ಭದ್ರಾವತಿ : ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನ.೮ರಂದು ಬೆಳಿಗ್ಗೆ ೧೧ ಗಂಟೆಗೆ ಹರಿದಾಸ ಸಂತ, ದಾರ್ಶನಿಕ, ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮ ತಾಲೂಕು ಪಂಚಾಯಿತಿ ಕಛೇರಿ ಆವರಣದಲ್ಲಿ ನಡೆಯಲಿದೆ.
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್‍ಯಾನಾಯ್ಕ ಉದ್ಘಾಟಿಸುವರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ಜಿಲ್ಲಾ ಉಸ್ತುವಾರಿ ಸಚಿವರ ಎಸ್. ಮಧುಬಂಗಾರಪ್ಪ, ಸಂಸದ ಬಿ.ವೈ ರಾಘವೇಂದ್ರ, ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ವಿಧಾನ ಪರಿಷತ್ ಸದಸ್ಯರು, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಉಪಾಧ್ಯಕ್ಷ ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ತಹಸೀಲ್ದಾರ್ ಪರುಸಪ್ಪ ಕುರುಬರ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸಮಾಜ ಕಲ್ಯಾಣ ಇಲಾಖೆ ಮೇಲ್ವಿಚಾರಕ ಎಸ್.ವಿ ಶಶಿಕುಮಾರ್ ಉಪನ್ಯಾಸ ನೀಡಲಿದ್ದಾರೆ.
ನಗರಸಭೆ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗು ಚುನಾಯಿತ ಮತ್ತು ನಾಮನಿರ್ದೇಶಿತ ಸದಸ್ಯರು, ಸರ್ಕಾರಿ ಅಧಿಕಾರಿಗಳು, ನೌಕರರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಕೋರಿದೆ.