Thursday, July 9, 2020
Wednesday, July 8, 2020
ಜು.೯ರಂದು ವಿದ್ಯುತ್ ವ್ಯತ್ಯಯ
ಭದ್ರಾವತಿ, ಜು. ೮: ನಗರದ ಜೆಪಿಎಸ್ ಕಾಲೋನಿ ಮೆಸ್ಕಾಂ ೧೧೦/೩೩/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಜು.೯ರಂದು ಮಧ್ಯಾಹ್ನ ೧೨ ಗಂಟೆಯಿಂದ ಸಂಜೆ ೪ ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನ್ಯೂಟೌನ್, ನ್ಯೂಕಾಲೋನಿ, ಬಿ.ಎಚ್ ರಸ್ತೆ, ಐಟಿಐ, ಆಕಾಶವಾಣಿ, ಕಾಗದನಗರ, ಸುರಗಿತೋಪು, ಆನೆಕೊಪ್ಪ, ಉಜ್ಜನಿಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಹಳೇ ಸಿದ್ದಾಪುರ, ಹೊಸೂರು ತಾಂಡ, ಹುಡ್ಕೋ ಕಾಲೋನಿ, ಜನ್ನಾಪುರ, ಅಪ್ಪರ್‌ಹುತ್ತಾ, ಲೋಯರ್ ಹುತ್ತಾ, ಜಿಂಕ್‌ಲೈನ್, ಸಿರಿಯೂರು, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ, ಹಿರಿಯೂರು, ಹೊಳೆ ಗಂಗೂರು, ಕಾರೇಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ, ಕಾಳನಕಟ್ಟೆ, ಹೊಳೆ ನೇರಳೆಕೆರೆ, ಅಂತರಗಂಗೆ, ದೊಣಬಘಟ್ಟ, ಬಾರಂದೂರು, ಕಲ್ಲಹಳ್ಳಿ, ಯರೇಹಳ್ಳಿ, ಮಾವಿನಕೆರೆ, ದೊಡ್ಡೇರಿ, ತಡಸ, ಬಿಳಿಕಿ, ಕೆಂಪೇಗೌಡನಗರ, ಬೊಮ್ಮನಹಳ್ಳಿ, ಕುಂಬಾರ್ ಗುಂಡಿ, ಹಳೇ ಬಾರಂದೂರು, ಹಳ್ಳಿಕೆರೆ, ಅಪ್ಪಾಜಿ ಬಡಾವಣೆ, ಉಕ್ಕುಂದ, ರತ್ನಾಪುರ, ಕೆಂಚೇನಹಳ್ಳಿ, ಗಂಗೂರು, ಬಿಸಿಲುಮನೆ, ದೇವನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುದಹಳ್ಳಿ, ಅರಳಿಕೊಪ್ಪ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
ಭದ್ರಾವತಿ : ೩ ಮಂದಿಗೆ ಕೊರೋನಾ ಸೋಂಕು
ಭದ್ರಾವತಿ, ಜು. ೮: ನಗರದಲ್ಲಿ ಪುನಃ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಬೆಂಗಳೂರಿನಿಂದ ಬಂದಿರುವ ಸುಮಾರು ೪೧ ವರ್ಷದ ವ್ಯಕ್ತಿ ಹಾಗೂ ಪ್ರಾಥಮಿಕ ನಿಗಾದಲ್ಲಿರಿಸಲಾಗಿದ್ದ ಇಬ್ಬರು ಮಹಿಳೆಯರಲ್ಲಿ ಬುಧವಾರ ಕೊರೋನಾ ಸೋಂಕು ಕಾಣಿಸಿಕೊಂಡಿದೆ.
ವಿದ್ಯಾಮಂದಿರದ ೨ನೇ ತಿರುವಿನಲ್ಲಿ ವಾಸವಿರುವ ವ್ಯಕ್ತಿಯೊಬ್ಬರು ಬೆಂಗಳೂರಿನಿಂದ ಬಂದಿದ್ದು, ಸೋಂಕು ಕಾಣಿಸಿಕೊಂಡಿದೆ. ಇದು ಹೊಸ ಪ್ರಕರಣವಾಗಿದ್ದು, ಉಳಿದಂತೆ ಹಳೇನಗರದ ಗಾಂಧಿನಗರದ ಮೊದಲಿಯಾರ್ ಸಮುದಾಯ ಭವನ ಸಮೀಪ ಒಂದು ಕುಟುಂಬದ ೫ ಮಂದಿಯಲ್ಲಿ ಈ ಹಿಂದೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಕುಟುಂಬದ ೩ ಮಂದಿಯನ್ನು ಪ್ರಾಥಮಿಕ ನಿಗಾದಲ್ಲಿರಿಸಲಾಗಿತ್ತು. ಈ ಪೈಕಿ ೪೧ ವರ್ಷದ ತಾಯಿ ಹಾಗೂ ೧೮ ಮಗಳು ಸೋಂಕಿಗೆ ಒಳಗಾಗಿದ್ದಾರೆ.
ವಿದ್ಯಾಮಂದಿರದಲ್ಲಿ ವ್ಯಕ್ತಿ ವಾಸವಿದ್ದ ಸ್ಥಳದ ೧೦೦ ಮೀ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಗರಸಭೆ ಆಡಳಿತ ಕಂಟೈನ್ಮೆಂಟ್ ವಲಯವನ್ನಾಗಿಸಿದ್ದು, ಸೀಲ್‌ಡೌನ್‌ಗೊಳಿಸಲು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗಿದೆ.
ಉಳಿದಂತೆ ನಗರಸಭೆ ವ್ಯಾಪ್ತಿಯಲ್ಲಿ ಪ್ರಸ್ತುತ ಒಟ್ಟು ೭ ಸೀಲ್‌ಡೌನ್ ಪ್ರದೇಶಗಳು ಜಾಲ್ತಿಯಲ್ಲಿದ್ದು, ಈಗಾಗಲೇ ಚನ್ನಗಿರಿ ರಸ್ತೆ, ಉಪ್ಪಾರ ಬೀದಿ ಹಾಗೂ ಗಾಂಧಿನಗರ ವ್ಯಾಪ್ತಿಯಲ್ಲಿ ಸೀಲ್‌ಡೌನ್ ತೆರವುಗೊಳಿಸಲಾಗಿದೆ. ಸೀಲ್‌ಡೌನ್ ಹೆಚ್ಚಾದಂತೆ ಸ್ಥಳೀಯರಲ್ಲಿ ಆತಂಕ ಸಹ ಹೆಚ್ಚಾಗುತ್ತಿದೆ.
Subscribe to:
Posts (Atom)