Friday, May 1, 2020

ಭದ್ರಾವತಿ ನಗರಕ್ಕೆ ವಿವಿಧೆಡೆಗಳಿಂದ ಆಗಮಿಸಿದ ೧೩ ಜನರ ಪತ್ತೆ

ಭದ್ರಾವತಿ ನಗರಕ್ಕೆ ವಿವಿಧೆಡೆಗಳಿಂದ ಆಗಮಿಸಿದ ಸುಮಾರು ೧೩ ಜನರನ್ನು ತಾಲೂಕು ಆರೋಗ್ಯಾಧಿಕಾರಿಗಳ ನೇತೃತ್ವದ ತಂಡ ಪತ್ತೆ ಮಾಡಿ ಆರೋಗ್ಯ ತಪಾಸಣೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿರುವ 
ಘಟನೆ ಶುಕ್ರವಾರ ರಾತ್ರಿ ನಡೆದಿದೆ. 
ಭದ್ರಾವತಿ : ನಗರಕ್ಕೆ ವಿವಿಧೆಡೆಗಳಿಂದ ಆಗಮಿಸಿದ ಸುಮಾರು ೧೩ ಜನರನ್ನು ತಾಲೂಕು ಆರೋಗ್ಯಾಧಿಕಾರಿಗಳ ನೇತೃತ್ವದ ತಂಡ ಪತ್ತೆ ಮಾಡಿ ಆರೋಗ್ಯ ತಪಾಸಣೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಇಬ್ಬರು ಮುಂಬಯಿ ನಗರದಿಂದ ಬೆಂಗಳೂರಿಗೆ ಬಂದು ನಂತರ ಲಾರಿ ಮೂಲಕ ನಗರಕ್ಕೆ ಆಗಮಿಸಿದ್ದಾರೆ. ಪಕ್ಕದ ಜಿಲ್ಲೆ ದಾವಣಗೆರೆಯಿಂದ ೬ ಜನರು ದ್ವಿಚಕ್ರ ವಾಹನದಲ್ಲಿ ಬಂದಿದ್ದಾರೆ. ಗ್ಯಾಸ್ ಹಾಗೂ ಗೂಡ್ಸ್ ಗಾಡಿಗಳ ಮೂಲಕ ೫ ಜನ ಬೆಂಗಳೂರಿನಿಂದ ಬಂದಿದ್ದಾರೆ. ಇವರೆಲ್ಲರನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಕಾರ್ಯಾಚರಣೆ ತಂಡದಲ್ಲಿ  ಹಿರಿಯ ಆರೋಗ್ಯ ಸಹಾಯಕ  ನಿೀಲೇಶ್ ರಾಜ್,  ಡಿ ದರ್ಜೆ ನೌಕರ ಮಂಜುನಾಥ್, ಚಾಲಕರಾದ ರಫೀಕ್ ಮತ್ತು ಕಾಂತರಾಜ್ ಪಾಲ್ಗೊಂಡಿದ್ದರು ಎಂದು ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ತಿಳಿಸಿದೆ.  

