ಗುರುವಾರ, ಸೆಪ್ಟೆಂಬರ್ 4, 2025

ಸಾಮಾಜಿಕ ಪಿಡುಗು ಬಾಲ್ಯ ವಿವಾಹ ಕುರಿತು ಬೀದಿ ನಾಟಕ ಮೂಲಕ ಜಾಗೃತಿ

ಭದ್ರಾವತಿ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಹಾಗು ಬಾರಂದೂರು, ದೊಣಬಘಟ್ಟ ಮತ್ತು ಬಾಳೆಮಾರನಹಳ್ಳಿ ಗ್ರಾಮಗಳಲ್ಲಿ ಬಾಲ್ಯ ವಿವಾಹದಿಂದ ಎದುರಾಗುವ ಸಮಸ್ಯೆಗಳು ಹಾಗು ಬಾಲ್ಯ ವಿವಾಹ ನಿರ್ಮೂಲನೆ ಕುರಿತು ಸಂತ ಡೊಮಿನಿಕ್ ಶಾಲಾ ಮಕ್ಕಳು ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಿದರು.   
    ಭದ್ರಾವತಿ:  ಸಾಮಾಜಿಕ ಪಿಡುಗುಗಳಲ್ಲಿ ಅತಿಮುಖ್ಯವಾದ ಪಿಡುಗು ಬಾಲ್ಯ ವಿವಾಹ ನಿರ್ಮೂಲನೆ ಕುರಿತು ನಗರದ ಸಂತ ಡೊಮಿನಿಕ್ ಶಾಲಾ ಮಕ್ಕಳು ವಿವಿಧೆಡೆ ಬೀದಿ ನಾಟಕ ಪ್ರದರ್ಶನದ ಮೂಲಕ ಜಾಗೃತಿ ಮೂಡಿಸಿದರು. 
    ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಹಾಗು ಬಾರಂದೂರು, ದೊಣಬಘಟ್ಟ ಮತ್ತು ಬಾಳೆಮಾರನಹಳ್ಳಿ ಗ್ರಾಮಗಳಲ್ಲಿ ಬಾಲ್ಯ ವಿವಾಹದಿಂದ ಎದುರಾಗುವ ಸಮಸ್ಯೆಗಳು ಹಾಗು ಬಾಲ್ಯ ವಿವಾಹ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸಲಾಯಿತು.  
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಬೀದಿ ನಾಟಕ ಪ್ರದರ್ಶನ ವೀಕ್ಷಿಸಿ ವಿದ್ಯಾಸಂಸ್ಥೆ ಆಡಳಿತ ಮಂಡಳಿಗೂ ಹಾಗು ಶಾಲಾ ಮಕ್ಕಳಿಗೂ ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಮುಂದಾಗಬೇಕೆಂದರು. 
    ಕಾರೆಹಳ್ಳಿ ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳು ವಂದನೆಯ ಸಂತೋಷ್ ಡಿ ಅಲ್ಮೇಡಾ, ಸಂತ ಡೊಮಿನಿಕ್ ಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಜೆಲ್ಫಿ,  ಸಿಸ್ಟರ್ ಲಾಲಮ್ಮ ಹಾಗೂ ಶಾಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 
 

ಹಿಂದೂ ಮಹಾಸಭಾ ಗಣಪತಿ ಅದ್ದೂರಿ ರಾಜಬೀದಿ ಉತ್ಸವ ಮೆರವಣಿಗೆಗೆ ಚಾಲನೆ

ಭದ್ರಾವತಿ ನಗರದ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ೫೩ನೇ ವರ್ಷದ ವಿನಾಯಕ ಮೂರ್ತಿ ರಾಜಬೀದಿ ಉತ್ಸವ ಮೆರವಣಿಗೆಗೆ ಗುರುವಾರ ಮಧ್ಯಾಹ್ನ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. 
    ಭದ್ರಾವತಿ:  ನಗರದ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ೫೩ನೇ ವರ್ಷದ ವಿನಾಯಕ ಮೂರ್ತಿ ವಿಸರ್ಜನೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ರಾಜಬೀದಿ ಉತ್ಸವ ಮೆರವಣಿಗೆಗೆ ಗುರುವಾರ ಮಧ್ಯಾಹ್ನ ಸುಮಾರು ೧೨.೩೦ರ ಸಮಯದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. 
    ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್, ಶಾಸಕರ ಸಹೋದರರಾದ ಉದ್ಯಮಿ ಬಿ.ಕೆ ಜಗನ್ನಾಥ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಮತ್ತು ಹಿರಿಯ ಪುತ್ರ, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ನಗರಸಭೆ ಉಪಾಧ್ಯಕ್ಷ ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸದಸ್ಯರಾದ ಚನ್ನಪ್ಪ, ಕೆ. ಸುದೀಪ್‌ಕುಮಾರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ. ಮಂಜುನಾಥ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್, ಮೆಸ್ಕಾಂ ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಬಸವಂತಪ್ಪ, ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ, ಹಿಂದೂಪರ ಸಂಘಟನೆಗಳ ಮುಖಂಡರು, ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸೇರಿದಂತೆ ಇನ್ನಿತರರ ಸಮ್ಮುಖದಲ್ಲಿ ರಾಜಬೀದಿ ಉತ್ಸವ ಮೆರವಣಿಗೆ ಆರಂಭಗೊಂಡಿತು. 
    ಪ್ರತಿವರ್ಷದಂತೆ ಈ ಬಾರಿ ಸಹ ವೈಭವಯುತವಾಗಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಮೆರವಣಿಗೆ ನಡೆಯಿತು. ನಿರೀಕ್ಷೆಗೂ ಮೀರಿ ಭಕ್ತರು ಪಾಲ್ಗೊಂಡಿದ್ದರು. ಪ್ರತಿಷ್ಠಾಪನೆ ಸ್ಥಳದಿಂದ ಆರಂಭಗೊಂಡ ಮೆರವಣಿಗೆ ಹೊಸಮನೆ ಶಿವಾಜಿ ವೃತ್ತ ತಲುಪಿ ಪುನಃ ಹಿಂದಿರುಗಿ ಹೊಸಮನೆ ಮುಖ್ಯ ರಸ್ತೆಯಲ್ಲಿ ಸಾಗಿತು. ಮಧ್ಯಾಹ್ನ ೨.೩೦ರ ವೇಳೆಗೆ ರಂಗಪ್ಪವೃತ್ತ ಸಮೀಪ ಸಾಗಿತು. ಸಂಜೆ ೫ರ ವೇಳೆಗೆ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತ ತಲುಪಿತು. 
    ಪ್ರಮುಖ ವೃತ್ತಗಳ ದ್ವಾರಬಾಗಿಲುಗಳ ಬಳಿ ಫ್ಲೆಕ್ಸ್, ಬಂಟಿಂಗ್ಸ್, ಕೇಸರಿ ಧ್ವಜ ರಾರಾಜಿಸುತ್ತಿದ್ದವು. ಹೊಸಮನೆ ಮುಖ್ಯ ರಸ್ತೆ, ಡಾ. ರಾಜ್‌ಕುಮಾರ್ ರಸ್ತೆ, ಬಿ.ಎಚ್ ರಸ್ತೆ, ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ) ಸೇರಿದಂತೆ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಕೆಸರಿಮಯವಾಗಿ ಕಂಗೊಳಿಸುತ್ತಿದ್ದವು. ನಿವಾಸಿಗಳು, ವರ್ತಕರು, ವ್ಯಾಪರಸ್ಥರು ಮನೆ, ಅಂಗಡಿ ಮುಂಗಟ್ಟುಗಳ ಮುಂಭಾಗ ಸ್ವಚ್ಛಗೊಳಿಸಿ ಬಣ್ಣ ಬಣ್ಣದ ರಂಗೋಲಿ ಬಿಡಿಸಿ ವಿನಾಯಕ ಮೂರ್ತಿಯನ್ನು ಅದ್ದೂರಿಯಾಗಿ ಸ್ವಾಗತಿಸಿದರು. ಕೆಲವು ವರ್ತಕರು ಹಾಗು ಸಂಘಟನೆಗಳು ಫಲ-ಪುಷ್ಪಗಳಿಂದ, ಸಿಹಿ ದಿನಸಿಗಳಿಂದ ತಯಾರಿಸಿರುವ ಬೃಹತ್ ಮಾಲೆಗಳನ್ನು ವಿನಾಯಕ ಮೂರ್ತಿಗೆ ಸಮರ್ಪಿಸಿದರು. ವಿನಾಯಕ ಮೂರ್ತಿ ಆಗಮಿಸುತ್ತಿದ್ದಂತೆ ಯುವ ಸಮುದಾಯದವರು ಅಲ್ಲಲ್ಲಿ ರಸ್ತೆಗಳ ಮೇಲೆ ಬೃಹತ್ ಓಂಕಾರ ಚಿತ್ತಾರಗಳನ್ನು ಬಿಡಿಸಿ ಕರ್ಪೂರ ಹಚ್ಚಿ ಸಂಭ್ರಮಿಸಿದರು. 


