವರೆಗೂ ದೇಶದಲ್ಲಿ ಪರಿವರ್ತನೆ ತರಲು ಸಾಧ್ಯವಿಲ್ಲ ಎಂದು ಚಲನಚಿತ್ರ ನಟ ಅಹಿಂಸಾ ಚೇತನ್ ಹೇಳಿದರು. 
    ಅವರು ನಗರದ ಮಿಲ್ಟ್ರಿಕ್ಯಾಂಪ್ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. 
    ಡಾ. ಬಿ.ಆರ್ ಅಂಬೇಡ್ಕರ್‌ರವರು ದೇಶದ ಸಂವಿಧಾನ ರಚಿಸುವಾಗ ಬಲ ಮತ್ತು ಎಡ ಪಂಥಿಯರು ಹಾಗು ಮನುವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ನಡುವೆ ಕಾಂಗ್ರೆಸ್ ಪಕ್ಷ ಸಹ ಅಂಬೇಡ್ಕರ್‌ರವರಿಗೆ ಪೂರ್ಣಪ್ರಮಾಣದಲ್ಲಿ ಬೆಂಬಲ ನೀಡಲಿಲ್ಲ. ಈಗಿರುವಾಗ ನಾವು ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಹೊಂದುವುದು ಸರಿಯಲ್ಲ. ಅಂಬೇಡ್ಕರ್‌ರವರ ವಿಚಾರಧಾರೆಗಳನ್ನು ಈ ದೇಶದ ಪ್ರತಿಯೊಬ್ಬರು ಅರ್ಥಮಾಡಿಕೊಳ್ಳಬೇಕು. ಆಗ ಮಾತ್ರ ಏನಾದರೂ ಪರಿವರ್ತನೆ ತರಲು ಸಾಧ್ಯ ಎಂದರು. 
    ಸಭೆಯಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರಾದ ಸುರೇಶ್, ಶಿವಬಸಪ್ಪ, ಸತ್ಯ ಭದ್ರಾವತಿ, ಚಿನ್ನಯ್ಯ, ಡಿ. ರಾಜು, ವಿ. ವಿನೋದ್, ಕೃಷ್ಣನಾಯ್ಕ, ಪುಟ್ಟರಾಜ್, ಆರ್. ಅರುಣ್, ಮಂಜುನಾಥ್, ಯು. ಮಹಾದೇವಪ್ಪ, ಶರವಣ, ಲೋಕೇಶ್, ಸುಕನ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಶನಿವಾರ, ಆಗಸ್ಟ್ 16, 2025

ದೇವಸ್ಥಾನ ಶಾಲೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ : ವಿವಿಧ ಧಾರ್ಮಿಕ ಆಚರಣೆ, ಶ್ರೀ ಕೃಷ್ಣ-ರಾಧೆ ವೇಷ ಪ್ರದರ್ಶನ

ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ತಾಲೂಕು ಗೊಲ್ಲ-ಯಾದವ ಸಂಘದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು.
    ಭದ್ರಾವತಿ : ನಗರದ ವಿವಿಧೆಡೆ ದೇವಸ್ಥಾನ ಹಾಗು ಶಾಲೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಶನಿವಾರ ವಿಜೃಂಭಣೆಯಿಂದ ಆಚರಿಸಲಾಯಿತು. ವಿವಿಧ ಕ್ರೀಡೆಗಳು ಹಾಗು ಶ್ರೀ ಕೃಷ್ಣ-ರಾಧೆ ವೇಷ ಪ್ರದರ್ಶನಗಳನ್ನು ಆಯೋಜಿಸಲಾಗಿತ್ತು. 
    ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ತಾಲೂಕು ಗೊಲ್ಲ-ಯಾದವ ಸಂಘದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು. ಕ್ರೀರಾಭಿಷೇಕ, ಗೋದಾನ ಮತ್ತು ಉಯ್ಯಾಲೆ ಸೇವೆ ಸೇರಿದಂತೆ ವಿಶೇಷ ಸೇವೆಗಳನ್ನು ನೆರವೇರಿಸಲಾಯಿತು. 
    ಶ್ರೀ ಕೃಷ್ಣನ ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಬೆಳಿಗ್ಗೆ ೮ ಗಂಟೆಯಿಂದ ರಾತ್ರಿ ೯ ಗಂಟೆವರೆಗೆ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೆ ಭಕ್ತರು ಲಾಡು ಪ್ರಸಾದ ವಿತರಿಸಲಾಯಿತು.   
    ಅನನ್ಯ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಕೃಷ್ಣ-ರಾಧೆ ವೇಷ ಪ್ರದರ್ಶನ : 
    ನಗರದ ಅಪ್ಪರ್ ಹುತ್ತಾ, ಅನನ್ಯ ವಿದ್ಯಾಸಂಸ್ಥೆಯ ಅನನ್ಯ ಹ್ಯಾಪಿ ಹಾರ್ಟ್ಸ್‌ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ವಿಶಿಷ್ಟವಾಗಿ ಹಾಗು ಶ್ರೀ ಕೃಷ್ಣನ ಕುರಿತ ಭಾಷಣ, ಹಾಡು ಹಾಗು ನೃತ್ಯ ಮತ್ತು ವೇಷ ಪ್ರದರ್ಶನದ ಮೂಲಕ ಅರ್ಥಗರ್ಭಿತವಾಗಿ ಆಚರಿಸಲಾಯಿತು. 