ಕಡುಬಡವರಿಗೆ ಸ್ವಂತ ಖರ್ಚಿನಲ್ಲಿ ದಿನಸಿ ಸಾಮಗ್ರಿ ವಿತರಣೆ


ಭದ್ರಾವತಿ ಜನ್ನಾಪುರದ ನಿವಾಸಿ, ಸ್ಥಳೀಯ ಮುಖಂಡರಾದ ಎ.ಜಿ ರಾಧಮ್ಮರವರು ತಾವು ವಾಸಿಸುತ್ತಿರುವ ಸುತ್ತಮುತ್ತಲಿನ ಪ್ರದೇಶದಲ್ಲಿನ ಕಡು ಬಡವರನ್ನು ಗುರುತಿಸಿ ತಮ್ಮ ಸ್ವಂತ ಖರ್ಚಿನಲ್ಲಿ ಸುಮಾರು ೨೦ ಕುಟುಂಬಗಳಿಗೆ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ವಿತರಿಸಿ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. 
ಭದ್ರಾವತಿ: ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಲಾಕ್‌ಡೌನ್ ಘೋಷಿಸಿರುವ ಪರಿಣಾಮ ಶ್ರೀಸಾಮಾನ್ಯರು ಅದರಲೂ ಕಡು ಬಡವರ ಸ್ಥಿತಿ ದಿನ ದಿಂದ ದಿನಕ್ಕೆ ಹದಗೆಡುತ್ತಿದ್ದು, ಕಡು ಬಡವರ ಸಂಕಷ್ಟಕ್ಕೆ ಸ್ಪಂದಿಸಿ ನಗರದಲ್ಲಿ ಕೆಲವು ದಾನಿಗಳು ಸ್ವಯಂ ಪ್ರೇರಣೆಯಿಂದ ನೆರವಿಗೆ ಮುಂದೆ ಬರುತ್ತಿದ್ದಾರೆ.
ನಗರದ ಜನ್ನಾಪುರದ ನಿವಾಸಿ, ಸ್ಥಳೀಯ ಮುಖಂಡರಾದ ಎ.ಜಿ ರಾಧಮ್ಮರವರು ತಾವು ವಾಸಿಸುತ್ತಿರುವ ಸುತ್ತಮುತ್ತಲಿನ ಪ್ರದೇಶದಲ್ಲಿನ ಕಡು ಬಡವರನ್ನು ಗುರುತಿಸಿ ತಮ್ಮ ಸ್ವಂತ ಖರ್ಚಿನಲ್ಲಿ ಸುಮಾರು ೨೦ ಕುಟುಂಬಗಳಿಗೆ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ವಿತರಿಸಿ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ.
ಮುಂದಿನ ದಿನಗಳಲ್ಲಿ ತಮ್ಮ ಕೈಲಾದಷ್ಟು ಮಟ್ಟಿಗೆ ಬಡವರಿಗೆ ಇನ್ನೂ ಹೆಚ್ಚಿನ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಎ.ಜಿ ರಾಧಮ್ಮರವರ ಕಾರ್ಯಕ್ಕೆ ಪತಿ ಪ್ರಭಾಕರ್ ಕೈ ಜೋಡಿಸಿದ್ದಾರೆ.  