ಭದ್ರಾವತಿ ನಗರದ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ೫೩ನೇ ವರ್ಷದ ವಿನಾಯಕ ಮೂರ್ತಿ ರಾಜಬೀದಿ ಉತ್ಸವ ಮೆರವಣಿಗೆ ಗುರುವಾರ ಮಧ್ಯಾಹ್ನ ಆರಂಭಗೊಂಡಿದ್ದು, ಕಲಾತಂಡಗಳೊಂದಿಗೆ ಸಾವಿರಾರು ಭಕ್ತರು ಹೆಜ್ಜೆ ಹಾಕಿ ಮುಂದೆ ಸಾಗಿದರು. ಶಾಸಕರ ಹಿರಿಯ ಪುತ್ರ, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಮೆರವಣಿಗೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. 
    ರಾಜಬೀದಿ ಉತ್ಸವ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಕಂಸಾಳೆ, ಕೋಲಾಟ, ಗೊಂಬೆ ನೃತ್ಯ, ವೀರಗಾಸೆ, ನಾದಸ್ವರ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಮಕ್ಕಳು, ಮಹಿಳೆಯರು, ಯುವಕರು-ಯುವತಿಯರು ಸೇರಿದಂತೆ ವಯಸ್ಸಿನ ಬೇಧಭಾವವಿಲ್ಲದೆ ಸಾವಿರಾರು ಭಕ್ತರು ಹೆಜ್ಜೆ ಹಾಕಿ ಸಂಭ್ರಮಿಸಿದರು.  ವಿವಿಧ ಸಂಘಟನೆಗಳಿಂದ ಅಂಗಡಿಮುಂಗಟ್ಟುಗಳ ಬಳಿ ಅನ್ನಸಂತರ್ಪಣೆಗೆ ಕೈಗೊಳ್ಳಲಾಗಿತ್ತು. ಲಾಡು, ಮಜ್ಜಿಗೆ, ಪಾನಕ ವಿತರಣೆ ಸಹ ನಡೆಯಿತು. ಹಲವು ಸಂಘಟನೆಗಳಿಂದ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಪ್ರಮುಖ ರಸ್ತೆಗಳನ್ನು ಸಂಪರ್ಕಿಸುವ ಒಳ ರಸ್ತೆಗಳ ಸಂಪರ್ಕ ಬ್ಯಾರಿಕೇಡ್‌ಗಳಿಂದ ಕಡಿತಗೊಳಿಸಲಾಗಿತ್ತು. ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕೈಗೊಳ್ಳಲಾಗಿತ್ತು. 

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆಗೆ : ರಾಜಬೀದಿ ಉತ್ಸವ ಮೆರವಣಿಗೆಗೆ ಚಾಲನೆ