ಭದ್ರಾವತಿ ನಗರದ ಅಪ್ಪರ್ ಹುತ್ತಾ, ಅನನ್ಯ ವಿದ್ಯಾಸಂಸ್ಥೆಯ ಅನನ್ಯ ಹ್ಯಾಪಿ ಹಾರ್ಟ್ಸ್‌ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ವಿಶಿಷ್ಟವಾಗಿ ಹಾಗು ಶ್ರೀ ಕೃಷ್ಣನ ಕುರಿತ ಭಾಷಣ, ಹಾಡು ಹಾಗು ನೃತ್ಯ ಮತ್ತು ವೇಷ ಪ್ರದರ್ಶನದ ಮೂಲಕ ಅರ್ಥಗರ್ಭಿತವಾಗಿ ಆಚರಿಸಲಾಯಿತು. 
    ಕಾರ್ಯಕ್ರಮದಲ್ಲಿ ಪ್ಲೇ ಹೋಮ್, ನರ್ಸರಿ, ಎಲ್.ಕೆ.ಜಿ ಹಾಗೂ ಯು.ಕೆ.ಜಿ ವಿದ್ಯಾರ್ಥಿಗಳು ಕೃಷ್ಣ-ರಾಧೆ ವೇಷಧಾರಿಯೊಂದಿಗೆ ಕಣ್ಮನ ಸೆಳೆದರು. ಮಕ್ಕಳಿಂದ ಭಾಷಣ, ಹಾಡು ಹಾಗೂ ನೃತ್ಯ ಪದರ್ಶನ ಜರುಗಿದವು. ಸಹ ಶಿಕ್ಷಕಿ ಲತಾ ದ್ರೋಣ, ಭೀಷ್ಮ ಮತ್ತು ಕರ್ಣನಿಗೆ  ಶ್ರೀ ಕೃಷ್ಣನು ನೀಡಿದ ಸಂದೇಶದ ಬಗ್ಗೆ ವಿವರಿಸಿದರು. 
    ಅನನ್ಯ ವಿದ್ಯಾಸಂಸ್ಥೆ ಕಾರ್ಯದರ್ಶಿ ಬಿ.ಎಸ್ ಅನಿಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ವೇಣುಗೋಪಾಲ್,  ಮುಖ್ಯೋಪಾಧ್ಯಾಯ ಕೆ. ಕಲ್ಲೇಶ್ ಕುಮಾರ್, ಉಪ ಮುಖ್ಯ ಶಿಕ್ಷಕಿ ಆರ್. ಸುನಿತ ಹಾಗೂ ಅನನ್ಯ ಹ್ಯಾಪಿ ಹಾರ್ಟ್ಸ್ ಮುಖ್ಯ ಶಿಕ್ಷಕಿ ತನುಜಾ ಅನಿಲ್  ಶಿಕ್ಷಕರು ಹಾಗೂ ಶಿಕ್ಷಕೇತರ ವರ್ಗದವರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
  ಸಹ ಶಿಕ್ಷಕಿಯರಾದ ಶರ್ಮಿಳಾ ನಿರೂಪಿಸಿ,  ರಮ್ಯ ಸ್ವಾಗತಿಸಿ,  ರೇಣುಕ ಪ್ರಸಾದ್ ವಂದಿಸಿದರು.