೨ನೇ ವಾರ್ಡ್ ವ್ಯಾಪ್ತಿಯಲ್ಲಿ ಎಂ.ಜೆ ಅಪ್ಪಾಜಿ ಬಳಗದಿಂದ ದಿನಸಿ ಸಾಮಗ್ರಿ ವಿತರಣೆ

ಭದ್ರಾವತಿ ನಗರಸಭೆ ವ್ಯಾಪ್ತಿ ವಾರ್ಡ್ ೨ರಲ್ಲಿ ವಾಸಿಸುತ್ತಿರುವ ಕಡು ಬಡವರು, ಕೂಲಿ ಕಾರ್ಮಿಕರು, ನಿರಾಶ್ರಿತರು, ರಸ್ತೆ ಬದಿ ವಾಸಿಗಳಿಗೆ  ಮಾಜಿ ಶಾಸಕ ಎಂ.ಜೆ ಅಪ್ಪಾಜಿ ದಿನಸಿ ಸಾಮಗ್ರಿಗಳನ್ನು ವಿತರಿಸಿ ಕೊರೋನಾ ಕುರಿತು ಜಾಗೃತಿ ವಹಿಸುವಂತೆ ಮನವಿ ಮಾಡಿದರು. 
ಭದ್ರಾವತಿ: ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್ ಘೋಷನೆಯಾದ ನಂತರ ನಗರದಲ್ಲಿ ಕಡು ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಶ್ರೀಸಾಮಾನ್ಯರ ಬದುಕು ಸಂಕಷ್ಟಕ್ಕೆ ಒಳಗಾಗಿದೆ. ಇವರ ಸಂಕಷ್ಟಕ್ಕೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅಭಿಮಾನಿಗಳ ಬಳಗ ನೆರವಿಗೆ ಮುಂದಾಗಿದೆ.
ನಗರಸಭೆ ವ್ಯಾಪ್ತಿ ವಾರ್ಡ್ ೨ರಲ್ಲಿ ವಾಸಿಸುತ್ತಿರುವ ಕಡು ಬಡವರು, ಕೂಲಿ ಕಾರ್ಮಿಕರು, ನಿರಾಶ್ರಿತರು, ರಸ್ತೆ ಬದಿ ವಾಸಿಗಳಿಗೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ದಿನಸಿ ಸಾಮಗ್ರಿಗಳನ್ನು ವಿತರಿಸಿ ಕೊರೋನಾ ಕುರಿತು ಜಾಗೃತಿ ವಹಿಸುವಂತೆ ಮನವಿ ಮಾಡಿದರು.
ಶಿವಮೊಗ್ಗ-ಭದ್ರಾವತಿ ನಡುವೆ ಸಂಚಾರಿಸುವ ಮಾಕ್ಸಿ ಕ್ಯಾಬ್‌ಗಳ ಸುಮಾರು ೪೫ ಮಂದಿ ಚಾಲಕರ ಕುಟುಂಬಗಳಿಗೆ, ವಾರ್ಡ್ ೨ರ ವ್ಯಾಪ್ತಿಯ ಮೀನುಗಾರರ ಬೀದಿ, ಕೃಷ್ಣಸಿಂಗ್ ಕಾಂಪೌಂಡ್, ಕವಲಗುಂದಿ, ಲೋಯರ್‌ಹುತ್ತಾ, ಐಟಿಐ ಹಿಂಬಾಗದ ಎ.ಕೆ ಕಾಲೋನಿ, ಮತ್ತು ಕಡದಕಟ್ಟೆ ಬಲಭಾಗ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಒಟ್ಟು ಸುಮಾರು ೮೦೦ ಕುಟುಂಬಗಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಮಾಜಿ ನಗರಸಭಾ ಸದಸ್ಯ ಎಸ್.ಪಿ ಮೋಹನ್ ರಾವ್, ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘದ ನಿರ್ದೇಶಕರು, ಸ್ಥಳೀಯ ಮುಖಂಡರು, ಎಂ.ಜೆ ಅಪ್ಪಾಜಿ ಅಭಿಮಾನಿಗಳು  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



ಪತ್ರಕರ್ತರಿಗೆ ಬಿಳಿಕಿ ಶ್ರೀಗಳಿಂದ ದಿನಸಿ ಸಾಮಗ್ರಿ ವಿತರಣೆ

ಭದ್ರಾವತಿಯಲ್ಲಿ ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ದಿನಸಿ ಸಾಮಗ್ರಿ ವಿತರಿಸಿ ಆಶೀರ್ವದಿಸಿದ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರಿಗೆ ಕನ್ನಡ ಪ್ರಭ ಪತ್ರಿಕೆಯ ನಮ್ಮ ಊರು ನಮ್ಮ ಜಿಲ್ಲೆ ವಿಶೇಷ ಸಂಚಿಕೆಯನ್ನು ನೀಡಲಾಯಿತು. 
ಭದ್ರಾವತಿ, ಮೇ. ೧: ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದರೂ ಸಹ ಯಾವುದನ್ನು ಲೆಕ್ಕಿಸದೆ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ನಗರದ ಪತ್ರಕರ್ತರ ಯೋಗ ಕ್ಷೇಮಾ ವಿಚಾರಿಸುವ ಮೂಲಕ ಅವರ ನೆರವಿಗೆ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಶಾಖಾ ಹಿರೇಮಠ, ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಮುಂದಾಗಿದ್ದಾರೆ.
ಲಾಕ್‌ಡೌನ್ ಘೋಷಣೆಯಾದ ನಂತರ ಶ್ರೀಸಾಮಾನ್ಯರ ಬದುಕು ಸಂಕಷ್ಟಕ್ಕೆ ಒಳಗಾಗಿದೆ. ಈ ನಡುವೆ ಪತ್ರಕರ್ತರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದು,  ಶ್ರೀಗಳು ಪತ್ರಕರ್ತರು ಸಹ ಸಂಕಷ್ಟಕ್ಕೆ ಒಳಗಾಗಿರುವುದನ್ನು ಮನಗಂಡು ಶ್ರೀಮಠದಿಂದ ದಿನಸಿ ಸಾಮಗ್ರಿಗಳನ್ನು ವಿತರಿಸಿ ಆಶೀರ್ವದಿಸಿದರು.
ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯ ಹಾಗೂ ಮಠದ ಪ್ರಮುಖರು ಉಪಸ್ಥಿತರಿದ್ದರು.
ಇದೆ ರೀತಿ ಸಂಕಷ್ಟಕ್ಕೆ ಒಳಗಾಗಿರುವ ಪತ್ರಕರ್ತರಿಗೆ ತಮಿಳು ಸಮಾಜ ಸಹ ನೆರವಾಗಿದ್ದು, ದಿನಸಿ ಸಾಮಗ್ರಿಗಳನ್ನು ವಿತರಿಸಿ ಬೆಂಬಲ ನೀಡಿದೆ.



ಪ್ರತಿದಿನ ಮಧ್ಯಾಹ್ನ ೧೫೦ ಮಂದಿಗೆ ಊಟ ಪೂರೈಕೆ

ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಮುಂಭಾಗದ ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಪ್ರತಿದಿನ ಮಧ್ಯಾಹ್ನ ೧೫೦ ಮಂದಿಗೆ ದ್ವಿಚಕ್ರ ವಾಹನದಲ್ಲಿ ಊಟ ಪೂರೈಕೆ ಮಾಡುತ್ತಿರುವುದು.
ಭದ್ರಾವತಿ: ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿರುವ ಪರಿಣಾಮ ಸಂಕಷ್ಟಕ್ಕೆ ಒಳಗಾಗಿರುವ ನಗರದ ಕಡು ಬಡವರು, ನಿರಾಶ್ರಿತರು, ವಲಸೆ ಕಾರ್ಮಿಕರಿಗೆ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಮುಂಭಾಗದ ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ನೆರವಾಗಿದ್ದಾರೆ.
ಲಾಕ್‌ಡೌನ್ ಘೋಷಣೆಯಾದಾಗಿನಿಂದಲೂ ನಿರಂತರವಾಗಿ ಅಡುಗೆ ತಯಾರಿಸುವ ಮೂಲಕ ಮಧ್ಯಾಹ್ನದ ಊಟದ ವ್ಯವಸ್ಥೆ ಕೈಗೊಳ್ಳುತ್ತಿದ್ದಾರೆ. ಸುಮಾರು ೧೫೦ ಮಂದಿಗೆ ಸಾಕಾಗುವಷ್ಟು ಊಟ ತಯಾರಿಸಿ ದ್ವಿಚಕ್ರ ವಾಹನದಲ್ಲಿಯೇ ಪದಾಧಿಕಾರಿಗಳು ಕಡು ಬಡವರು, ನಿರಾಶ್ರಿತರು, ವಲಸೆ ಕಾರ್ಮಿಕರಿರುವ ಸ್ಥಳಗಳಿಗೆ ತೆರಳಿ ಪೂರೈಸುತ್ತಿದ್ದಾರೆ. ಯಾವುದೇ ಆರ್ಥಿಕ ನೆರವಿಲ್ಲದಿದ್ದರೂ ಸ್ವಂತ ಹಣದಲ್ಲಿ ತಮ್ಮ ಕೈಲಾದಷ್ಟು ನೆರವನ್ನು ಪದಾಧಿಕಾರಿಗಳು ಸ್ವಯಂ ಪ್ರೇರಣೆಯಿಂದ ಕೈಗೊಳ್ಳುತ್ತಿರುವುದು ಇತರೆ ಸಂಘಟನೆಗಳಿಗೆ ಮಾದರಿಯಾಗಿದೆ.
ಸಂಘದ ಅಧ್ಯಕ್ಷ ಆರ್. ವೆಂಕಟೇಶ್ ನೇತೃತ್ವದಲ್ಲಿ ಉಪಾಧ್ಯಕ್ಷ ವಿಲ್ಸನ್ ಬಾಬು, ಕಾರ್ಯದರ್ಶಿ ಜಗದೀಶ್, ಸದಸ್ಯರಾದ ದಿನೇಶ್, ಅರುಣ್‌ಕುಮಾರ್, ರವಿಕುಮಾರ್ ಹಾಗೂ ಅರಳಿಕಟ್ಟೆ ಯುವಕರ ಬಳಗ ಈ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಅಡುಗೆ ತಯಾರಕರಾದ ಕುಮಾರ್ ಮತ್ತು ಕೃಷ್ಣಮೂರ್ತಿ ಈ ತಂಡಕ್ಕೆ ನೆರವಾಗಿದ್ದಾರೆ.  



ಕಟ್ಟಡ ಕಾರ್ಮಿಕರಿಂದ ಕಾರ್ಮಿಕರ ದಿನಾಚರಣೆ

ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ   ಆತಂಕಕ್ಕೆ ಒಳಗಾಗದೆ ಕೊರೋನಾ ವೈರಸ್ ವಿರುದ್ಧ ಹೋರಾಡಿ 



ಭದ್ರಾವತಿಯಲ್ಲಿ ಕಟ್ಟಡ ಕಾರ್ಮಿಕರು ಕೂಲಿಬ್ಲಾಕ್ ಶೆಡ್ ಶ್ರೀ ಆಂಜನೇಯ ಅಗ್ರಹಾರದಲ್ಲಿರುವ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಕಛೇರಿಯಲ್ಲಿ ಶುಕ್ರವಾರ ಕಾರ್ಮಿಕರ ದಿನಾಚರಣೆ ಆಚರಿಸಿದರು. 
ಭದ್ರಾವತಿ, ಮೇ. ೧: ಕಟ್ಟಡ ಕಾರ್ಮಿಕರು ನಗರದ ಕೂಲಿಬ್ಲಾಕ್ ಶೆಡ್ ಶ್ರೀ ಆಂಜನೇಯ ಅಗ್ರಹಾರದಲ್ಲಿರುವ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಕಛೇರಿಯಲ್ಲಿ ಶುಕ್ರವಾರ ಕಾರ್ಮಿಕರ ದಿನಾಚರಣೆ ಆಚರಿಸಿದರು.
ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕಟ್ಟಡ ಕಾರ್ಮಿಕರು ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಹಾಗೂ ಕೆಲಸದ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಲಾಯಿತು.
ಪ್ರಸ್ತುತ ಉಂಟಾಗಿರುವ ಸಂದಿಗ್ದ ಪರಿಸ್ಥಿತಿಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಕಾರ್ಮಿಕರಿಗೆ ಸಂಘದ ವತಿಯಿಂದ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗಿದೆ. ಅಲ್ಲದೆ ಸರ್ಕಾರದಿಂದ ೨ ಸಾವಿರ ರು. ಆರ್ಥಿಕ ನೆರವು ಬಂದಿದ್ದು, ಇದನ್ನು ಪಡೆದುಕೊಳ್ಳಲು ಮುಂದಾಗಬೇಕು. ಕಾರ್ಮಿಕ ಇಲಾಖೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ನೋಂದಾಣಿ ಮಾಡಿಸಿಕೊಂಡು ಗುರುತಿನ ಚೀಟಿ ಪಡೆದು ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಸರ್ಕಾರದ ವತಿಯಿಂದ ದಿನಸಿ ಸಾಮಗ್ರಿ ಬರಲಿದ್ದು, ಕಾರ್ಮಿಕರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು. ಆರ್ಥಿಕ ನೆರವಿನ ಅಗತ್ಯವಿದ್ದಲ್ಲಿ ಸಂಘದ ಪದಾಧಿಕಾರಿಗಳನ್ನು ಸಂಪರ್ಕಿಸಿ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಬೇಕೆಂದು ಕಾರ್ಮಿಕ ಮುಖಂಡರು ತಿಳಿಸಿದರು.
ಇದಕ್ಕೂ ಮೊದಲು ಕಾರ್ಮಿಕರ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಕಾರ್ಮಿಕರಿಗೆ ಸಿಹಿ ಹಂಚಲಾಯಿತು.
ಸಂಘದ ಅಧ್ಯಕ್ಷ ನಾಗರಾಜ್, ಕಾರ್ಯಾಧ್ಯಕ್ಷ ಸುಂದರ್ ಬಾಬು, ಉಪಾಧ್ಯಕ್ಷ ಚಂದ್ರಶೇಖರ್, ತಾಂತ್ರಿಕ ಸಲಹೆಗಾರ ಮನೋಹರ್, ಕಾರ್ಯದರ್ಶಿ ನಾರಾಯಣ ಸ್ವಾಮಿ, ಶಿವು, ಸುಬ್ರಮಣಿ, ನಿಸಾರ್, ಅಂತೋಣಿ ಕ್ರೂಸ್, ಹರೀಶ್ ಶಿಲ್ಪಿ, ರೆಡ್ಡಿ, ಕೃಷ್ಣ, ಕುಮಾರ್, ಅಂತೋಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