ಭದ್ರಾವತಿ ನಗರದ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ೫೩ನೇ ವರ್ಷದ ವಿನಾಯಕ ಮೂರ್ತಿ ರಾಜಬೀದಿ ಉತ್ಸವ ಮೆರವಣಿಗೆ ಗುರುವಾರ ಬೆಳಿಗ್ಗೆ ಆರಂಭಗೊಂಡಿದ್ದು, ಕಲಾತಂಡಗಳೊಂದಿಗೆ ಸಾವಿರಾರು ಭಕ್ತರು ಹೆಜ್ಜೆ ಹಾಕಿ ಮುಂದೆ ಸಾಗುತ್ತಿದ್ದಾರೆ. 
    ಭದ್ರಾವತಿ:  ನಗರದ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ೫೩ನೇ ವರ್ಷದ ವಿನಾಯಕ ಮೂರ್ತಿ ವಿಸರ್ಜನೆ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ರಾಜಬೀದಿ ಉತ್ಸವ ಮೆರವಣಿಗೆ ಗುರುವಾರ ಬೆಳಿಗ್ಗೆ ಆರಂಭಗೊಂಡಿದ್ದು, ಮಧ್ಯಾಹ್ನ ೨ರ ವೇಳೆಗೆ ರಂಗಪ್ಪವೃತ್ತ ಸಮೀಪ ಆಗಮಿಸಿತು. 
   ಪ್ರತಿವರ್ಷದಂತೆ ಈ ಬಾರಿ ಸಹ ವೈಭವಯುತವಾಗಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಮೆರವಣಿಗೆ ನಡೆಯುತ್ತಿದ್ದು, ನಿರೀಕ್ಷೆಗೂ ಮೀರಿ ಭಕ್ತರು ಪಾಲ್ಗೊಂಡಿದ್ದಾರೆ. ಪ್ರತಿಷ್ಠಾಪನೆ ಸ್ಥಳದಿಂದ ಆರಂಭಗೊಂಡ ಮೆರವಣಿಗೆ ಹೊಸಮನೆ ಶಿವಾಜಿ ವೃತ್ತ ತಲುಪಿ ಪುನಃ ಹಿಂದಿರುಗಿ ಹೊಸಮನೆ ಮುಖ್ಯ ರಸ್ತೆಯಲ್ಲಿ ಸಾಗಿತು. ಪ್ರಮುಖ ವೃತ್ತಗಳ ದ್ವಾರಬಾಗಿಲುಗಳ ಬಳಿ ಫ್ಲೆಕ್ಸ್, ಬಂಟಿಂಗ್ಸ್, ಕೇಸರಿ ಧ್ವಜ ರಾರಾಜಿಸುತ್ತಿವೆ. ಹೊಸಮನೆ ಮುಖ್ಯ ರಸ್ತೆ, ಡಾ. ರಾಜ್‌ಕುಮಾರ್ ರಸ್ತೆ, ಬಿ.ಎಚ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಕೆಸರಿಮಯವಾಗಿ ಕಂಗೊಳಿಸುತ್ತಿವೆ. 
    ಅಂಗಡಿಮುಂಗಟ್ಟುಗಳ ಬಳಿ ಅನ್ನಸಂತರ್ಪಣೆಗೆ ಕೈಗೊಳ್ಳಲಾಗಿದ್ದು, ಲಾಡು, ಮಜ್ಜಿಗೆ, ಪಾನಕ ವಿತರಣೆ ಸಹ ನಡೆಯಿತು. ಹಲವು ಸಂಘಟನೆಗಳಿಂದ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರಮುಖ ರಸ್ತೆಗಳನ್ನು ಸಂಪರ್ಕಿಸುವ ಒಳ ರಸ್ತೆಗಳ ಸಂಪರ್ಕ ಬ್ಯಾರಿಕೇಡ್‌ಗಳಿಂದ ಕಡಿತಗೊಳಿಸಲಾಗಿದೆ. ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕೈಗೊಳ್ಳಲಾಗಿದೆ. ರಾಜಬೀದಿ ಉತ್ಸವ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಕಂಸಾಳೆ, ಕೋಲಾಟ, ಗೊಂಬೆ ನೃತ್ಯ, ವೀರಗಾಸೆ, ನಾದಸ್ವರ ಸೇರಿದಂತೆ ವಿವಿಧ ಕಲಾತಂಡಗಳು ಪಾಲ್ಗೊಂಡಿವೆ. ಸಾವಿರಾರು ಭಕ್ತರು ಕಲಾತಂಡಗಳೊಂದಿಗೆ ಹೆಜ್ಜೆ ಹಾಕಿ ಮುಂದೆ ಸಾಗುತ್ತಿದ್ದಾರೆ. 
    ರಾಜಬೀದಿ ಉತ್ಸವ ಮೆರವಣಿಗೆ ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ, ಅಂಬೇಡ್ಕರ್ ವೃತ್ತ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮೂಲಕ ಲೋಯರ್ ಹುತ್ತಾ ಬಸ್ ನಿಲ್ದಾಣದ ವರೆಗೆ ಸಾಗಿ ಪುನಃ ಹಿಂದಿರುಗಿ ಸಂಜೆ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯಲ್ಲಿ ಸಾಗಿ ನಗರಸಭೆ ಮುಂಭಾಗ ಅಂತ್ಯಗೊಳ್ಳಲಿದೆ. ನಂತರ ವಿನಾಯಕ ಮೂರ್ತಿ ವಿಸರ್ಜನೆ ನಡೆಯಲಿದೆ. 
    ಬಿಗಿ ಪೊಲೀಸ್ ಬಂದೋಬಸ್ತ್ : 
    ಪ್ರತಿ ವರ್ಷದಂತೆ ಈ ಬಾರಿ ಸಹ ಮುನ್ನಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸ್ ಅಧೀಕ್ಷಕರು-೩, ಹೆಚ್ಚುವರಿ ಅಧೀಕ್ಷಕರು-೫, ಪೊಲೀಸ್ ಉಪಾಧೀಕ್ಷಕರು-೧೭, ವೃತ್ತ ನಿರೀಕ್ಷಕರು-೩೪, ನಿರೀಕ್ಷಕರು ೨೩, ಕಾನ್‌ಸ್ಟೇಬಲ್-೧೭೫೦, ಗೃಹರಕ್ಷಕದಳ-೨೨೦, ಕೆಎಸ್‌ಆರ್‌ಪಿ(ಮೀಸಲು ಪಡೆ) ತುಕಡಿ-೮, ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ(ಡಿಆರ್)-೮ ತುಕಡಿ, ಕ್ಷಿಪ್ರ ಕಾರ್ಯಪಡೆ(ಆರ್‌ಎಎಫ್)-೧ ತುಕಡಿ, ವಿಶೇಷ ಕಾರ್ಯಪಡೆ(ಎಸ್‌ಎಎಫ್)-೧ ತುಕಡಿ ಹಾಗು ೧೦೦ ದ್ರೋಣ್ ನಿರ್ವಾಹಕರು ಮತ್ತು ೫೦ ವಿಡಿಯೋ ಚಿತ್ರೀಕರಣ ಛಾಯಾಗ್ರಾಹಕರು ಬಿಗಿ ಪೊಲೀಸ್ ಬಂದೋಬಸ್ತ್‌ಗೆ ಬಳಸಿಕೊಳ್ಳಲಾಗಿದೆ. 

ಬುಧವಾರ, ಸೆಪ್ಟೆಂಬರ್ 3, 2025

ಸೆ.೧೪ರವರೆಗೆ ಪೈಗಂಬರ್ ಮುಹಮ್ಮದ್‌ರವರ ಸೀರತ್ ಅಭಿಯಾನ


    ಭದ್ರಾವತಿ : ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ನ್ಯಾಯದ ಹರಿಕಾರ, ಪೈಗಂಬರ್ ಮುಹಮ್ಮದ್‌ರವರ ಸೀರತ್ ಅಭಿಯಾನ ಸೆ.೧೪ರವರೆಗೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಜಮಾಅತೆ ಇಸ್ಲಾಮಿ ಹಿಂದ್ ತಾಲೂಕು ಶಾಖೆ ವತಿಯಿಂದ ಪ್ರಬಂಧ ಸ್ಪಧೆ, ನಗರದ ಗಣ್ಯ ವ್ಯಕ್ತಿಗಳಿಂದ ಭೇಟಿ, ಸ್ವಚ್ಛತಾ ಕಾರ್ಯಕ್ರಮ, ಸೀರತ್ ಪ್ರವಚನ, ಅನಾಥಶ್ರಮ ಮತ್ತು ಆಸ್ಪತ್ರೆ ಭೇಟಿ, ರಕ್ತದಾನ ಶಿಬಿರ ಹೀಗೆ ಸಾಮಾಜಿಕ ಶೈಕ್ಷಣಿಕ ಆರೋಗ್ಯದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
    ಪ್ರವಾದಿ ಮುಹಮ್ಮದ್‌ರವರು ಅರೆಬಿಕ್ ಕ್ಯಾಲೆಂಡರ್ ಪ್ರಕಾರ ರಬೀವುಲ್ ಅವ್ವಲ್ ತಿಂಗಳಿನಲ್ಲಿ ಜನಿಸಿದರು. ಅವರ ನ್ಯಾಯ ಮತ್ತು ಮಾನವೀಯತೆಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸುವುದು ಮತ್ತು ಪ್ರವಾದಿಯವರ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಮತ್ತು ವಿವಿಧ ಧರ್ಮಿಯರ ನಡುವಿನ ಪರಸ್ಪರ ಸಂಬಂಧಗಳನ್ನು ಬಲಪಡಿಸುವ ಉದ್ದೇಶದಿಂದ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ `ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್' ಶೀರ್ಷಿಕೆಯಡಿ ಸೆ.೧೪ರವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. 
    ಅಭಿಯಾನದ ಪ್ರಯುಕ್ತ ಶಾಂತಿ ಪ್ರಕಾಶನ ಪ್ರಕಟಿಸಿರುವ ಪ್ರವಾದಿಯವರ ಬದುಕು ಮತ್ತು ಸಂದೇಶಗಳ ಬಗ್ಗೆ ಬೆಳಕು ಚೆಲ್ಲುವ ಎರಡು ಹೊಸ ಪುಸ್ತಕಗಳನ್ನು ರಾಜ್ಯಾದ್ಯಂತ ಬಿಡುಗಡೆ ಗೊಳಿಸಲಾಗುವುದು. ಅಭಿಯಾನದ ಭಾಗವಾಗಿ ರಾಜ್ಯಾದ್ಯಂತ ವಿವಿಧ ಸಮಾಜ ಸೇವಾ ಚಟುವಟಿಕೆಗಳು, ಸಂವಾದ. ವಿಚಾರಗೋಷ್ಠಿ, ಸಾರ್ವಜನಿಕ ಸಭೆಗಳು, ಪ್ರಬಂಧ ಸ್ಪರ್ಧೆ ಮುಂತಾದ ಹಲವು ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಅಧ್ಯಕ್ಷರು, ಜಮಾತೆ ಇಸ್ಲಾಮಿ ಹಿಂದ್, ಭದ್ರಾವತಿ, ಮೊ: ೯೦೩೬೫೩೫೩೮೫ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. 