ಸಂಸದ ಬಿ.ವೈ ರಾಘವೇಂದ್ರ ಹುಟ್ಟುಹಬ್ಬ : ವಿಶೇಷ ಪೂಜೆ, ಸಾಮಾಜಿಕ ಸೇವಾ ಕಾರ್ಯಗಳು

ಅಭಿವೃದ್ಧಿಯ ಹರಿಕಾರ, ಯುವಕರ ಕಣ್ಮಣಿ, ಜಿಲ್ಲೆಯ ನೆಚ್ಚಿನ ಸಂಸದ ಬಿ.ವೈ ರಾಘವೇಂದ್ರರವರ ಹುಟ್ಟುಹಬ್ಬ ಭದ್ರಾವತಿ ವಿಧಾನಸಭಾ ಕ್ಷೇತ್ರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗು ಸಾಮಾಜಿಕ ಸೇವಾ ಕಾರ್ಯಗಳೊಂದಿಗೆ ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ ವತಿಯಿಂದ ಶನಿವಾರ ಅದ್ದೂರಿಯಾಗಿ ಜರುಗಿತು. ಹೊಸಮನೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಸಂಸದ ಬಿ. ವೈ. ರಾಘವೇಂದ್ರ ರವರ ೫೩ನೇ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಲಾಯಿತು
    ಭದ್ರಾವತಿ : ಅಭಿವೃದ್ಧಿಯ ಹರಿಕಾರ, ಯುವಕರ ಕಣ್ಮಣಿ, ಜಿಲ್ಲೆಯ ನೆಚ್ಚಿನ ಸಂಸದ ಬಿ.ವೈ ರಾಘವೇಂದ್ರರವರ ಹುಟ್ಟುಹಬ್ಬ ವಿಧಾನಸಭಾ ಕ್ಷೇತ್ರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗು ಸಾಮಾಜಿಕ ಸೇವಾ ಕಾರ್ಯಗಳೊಂದಿಗೆ ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ ವತಿಯಿಂದ ಶನಿವಾರ ಅದ್ದೂರಿಯಾಗಿ ಜರುಗಿತು. 
    ಬಳಗದ ಸಂಚಾಲಕ, ಆನಂದ ಸಾಮಾಜಿಕ ಸೇವಾ ಸಂಸ್ಥೆ ಅಧ್ಯಕ್ಷ ಜಿ. ಆನಂದ ಕುಮಾರ್ ನೇತೃತ್ವದಲ್ಲಿ ಬೆಳಿಗ್ಗೆ ಹೊಸಮನೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಸಂಸದ ಬಿ. ವೈ. ರಾಘವೇಂದ್ರ ರವರ ೫೩ನೇ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಲಾಯಿತು. 
    ಬಿಜೆಪಿ ಪಕ್ಷದ ಮಂಡಲ ನಗರ ಘಟಕದ ಅಧ್ಯಕ್ಷ ಜಿ. ಧರ್ಮ ಪ್ರಸಾದ್, ಗ್ರಾಮಾಂತರ ಘಟಕದ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಪಕ್ಷದ ಮುಖಂಡರಾದ ಕೂಡ್ಲಿಗೆರೆ ಹಾಲೇಶ್, ಮಂಗೋಟೆ ರುದ್ರೇಶ್, ಎಂ. ಮಂಜುನಾಥ್, ಮಹಿಳಾ ಅಧ್ಯಕ್ಷೆ  ಸರಸ್ವತಮ್ಮ, ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ರಘುರಾವ್,  ಅಣ್ಣಪ್ಪ,  ಹನುಮಂತನಾಯ್ಕ, ಎಚ್.ಎಸ್ ಸುಬ್ರಹ್ಮಣ್ಯ,  ಕೃಷ್ಣ ಛಲವಾದಿ,  ರವಿಕುಮಾರ್, ನರೇಂದ್ರ,  ರಾಜು ರೇವಣಕರ್, ಕಾ. ರಾ. ನಾಗರಾಜ್, ಓಬಿಸಿ ರಾಜ ಮೆಡಿಕಲ್, ಮೋಹನ್, ಕಲ್ಲು ಮಂಜು,  ಭವಾನಿ, ಯೋಗಿ(ಗ್ಯಾಸ್), ಅರುಣ ಬಾದ್ರಿ, ತಿಪ್ಪಣ್ಣ, ದೊಡ್ಡಮನೆ ನಾರಾಯಣ, ಎಂ.ಎಸ್ ಸುರೇಶಪ್ಪ, ಯೋಗಿ(ಲಾರಿ), ಕೊಮಾರನಹಳ್ಳಿ ರವಿಕುಮಾರ್, ನಂಜಪ್ಪ ಗೌಡ್ರು, ಪ್ರಕಾಶಣ್ಣ, ಹರೀಶ್ ತರುಣ ಭಾರತಿ, ರಾಮಚಂದ್ರ ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ದೇವಸ್ಥಾನದ  ಸಮಿತಿ  ಸದಸ್ಯರಾದ  ಸತ್ಯವತಿ, ಅಕ್ಕಿ ಬಾಬು, ಶೇಖರಪ್ಪ, ನಾಗರಾಜ್, ವೆಂಕಟೇಶ್, ಮುರುಗನ್, ಸಂತೋಷ ಹಾಗೂ ಭಕ್ತರು ಉಪಸ್ಥಿತರಿದ್ದರು. ದೇವಸ್ಥಾನದ ಅರ್ಚಕ ಸಂತೋಷ್‌ರವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳೊಂದಿಗೆ ವಿಶೇಷ ಪೂಜಾ ಕಾರ್ಯಕ್ರಮ ಜರುಗಿತು.