Thursday, April 30, 2020

ಮೇದಾರ ಸಮಾಜದಿಂದ ದಿನಸಿ ಸಾಮಗ್ರಿ ವಿತರಣೆ

ಭದ್ರಾವತಿ ತಾಲೂಕಿನ ಮೇದಾರ ಸಮಾಜದ ವತಿಯಿಂದ ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಶ್ರೀ ಕುಕ್ಕುವಾಡೇಶ್ವರಿ ದೇವಸ್ಥಾನದಲ್ಲಿ ಮಂಗಳವಾರ ಸಂಕಷ್ಟಕ್ಕೆ ಒಳಗಾಗಿರುವವರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.

ಭದ್ರಾವತಿ: ತಾಲೂಕಿನ ಮೇದಾರ ಸಮಾಜದ ವತಿಯಿಂದ ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಶ್ರೀ ಕುಕ್ಕುವಾಡೇಶ್ವರಿ ದೇವಸ್ಥಾನದಲ್ಲಿ ಸಂಕಷ್ಟಕ್ಕೆ ಒಳಗಾಗಿರುವವರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮಕ್ಕೆ ತಹಸೀಲ್ದಾರ್ ಸೋಮಶೇಖರ್, ನಗರಸಭೆ ಪೌರಾಯುಕ್ತ ಮನೋಹರ್ ಚಾಲನೆ ನೀಡಿದರು. ಸಮಾಜದ ಪ್ರಮುಖರಾದ ಚಂದ್ರಶೇಖರ್, ಕೂಡ್ಲಿಗೆರೆ ಎಸ್ ಮಹದೇವ, ಕೃಷ್ಣಪ್ಪ, ನರಸಿಂಹಯ್ಯ, ಎಚ್. ವಿಶ್ವನಾಥ್, ಭಾಗ್ಯಮ್ಮ(ಶಿಕ್ಷಕರು), ಬಿ.ಎಸ್ ಮಂಜುನಾಥ್ ಮತ್ತು ಸಿ. ಮಂಜುನಾಥ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಇದಕ್ಕೂ ಮೊದಲು ದೇವಸ್ಥಾನದಲ್ಲಿ ಅಮ್ಮನವರಿಗೆ ಈ ಸಂಬಂಧ ವಿಶೇಷ ಪೂಜೆ ಸಲ್ಲಿಸಲಾಯಿತು.