ಸೆ.೪ರಂದು ವಿದ್ಯುತ್ ವ್ಯತ್ಯಯ

    ಭದ್ರಾವತಿ : ಮೆಸ್ಕಾಂ ನಗರ ಉಪವಿಭಾಗ ವತಿಯಿಂದ ನಗರದ ಬಿ.ಎಚ್ ರಸ್ತೆಯಲ್ಲಿ ಹೊಸದಾಗಿ ೧೧ ಕೆ.ವಿ ವಿದ್ಯುತ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಘಟಕ-೫ರ ಶಾಖಾ ವ್ಯಾಪ್ತಿಯ ಪ್ರದೇಶಗಳಲ್ಲಿ ಸೆ.೪ರ ಗುರುವಾರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
    ಶಿವರಾಮನಗರ, ವಿಶ್ವೇಶ್ವರಾಯ ನಗರ, ಜೇಡಿಕಟ್ಟೆ, ಜೇಡಿಕಟ್ಟೆ ಹೊಸೂರು, ಸಿರಿಯೂರು, ವೀರಾಪುರ, ಕಲ್ಲಹಳ್ಳಿ, ಸಂಕ್ಲೀಪುರ, ಹಾಗಲಮನೆ, ಹುಲಿರಾಮನಕೊಪ್ಪ, ಸಿರಿಯೂರು ತಾಂಡ ಮತ್ತು ಸಿರಿಯೂರು ಕ್ಯಾಂಪ್ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ. 

ಸೆ.೫ರಂದು ವಿಶ್ವ ಜಾನಪದ ದಿನಾಚರಣೆ

ಎಂ.ಆರ್ ರೇವಣಪ್ಪ 
    ಭದ್ರಾವತಿ : ಕರ್ನಾಟಕ ಜಾನಪದ ಪರಿಷತ್ತು ತಾಲೂಕು ಶಾಖೆ ವತಿಯಿಂದ ಸೆ.೫ರಂದು ಹಳೇನಗರದ ಮಹಿಳಾ ಸೇವಾ ಸಮಾಜದಲ್ಲಿ ಸಂಜೆ ೪ ಗಂಟೆಗೆ ವಿಶ್ವ ಜಾನಪದ ದಿನಾಚರಣೆ ಆಯೋಜಿಸಲಾಗಿದೆ ಎಂದು ಪರಿಷತ್ ತಾಲೂಕು ಶಾಖೆ ಅಧ್ಯಕ್ಷ ಎಂ.ಆರ್ ರೇವಣಪ್ಪ ತಿಳಿಸಿದ್ದಾರೆ. 
    ಜಾನಪದ ಪರಿಷತ್ ವತಿಯಿಂದ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದ್ದು, ಮೊದಲ ಬಾರಿಗೆ ಹೋಬಳಿ ಜಾನಪದ ಸಮ್ಮೇಳನ ಸಹ ಯಶಸ್ವಿಯಾಗಿ ನಡೆಸಲಾಗಿದೆ. ಕ್ರಿಯಾಶೀಲತೆ ಕಾಯ್ದುಕೊಂಡಿರುವ ಪರಿಷತ್ ಇದೀಗ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದ್ದು, ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಉದ್ಘಾಟಿಸಲಿದ್ದಾರೆ ಎಂದರು. 
    ಪರಿಷತ್ ತಾಲೂಕು ಶಾಖೆ ಅಧ್ಯಕ್ಷ ಎಂ.ಆರ್ ರೇವಣಪ್ಪ ಅಧ್ಯಕ್ಷತೆ ವಹಿಸಲಿದ್ದು, ಸಂಘಟನಾ ಕಾರ್ಯದರ್ಶಿ ಬಿ.ಎಚ್ ಪ್ರಶಾಂತ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ತರೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಎಚ್. ಸಂಪತ್ ಕುಮಾರ್ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಶಂಕರಘಟ್ಟ ದೊಡ್ಡಿಬೀಳು ಕಿನ್ನರಿ ಕಲಾವಿದ ಶಿವಪ್ಪ ಜೋಗಿ ಅವರನ್ನು ಸನ್ಮಾನಿಸಲಾಗುವುದು ಎಂದರು.
   ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ  ಎಚ್. ತಿಮ್ಮಪ್ಪ, ಜಾನಪದ ಪರಿಷತ್ ಹಿರಿಯೂರು ಹೋಬಳಿ ಘಟಕದ ತಾಲೂಕು ಅಧ್ಯಕ್ಷ ಜಯರಾಂ ಗೊಂದಿ ಮತ್ತು ಶಂಕರಘಟ್ಟ ಹೋಬಳಿ ಘಟಕದ ಅಧ್ಯಕ್ಷೆ ಆರ್. ಕಮಲ ಕುಮಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಚೌಡಿಕೆ ಕಲಾವಿದ ಲಕ್ಷ್ಮಣ್ ರಾವ್ ಮತ್ತು ಸಂಗಡಿಗರಿಂದ ಚೌಡಿಕೆ ಗೊಂದಲಿಗರ ಪದ ಮತ್ತು ಜಾನಪದ ಕಲಾ ತಂಡಗಳಿಂದ ಜಾನಪದ ಗೀತಾ ಗಾಯನ ನಡೆಯಲಿದೆ ಎಂದರು.
    ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆಗೆ ಕ್ಷಣಗಣನೆ