೭೯ನೇ ಸ್ವಾತಂತ್ರ್ಯೋತ್ಸವ : ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ

ಭದ್ರಾವತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಲಾಗಿದ್ದ ೭೯ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ವೈದ್ಯರು ಹಾಗು ಸಿಬ್ಬಂದಿಗಳನ್ನು ಮತ್ತು ದೇವಸ್ಥಾನದ ಅರ್ಚಕರನ್ನು ಹಾಗು ಉಪನ್ಯಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಭದ್ರಾವತಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಲಾಗಿದ್ದ ೭೯ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ವೈದ್ಯರು ಹಾಗು ಸಿಬ್ಬಂದಿಗಳನ್ನು ಮತ್ತು ದೇವಸ್ಥಾನದ ಅರ್ಚಕರನ್ನು ಹಾಗು ಉಪನ್ಯಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರಾದ ಡಾ. ಪ್ರೀತಿ ಮತ್ತು ಡಾ. ಜಗದೀಶ್ ಅರಬಿಳಚಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲ ಬಾಯಿ, ಸಿಬ್ಬಂದಿಗಳಾದ ಪ್ರೇಮಕುಮಾರಿ, ಕವಿತಾ, ಶ್ರೀಕಾಂತ್ ಮತ್ತು ಆಶಾ ಸೇರಿದಂತೆ ಇನ್ನಿತರರ ಸಾಧನೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. 
    ಅಲ್ಲದೆ ಹೊಸಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಉಪನ್ಯಾಸಕರಾದ ಮಂಜಪ್ಪ, ಶೈಲಶ್ರೀ, ಸನ್ಯಾಸಿ ಕೋಡಮಗ್ಗಿ ಸರ್ಕಾರಿ ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ರೇವಣ ಸಿದ್ದಪ್ಪ, ಹುತ್ತಾ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹರ್ಷ, ಇತ್ತೀಚಿಗೆ ಮನೋವಿಜ್ಞಾನದಲ್ಲಿ ಪಿಎಚ್‌ಡಿ ಪದವಿ ಪಡೆದಿರುವ ಎಸ್.ಜಿ ಮೇಘನಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 
ಹಲವಾರು ವರ್ಷಗಳಿಂದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಪವನ್ ಕುಮಾರ್ ಉಡುಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಈ ಬಾರಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಹಾಗು ಪ್ರತಿಭಾವಂತ ವಿದ್ಯಾರ್ಥಿಗಳು ಸೇರಿದಂತೆ ಸುಮಾರು ೭೦ಕ್ಕೂ ಹೆಚ್ಚು ಮಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ತಹಸೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಕೆ.ಎನ್ ಹೇಮಂತ್, ಸದಸ್ಯರಾದ ಬಿ.ಟಿ ನಾಗರಾಜ್, ಚನ್ನಪ್ಪ, ಲತಾ ಚಂದ್ರಶೇಖರ್, ಶೃತಿ ವಸಂತಕುಮಾರ್, ಅನುಸುಧಾ ಮೋಹನ್ ಪಳನಿ, ಬಸವರಾಜ ಬಿ. ಆನೇಕೊಪ್ಪ, ಜಾರ್ಜ್, ಶಶಿಕಲಾ ನಾರಾಯಣಪ್ಪ, ಕಾಂತರಾಜ್, ಬಿ.ಎಂ ಮಂಜುನಾಥ್ ಸೇರಿದಂತೆ ಚುನಾಯಿತ ಹಾಗು ನಾಮನಿರ್ದೇಶಿತ ಸದಸ್ಯರು, ನಗರ ಆಶ್ರಯ ಸಮಿತಿ ಅಧ್ಯಕ್ಷ ಜಿ.ಎಸ್ ಗೋಪಾಲ್, ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಆರ್‌ಎಎಫ್ ಬೆಟಾಲಿಯನ್ ಕಮಾಂಡರ್ ಕಮಲೇಶ್, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ತಾಲೂಕು ವೈದ್ಯಾಧಿಕಾರಿ ಡಾ. ಎಂ.ವಿ ಅಶೋಕ್, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರಾದ ಶಿವುಪಾಟೀಲ್, ವಿನೋದ್, ಶಿವಪ್ಪ, ರಾಜೇಂದ್ರ, ಸುಕನ್ಯ, ಮಹಮದ್ ರಫಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಶುಕ್ರವಾರ, ಆಗಸ್ಟ್ 15, 2025

ಮಠ-ಮಂದಿರ, ದೇವಸ್ಥಾನಗಳ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ : ಪಾವಿತ್ರ್ಯತೆಗೆ ಧಕ್ಕೆ

ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ಬಳಗದಿಂದ ಬೃಹತ್ ಸಹಿ ಅಭಿಯಾನ : ಆಕ್ರೋಶ 


ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ಬಳಗದಿಂದ ಭದ್ರಾವತಿ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪ ಶುಕ್ರವಾರ ಬೃಹತ್ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. 
    ಭದ್ರಾವತಿ: ದೇಶದಲ್ಲಿರುವ ಹಿಂದೂಗಳ ಧಾರ್ಮಿಕ ಶ್ರದ್ದಾ ಕೇಂದ್ರಗಳು, ಮಠ-ಮಂದಿರ, ದೇವಸ್ಥಾನಗಳ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪಗಳಿಂದ ಅಪಮಾನ ಮಾಡುವುದು, ಅವುಗಳ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ಕೆಲಸ ಮಾಡುತ್ತಿರುವುದನ್ನು ಸಹಿಸುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ್ಯ ಕಾರ್ಯಕಾರಿಣಿ ಸದಸ್ಯ ಹಾ. ರಾಮಪ್ಪ ಆಕ್ರೋಶ ವ್ಯಕ್ತಪಡಿಸಿದರು
    ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ಬಳಗದಿಂದ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
    ಅಭಿವೃಧ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಮಾಡುವ ಮೂಲಕ ಲಕ್ಷಾಂತರ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಧರ್ಮದರ್ಶಿಗಳಾದ ಡಿ. ವಿರೇಂದ್ರ ಹೆಗ್ಗಡೆಯವರ ಹೆಸರಿಗೆ ಮಸಿ ಬಳಿಯುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದರು.
    ನ್ಯಾಯವಾದಿ ಕೆ.ಎನ್. ಶ್ರೀ ಹರ್ಷ ಮಾತನಾಡಿ ದೇಶದಲ್ಲಿನ ಅಸಂಖ್ಯಾತ ಭಕ್ತರು ಭೇಟಿ ನೀಡುವ ಸ್ಥಳಗಳನ್ನು ಅಯ್ಕೆ ಮಾಡಿ ಅದರ ವಿರುಧ್ಧ ವ್ಯವಸ್ಥಿತ ಸುಳ್ಳು ಅಪಪ್ರಚಾರ ಮಾಡುತ್ತಿರುವವರ ಬಗ್ಗೆ ಸಮಾಜ ಸರಿಯಾದ ರೀತಿಯಲ್ಲಿ ಉತ್ತರಿಸಿ ಶಾಸ್ತಿ ಮಾಡಬೇಕು. ಇಲ್ಲದಿದ್ದರೆ ಅವರುಗಳು ಜನರ ನಂಬಿಕೆ ಬಗ್ಗೆ ಅನುಮಾನ ಉಂಟು ಮಾಡುತ್ತಾರೆ ಎಂದು ಎಚ್ಚರಿಸಿದರು
ಎ.ಟಿ.ರವಿ ಮಾತನಾಡಿ, ಹಿಂದೂ ಧರ್ಮದ ನಂಬಿಕೆಗಳಿಗೆ ಧಕ್ಕೆಯನ್ನು ಉಂಟು ಮಾಡಿದರೆ ಸಹಿಸಲು ಸಾಧ್ಯವಿಲ್ಲ ಎಂದರು.
    ಬಿಜೆಪಿ ನಗರ ಅಧ್ಯಕ್ಷ ಜಿ. ಧರ್ಮಪ್ರಸಾದ್ ಮಾತನಾಡಿ, ಧಾರ್ಮಿಕ ಕೇಂದ್ರಗಳ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಮಾಡುತ್ತಿರುವ ವಿನಾಕಾರಣ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದು,  ಇವರ ಕಾರ್ಯ ಯಶಸ್ವಿಯಾಗುವುದಿಲ್ಲ ಎಂದರು. 
ಬಿ.ಎಸ್ ಮಹೇಶ್ ಕುಮಾರ್, ಆರ್. ಕರುಣಾಮೂರ್ತಿ, ಡಿ.ಟಿ ಶ್ರೀಧರ್, ಸ್ವಪ್ನಕುಮಾರ್ ತೇಲ್ಕರ್ ಸೇರಿದಂತೆ ಇನ್ನಿತರರು ಸಭೆಯನ್ನುದ್ದೇಶಿಸಿ ಮಾತನಾಡಿದರು.
    ರಮೇಶ್, ಯೋಗೀಶ್ ಗುಜ್ಜಾರ್, ಕೆ.ಎಚ್ ತೀರ್ಥಯ್ಯ, ಪಿ.ಸಿ ಜೈನ್, ಸಂಪತ್‌ರಾಜ್ ಬಾಂಟಿಯಾ, ದಿಲೀಪ್ ಕುಮಾರ್ ಜೈನ್, ಯೋಗೀಶ್, ಲತಾ, ಆಶಾ, ಕವಿತಾ, ಅನ್ನಪೂರ್ಣ, ಸುಲೋಚನಾ, ಆರತಿ, ಜಯಲಕ್ಷ್ಮಿ, ಪ್ರೇಮ ಹಾಗು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು. 

ನಗರದ ವಿವಿಧೆಡೆ ವಿಜೃಂಭಣೆಯಿಂದ ಜರುಗಿದ ೭೯ನೇ ಸ್ವಾತಂತ್ರ್ಯೋತ್ಸವ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ವಿಐಎಸ್‌ಎಲ್ ರಜತ ಮಹೋತ್ಸವ ಕ್ರೀಡಾಂಗಣದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಧ್ವಜಾರೋಹಣ ನೆರವೇರಿಸಿದರು.  
    ಭದ್ರಾವತಿ:  ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್), ತರಂಗ ಕಿವುಡು ಮಕ್ಕಳ ಶಾಲೆ, ಗೃಹರಕ್ಷಕ ದಳ  ಸೇರಿದಂತೆ ನಗರದ ವಿವಿಧೆಡೆ ಶುಕ್ರವಾರ ೭೯ನೇ ಸ್ವಾತಂತ್ರ್ಯೋತ್ಸವ ವಿಜೃಂಭಣೆಯಿಂದ ಜರುಗಿತು.  
    ಸೈಲ್-ವಿಐಎಸ್‌ಎಲ್ ಕಾರ್ಖಾನೆ : 
    ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ವಿಐಎಸ್‌ಎಲ್ ರಜತ ಮಹೋತ್ಸವ ಕ್ರೀಡಾಂಗಣದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು. 
    ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಧ್ವಜಾರೋಹಣ ನೆರವೇರಿಸಿದರು.  ಇದಕ್ಕೂ ಮೊದಲು ಮಹಾಪ್ರಬಂಧಕ(ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್ ಕಾರ್ಯಪಾಲಕ ನಿರ್ದೇಶಕರನ್ನು ಕಾರ್ಯಕ್ರಮಕ್ಕೆ ಬರಮಾಡಿಕೊಂಡರು. 
    ಕಾರ್ಖಾನೆಯ ಭದ್ರತಾ ಸಿಬ್ಬಂದಿಗಳು, ಸರ್.ಎಂ.ವಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಎನ್.ಸಿ.ಸಿ ಹಾಗು ಸೈಂಟ್ ಚಾರ್ಲ್ಸ್ ಆಂಗ್ಲ ಪ್ರೌಢಶಾಲೆ ಬ್ಯಾಂಡ್ ಸೆಟ್ ಮತ್ತು ವಿವಿಧ ಶಾಲೆಗಳ ಸ್ಕೌಟ್ಸ್-ಗೈಡ್ಸ್ ತಂಡಗಳು ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದವು. ಧ್ವಜಾರೋಹಣ ನೆರವೇರಿಸಿದ ಬಿ.ಎಲ್ ಚಂದ್ವಾನಿ ಪಥಸಂಚಲನ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.
ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಪಡೆದ ಕೆ. ಜತಿನ್, ಸಾನಿಕಾ ದೇವಾಂಗ ಮಠ್ ಮತ್ತು ಪ್ರತೀಕ್ ಬಡಿಗೇರ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ೨೦೨೪ ದಸರಾ ಸಿ.ಎಂ. ಕಪ್ ಬಾಲ್‌ಬ್ಯಾಂಡ್ಮಿಂಟನ್ ಸ್ಪರ್ಧೆಯಲ್ಲಿ ಕಂಚಿನ ಪದಕ ತಮ್ಮದಾಗಿಸಿಕೊಂಡಿರುವ ಕಾರ್ಖಾನೆ ಉದ್ಯೋಗಿ ಸೀತಾರಾಮ್, ಸಕ್ಷಮ್ ಬ್ಯುಸಿನೆಸ್ ಕ್ವಿಜ್ ಸಾಧನೆ ಮಾಡಿರುವ ಉಪ ಮಹಾಪ್ರಬಂಧಕ(ಚಾಲನೆ) ಎಮ್.ಎಸ್ ಕುಮಾರ್ ಮತ್ತು ಉಪಪ್ರಬಂಧಕ(ಮಿಲ್ಸ್ ಮತ್ತು ಆರ್.ಟಿ.ಎಸ್) ಎಮ್. ಕೃಷ್ಣ  ಹಾಗೂ ಸಮರ್ಥ್ ಬ್ಯುಸಿನೆಸ್ ಕ್ವಿಜ್ ಸಾಧನೆ ಮಾಡಿರುವ ನಾಗೇಶ್ ಹಾಗೂ ಪ್ರವೇಶ್ ಝಾ, ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಮಹಾಪ್ರಬಂಧಕ(ಸ್ಥಾವರ) ಕೆ.ಎಸ್ ಸುರೇಶ್ ಸೇರಿದಂತೆ ಕಾರ್ಖಾನೆಯ ಹಿರಿಯ ಅಧಿಕಾರಿಗಳು, ಕಾರ್ಮಿಕ ಮತ್ತು ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಉಪ ಪ್ರಬಂಧಕಿ(ಎಚ್.ಆರ್)  ಕೆ.ಎಸ್ ಶೋಭ ಮತ್ತು  ಕಿರಿಯ ಪ್ರಬಂಧಕ (ಹೆಚ್.ಆರ್-ಎಲ್&ಡಿ) ಎಮ್.ಎಲ್. ಯೋಗೇಶ್ ಕಾರ್ಯಕ್ರಮ ನಿರೂಪಿಸಿದರು. 
 

ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದ ವತಿಯಿಂದ ೭೯ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಸಂಘದ ಕಛೇರಿಯನ್ನು ವಿಐಎಸ್‌ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್ ಉದ್ಘಾಟಿಸಿ ಮಾತನಾಡಿದರು. 
    ಬಿಪಿಎಲ್ ಸಂಘ: 
ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದ ವತಿಯಿಂದ ೭೯ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಏರ್ಪಡಿಸಲಾಗಿದ್ದ ಉಚಿತ ಕಣ್ಣಿನ ತಪಾಸಣೆ ಶಿಬಿರ .  ಸಂಘದ ಗೌರವ ಅಧ್ಯಕ್ಷ ಎಸ್.ಕೆ ಸುಧೀಂದ್ರ ಉದ್ಘಾಟಿಸಿದರು. 
ಇದಕ್ಕೂ ಮೊದಲು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಧ್ವಜಾರೋಹಣ ನೆರವೇರಿಸಿದರು. ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ವಿಐಎಸ್‌ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್ ಸಂಘದ ಕಛೇರಿ ಉದ್ಘಾಟಿಸಿ ಮಾತನಾಡಿದರು. ಗುತ್ತಿಗೆದಾರ ಎಂ.ಜಿ ರಾಮಚಂದ್ರನ್, ನಗರಸಭೆ ಸದಸ್ಯ ಐ.ವಿ ಸಂತೋಷ್ ಕುಮಾರ್, ಸಂಜೀವಿನಿ ಹಿರಿಯ ನಾಗರಿಕರ ಆರೈಕೆ ಕೇಂದ್ರದ ಸವಿತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ಸಂಘದ ಅಧ್ಯಕ್ಷ ಬಿ. ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪದಾಧಿಕಾರಿಗಳಾದ ಪ್ರಧಾನ ಕಾರ್ಯದರ್ಶಿ ಶ್ಯಾಮ್, ಕಾರ್ಯಾಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ದಾಸ್, ಸಂಘಟನಾ ಕಾರ್ಯದರ್ಶಿಗಳಾದ ಜ್ಯೋತಿ ಪ್ರಸಾದ್, ರಾಜಣ್ಣ, ಖಜಾಂಚಿ ಸುನಿಲ್ ಕುಮಾರ್, ನಿರ್ದೇಶಕರಾದ ನಿರಂಜನ್, ಯೋಗೇಶ್, ರಘು ಮತ್ತು ಸಂತೋಷ್ ಸೇರಿದಂತೆ ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.  ಸಿಹಿ ವಿತರಣೆ ಹಾಗು ಊಟದ ವ್ಯವಸ್ಥೆ ಕೈಗೊಳ್ಳಲಾಗಿತ್ತು. 


ಭದ್ರಾವತಿ ನಗರದ ನ್ಯೂಟೌನ್ ಶಿವಭದ್ರ ಟ್ರಸ್ಟ್, ತರಂಗ ಕಿವುಡು ಮಕ್ಕಳ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.  ಶಾಲಾ ಆವರಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಕಣ್ಣಪ್ಪ ಧ್ವಜಾರೋಹಣ ನೆರವೇರಿದರು. 
    ತರಂಗ ಕಿವುಡು ಮಕ್ಕಳ ಶಾಲೆ: 
    ನಗರದ ನ್ಯೂಟೌನ್ ಶಿವಭದ್ರ ಟ್ರಸ್ಟ್, ತರಂಗ ಕಿವುಡು ಮಕ್ಕಳ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.  
    ಶಾಲಾ ಆವರಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಕಣ್ಣಪ್ಪ ಧ್ವಜಾರೋಹಣ ನೆರವೇರಿದರು. ಟ್ರಸ್ಟ್ ಅಧ್ಯಕ್ಷ ಡಾ. ಟಿ. ನರೇಂದ್ರಭಟ್ ಅಧ್ಯಕ್ಷತೆ ವಹಿಸಿದ್ದರು. ಡಾ. ಸಿ.ಆರ್ ಗುರುರಾಜು, ಬಿ. ಮಂಜುನಾಥ್, ಮಹಮದ್ ಆರೀಫ್, ಕೆ. ಅನಂತ ಕೃಷ್ಣನಾಯಕ್, ಆರ್. ಉಮೇಶ್, ಯಲ್ಲೋಜಿ ರಾವ್, ಮಧು, ಟ್ರಸ್ಟ್ ಕಾರ್ಯದರ್ಶಿ ಸುಭಾಷ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಭದ್ರಾವತಿ ನಗರದ ನ್ಯೂಟೌನ್ ಗೃಹರಕ್ಷಕದಳ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
    ಗೃಹರಕ್ಷಕ ದಳ : 
    ನಗರದ ನ್ಯೂಟೌನ್ ಗೃಹರಕ್ಷಕದಳ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಧ್ವಜಾರೋಹಣ ನೆರವೇರಿಸಿದರು. 
    ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್, ಸ್ಥಳೀಯ ಮುಖಂಡ ಎಸ್.ಎಸ್ ಭೈರಪ್ಪ, ನಿವೃತ್ತ ಪ್ಲಟೂನ್ ಕಮಾಂಡರ್‌ಗಳಾದ ಕೃಷ್ಣೋಜಿರಾವ್, ಎ. ರಾಜಣ್ಣ, ಘಟಕಾಧಿಕಾರಿ ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದು, ಗೃಹರಕ್ಷಕ ದಳದಿಂದ ಗೌರವ ವಂದನೆ ಸ್ವೀಕರಿಸಿದರು. ಬಿ.ಎಸ್ ಗಣೇಶ್ ಹಾಗು ಎಸ್.ಎಸ್ ಭೈರಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.  