ಭದ್ರಾವತಿ ನಗರದ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ೫೩ನೇ ವರ್ಷದ ವಿನಾಯಕ ಮೂರ್ತಿ.
    ಭದ್ರಾವತಿ:  ನಗರದ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ೫೩ನೇ ವರ್ಷದ ವಿನಾಯಕ ಮೂರ್ತಿ ವಿಸರ್ಜನೆ ಸೆ.೪ರ ಗುರುವಾರ ನಡೆಯಲಿದೆ. 
    ನಗರದ ಪ್ರತಿಷ್ಠಿತ ವಿನಾಯಕ ಮೂರ್ತಿ ಇದ್ದಾಗಿದ್ದು, ಹಲವು ವಿಶಿಷ್ಟತೆ, ವಿಭಿನ್ನತೆಯಿಂದ ಕೂಡಿದೆ. ಹಿಂದೂ ಸಂಘಟನೆಗಳ ಶಕ್ತಿ ಕೇಂದ್ರ ಸ್ಥಾನವೇ ಇದಾಗಿದ್ದು, ಹಿಂದೂ ಧರ್ಮ, ಸಂಸ್ಕೃತಿ ಅನಾವರಣ, ಪ್ರತಿಷ್ಠೆ ಎಲ್ಲವೂ ಅಡಗಿದೆ. ಕಳೆದ ೫೩ ವರ್ಷಗಳಿಂದ ನಿರಂತರವಾಗಿ ವಿನಾಯಕ ಚತುರ್ಥಿ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. 
    ಈ ಬಾರಿ ಶ್ವೇತ ವರ್ಣದ ಅರಳಿದ ಕಮಲದ ಆಕರ್ಷಕ ಆಲಂಕಾರದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಹಳೇನಗರದ ಶಿಲ್ಪ ಕಲಾವಿದರಾದ ರಂಗಪ್ಪ ಕುಟುಂಬದವರು ಪ್ರತಿ ವರ್ಷದಂತೆ ಈ ಬಾರಿ ಸಹ ಮೂರ್ತಿ ತಯಾರಿಸಿದ್ದು, ಸುಮಾರು ೬ ಅಡಿ ಎತ್ತರವಿದೆ. 
    ವೈಭವಯುತ ರಾಜಬೀದಿ ಉತ್ಸವ ಮೆರವಣಿಗೆ : 
    ಪ್ರತಿವರ್ಷ ವೈಭವಯುತವಾಗಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಮೆರವಣಿಗೆ ನಡೆಯುತ್ತಿದ್ದು, ಈ ಬಾರಿ ಸಹ ಉತ್ಸವ ಮೆರವಣಿಗೆಗೆ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಈ ಬಾರಿ ಸಹ ನಿರೀಕ್ಷೆಗೂ ಮೀರಿ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈಗಾಗಲೇ ಪ್ರಮುಖ ವೃತ್ತಗಳಲ್ಲಿ ನಿರ್ಮಿಸಿರುವ ದ್ವಾರಬಾಗಿಲುಗಳ ಬಳಿ ಫ್ಲೆಕ್ಸ್, ಬಂಟಿಂಗ್ಸ್, ಕೇಸರಿ ಧ್ವಜ ರಾರಾಜಿಸುತ್ತಿವೆ. ಹೊಸಮನೆ ಮುಖ್ಯ ರಸ್ತೆ, ಡಾ. ರಾಜ್‌ಕುಮಾರ್ ರಸ್ತೆ, ಬಿ.ಎಚ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಕೆಸರಿಮಯವಾಗಿ ಕಂಗೊಳಿಸುತ್ತಿವೆ. 
    ಅಂಗಡಿಮುಂಗಟ್ಟುಗಳ ಬಳಿ ಅನ್ನಸಂತರ್ಪಣೆಗೆ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. ಲಾಡು, ಮಜ್ಜಿಗೆ, ಪಾನಕ ವಿತರಣೆ ಸಹ ನಡೆಯಲಿದೆ.  ಹಲವು ಸಂಘಟನೆಗಳಿಂದ ವಿಶಿಷ್ಟ ಕಾರ್ಯಕ್ರಮಗಳ ಆಯೋಜನೆ ಸಹ ನಡೆಯಲಿದ್ದು,  ಪ್ರಮುಖ ರಸ್ತೆಗಳನ್ನು ಸಂಪರ್ಕಿಸುವ ಒಳ ರಸ್ತೆಗಳ ಸಂಪರ್ಕ ಬ್ಯಾರಿಗೇಡ್‌ಗಳಿಂದ ಕಡಿತಗೊಳಿಸಲಾಗುತ್ತಿದೆ. ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕೈಗೊಳ್ಳಲಾಗಿದೆ. ರಾಜಬೀದಿ ಉತ್ಸವ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಕಂಸಾಳೆ, ಕೋಲಾಟ, ಗೊಂಬೆ ನೃತ್ಯ, ವೀರಗಾಸೆ, ನಾದಸ್ವರ ಸೇರಿದಂತೆ ವಿವಿಧ ಕಲಾತಂಡಗಳು ಪಾಲ್ಗೊಳ್ಳಲಿವೆ. ಸಾವಿರಾರು ಭಕ್ತರು ಕಲಾತಂಡಗಳೊಂದಿಗೆ ಹೆಜ್ಜೆ ಹಾಕಲಿದ್ದಾರೆ. 


ಭದ್ರಾವತಿ ನಗರದ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ೫೩ನೇ ವರ್ಷದ ವಿನಾಯಕ ಮೂರ್ತಿ ವಿಸರ್ಜನೆ ಸೆ.೪ರ ಗುರುವಾರ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಪ್ರಮುಖ ವೃತ್ತಗಳು ಕೇಸರಿಮಯವಾಗಿ ಕಂಗೊಳಿಸುತ್ತಿವೆ. 
    ಬಿಗಿ ಪೊಲೀಸ್ ಬಂದೋಬಸ್ತ್ : 
    ಪ್ರತಿ ವರ್ಷದಂತೆ ಈ ಬಾರಿ ಮುನ್ನಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ. ಪೊಲೀಸ್ ಅಧೀಕ್ಷಕರು-೩, ಹೆಚ್ಚುವರಿ ಅಧೀಕ್ಷಕರು-೫, ಪೊಲೀಸ್ ಉಪಾಧೀಕ್ಷಕರು-೧೭, ವೃತ್ತ ನಿರೀಕ್ಷಕರು-೩೪, ನಿರೀಕ್ಷಕರು ೨೩, ಕಾನ್‌ಸ್ಟೇಬಲ್-೧೭೫೦, ಗೃಹರಕ್ಷಕದಳ-೨೨೦, ಕೆಎಸ್‌ಆರ್‌ಪಿ(ಮೀಸಲು ಪಡೆ) ತುಕಡಿ-೮, ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ(ಡಿಆರ್)-೮ ತುಕಡಿ, ಕ್ಷಿಪ್ರ ಕಾರ್ಯಪಡೆ(ಆರ್‌ಎಎಫ್)-೧ ತುಕಡಿ, ವಿಶೇಷ ಕಾರ್ಯಪಡೆ(ಎಸ್‌ಎಎಫ್)-೧ ತುಕಡಿ ಹಾಗು ೧೦೦ ದ್ರೋಣ್ ನಿರ್ವಾಹಕರು ಮತ್ತು ೫೦ ವಿಡಿಯೋ ಚಿತ್ರೀಕರಣ ಛಾಯಾಗ್ರಾಹಕರು ಬಿಗಿ ಪೊಲೀಸ್ ಬಂದೋಬಸ್ತ್‌ಗೆ ಬಳಸಿಕೊಳ್ಳಲಾಗುತ್ತಿದೆ. 
    ಈ ನಡುವೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಎಲ್ಲಾ ಧರ್ಮದವರು ಶಾಂತಿ ಸೌರ್ಹಾದಯುತವಾಗಿ ವರ್ತಿಸುವ ಮೂಲಕ ವಿಸರ್ಜನಾ ಪೂರ್ವ ಮೆರವಣಿಗೆ ಯಶಸ್ವಿಗೊಳಿಸುವಂತೆ ಕೋರಲಾಗಿದೆ.