ವಿದ್ಯಾವಂತರಾದರೆ ಸಾಲದು ಜ್ಞಾನವಂತರಾಗಿ ಸದೃಢ ಸಮಾಜ ನಿರ್ಮಾಣವಾಗಲಿ : ಪರುಸಪ್ಪ ಕುರುಬರ

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು. ತಹಸೀಲ್ದಾರ್ ಪರುಸಪ್ಪ ಕುರುಬರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. 
    ಭದ್ರಾವತಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು. ತಹಸೀಲ್ದಾರ್ ಪರುಸಪ್ಪ ಕುರುಬರ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವ ಸಾರ್ಥಕಗೊಳ್ಳಬೇಕಾದರೆ ನಾವೆಲ್ಲರೂ ಕೇವಲ ವಿದ್ಯಾವಂತರಾದರೆ ಸಾಲದು ಜ್ಞಾನವಂತರಾಗಿ ಸದೃಢ ಸಮಾಜ ನಿರ್ಮಾಣ ಮಾಡುವಂತವರಾಗಬೇಕು. ಪರಿಸರ ಕಾಳಜಿಯೊಂದಿಗೆ ಉತ್ತಮ ಆರೋಗ್ಯವಂತ ಸಮಾಜ ಸಹ ನಿರ್ಮಾಣಗೊಳ್ಳಬೇಕು. ಮುಂದಿನ ಪೀಳಿಗೆಗೆ ನಮ್ಮ ಕೊಡುಗೆ ಈ ನಿಟ್ಟಿನಲ್ಲಿರಬೇಕೆಂದರು. 
    ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಕೇಂದ್ರ ಹಾಗು ರಾಜ್ಯಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದು ತನ್ನ ಅಧಿಕಾರಾವಧಿಯಲ್ಲಿ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಉತ್ತಮ ಆಡಳಿತ ನೀಡಿದೆ. ಆದರೆ ಬಿಜೆಪಿ ಪಕ್ಷ ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದರೂ ಸಹ ಜನಪರ ಯೋಜನೆಗಳನ್ನು ಜಾರಿಗೊಳಿಸದೆ ಕೇವಲ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಟೀಕಿಸುತ್ತಿದೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ. ಎಂಪಿಎಂ ಕಾರ್ಖಾನೆ ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಕೇಂದ್ರ ಅರಣ್ಯ ಇಲಾಖೆ ಕಾರ್ಖಾನೆ ಆರಂಭಕ್ಕೆ ತೊಡಾಕಿದೆ. ಕ್ಷೇತ್ರದ ಹಿತದೃಷ್ಟಿಯಿಂದ ಅನುಮತಿ ನೀಡುವಂತೆ ಕೋರಿದರು. 
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಕೆ.ಎನ್ ಹೇಮಂತ್, ಸದಸ್ಯರಾದ ಬಿ.ಟಿ ನಾಗರಾಜ್, ಚನ್ನಪ್ಪ, ಲತಾ ಚಂದ್ರಶೇಖರ್, ಶೃತಿ ವಸಂತಕುಮಾರ್, ಅನುಸುಧಾ ಮೋಹನ್ ಪಳನಿ, ಬಸವರಾಜ ಬಿ. ಆನೇಕೊಪ್ಪ, ಜಾರ್ಜ್, ಶಶಿಕಲಾ ನಾರಾಯಣಪ್ಪ, ಕಾಂತರಾಜ್ ಸೇರಿದಂತೆ ಚುನಾಯಿತ ಹಾಗು ನಾಮನಿರ್ದೇಶಿತ ಸದಸ್ಯರು, ನಗರ ಆಶ್ರಯ ಸಮಿತಿ ಅಧ್ಯಕ್ಷ ಜಿ.ಎಸ್ ಗೋಪಾಲ್, ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಆರ್‌ಎಎಫ್ ಬೆಟಾಲಿಯನ್ ಕಮಾಂಡರ್ ಕಮಲೇಶ್, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರಾದ ಶಿವುಪಾಟೀಲ್, ವಿನೋದ್, ಶಿವಪ್ಪ, ರಾಜೇಂದ್ರ, ಸುಕನ್ಯ, ಮಹಮದ್ ರಫಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿದರು. ಸುಮತಿ ಕಾರಂತ್, ಕೋಕಿಲ, ತ್ರಿವೇಣಿ ತಂಡದವರಿಂದ ನಾಡಗೀತೆ ನಡೆಯಿತು. ಪೊಲೀಸ್, ಗೃಹ ರಕ್ಷಕದಳ, ವಿವಿಧ ಶಾಲಾ ಕಾಲೇಜುಗಳ ಎನ್‌ಸಿಸಿ, ಸ್ಕೌಟ್ಸ್-ಗೈಡ್ಸ್, ಬ್ಯಾಂಡ್‌ಸೆಟ್ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದವು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.